Month: June 2025

DAKSHINA KANNADA

ಪಾಲ್ದನೆ ಚರ್ಚ್: ಧರ್ಮಗುರು ಫಾ. ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊ ಅವರಿಂದ ಹುದ್ದೆ ಸ್ವೀಕಾರ

ಮಂಗಳೂರು:   ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನ ನೂತನ ಧರ್ಮಗುರುಗಳಾಗಿ ನಿಯೋಜನೆಗೊಂಡಿರುವ ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊ ಅವರು ಜೂನ್ 20 ರಂದು ಹುದ್ದೆಯನ್ನು ವಹಿಸಿಕೊಂಡರು. ಅವರು ಕಳೆದ 17 ವರ್ಷಗಳಿಂದ ಕಂಕನಾಡಿ ಫಾದರ್‌ ಮುಲ್ಲರ್‌ ಸಮೂಹಸಂಸ್ಥೆಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಶುಕ್ರವಾರ ಪಾಲ್ದನೆ ಚರ್ಚ್ ಗೆ ಆಗಮಿಸಿದ ಸಂದರ್ಭ ಧರ್ಮಗುರು ವಂದನೀಯ ಆಲ್ಬನ್‌ ಡಿ’ಸೋಜಾ, ವಲಯದ ವಿಕಾರ್ ವಾರ್ ವಂದನೀಯ ಫಾ. ಜೇಮ್ಸ್ ಡಿ ಸೋಜಾ, ಚರ್ಚ್‌ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಕಾರ್ಯದರ್ಶಿ ಆಸ್ಟಿನ್‌ […]

DAKSHINA KANNADA

ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಸಿದ ಶಾಸಕ ಕಾಮತ್

ಮಂಗಳೂರು ಜೂನ್ 20  ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ಹಾನಿಯಿಂದಾಗಿ ಅನೇಕ ಕಡೆ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಪ್ರತೀ ವಾರ್ಡ್ ಗೆ 10 ಮನೆಗಳಂತೆ 60 ವಾರ್ಡಿನ ಮನೆಗಳಿಗೂ ತುರ್ತು ದುರಸ್ತಿಗೆ ಸಹಾಯವಾಗುವಂತೆ 40 ಸಾವಿರದವರೆಗೆ […]

LATEST NEWS

ಸೈಂಟ್ ಅಲೋಶಿಯಸ್ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಫೇರ್‌ವೆಲ್‌

ಮಂಗಳೂರು: ಸೈಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ) ಯ ಎಐಎಂಐಟಿ ಕೇಂದ್ರದ ಎಂ.ಬಿ.ಎ ವಿಭಾಗವು ಜೂನ್ 19ರಂದು  ಆರ್ಥರ್ ಶೆಣೈ ಆಡಿಯಟೋರಿಯಂನಲ್ಲಿ 2023–2025 ಎಂ.ಬಿ.ಎ ಬ್ಯಾಚ್ ವಿದ್ಯಾರ್ಥಿಗಳಿಗೆ ಪ್ರಾರ್ಥನಾ ಸೇವೆಯನ್ನು ಆಯೋಜಿಸಿತ್ತು. ಈ ಕಾರ್ಯಕ್ರಮ ವಿದ್ಯಾರ್ಥಿಗಳ ಮುಂದಿನ ಹಂತದ ಶುಭ ಕೋರುವ ಕಾರ್ಯಕ್ರಮವಾಗಿತ್ತು. ಡಾ. ಫಾ. ಮನುಜ್ ಎಸ್‌ಜೆ ಅವರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ಎಲ್ಲರನ್ನೂ ತಮ್ಮ ಆಶೀರ್ವಾದಗಳ ಕುರಿತು ಚಿಂತನೆ ಮಾಡಿಕೊಳ್ಳುವಂತೆ ಆಹ್ವಾನಿಸಿದರು. ಅವರ ಸಂದೇಶ ಧನ್ಯತೆಯ ಮಹತ್ವದ ಮೇಲೆ ಕೇಂದ್ರಿತವಾಗಿದ್ದು, […]

