Month: June 2025

NATIONAL

ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿ.ಎಂ‌ ಸಿದ್ದರಾಮಯ್ಯ

ನವದೆಹಲಿ, ಜೂನ್ 10: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, […]

DAKSHINA KANNADA

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಜೂ.10 ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭೂಕುಸಿತ, ನೀರು ಮುಳುಗಡೆ, ಸೇರಿದಂತೆ ತೀವ್ರ ಮಳೆಯಿಂದಾಗಿ ದುರಂತ ಘಟನೆಗಳು ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು ಮೊದಲೇ ಗುರುತಿಸಬೇಕು. ರೆಡ್ […]

HOME LATEST NEWS

ಅಸೈಗೋಳಿಯ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

ಮಂಗಳೂರು: ಮಂಗಳೂರಿನ ಹೊರವಲಯದ ಅಸೈಗೋಳಿಯಲ್ಲಿರುವ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯ ಲ್ಲಿ ಜೂ. 9ರಂದು ಸೋಮವಾರ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಕ್ಸೇವಿಯರ್ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಇವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಂಡಿಯನ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಮುರಳಿ ಅವರು, ಮಕ್ಕಳು ಮುಂದಿನ ಭವಿಷ್ಯದಲ್ಲಿ ಸಮಾಜದಲ್ಲಿ ಜೀವಿಸುವಾಗ ಜೀವನವನ್ನು ಹೇಗೆ ರೂಪಿಸಬೇಕು? ಹೆತ್ತವರಿಗೆ ಹಾಗೂ ಸಮಾಜಕ್ಕೆ ಹೇಗೆ ಮಾದರಿಯಾಗಿ ಬಾಳಬೇಕು ಮತ್ತು ವಿದ್ಯಾಭ್ಯಾಸದ ನಂತರ ಉದ್ಯೋಗವನ್ನು ಪಡೆಯುವುದರ […]

DAKSHINA KANNADA HOME LATEST NEWS

ಕಡಬ: ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ತಮ್ಮ- ನರಳಾಡಿ ಪ್ರಾಣ ಬಿಟ್ಟ ಅಣ್ಣ

ಕಡಬ: ಕೌಟುಂಬಿಕ ಕಲಹದಲ್ಲಿ ಸ್ವಂತ ಅಣ್ಣನನ್ನೇ ತಮ್ಮನೊಬ್ಬ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಬಜಕರೆ ಬಳಿ ರೈಲ್ವೇ ಟ್ರಾಕ್ ನಲ್ಲಿ ನಡೆದಿದೆ. ಬೆಂಕಿಯಿಂದ ಗಂಭೀರ ಗಾಯಗೊಂಡ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ತಮ್ಮನನ್ನು ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆತನ ತಮ್ಮ ನಿಂಗಪ್ಪ (21) […]

DAKSHINA KANNADA HOME LATEST NEWS

ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರಿಂದ ದಾಳಿ

ವಿಟ್ಲ: ಗುಡ್ಡೆಯಲ್ಲಿ ಕೋಳಿ ಅಂಕ ನಡೆಸುತ್ತಿದ್ದಾಗ ವಿಟ್ಲ ಪೊಲೀಸರು ದಿಢೀರ್‌ ಪೊಲೀಸ್‌ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಳಿ ಸಮೇತ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿರುವ ಪೊಲೀಸರು, ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಹರೆಬೆಟ್ಟು ಎಂಬ ಗುಡ್ಡೆಯಲ್ಲಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಈ ವೇಳೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ಮರೆಯಲ್ಲಿ ನಿಂತು ಗಮನಿಸಿದಾಗ ಸದ್ರಿ ಗುಡ್ಡೆಯ ಸ್ಥಳದಲ್ಲಿ ಕೆಲವರು ಗುಂಪು ಸೇರಿ […]

DAKSHINA KANNADA

3 ಪ್ರಕರಣಗಳನ್ನು ಎನ್‌ಐಎಗೆ ವಹಿಸಿ; ತನಿಖೆಯಲ್ಲಿ ತಾರತಮ್ಯ ಬೇಡ: ಒಂದು ಕಣ್ಣಿಕೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಯಾಕೆ?   ಮಂಜುನಾಥ್ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಿಂದೀಚೆಗೆ ಮೂರು ಕೊಲೆ ಪ್ರಕರಣಗಳು ನಡೆದಿದ್ದು, ಇಡೀ ಕರಾವಳಿಯಲ್ಲಿ ಆತಂಕ ಮೂಡಿಸಿತು. ಈ ಕೊಲೆಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಮೂರು ಪ್ರಕರಣಗಳನ್ನು ಎನ್‌ಐಎಗೆ ತನಿಖೆಗೆ ವಹಿಸಿದರೆ ದುಷ್ಜೃತ್ಯದ ಹಿಂದಿನ ಸತ್ಯ ಬಯಲಿಗೆ ಬರಲಿದೆ. ಕೇಂದ್ರ ಗೃಹ ಇಲಾಖೆಯು ಬಜಪೆ ಕಿನ್ನಿಪದವಿನಲ್ಲಿ ನಡೆದ ಸುಹಾಸ್ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಿದೆ. ಇದೇ ಮಾದರಿಯಲ್ಲಿ ಕುಡುಪುವಿನಲ್ಲಿ ಏ.27ರಂದು ಅಶ್ರಫ್ ಎಂಬಾತನನ್ನು ಗುಂಪು ಹತ್ಯೆ ಮಾಡಲಾಗಿದೆ. ಇದಾದ ಬಳಿಕ ಬಜಪೆ ಕಿನ್ನಿಪದವಿನಲ್ಲಿ […]

