Month: June 2025

DAKSHINA KANNADA HOME LATEST NEWS

ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಸಂಚಾರ ನಿಷೇಧಿಸಿದ ತಹಶೀಲ್ದಾರ್‌

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸಂಚಾರ ನಿರ್ಬಂಧಿಸಿ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಕಟ್ಟುನಿಟ್ಟಾಗಿ ಪಾಲಿಸಲು ಸೂಕ್ತ ಕ್ರಮವಹಿಸುವುದು ಎಂದು ಅದೇಶದಲ್ಲಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ ಏನಿದೆ? ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದಲ್ಲಿರುವ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಹಳೆಯ ಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು. ಸೇತುವೆಯಲ್ಲಿ ಈ ಹಿಂದೆ ಬಿರುಕು ಬಂದ ಹಿನ್ನಲೆಯಲ್ಲಿ ಸೇತುವೆಯ ಮೇಲೆ ಘನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಕಬ್ಬಿಣದ ಕಮಾನು ಅಳವಡಿಸಿ ಬಂದ್ ಮಾಡಲಾಗಿದ್ದು ಪ್ರಸ್ತುತ […]

HOME LATEST NEWS UDUPI

ಭಾರೀ ಮಳೆ: ನಾಳೆ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜೂ.12ರಂದು) ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಗುರುವಾರದಿಂದ  ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ […]

DAKSHINA KANNADA HOME LATEST NEWS

“ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ನಾಯಕರು ಹಿಂಸೆಗೆ ಪ್ರಚೋದನೆ ನೀಡಿದ್ದಾರೆ”

ಮಂಗಳೂರು: ‘ ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ನಾಯಕರು ಹಿಂಸೆಗೆ ಪ್ರಚೋದನೆ ಕೊಡುವ ಹಾಗೂ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಮಾತುಗಳನ್ನು ಆಡಿದ್ದಾರೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ ಆರ್‌.ಪೂಜಾರಿ ಆರೋಪಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಯ್ಯದ್ ನಾಸಿರ್ ಹುಸೇನ್ ನೇತೃತ್ವದ ಕೆಪಿಸಿಸಿ ನಿಯೋಗವು ಜಿಲ್ಲೆಯ ಅಧಿಕಾರಿಗಳನ್ನು, ಧಾರ್ಮಿಕ ಮುಖಂಡರನ್ನು, ಸಂಘ ಸಂಸ್ಥೆಗಳನ್ನು, ಕಾರ್ಮಿಕ ವರ್ಗದವರನ್ನು ಭೇಟಿ ಮಾಡಿ  ಸೌಹಾರ್ದ ಮೂಡಿಸುವ ಕ್ರಮಗಳ ಬಗ್ಗೆ ಚರ್ಚಿಸಿದರು.‌ ಜಿಲ್ಲಾಧಿಕಾರಿ, ಪೊಲೀಸ್‌ ಕಮಿಷನರ್, ಜಿಲ್ಲಾ ಪೊಲೀಸ್‌ […]

DAKSHINA KANNADA HOME LATEST NEWS STATE

ಆರೋಪಿ ಬಳಿ ಹಣದ ಬೇಡಿಕೆ: ವಿಟ್ಲ ಠಾಣಾ ಎಸೈ ಸಸ್ಪೆಂಡ್‌

ವಿಟ್ಲ: ಆರೋಪಿಯೋರ್ವನ ಬಳಿ ಹಣದ ಬೇಡಿಕೆ ಮುಂದಿಟ್ಟ ಆರೋಪದಲ್ಲಿ ವಿಟ್ಲ ಠಾಣಾ ಎಸೈ ಕೌಶಿಕ್ ಬಿ.ಸಿ. ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿಯಾಡುತ್ತಿದ್ದ ಬಗ್ಗೆ ದೊರೆತ ಮಾಹಿತಿಯಂತೆ ಸ್ಥಳಕ್ಕೆ ಎಸ್ಸೈ ಕೌಶಿಕ್ ದಾಳಿ ಮಾಡಿದ್ದರು. ಈ ವೇಳೆ ಜುಗಾರಿ ಆಟದಲ್ಲಿ ನಿರತರಾಗಿದ್ದವರು ಪರಾರಿಯಾಗಿದ್ದರೆ, ಸ್ಥಳದಲ್ಲಿ ಬೈಕೊಂದು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕಾನೂನಾತ್ಮಕವಾಗಿ ಕ್ರಮ ಜರುಗಿಸದ ಎಸ್ಸೈ ಕೌಶಿಕ್, ಬೈಕ್ ಮಾಲಕನಿಗೆ ಕರೆ ಮಾಡಿ ಠಾಣೆಗೆ ಬರಮಾಡಿಕೊಂಡಿದ್ದಾರೆ. ಅಲ್ಲದೇ, […]