DAKSHINA KANNADA HOME LATEST NEWS

ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

ದುಬೈ: ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಶ್ರೀ ಡಯಾನ್ ಡಿಸೋಜಾ ಇವರು ನಡೆಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ರವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ಮೂಲದ ಮತ್ತೊಬ್ಬ ಪ್ರಖ್ಯಾತ ಸಮುದಾಯ ನಾಯಕ ಹಾಗೂ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ […]

DAKSHINA KANNADA LATEST NEWS NATIONAL STATE

ಫಾದರ್ ಮುಲ್ಲರ್ ಸಂಸ್ಥೆಗಳಿಗೆ ವಂ. ಪೌಸ್ತಿನ್ ಲೋಬೊ ನೂತನ ನಿರ್ದೇಶಕರಾಗಿ ಪದಗ್ರಹಣ

ಕಂಕನಾಡಿ, ಮಂಗಳೂರಿನ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನೂತನ ನಿರ್ದೇಶಕರಾಗಿ ವಂ. ಪೌಸ್ತಿನ್ ಲೂಕಸ್ ಲೋಬೊ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನೂತನ ನಿರ್ದೇಶಕರ ಅಧಿಕಾರ ಸ್ವೀಕಾರ ಸಮಾರಂಭಕಂಕನಾಡಿ ಫಾದರ್ ಮುಲ್ಲರ್ ಸಂಸ್ಥೆಗಳ ಆವರಣದ ಸೈಂಟ್ ಜೋಸೆಫ್ ಚಾಪೆಲ್ ನಲ್ಲಿ ಬುಧವಾರ ನಡೆಯಿತು. ನಿರ್ಗಮನ ನಿರ್ದೇಶಕ ಫಾದರ್ ರಿಚರ್ಡ್ ಅಲೋಷಿಯಸ್ ಕುವೆಲ್ಲೊ ಅವರನ್ನು ಬೀಳ್ಕೊಡುಗೆ ನೀಡಲಾಯಿತು. ನಿಯೋಜಿತ ನಿರ್ದೇಶಕರಾಗಿದ್ದ ಫಾದರ್ ಫೌಸ್ತಿನ್ ಲೂಕಸ್ ಲೋಬೊ ಅವರಿಗೆ ಸ್ವಾಗತ ಕೋರಲಾಯಿತು. ಫಾದರ್ ಮುಲ್ಲರ್ ಸಂಸ್ಥೆಗಳ ಉಪಾಧ್ಯಕ್ಷ ಹಾಗೂ ಮಂಗಳೂರು ಧರ್ಮಪ್ರಾಂತ್ಯದ […]

DAKSHINA KANNADA LATEST NEWS STATE

ಮೊಬೈಲ್ ನಲ್ಲಿ ರೀಲ್ಸ್ ನೋಡಿ 1.26 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!

ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದಾಗ ಸಿಕ್ಕಿದ ಲೋನ್ ಜಾಹೀರಾತಿನಲ್ಲಿ ಬಂದ ನಂಬರ್‌ಗೆ ಕರೆ ಮಾಡಿ ಹಂತ ಹಂತವಾಗಿ 1.26 ಲಕ್ಷ ರೂ. ಹಣ ಪಾವತಿಸಿ ವ್ಯಕ್ತಿಯೊಬ್ಬರು ವಂಚನೆಗೆ ಒಳಗಾಗಿರುವ ಘಟನೆ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ವಿವರ ಮಂಗಳೂರಿನ ನಿವಾಸಿಯೊಬ್ಬರು ರೀಲ್ಸ್ ನೋಡುತ್ತಿದ್ದಾಗ ಸಿಕ್ಕಿದ ಲೋನ್ ಜಾಹೀರಾತನ್ನು ಗಮನಿಸಿ. ಅದರಲ್ಲಿದ್ದ 7991897524 ಸಂಖ್ಯೆ ಯನ್ನು ಸಂಪರ್ಕಿಸಿ ಲೋನ್ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ವಾಟ್ಸ್ ಆ್ಯಪ್ ಮೂಲಕ ಆಧಾರ್, ಬ್ಯಾಂಕ್ ದಾಖಲೆ ಸಹಿತ ಫೋಟೋ ನೀಡಿದ್ದಾರೆ. ಬಳಿಕ ವಂಚಕರು […]