DAKSHINA KANNADA NATIONAL

ಹಿರಿಯ ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿ ಮುಂಡಾಜೆ ನಿಧನ; 56 ವರ್ಷಗಳಿಂದ ಕಲಾ ಮಾತೆಯ ಆರಾಧಕರಾಗಿದ್ದ ಮುಂಡಾಜೆ

ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಸದಾಶಿವ ಶೆಟ್ಟಿಯವರು ಕಟೀಲು ಮೇಳದಲ್ಲಿ ಕಳೆದ 23 ವರ್ಷಗಳಿಂದ ವೇಷಧಾರಿಯಾಗಿ ಹಾಗೂ 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದು, ಒಟ್ಟಾರೆಯಾಗಿ ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 56 ವರ್ಷಗಳ ಸುಧೀರ್ಘ ಅನುಭವ ಹೊಂದಿದವರಾಗಿದ್ದಾರೆ. 11ನೇ ವರ್ಷಕ್ಕೆ ಧರ್ಮಸ್ಥಳ ಮೇಳದಲ್ಲಿ ಸ್ತ್ರೀ ವೇಷದ ಮೂಲಕ ವೃತ್ತಿ ಜೀವನ ಆರಂಭಿಸಿದ್ದ ಸದಾಶಿವ ಶೆಟ್ಟಿಯವರು ಬಳಿಕ ಕರ್ನಾಟಕ, ಕುಂಬ್ಲೆ, ಸಸಿಹಿತ್ಲು ಸೇರಿದಂತೆ ಹಲವು ಮೇಳಗಳಲ್ಲಿ […]

DAKSHINA KANNADA

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆಗೆ ಒಪ್ಪಿಸಿರುವುದು ದೇಶವಿರೋಧಿ ಶಕ್ತಿಗಳನ್ನು ಬೇರು ಸಮೇತ ಕಿತ್ತೊಗೆಯಲು ಮೊದಲ ಹೆಜ್ಜೆ: ಸಂಸದ ಕ್ಯಾ. ಚೌಟ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಭಾರೀ ಸಂಚಲನ ಉಂಟುಮಾಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿರುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸ್ವಾಗತಿಸಿದ್ದಾರೆ. ಸುಹಾಸ್‌ ಶೆಟ್ಟಿ ಅವರನ್ನು ಬಜಪೆಯಲ್ಲಿ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದ ಬೆನ್ನಲ್ಲೇ ಅಂದರೆ ಮೇ 2ರಂದು ಕ್ಯಾ. ಚೌಟ ಅವರು, ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಇದರ ಹಿಂದೆ ಇಸ್ಲಾಮಿಕ್‌ ಮೂಲಭೂತವಾದಿಗಳ ಕೈವಾಡದ ಬಗ್ಗೆ ಬಲವಾದ ಶಂಕೆಯಿರುವ ಕಾರಣ […]

DAKSHINA KANNADA

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ NIA ತನಿಖೆಗೆ – ವಿಶ್ವ ಹಿಂದೂ ಪರಿಷದ್ ಸ್ವಾಗತ

ಮಂಗಳೂರು: ಮೇ 1ರಂದು ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ನಿಷೇಧಿತ ಭಯೋತ್ಪಾದಕ ಸಂಘಟನೆ PFI ಕೈವಾಡವಿದೆ ಅದಕೋಸ್ಕರ ಈ ಪ್ರಕ್ರರಣವನ್ನNIA ತನಿಖೆಗೆ ನೀಡಬೇಕೆಂದು ವಿಶ್ವ ಹಿಂದೂ ಪರಿಷದ್ ಬಲವಾಗಿ ಆಗ್ರಹಿಸಿ ಬಜಪೆಯಲ್ಲಿ ಬ್ರಹತ್ ಜನಾಗ್ರಹ ಸಬೆ ನಡೆಸಿತ್ತು. ಇದೀಗ ಕೇಂದ್ರ ಸರಕಾರದ ಗೃಹ ಇಲಾಖೆಯು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA ತನಿಖೆಗೆ ನೀಡಿರುವುದನ್ನು ವಿಶ್ವ ಹಿಂದೂ ಪರಿಷದ್ ಸ್ವಾಗತಿಸುತ್ತದೆ. ಈ ಹತ್ಯೆಯ ಹಿಂದೆ ಇರುವ ಎಲ್ಲಾ ಹಂತಕರನ್ನು ಮತ್ತು ಸಂಚುಕೋರರನ್ನು, ಹತ್ಯೆಗೆ ಹಣಕಾಸಿನ […]

DAKSHINA KANNADA HOME LATEST NEWS

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಇದರ ವತಿಯಿಂದ ಮಂಗಳೂರು ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ದಿನೇಶ್ ಮುಳೂರುರವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಕರ್ಣಾಟಕ ಸರ್ಕಾರದ ಮಾಜಿ ಸಚಿವಾರಾದ ಶ್ರೀ ಬಿ ರಮಾನಾಥ ರೈವರು ದೀಪ ಬೆಳಗಿಸಿ ಡಾ. ಬಿ. ಆರ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಇವರು ಸಂವಿಧಾನ […]