Month: May 2025

Breaking News HISTORY INETRNATIONAL NATIONAL

ನೂತನ ಪೋಪ್ ಆಗಿ ಅಮೇರಿಕಾ ಮೂಲದ ಲಿಯೋ XIV ಆಯ್ಕೆ

ವ್ಯಾಟಿಕನ್ ಸಿಟಿ: ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ರಾಬರ್ಟ್ ಪ್ರೇವೋಸ್ಟ್ ಆಯ್ಕೆಯಾಗಿದ್ದಾರೆ. ಪೆರುವಿನಲ್ಲಿ ಸುಧೀರ್ಘ ವೃತ್ತಿ ಜೀವನವನ್ನು ಕಳೆದಿರುವ ಇವರು, ವ್ಯಾಟಿಕನ್‌ನ ಪ್ರಬಲ ಬಿಷಪ್‌ಗಳ ಕಚೇರಿಯನ್ನು ಮುನ್ನಡೆಸುತ್ತಿದ್ದಾರೆ. ಪ್ರೆವೋಸ್ಟ್ ಲಿಯೋ XIV ಎಂಬ ಹೆಸರನ್ನು ಪಡೆದರು. ಅಂದರೆ ಇವರು ಇದೇ ಹೆಸರಿನಿಂದ ಇನ್ನು ಮುಂದೆ ಗುರುತಿಸಿಕೊಳ್ಳಲಿದ್ದಾರೆ. ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡರು ಪ್ರೆವೋಸ್ಟ್ ಅವರು […]

COMMUNITY NEWS HOME INETRNATIONAL LATEST NEWS

267ನೇ ಪೋಪ್‌ ಆಗಿ ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ನೇಮಕ

ವ್ಯಾಟಿಕನ್‌ ಸಿಟಿ: ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ಅವರು 267ನೇ ನೂತನ ಪೋಪ್‌ ಆಗಿ ಆಯ್ಕೆಯಾಗಿದ್ದಾರೆ. ಅವರನ್ನು ಲೀಯೋ XIV ಆಗಿ ಮರುನಾಮಕರಣ ಮಾಡಲಾಗಿದೆ. ಅಮೇರಿಕ ಮೂಲದವರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ…..     ಮತದಾನದ ವೇಳಿನ ದೃಶ್ಯ

DAKSHINA KANNADA HOME LATEST NEWS

ಸುಹಾಸ್ ಶೆಟ್ಟಿ ನಿವಾಸಕ್ಕೆ ಮೇ 11ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಭೇಟಿ

ಮಂಗಳೂರು: ಇತ್ತೀಚಿಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ಜೆ. ಪಿ. ನಡ್ಡಾ ಮೇ 11 ರಂದು ಭೇಟಿ ನೀಡಲಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಜೆ. ಪಿ. ನಡ್ಡಾ ಮೇ11 ಮತ್ತು 12 ರಂದು ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದ ವೇಳೆ ಸುಹಾಸ್ ಶೆಟ್ಟಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಮೇ 11 ರಂದು ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೂ […]

COMMUNITY NEWS HOME INETRNATIONAL LATEST NEWS

ನೂತನ ಪೋಪ್‌ ಆಯ್ಕೆ: ವ್ಯಾಟಿಕನ್‌ ಚಿಮಣಿಯಿಂದ ಬಿಳಿ ಹೊಗೆ

ವ್ಯಾಟಿಕನ್ ಸಿಟಿ: ಪೋಪ್‌ ಫ್ರಾನ್ಸಿಸ್‌ ನಿಧನದಿಂದ ತೆರವಾದ ಪೋಪ್‌ ಸ್ಥಾನಕ್ಕೆ ಮತ್ತೋರ್ವರು ಆಯ್ಕೆಯಾಗಿದ್ದಾರೆ. ಇದರ ಸಂಕೇತವಾಗಿ ಕೆಲವೇ ಹೊತ್ತಿನ ಮುಂಚೆ ಚಿಮಣಿ ಮೂಲಕ ಬಿಳಿ ಹೊಗೆ ಹೊರ ಸೂಸಿದೆ. ಇಂದು ಬೆಳಗ್ಗೆ ಇಲ್ಲಿನ ಸಿಸ್ಟೈನ್ ಚಾಪೆಲ್‌ನ ಚರ್ಚ್ ಚಿಮಣಿಯಿಂದ ಕಪ್ಪು ಹೊಗೆ ಹೊರಬಂದಿತ್ತು. ಇದೀಗ ಮತ್ತೆ ನಡೆದ ಗೌಪ್ಯ ಮತದಾನದಲ್ಲಿ ನೂತನ ಪೋಪ್‌ ಆಯ್ಕೆಯಾದ ಬಗ್ಗೆ ಮಾಹಿತಿ ಹೊರಬಿದ್ದಿದೆ. ವಿಶ್ವದ ನಾನಾ ದೇಶಗಳನ್ನು ಪ್ರತಿನಿಧಿಸುವ 133 ಕಾರ್ಡಿನಲ್‌ಗಳು ನೂತನ ಪೋಪ್ ಅವರನ್ನು ಆಯ್ಕೆ ಮಾಡುತ್ತಾರೆ. ಪೋಪ್ ಆಗಿ […]

