• Home  
  • ಸಿ.ಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌: KSRTC ಬಸ್ ನಿಲ್ದಾಣಗಳಲ್ಲಿ ಲೈವ್‌ ಪ್ರಸಾರ
- DAKSHINA KANNADA - HOME - LATEST NEWS

ಸಿ.ಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌: KSRTC ಬಸ್ ನಿಲ್ದಾಣಗಳಲ್ಲಿ ಲೈವ್‌ ಪ್ರಸಾರ

ಮಂಗಳೂರು:- ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾರ್ಚ್ […]

Share News

ಮಂಗಳೂರು:- ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.


17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.

ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.

ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (ಐಇಆ) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.

 

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ. ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Share News