DAKSHINA KANNADA HOME LATEST NEWS

ಡಿ. ಸಿ ಮನ್ನಾ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಜೊತೆ MLC ಐವನ್ ಡಿಸೋಜಾ ಸಮಾಲೋಚನೆ

ಮಂಗಳೂರು:  ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪರಿಶಿಷ್ಟರ ಮೀಸಲು ಭೂಮಿಯಾಗಿರುವ ಡಿ. ಸಿ ಮನ್ನಾ ಭೂಮಿಯ ಮಂಜೂರಾತಿಗೆ ಸಂಬಂಧಿಸಿದ ನ್ಯೂನತೆಗಳನ್ನು ಸರಿಪಡಿಸುವ ಬಗ್ಗೆ ನಿನ್ನೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರವರು ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ನಾಯಕರು ಮತ್ತು ದಲಿತ ಸಂಘಟನೆಗಳ ಮುಖಂಡರ ಜೊತೆ ಸುಧೀರ್ಘ ಚರ್ಚೆಯನ್ನು ನಡೆಸಿದರು. ಬ್ರಿಟೀಷರು ಭಾರತಕ್ಕೆ ಬಂದಾಗ ಇಲ್ಲಿನ ಪರಿಶಿಷ್ಟರ ಸ್ಥಿತಿಗತಿಯನ್ನು ಆಧ್ಯಯನ ಮಾಡಿ 100 ವರ್ಷದ ಹಿಂದೆಯೇ ಭೂಮಿಯನ್ನು ಪರಿಶಿಷ್ಟರಿಗಾಗಿ ಮೀಸಲಿಟ್ಟಿದ್ದರು, […]

DAKSHINA KANNADA

ಹರಿ ಓಂ ಸೇವಾ ಸಂಸ್ಥೆ ವಾಸುಕಿ ನಗರ ಎಕ್ಕೂರು   ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ನಿರ್ಮಿಸಿದ ನೂತನ ಮನೆ ಹಸ್ತಾಂತರ

ಮಂಗಳೂರು ; ಹರಿ ಓಂ ಸೇವಾ ಸಂಸ್ಥೆ ವಾಸುಕಿ ನಗರ ಎಕ್ಕೂರು ಇವರ ವತಿಯಿಂದ ಹಾಗೂ ದಾನಿಗಳ ಸಹಯೋಗದೊಂದಿಗೆ ಬಿಜೆಪಿ ಮಂಗಳೂರು ದಕ್ಷಿಣ ಉಪಾಧ್ಯಕ್ಷರಾದ ಶ್ರೀ ಕಿರಣ್ ರೈ ಬಜಾಲ್ ರವರ ನೇತೃತ್ವದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಶ್ರೀ ಮತಿ ಯಮುನಾ ಪೂಜಾರಿ ಕುಟುಂಬಸ್ಥರೊಗೆ ನೂತನವಾಗಿ ನಿರ್ಮಿಸಿದ ಗೃಹ “ಹರಿ ಓಂ” ಹೆಸರಿನ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಬಳಿಕ ಮಾತನಾಡಿದ ಕಿರಣ್ ರೈ ಯವರು ಹರಿ ಓಂ ಸೇವಾ ಸಂಸ್ಥೆ ಬಡ ಕುಟುಂಬದ ಮನೆ […]

DAKSHINA KANNADA

ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಉದ್ವಿಗ್ನತೆ  ಅಶಾಂತಿ, ಆತಂಕವನ್ನುಂಟು ಮಾಡಿವೆ. ಯು.ಟಿ.ಖಾದರ್

