Month: June 2025

Breaking News COMMUNITY NEWS LATEST NEWS

ಮಂಜೇಶ್ವರ: ತಾಯಿಯನ್ನೇ ಸುಟ್ಟ ಪುತ್ರ ಮೆಲ್ವಿನ್‌ನ್ನು ಪತ್ತೆ ಹಚ್ಚಿದ್ದೇ ರೋಚಕ…!

ಮಂಜೇಶ್ವರ: ಮಗನೊಬ್ಬ ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆ ನಡೆದ ಕೆಲವೇ ಗಂಟೆಯೊಳಗೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ ರವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ. ನೆರೆಮನೆಯ ಲೋಲಿಟಾ (30) ಗಂಭೀರ ಗಾಯಗೊಂಡಿದ್ದಾರೆ. ಘಟನೆ ವಿವರ ನಿನ್ನೆ ತಡರಾತ್ರಿ ತಾಯಿಗೆ ಬೆಂಕಿ ಹಚ್ಚಿದ ಬಳಿಕ, ನೆರೆಮನೆಯ ಮಹಿಳೆಯನ್ನು ತಾಯಿಗೆ ಹುಷಾರಿಲ್ಲವೆಂದು ಮನೆಗೆ ಕರೆಸಿದ್ದಾನೆ […]

DAKSHINA KANNADA HOME LATEST NEWS

ಪುತ್ತೂರು: ಕ್ರೈಸ್ತ ಧಫನ ಭೂಮಿಯಿಂದ ಕಳೇಬರದ ಎಲುಬು ಕಳ್ಳತನ

ಪುತ್ತೂರು: ಪುತ್ತೂರಿನ ಕ್ರೈಸ್ತ ಧಫನ ಭೂಮಿಯಿಂದ ಕಳೇಬರದ ಎಲುಬು ಕಳ್ಳತನ ಮಾಡಿದ ಘಟನೆಯ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರಿನ ಬನ್ನೂರು ಸಂತ ಅಂತೋಣಿ ಚರ್ಚ್‌ನ ಅಧೀನದಲ್ಲಿರುವ ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿದ್ದಾರೆ. ಈ ಬಗ್ಗೆ ಜೂ.14 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಧರ್ಮಗುರುಗಳು ಫಾ.ಬಾಲ್ತಿಜಾರ್ ಪಿಂಟೋ ನೀಡಿದ ದೂರಿನ ಮೇರೆಗೆ, ದೂರರ್ಜಿಯನ್ನು ದಾಖಲಿಸಿಕೊಂಡಿದ್ದು, ಘಟನಾಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ […]

DAKSHINA KANNADA

ಜುಲೈ15ರೊಳಗೆ ದಂಡ ಕಟ್ಟಿ, ಇಲ್ಲದಿದ್ದರೆ ಕೋರ್ಟ್‌ಗೆ ಚಾರ್ಜ್‌ಶೀಟ್‌

ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಮೇಲೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತೆಗೆದಿರುವ ಭಾವಚಿತ್ರಗಳನ್ನು ಮತ್ತು ಟ್ರಾಫಿಕ್ ಕಂಟ್ರೋಲ್ & ಕಮಾಂಡ್ ಸೆಂಟರ್‌ನಲ್ಲಿ ಸಿಸಿಟಿವಿ ಯಲ್ಲಿ ಸೆರೆಯಾಗಿರುವ ವಾಹನ ಚಾಲಕ/ಸವಾರರ ಸಂಚಾರ ನಿಯಮ ಉಲ್ಲಂಘನೆಯ ಐಎಂವಿ ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ.    ವಾಹನ ಚಾಲಕರು/ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಅಂಚೆ ಮೂಲಕ ನೋಟಿಸುಗಳನ್ನು ನೋಂದಣಿ ಸಂಖ್ಯೆಯ ಮಾಲಕರಿಗೆ ಈಗಾಗಲೇ ಕಳುಹಿಸಲಾಗಿದ್ದು, ದಂಡವನ್ನು ಕಟ್ಟದೇ ಹಲವಾರು ಪ್ರಕರಣಗಳು […]

DAKSHINA KANNADA HOME LATEST NEWS

ಆರ್ಥಿಕ ಸಮಸ್ಯೆಯಿಂದ ನೊಂದು ಯುವಕ ನೇಣಿಗೆ ಶರಣು

ಮಂಗಳೂರು: ಆರ್ಥಿಕ ಸಮಸ್ಯೆಯಿಂದ ನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೋಡಿಕಲ್‌ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆ ವಿವರ ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದ. ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎನ್ನಲಾಗಿದೆ.  ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ  […]

DAKSHINA KANNADA HOME LATEST NEWS

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ- ವೆಬ್‌ಸೈಟ್‌ ಮೇಲೆ ಪ್ರಕರಣ ದಾಖಲು

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. Gadinadadhwani.online ಎಂಬ ವೆಬ್‌ಸೈಟ್ “ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ” ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನುಂಟು ಮಾಡಿದ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]