STATE

ಪುತ್ತೂರು 4 ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ದಿಗೆ ಅನುದಾನಕ್ಕಾಗಿ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ೪ ಕೋಟಿ, ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨ ಕೋಟಿ, ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨ ಕೋಟಿ […]

HOME STATE

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಸನ್ಯಾನ್ಯ ಶ್ರೀ ಡಿ.ಕೆ.ಶಿವಕುಮಾರ್* ಅವರಿಗೆ ಸಲ್ಲಿಸಲಾಯಿತು.

ಬೆಂಗಳೂರು ಜೂನ್ 19 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಪಡೆಯಲು *ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಳುಹಿಸಿದ್ದ* ಎಐಸಿಸಿ ಪ್ರಧಾನ ಕಾರ್ಯದರ್ಶಿ *ಶ್ರೀ ಸೈಯದ್ ನಾಸೀರ್ ಹುಸೇನ್* ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ *ಶ್ರೀ ಮಂಜುನಾಥ ಭಂಡಾರಿ* ರವರ ನೇತೃತ್ವದ ನಿಯೋಗವು ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಎಲ್ಲಾ ಧರ್ಮ, ಸಮುದಾಯದ ಮುಖಂಡರುಗಳನ್ನ  ಭೇಟಿ ಮಾಡಿ ವರದಿಯನ್ನು ತಯಾರಿಸಿ […]

DAKSHINA KANNADA

ಪೆರುವಾಯಿ ಕೊಲ್ಲತಡ್ಕ, ಶಾಲೆಯ  ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಬ್ಯಾಗ್ ಹಾಗೂ ಪಾಠೋಪಕರಣಗಳ  ವಿತರಣೆ

ವಿಟ್ಲ ಪೆರುವಾಯಿ, ಜೂ. 18: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕೊಲ್ಲತಡ್ಕ, ಪೆರುವಾಯಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಬ್ಯಾಗ್ ಹಾಗೂ ಪಾಠೋಪಕರಣಗಳ ಉಚಿತ ವಿತರಣಾ ಸಮಾರಂಭವು ಇತ್ತೀಚೆಗೆ ಶಾಲೆಯಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಸಚಿನ್ ಅಡ್ವಾಯಿ ಅವರು ವಹಿಸಿದರು.ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸ ಕಡೆಂಬಿಲ . ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋರಾಜ್ ರೈ, ಆಡಳಿತ ಮಂಡಳಿ ಸದಸ್ಯರಾದ ರಾಜೇಂದ್ರನಾಥ ರೈ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಜಯಂತಿ,ಪಂಚಾಯತ್ ಸದಸ್ಯರಾದ ಬಾಲಕೃಷ್ಣ […]

DAKSHINA KANNADA HOME LATEST NEWS

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ರೇಡ್‌: ಸರ್ವೇಯರ್‌, ದಲ್ಲಾಳಿ ಬಂಧನ

ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದ ಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ಹಾಗೂ ತನ್ನ ತಾಯಿಯ ಹೆಸರಿನಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 2025ರ ಫೆಬ್ರವರಿಯಲ್ಲಿ ಮಂಗಳೂರು ಯು.ಪಿ.ಒ.ಆರ್ ಕಚೇರಿಗೆ ಅರ್ಜಿ ಸಲ್ಲಿಸಲಾಗಿತ್ತು. ಬಳಿಕ ಸರ್ವೆಯರ್ ನಂದೀಶ್ 2025ರ ಎಪ್ರಿಲ್‌ನಲ್ಲಿ ಸರ್ವೆ ನಡೆಸಿ ಲಂಚಕ್ಕೆ […]