Month: June 2025

DAKSHINA KANNADA HOME LATEST NEWS

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿ ನೇಣಿಗೆ ಶರಣು..!

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ. ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ […]

DAKSHINA KANNADA HOME LATEST NEWS

Updated: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಪಿಯು ಕಾಲೇಜಿಗೆ ಇಂದು ರಜೆ

ಮಂಗಳೂರು: ಭಾರೀ ಮಳೆಯ ಹಿನ್ನೆಲೆ ಜೂ.16 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ನಿನ್ನೆ ರಾತ್ರಿ ವೇಳೆಗೆ ನೀಡಿದ ಆದೇಶವನ್ನು ಮಾರ್ಪಡಿಸಿ ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸುಳ್ಯ-ಪುತ್ತೂರು, ಬೆಳ್ತಂಗಡಿ ತಾಲೂಕನ್ನು ಹೊರತುಪಡಿಸಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು.ಇಂದು ಬೆಳಿಗ್ಗೆ ಈ ಆದೇಶವನ್ನು ಮಾರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ […]

DAKSHINA KANNADA HOME LATEST NEWS

ಉಜಿರೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ಇಬ್ಬರ ಬಂಧನ

ಉಜಿರೆ: ವೇಶ್ಯಾವಾಟಿಕೆ ಚಟುವಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಹಿನ್ನೆಲೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಖಾಸಗಿ ವಸತಿಗೃಹಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಉಜಿರೆಯ ಬಸ್‌ನಿಲ್ದಾಣದ ಬಳಿ ಇರುವ ಶ್ರೀದುರ್ಗಾ ವಸತಿಗೃಹದಲ್ಲಿ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ವಸತಿಗೃಹದ ಮ್ಯಾನೇಜರ್ ಸತೀಶ್ ಪೂಜಾರಿ ಮತ್ತು ಕನ್ಯಾಡಿ ನಿವಾಸಿ ಯೋಗೀಶ್ ಆಚಾರ್ಯ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. […]

Breaking News DAKSHINA KANNADA STATE UDUPI

ಜೂ.16: ದ.ಕ. ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ದ.ಕ. ಜಿಲ್ಲೆಯ ಎಲ್ಲಾ ಶಾಲೆ ಪಿಯು ಕಾಲೇಜುಗಳಿಗೆ ಜೂ. 16ರ ಸೋಮವಾರದಂದು ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜೂ. 16ರ ಸೋಮವಾರ ರಜೆ ಘೋಷಿಸಲಾಗಿರುತ್ತದೆ.ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು […]

DAKSHINA KANNADA HOME LATEST NEWS

ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

ಮಂಗಳೂರು: ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜೂ.14 ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ ಇವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ವಂದನೀಯ ವಲೇರಿಯ ಡಿಸೋಜ […]

DAKSHINA KANNADA HOME

ಮಳೆ ನೀರು ಮನೆಗಳಿಗೆ ನುಗ್ಗಿ ತೊಂದರೆಗೀಡಾದ12 ಕುಟುಂಬಗಳು ಪುನರ್ವಸತಿ ಕೇಂದ್ರಕ್ಕೆ

ಮಂಗಳೂರು‌ ನಗರದ ಅತ್ತಾವರ ಸೇರಿದಂತೆ ಕೇಂದ್ರ ಭಾಗದ ವಿವಿದೆಡೆ ಮಳೆ ನೀರು ಮನೆಗಳಿಗೆ ನುಗ್ಗಿ ತೊಂದರೆಗೀಡಾದ 12 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಇವರಿಗೆ ಮಹಾನಗರಪಾಲಿಕೆ ವತಿಯಿಂದ ಪುರಭವನ ಆವರಣದಲ್ಲಿ ತಾತ್ಕಾಲಿಕ ಪುನರ್ವಸತಿ‌ ಕೇಂದ್ರದಲ್ಲಿ ಆಶ್ರಯ ನೀಡಿ‌, ಆಹಾರ ಮತ್ತು   ಭೇಟಿ ನೀಡಿ ಪರಿಶೀಲಿಸಿದರು. ಮಳೆ: ಸಂಪೂರ್ಣ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ* ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಎಲ್ಲಾ ತಹಶೀಲ್ದಾರರು ಹಾಗೂ ಇನ್ಸಿಡೆಂಟ್ ಕಮಾಂಡರ್ ಗಳು ಅಪಾಯದಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಕಾಳಜಿ ಕೇಂದ್ರ /ಸುರಕ್ಷಿತ ಸ್ಥಳಗಳಿಗೆ ಕೂಡಲೇ […]

