• Home  
  • ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಸಾವು
- DAKSHINA KANNADA - HOME - LATEST NEWS

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಸಾವು

ವಿಟ್ಲ: ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡ ಪರಿಣಾಮ 12 ವರ್ಷದ ಬಾಲಕ  ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ವಿಟ್ಲ ಸಮೀಪದ ಕೊಳ್ನಾಡುವಿನಲ್ಲಿ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್‌ (12) ಎಂದು ಗುರುತಿಸಲಾಗಿದೆ. ನಿನ್ನೆ ಮನೆಯ ಹತ್ತಿರದ ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ […]

Share News

ವಿಟ್ಲ: ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡ ಪರಿಣಾಮ 12 ವರ್ಷದ ಬಾಲಕ  ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ವಿಟ್ಲ ಸಮೀಪದ ಕೊಳ್ನಾಡುವಿನಲ್ಲಿ ಸಂಭವಿಸಿದೆ.

ಮೃತಪಟ್ಟ ಬಾಲಕನನ್ನು ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್‌ (12) ಎಂದು ಗುರುತಿಸಲಾಗಿದೆ.

ನಿನ್ನೆ ಮನೆಯ ಹತ್ತಿರದ ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಳಿತ್ತನೂಜಿಯ ವಿದ್ಯಾರ್ಥಿಯಾಗಿದ್ದ ಆಸಿಪ್ ಶಾಲೆಯ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ಬಾಲಕನಾಗಿದ್ದನು ಎಂದು ತಿಳಿದುಬಂದಿದೆ. ತಾಯಿಗೆ ಏಕೈಕ ಮಗನಾಗಿದ್ದ ಆಸಿಪ್‌ನ ಅಕಾಲಿಕ ನಿಧನವು ಕುಟುಂಬದವರನ್ನು ತೀವ್ರ ಆಘಾತಕ್ಕೆ ಗುರಿಮಾಡಿದ್ದು, ಬಂಧುಬಳಗ ಹಾಗೂ ಗ್ರಾಮಸ್ಥರಲ್ಲೂ ದುಃಖದ ವಾತಾವರಣ ನಿರ್ಮಾಣವಾಗಿದೆ. ಬಾಲಕನ ನಿಧನಕ್ಕೆ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.

Share News