Month: March 2025

COMMUNITY NEWS LATEST NEWS

ಮಂಗಳೂರು ಧರ್ಮಪ್ರಾಂತ್ಯದ ಮೆಗಾ ಬೈಬಲ್ ಸಮ್ಮೇಳನ ಸಮರೋಪ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಸೇವಾ ಕಮ್ಯುನಿಯನ್ (MDSC) ಮತ್ತು ಬೈಬಲ್ ಆಯೋಗವು ಮಂಗಳೂರಿನ ಕಾರ್ಡೆಲ್ ಹೋಲಿ ಕ್ರಾಸ್ ಚರ್ಚ್‌ ಮೈದಾನದಲ್ಲಿ ಆಯೋಜಿಸಿದ ನಾಲ್ಕು ದಿನದ ಮೆಗಾ ಬೈಬಲ್ ಸಮಾವೇಶವು ಫೆಬ್ರವರಿ 25 ರಂದು ತೆರೆಕಂಡಿತು. ಸರಿಸುಮಾರು 10,000 ಭಕ್ತಾದಿಗಳು ಅವರ ಕುಟುಂಬಗಳೊಂದಿಗೆ ಹಾಜರಿದ್ದು ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸಾಮುದಾಯಿಕ ನವೀಕರಣಕ್ಕೆ ಸಾಕ್ಷಿಯಾದರು. ಕೇರಳದ ಡಿವೈನ್ ರಿಟ್ರೀಟ್ ಸೆಂಟರ್‌ನಿಂದ ರೆ.ಫಾ. ಜೋಸೆಫ್ ಎಡಟ್ಟು ವಿ.ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಈ ಸಮಾವೇಶನದಲ್ಲಿ ದೇವರ ಸ್ತುತಿ ಸ್ತೋತ್ರ, ವಿಮೋಚನೆಯ ಪ್ರಾರ್ಥನೆಗಳು, […]

HOME LATEST NEWS STATE

ಮಾರ್ಚ್‌ 31ರ ನಂತರ ಗೃಹಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಾರ್ಚ್‌ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ರೂ.1,000, ಸಹಾಯಕಿಯರ ಗೌರವಧನವನ್ನು ರೂ.750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ […]

HOME INETRNATIONAL LATEST NEWS

ಇಸ್ರೇಲಿ ದಾಳಿಯಲ್ಲಿ ಹಮಾಸ್‌ನ 19 ಪ್ಯಾಲೆಸ್ಟೀನಿಯನ್ನರ ಸಾವು

ಗಾಜಾ: ದಕ್ಷಿಣ ಗಾಜಾ ಪಟ್ಟಿಯಾದ್ಯಂತ ಭಾನುವಾರ ರಾತ್ರಿ ಇಸ್ರೇಲಿ ಪಡೆಗಳು ನಡೆಸಿದ ದಾಳಿಯಲ್ಲಿ ಹಿರಿಯ ಹಮಾಸ್ ರಾಜಕೀಯ ನಾಯಕ ಸೇರಿದಂತೆ ಕನಿಷ್ಠ 19 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಮಾಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಯೆಮೆನ್‌ನಲ್ಲಿ ಇರಾನ್ ಬೆಂಬಲಿತ ಬಂಡುಕೋರರು ಇಸ್ರೇಲ್ ಮೇಲೆ ಮತ್ತೊಂದು ಕ್ಷಿಪಣಿಯನ್ನು ಉಡಾಯಿಸಿದ್ದಾರೆ. ಗಾಜಾ ನಗರದಲ್ಲಿ ನಿವಾಸಿಗಳನ್ನು ಸ್ಥಳಾಂತರಿಸುವ ಆದೇಶ ನೀಡಲಾಗಿದೆ. ಕಟ್ಟಡವನ್ನು ಗುರಿಯಾಗಿಸಿಕೊಂಡು ಇಸ್ರೇಲಿ ಸೈನ್ಯದ ದಾಳಿ ನಡೆದಿದೆ. ಇಸ್ರೇಲಿ ಬಾಂಬ್‌ಗಳು ಬೀಳುತ್ತಿದ್ದಂತೆ, ಗಾಯಗೊಂಡ ಮಕ್ಕಳನ್ನು ಗಾಜಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ […]

HOME LATEST NEWS NATIONAL

ಜಡ್ಜ್ ಮನೆಯಲ್ಲಿ ನಗದು ಪತ್ತೆ ಪ್ರಕರಣ: ತನಿಖಾ ವರದಿ ಬಹಿರಂಗಪಡಿಸಿದ ಸುಪ್ರೀಂ

ನವದೆಹಲಿ: ದೆಹಲಿ ಹೈಕೋರ್ಟ್‌ನ ಜಡ್ಜ್ ಯಶವಂತ್ ವರ್ಮಾ ಮನೆಯಲ್ಲಿ ಪತ್ತೆಯಾದ ಹಣದ ಬಗ್ಗೆ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ್ದಾರೆ. ಈ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಇದೇ ವೇಳೆ ಯಶವಂತ್ ವರ್ಮ ಮನೆಯಲ್ಲಿ ಪತ್ತೆಯಾದ ಹಣದ ಬಗ್ಗೆ ವಿಸ್ತೃತ ತನಿಖೆ ನಡೆಸುವ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. ದೆಹಲಿ ಹೈಕೋರ್ಟ್ ಸಿಜೆ ದೇವೇಂದ್ರ ಕುಮಾರ್ ಉಪಾಧ್ಯಾಯ […]