DAKSHINA KANNADA HOME LATEST NEWS NATIONAL

ಭಾರತದೊಳಗೆ ಕ್ಷಿಪಣಿ ನುಗ್ಗಿಸಿದ ಪಾಕ್‌: ಆಕಾಶದಲ್ಲೇ ಧ್ವಂಸ ಮಾಡಿದ ವಾಯುಸೇನೆ

ಜಮ್ಮು: ಭಾರತದ ಮೇಲೆ ಮತ್ತೆ ಪಾಕಿಸ್ತಾನ ದಾಳಿಗೆ ಮುಂದಾಗಿದ್ದು ಜಮ್ಮುವಿನ ಹಲವು ಭಾಗಗಳಲ್ಲಿ ಡ್ರೋನ್ ಮೂಲಕ ದಾಳಿ ನಡೆಸಲು ಯತ್ನಿಸಿದೆ. ಪಠಾಣ್ ಕೋಟ್ ವಾಯುನೆಲೆ, ಜಮ್ಮು ವಿಮಾನ ನಿಲ್ದಾಣ ಸೇರಿ ಭಾರತದ 8 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ದಾಳಿಗೆ ಯತ್ನಿಸಿದೆ. ಆದರೆ ಭಾರತೀಯ ಸೇನಾಪಡೆಗಳು ಪಾಕ್ ದಾಳಿಯನ್ನು ಸಮರ್ಥವಾಗಿ ಎದುರಿಸಿವೆ. ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆ ಬಳಸಿ ಪಾಕ್ ಡ್ರೋನ್ ಗಳನ್ನು ಭಾರತೀಯ ಸೇನೆ ಆಕಾಶದಲ್ಲೇ ಹೊಡೆದುರುಳಿಸಿದೆ. ಜಮ್ಮು ನಾಗರಿಕ ವಿಮಾನ ನಿಲ್ದಾಣ, ಸಾಂಬಾ, ಆರ್‌ಎಸ್ ಪುರ, […]

DAKSHINA KANNADA HOME LATEST NEWS

ವಿಟ್ಲ: ಫಾತಿಮಾ ಮಾತ ಸಮುದಾಯ ಭವನ ಉದ್ಘಾಟನೆ

ವಿಟ್ಲ:  ಎಲ್ಲರ ಸಹಕಾರ ಅನ್ಯೂನ್ಯತೆಯಿಂದ ಸುಂದರ ಸಭಾಭವನ ನಿರ್ಮಾಣಗೊಂಡು ಇಂದು ಲೋಕಾರ್ಪಣೆಗೊಂಡಿದೆ. ಅಭಿವೃದ್ಧಿಯ ಸಂಕೇತವೇ ಈ ಒಂದು ಸಭಾಭವನ ಆಗಿದೆ. ನಮ್ಮೊಳಗಿನ‌ ಸಂಬಂದ ಇನ್ನಷ್ಟು ಗಟ್ಟಿಯಾಗಲಿ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ ರವರು ಹೇಳಿದರು. ಅವರು ಮೇ.೫ರಂದು ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರುವಾಯಿ ಮುಚ್ಚಿರಪದವು ಫಾತಿಮ ಮಾತೆ ದೇವಾಲಯದ ಫಾತಿಮಾ ಮಾತಾ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾರವರು ಮಾತನಾಡಿ ಇದೊಂದು […]

HOME

ಹಿಂದೂ ಯುವಕನ ಹತ್ಯೆ: ದ.ಕ. ಜಿಲ್ಲೆಯಲ್ಲಿ ಮೇ 5ರ ವರೆಗೆ ನಿಷೇಧಾಜ್ಞೆ; ಯಾವುದಕ್ಕೆಲ್ಲ ಅನ್ವಯ

ಮಂಗಳೂರು, ಮೇ 2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ  ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಂಡಿದೆ. ಅಲ್ಲದೆ, ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು (ಸುಹಾಸ್ ಶೆಟ್ಟಿ ನಿವಾಸ) ತನಕ ಜಾಥಾ ಮೂಲಕ ಮೃತದೇಹದ ಸಾಗಾಟಕ್ಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಘಟನೆ […]

HOME STATE

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು, ಮೇ 02: 2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ (SSLC Result) ಪ್ರಕಟವಾಗಿದೆ.ದ.ಕ. ಪ್ರಥಮ ಹಾಗೂ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಭ್ಯವಿದ್ದು, https://karresults.nic.in ಜಾಲತಾಣದಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಸದ್ಯ ಪಾಸಾಗಿರುವ ವಿದ್ಯಾರ್ಥಿಗಳ ಮನೆಯಲ್ಲಿ […]

DAKSHINA KANNADA LATEST NEWS

ಹಿಂದೂ ಕಾರ್ಯಕರ್ತನ ಹತ್ಯೆ; ದ.ಕ.ದಲ್ಲಿ ಬಸ್ ಸಂಚಾರ ಬಂದ್

ಮಂಗಳೂರು, ಮೇ 2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ  ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಂಡಿದೆ. ಅಲ್ಲದೆ, ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು (ಸುಹಾಸ್ ಶೆಟ್ಟಿ ನಿವಾಸ) ತನಕ ಜಾಥಾ ಮೂಲಕ ಮೃತದೇಹದ ಸಾಗಾಟಕ್ಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. […]