DAKSHINA KANNADA

ವಿಶ್ವ ರಕ್ತದಾನಿಗಳ ದಿನಾಚರಣೆ
ನಿರಂತರ ರಕ್ತದಾನದಿಂದ ಆರೋಗ್ಯಪೂರ್ಣ ಹೃದಯ
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿ ವತಿಯಿಂದ ಎಸ್‌ಡಿಎಂ ಪಿ.ಜಿ.ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ನಗರದ ಕೊಡಿಯಾಲ್‌ಬೈಲ್‌ನ ಎಸ್‌ಡಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಮಾತನಾಡಿ ‘ ನಿರಂತರ ರಕ್ತದಾನ ಮಾಡುವ ರಕ್ತದಾನಿಗಳ ದೇಹದಲ್ಲಿ ಶುದ್ದ ರಕ್ತ ಉತ್ಪಾದನೆಯಾಗುತ್ತಲೇ ಇರುವ ಕಾರಣ ಹೆಚ್ಚು ಆರೋಗ್ಯವಂತರಾಗಿರುತ್ತಾರೆ. ಇದರಿಂದ ಅವರ ಹೃದಯವೂ ಆರೋಗ್ಯ ಪೂರ್ಣವಾಗಿರುತ್ತದೆ. ತುರ್ತು ಸಂದರ್ಭ ಜೀವ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ […]

COMMUNITY NEWS HOME

ಮೈಸೂರು: ಡೋರ್ನಹಳ್ಳಿ ಸಂತ ಅಂತೋಣಿಯ ವಾರ್ಷಿಕ ಮಹೋತ್ಸವ ಸಂಪನ್ನ

ಮೈಸೂರು: ಕ್ರೈಸ್ತ ಸಮುದಾಯದ ವಿಶ್ವ ವಿಖ್ಯಾತ ಪವಾಡ ಪುರುಷ ಡೋರ್ನಹಳ್ಳಿ ಸಂತ ಅಂತೋಣಿಯ ವಾರ್ಷಿಕ ಮಹೋತ್ಸವ ಜೂ.13ರಂದು ನಡೆಯಿತು. ಜೂ.4 ರಂದು ಸಂಜೆ 5:30ಕ್ಕೆ ಧ್ವಜಾರೋಹಣದ ಮೂಲಕ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

HOME LATEST NEWS STATE UDUPI

ಜೂ. 15 ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ

ಉಡುಪಿ : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ […]

DAKSHINA KANNADA HOME LATEST NEWS

ಯೆಯ್ಯಾಡಿಯಲ್ಲಿ ಚೂರಿ ಇರಿತಕ್ಕೊಳಗಾದ ಯುವಕ ಸಾ*ವು

ಮಂಗಳೂರು: ಜೂನ್ 6ರಂದು ಯೆಯ್ಯಾಡಿಯಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಕೌಶಿಕ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರೆಂದು ತಿಳಿದು ಬಂದಿದೆ. ಜೂ.6ರಂದು ಯೆಯ್ಯಾಡಿಯ ಬಾರೊಂದರ ಬಳಿ ಜಗಳ ನಡೆದು ಬಿಜೈ ನಿವಾಸಿ ಬ್ರಿಜೇಶ್ ಶೆಟ್ಟಿ ಎಂಬಾತ ಕೌಶಿಕ್‌ ಗೆ ಚೂರಿ ಇರಿದಿದ್ದ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಕೌಶಿಕ್‌ ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೌಶಿಕ್‌ ಇಂದು ಆಸ್ಪತ್ರೆಯಲ್ಲಿ ಮತಪಟ್ಟರೆಂದು ತಿಳಿದು ಬಂದಿದೆ. ಈ ದಾಳಿ […]