ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ, ದ.ಕ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ ಜಿಲ್ಲೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದ.ಕ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ೨೦೨೪-೨೫ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ ಮಂಗಳೂರು ಮಂಗಳ ಕ್ರೀಡಾ0ಗಣದಲ್ಲಿ ಬುಧವಾರ ನಡೆಯಿತು.
ಕರ್ನಾಟಕ ಸರಕಾರದ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಮಮತಾ ಡಿ ಎಸ್ ಗಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು, ಬಳಿಕ ಮಾತನಾಡಿದ ಅವರು ಒಂದು ಶಾಲೆಯಲ್ಲಿ ದೈಹಿಕ ಶಿಕ್ಷಕರಿದ್ದರೆ ಆ ಶಾಲೆಯ ವಿದ್ಯಾರ್ಥಿಗಳು ದೈಹಿಕ, ಮಾನಸಿಕ, ಶಾರೀರಿಕವಾಗಿ ಬೆಳೆಯಲು ಅವರ ಪಾತ್ರ ಮಹತ್ವದ್ದಾಗಿರುತ್ತದೆ, ಒಂದು ವಿದ್ಯಾರ್ಥಿಯನ್ನು ಪರಿಪೂರ್ಣ ಕ್ರೀಡಾಪಟುವನ್ನಾಗಿ ಮಾಡುವುದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಬಹಳಷ್ಟಿದೆ ಎಂದರು.
ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟಾನಿ ಅಲ್ವಾರೀಸ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ದೈಹಿಕ ಶಿಕ್ಷಣ ಶಿಕ್ಷಕರು ವಿದ್ಯಾರ್ಥಿಗಳನ್ನು ಶಿಸ್ತಿನ ಮುಖಾಂತರ ಯಾವ ರೀತಿಯಲ್ಲಿ ಜೀವನ ಸಾಗಿಸಬಹುದು ಎಂದು ಕ್ರೀಡೆಯ ಮುಖಾಂತರ ತಿಳಿಸಿಕೊಡುತ್ತಾರೆ , ಈ ವರ್ಷ ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ವಿಶೇಷವಾಗಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಕ್ರೀಡಾಕೂಟ ನಡೆಸಲು ಅನುದಾನ ಕೊಟ್ಟು ಇಂತಹ ಕಾರ್ಯಕ್ರಮ ರೂಪಿಸಿದ್ದಕ್ಕೆ ಸರಕಾರ ಮತ್ತು ಮಾನ್ಯ ಮುಖ್ಯ ಮಂತ್ರಿಯವರನ್ನು ಅಭಿನಂದಿಸುತ್ತೇನೆ ಎಂದರು.
ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸಿದರು.
ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ದ.ಕ ಜಿರ್ಲ್ಲಾಧ್ಯಕ್ಷೆ ಶ್ರೀಮತಿ ಲಿಲ್ಲಿ ಪಾಯಸ್ ಸ್ವಾಗತಿಸಿದರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ ಪ್ರಾಸ್ತವಿಕವಾಗಿ ಮಾತನಾಡಿದರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹರೀಶ್ ರೈ ವಂದಿಸಿದರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಕೋಶಾಧಿಕಾರಿ ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು. ಕಿನ್ನಿ ಕಂಬಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗೋಪಾಲ ಕ್ರೀಡಾ ಪ್ರತಿಜ್ಙಾ ವಿಧಿ ಬೋಧಿಸಿದರು,ತಾಲೂಕು ಸಂಘದ ಕೋಶಾಧಿಕಾರಿ ಶ್ರೀಮತಿ
ಜಯಶ್ರೀ ನಾಡಗೀತೆ ಹಾಡಿದರು. ಜಿಲ್ಲಾ ಸಂಘದ ಕಾರ್ಯಧ್ಯಕ್ಷ ಮಾಮುಚ್ಚನ್ ಎಂ, ಪದವಿ ಪೂರ್ವ ದೈಹಿಕ ಶಿಕ್ಷಣ ವಿಭಾಗದ ಜಿಲ್ಲಾಧ್ಯಕ್ಷ ಪ್ರೇಮನಾಥ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಗಳಾದ ಚಕ್ರಪಾಣಿ , ಭರತ್, ಶಿವಪ್ರಸಾದ್, ನವೀನ್ ಪುತ್ರನ್ ಹಾಗು ಸಂಘದ ಪದಾಧಿಕಾರಿಗಳಾದ ಶಿವಾನಂದ ಕೈಕಿಣಿ ಕರುಣಾಕರ್, ರವಿರಾಜ್, ಜಯರಾಜ್ ಜೈನ್, ಬಾಲಕೃಷ್ಣ ಕಡಬ, ಶೇಖರ್ ಕಡ್ತಲ, ರಾಜೇಂದ್ರ ರೈ ಬಂಟ್ವಾಳ, ಕೃಷ್ಣಯ್ಯ, ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.