DAKSHINA KANNADA HOME LATEST NEWS

ವಿಟ್ಲ: ವಾಹನ ದಟ್ಟನೆ ನಿಯಂತ್ರಿಸಲು ಫ್ಲೆಕ್ಸ್ ಮತ್ತು ತಳ್ಳುಗಾಡಿ ತೆರವು

ವಿಟ್ಲ: ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆ ನಿಯಂತ್ರಿಸಲು ಇಲ್ಲಿನ ಪಟ್ಟಣ ಪಂಚಾಯತ್ ಅಧಿಕಾರಿಗಳು ವಾಹನ ದಟ್ಟನೆಗೆ ಕಾರಣವಾಗುತ್ತಿದ್ದ ಫ್ಲೆಕ್ಸ್ ಮತ್ತು ತಳ್ಳುಗಾಡಿಗಳನ್ನು ತೆರವುಗೊಳಿಸಿದರು. ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಶನಿವಾರ ಪಟ್ಟಣ ಪಂಚಾಯತ್ ವತಿಯಿಂದ ಪೊಲೀಸ್, ಇಲಾಖೆ ಮತ್ತು ವಾಹನ ಚಾಲಕ ಸಭೆ ಕರೆಯಲಾಗಿತ್ತು. ಈ ವೇಳೆ ಈ ಹಿಂದೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಅಳವಡಿಸಲಾಗಿದ್ದ ಪ್ರಚಾರದ ಫ್ಲೆಕ್ಸ್ […]

COMMUNITY NEWS HOME

ಜೂ. 27 ರಂದು ಎಚ್. ಎಮ್. ಪೆರ್ನಾಲ್ ಅವರ ಕವನ ಸಂಕಲನ ‘ಜನೆಲ್’ ಬಿಡುಗಡೆ

ಮಂಗಳೂರು: ಕೊಂಕಣಿ ಕವಿ / ವಿಮರ್ಶಕ ಎಚ್. ಎಮ್. ಪೆರ್ನಾಲ್ ನಾಲ್ಕನೆಯ ಕವನ ಸಂಕಲನ ಜನೆಲ್ (ಕಿಟಕಿ) ಇದೇ ಜೂನ್ 27 ರಂದು ಸಂಜೆ 4.30 ಕ್ಕೆ ಎಂ.ಸಿ.ಸಿ. ಬ್ಯಾಂಕ್ ಆಡಳಿತ ಸೌಧ ಸಭಾಂಗಣದಲ್ಲಿ ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವಜೋ ಬಿಡುಗಡೆ ಮಾಡುವರು. ಕೇಂದ್ರ ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷಾ ಸಲಹಾ ಮಂಡಳಿ ಸಂಚಾಲಕ ಕವಿ ಮೆಲ್ವಿನ್ ರೊಡ್ರಿಗಸ್ ಪುಸ್ತಕ ಪರಿಚಯ ಮಾಡಲಿದ್ದು, ವಿಶನ್ ಕೊಂಕಣಿ ಪ್ರವರ್ತಕರೂ, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ದಾನಿ […]

DAKSHINA KANNADA

ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ:ವಾಹನ ಸಂಚಾರಕ್ಕೆ ಅಡಚಣೆ

ಮಂಗಳೂರು ಜೂನ್ 24 ನೆಲ್ಯಾಡಿ  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲ ಮಣ್ಣು ಹಾಗೂ ಮರಗಳಿಂದ ಮುಚ್ಚಿಹೋಗಿದೆ. ಈ ಪ್ರದೇಶದಲ್ಲಿ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೆ ಕತ್ತರಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ . ಪರಿಣಾಮವಾಗಿ ಮಳೆ ಬರುತ್ತಿದ್ದಂತೆ ಮಣ್ಣು ಸಡಿಲಗೊಂಡು ಕುಸಿದು, ಹೆದ್ದಾರಿ ಬಂದ್ ಆಗುವ ಸ್ಥಿತಿ ನಿರ್ಮಾಣವಾಗಿದೆ. ದೊಡ್ಡ ವಾಹನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದರೆ, ಕೆಲವು ಸಣ್ಣ ವಾಹನಗಳು ಕಿರಿದಾದ […]

DAKSHINA KANNADA

ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ  ಉದ್ಘಾಟನೆ

ವಿಟ್ಲ: ಜೂನ್ 24  ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ವಿಟ್ಲ  ಶತಮಾನೋತ್ಸವ ಸಮುದಾಯ  ಭವನದಲ್ಲಿ ನಡೆಯಿತು. ಮುಖ್ಯ ಅತಿಥಿ ಶ್ರೀ. ಸುಪ್ರೀತ್ ಕೆ.ಸಿ ಪ್ರಾಂಶುಪಾಲರು ಸುದಾನ ಪದವಿ ಪೂರ್ವ ಕಾಲೇಜು ಪುತ್ತೂರು ಇವರು ಉಪಸ್ಥಿತರಿದ್ದು ಮಂತ್ರಿ ಮಂಡಲ ವಿಶೇಷ ಹಾಗೂ ಉತ್ತಮ ನಾಯಕತ್ವದ ಮಹತ್ವ ಬಗ್ಗೆ ತಿಳಿಸಿದರು . ಶಾಲಾ ಸಂಚಾಲಕರಾದ ಫಾ. ಐವನ್ ಮೈಕೆಲ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ಫಾ […]

DAKSHINA KANNADA

ಕಾಲೇಜ್ ವಿದ್ಯಾರ್ಥಿಗಳಿಗೆ ತುಳು ನಾಟಕದ  ಅಭಿರುಚಿ  ಮೂಡಿಸುವುದು ಅಗತ್ಯ : ತಮ್ಮ ಲಕ್ಷ್ಮಣ

ಮಂಗಳೂರು :  ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಪಡೀಲ್ ಅಮೃತ ಕಾಲೇಜ್  ಸಹಯೋಗದಲ್ಲಿ  ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ  ಮಾತನಾಡಿದರು.  ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ ನೆನಪಿಸಿದರು. ವಿದ್ಯಾರ್ಥಿಗಳು ತುಳು  ನಾಟಕದ ಬಗ್ಗೆ […]