• Home  
  • ಶೀಘ್ರದಲ್ಲಿ ಮತ್ತೆ ಹಾಲಿನ ದರ ಹೆಚ್ಚಳ…!
- HOME - LATEST NEWS - STATE

ಶೀಘ್ರದಲ್ಲಿ ಮತ್ತೆ ಹಾಲಿನ ದರ ಹೆಚ್ಚಳ…!

ಬೆಂಗಳೂರು: ಹಾಲಿನ ದರ 5 ರೂ. ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಹಾಲು ಒಕ್ಕೂಟಗಳ ಜೊತೆಗಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸುದೀರ್ಘ ಸಭೆ ನಡೆಸಿದರು. ಈ ವೇಳೆ ಹಾಲಿನ ದರವನ್ನು ಲೀಟರ್​​ಗೆ 5 ರೂ. ಏರಿಕೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಮುಂದಿ‌ನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಣಯಿಸಲಾಗಿದೆ. ದರ ಹೆಚ್ಚಳವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲು ಸಿಎಂ ನಿರ್ದೇಶನ ನೀಡಿದ್ದಾರೆ.‌

ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆ ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು.

ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678