ಮಂಗಳೂರು, ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವಂತಹ ಕೆಲವು ಘಟನೆಗಳು ಪ್ರತಿಯೊಬ್ಬರಿಗೂ ನೋವನ್ನುಂಟುಮಾಡಿದೆ. ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಉದ್ವಿಗ್ನತೆ ಇವೆಲ್ಲವೂ ನಮಗೆ ಆಂತರಿಕವಾಗಿ ತೀವ್ರ ಅಶಾಂತಿ, ಆತಂಕವನ್ನುಂಟು ಮಾಡಿವೆ. ನಾನು ಈ ಕ್ಷೇತ್ರದ ಜನ ಪ್ರತಿನಿಧಿಯಾಗಿ, ಮತ್ತು ವಿಧಾನಸಭೆಯ ಸಭಾಧ್ಯಕ್ಷರಾಗಿ, ಒಬ್ಬ ರಾಜಕಾರಣಿಯಾಗಿ ಮಾತ್ರವಲ್ಲ, ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ, ನಿಮ್ಮ ನೆರೆಹೊರೆಯವನಾಗಿ ಮತ್ತು ಈ ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ನಿಮ್ಮಷ್ಟೇ ಪ್ರೀತಿ, ಕಾಳಜಿ ವಹಿಸುವ ವ್ಯಕ್ತಿಯಾಗಿ ನಿಮ್ಮೊಂದಿಗೆ ಮಾತನಾಡಲಿಚ್ಚಿಸುತ್ತೇನೆ. ದಕ್ಷಿಣ […]

DAKSHINA KANNADA HOME LATEST NEWS STATE

ಕೋಮುಹಿಂಸೆ ನಿಗ್ರಹ ಪಡೆಯ ಮುಖ್ಯಸ್ಥರಾಗಿ ಪೊಲೀಸ್‌ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಕೋಮುಹಿಂಸೆ ನಿಗ್ರಹಿಸಲು ಸರ್ಕಾರ ಹೊಸದಾಗಿ ಕಾರ್ಯಪಡೆ ರಚಿಸಿದ್ದು, ಮಂಗಳೂರು ನಗರ ಪೊಲೀಸ್‌ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಹೆಚ್ಚುವರಿಯಾಗಿ ಈ ಕಾರ್ಯಪಡೆಯ ಮುಖ್ಯಸ್ಥರ ಹೊಣೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೋಮುಹಿಂಸೆ ನಿಗ್ರಹಿಸಲು ಸರ್ಕಾರ ಹೊಸದಾಗಿ ಕಾರ್ಯಪಡೆ ರಚಿಸಿದ್ದು, ಇದರ ಕಾರ್ಯಾಚರಣೆಗೆ ಇದೇ 13ರಂದು ಚಾಲನೆ ನೀಡಲು ಸಿದ್ಧತೆಗಳು ನಡೆದಿವೆ. ಡಿಐಜಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿರುವ ಈ ಕಾರ್ಯಪಡೆಯಲ್ಲಿ ಒಟ್ಟು 248 ಸಿಬ್ಬಂದಿ ಹಾಗೂ ಮೂರು […]

DAKSHINA KANNADA HOME LATEST NEWS STATE

ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ..!

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಂಗಳವಾರ ರಾತ್ರಿ […]

DAKSHINA KANNADA HOME LATEST NEWS STATE

ವಿವಾದಾತ್ಮಕ ಭಾಷಣ: ಪೊಲೀಸ್‌ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಚುನಾವಣೆ ವೇಳೆ ಮಾಡಿದ್ದ ವಿವಾದಾತ್ಮಕ ಭಾಷಣ ಸಂಬಂಧ ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ಬಂಟ್ವಾಳ ಠಾಣಾ ಪೊಲೀಸರು ನಡೆಸುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. 2018ರ ವಿಧಾನಸಭಾ ಚುನಾವಣೆ ವೇಳೆ ಬಂಟ್ವಾಳದ ಕಲಡ್ಕದಲ್ಲಿ ರಾಜೇಶ್ ನಾಯ್ಕ್ ಪರ ಚುನಾವಣಾ ಪ್ರಚಾರ ನಡೆಸುವ ಸಂದರ್ಭದಲ್ಲಿ ಸುನಿಲ್ ಕುಮಾರ್, ‘ರಾಮ ಬೇಕೋ, ಅಲ್ಲಾ ಬೇಕೋ? ಎಂದು ಪ್ರಶ್ನೆ ಮಾಡಿದ್ದರು. ಈ ಕುರಿತು ಎಫ್‌ಐಆರ್ ದಾಖಲಾಗಿತ್ತು.   ಈ ಬಗ್ಗೆ ತನಿಖೆ ನಡೆಸಿದ ಬಂಟ್ವಾಳ […]