COMMUNITY NEWS HOME LATEST NEWS

MLC ಐವನ್ ಡಿಸೋಜಾಗೆ ಕಥೊಲಿಕ್ ಸಭಾದಿಂದ ಅಭಿನಂದನೆ

ಮಂಗಳೂರು: ವಿಧಾನ್ ಪರಿಷತ್ ಕಲಾಪದಲ್ಲಿ ಅಲ್ಪಸಂಖ್ಯಾತರ ಪರವಾಗಿ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ MLC ಐವನ್ ಡಿಸೋಜಾ ಅವರನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವತಿಯಿಂದ ಅಭಿನಂದಿಸುವ ಕಾರ್ಯಕ್ರಮ ಮಂಗಳೂರಿನಲ್ಲಿ ಶನಿವಾರ ನಡೆಯಿತು. “ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ವಿಧೇಯಕ” ತಿದ್ದುಪಡಿ 2025 ರಲ್ಲಿ ಪ್ರವರ್ಗ-2ಬಿ ನಲ್ಲಿ – ಕರ್ನಾಟಕ ಸರಕಾರವು, ತನ್ನ ನಿರ್ಮಾಣದ ಕೆಲಸ ಕಾರ್ಯಗಳಿಗೆ ಕಾಂಟ್ರಾಕ್ಟ್ ಗಳನ್ನು ನೀಡುವಾಗ ಅದರಲ್ಲಿನ 4% ಕಾಂಟ್ರಾಕ್ಟ್ ಗಳನ್ನು ಅಲ್ಪಸಂಖ್ಯಾತ ವರ್ಗದವರಿಗೆ ಮೀಸಲಾತಿಯನ್ನು ನೀಡಬೇಕು ಎಂಬ ಹೊಸ ಪ್ರಸ್ತಾವನೆಯನ್ನು […]

COMMUNITY NEWS HOME LATEST NEWS

ಮಾ. 20- 23: ಮಂಗಳೂರಿನಲ್ಲಿ ಬೈಬಲ್ ಮಹಾ ಸಮ್ಮೇಳನ

ಮಂಗಳೂರು: ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ ಹಾಗೂ ಕ್ಯಾರಿಸ್ಮಾಟಿಕ್‌ ಸೇವಾ ಸಂಚಾಲನದ ಸುವರ್ಣ ಮಹೋತ್ಸವದ ಅಂಗವಾಗಿ ಬೈಬಲ್ ಮಹಾ ಸಮ್ಮೇಳನವು ಮಾರ್ಚ್ 20 ರಿಂದ 23 ರ ತನಕ ಮಂಗಳೂರಿನ ಕುಲಸೇಖರದ ಕೋರ್ಡೆಲ್ ಹೋಲಿ ಕ್ರಾಸ್‌ ಚರ್ಚ್‌ನ ತೆರೆದ ಮೈದಾನದಲ್ಲಿ ಪ್ರತಿ ದಿನ ಸಂಜೆ 4 ರಿಂದ ರಾತ್ರಿ 8.30 ರ ತನಕ ನಡೆಯಲಿದೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ. ಈ […]

HOME INETRNATIONAL LATEST NEWS NATIONAL

ಗಗನಮುಖಿಯಾದ ಚಿನ್ನದ ಬೆಲೆ: 10 ಗ್ರಾಂ ಚಿನ್ನದ ಬೆಲೆ ರೂ. 91,950

ನವದೆಹಲಿ:  ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ರೂ.700 ಏರಿಕೆಯಾಗಿ, ಸಾರ್ವಕಾಲಿಕ ರೂ. 91,950 ಆಗಿದೆ ಎಂದು ಅಖಿಲ ಭಾರತ ಸರಾಫ್‌ ಸಂಘ ತಿಳಿಸಿದೆ. ಇದಲ್ಲದೇ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ ಮತ್ತು ಅಮೆರಿಕದ ಆರ್ಥಿಕ ಕುಸಿತವೂ ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 700 ರೂ. ಏರಿಕೆಯಾಗಿದ್ದು, 91, 950 ರೂ. ಆಗಿದೆ. ಮಂಗಳವಾರ 10 ಗ್ರಾಂ ಚಿನ್ನದ ಬೆಲೆ ರೂ.91, 250 ಆಗಿತ್ತು. […]

DAKSHINA KANNADA LATEST NEWS

೨೦೨೪-೨೫ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ, ದ.ಕ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ ಜಿಲ್ಲೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದ.ಕ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ೨೦೨೪-೨೫ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ ಮಂಗಳೂರು ಮಂಗಳ ಕ್ರೀಡಾ0ಗಣದಲ್ಲಿ ಬುಧವಾರ ನಡೆಯಿತು. ಕರ್ನಾಟಕ ಸರಕಾರದ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಮಮತಾ ಡಿ ಎಸ್ ಗಟ್ಟಿ […]

DAKSHINA KANNADA HOME LATEST NEWS

ಮಾ.21 ರಿಂದ ಮಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-೧ ಮರ‍್ಚ್ ೨೧ ರಿಂದ ಎಪ್ರಿಲ್ ೪ ರವರೆಗೆ ನಡೆಯಲಿದ್ದು, ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ ಒಟ್ಟು ೪೩ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೆೀಧಿತ ಪ್ರದೇಶ ಎಂದು ಘೋಷಿಸಿ ನಿಷೆೀಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಹಾಗೂ ವಿಶೇಷ ಕರ‍್ಯನರ‍್ವಾಹಕ ದಂಡಾಧಿಕಾರಿ ಸಿದ್ದರ‍್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೆೀಧಿತ […]