Month: June 2025

DAKSHINA KANNADA HOME LATEST NEWS

ವಿಮಾನ ಅಪಘಾತ: ಮಂಗಳೂರು ಮೂಲದ ಕೋ ಪೈಲಟ್‌ ನಿಧನ

ಅಹಮದಾಬಾದ್: ಇಂದು ಮಧ್ಯಾಹ್ನ ನಡೆದ ವಿಮಾನ ಅಪಘಾತದಲ್ಲಿ ಮಂಗಳೂರು ಮೂಲದ ಸಹ ಪೈಲೆಟ್ ಕ್ಲೈವ್ ಕುಂದರ್ ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ಕ್ಲೈವ್ ಕುಂದರ್ ಮುಂಬೈನಲ್ಲಿ ವಾಸಿಸುತ್ತಿದ್ದರು. ಇದರ ಜೊತೆಗೆ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ‌ ಸಾವನ್ನಪ್ಪಿರುವುದು ಖಚಿತವಾಗಿದೆ.

HOME LATEST NEWS NATIONAL

ಊಟ ಮಾಡುತ್ತಿದ್ದಾಗ ಹಾಸ್ಟೆಲ್‌ಗೆ ನುಗ್ಗಿದ ವಿಮಾನ: 20 ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವು..!

ಅಹಮದಾಬಾದ್‌:  ಬಿಜೆ ಮೆಡಿಕಲ್‌ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಿದ್ದ ವಿಮಾನ ಈ ದುರಂತರದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿತ್ತು. ಈ ದುರಂತವು ಮಧ್ಯಾಹ್ನ 1:30ರ ವೇಳೆಗೆ ಸಂಭವಿಸಿದೆ. ಈ ವೇಳೆ ಕೆಲವರು ಊಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅಲ್ಲಿದ್ದ ಆಹಾರ, ಪಾತ್ರೆಗಳು ಚೆಲ್ಲಾಪಿಲ್ಲಿಯಾಗಿದ್ದು,  ಕಾಲೇಜು ಕಟ್ಟಡ ಧ್ವಂಸವಾಗಿದೆ. ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ […]

HOME LATEST NEWS NATIONAL

ಪತನವಾದ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವ ಶಂಕೆ…!

ಅಹಮದಾಬಾದ್‌:  ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದ್ದು, 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ.   ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ 242 ಜನರಲ್ಲಿ 52 ಬ್ರಟೀಷ್‌ ಪ್ರಜೆ, ಪೋರ್ಚ್ಗಲ್‌ 6 […]

HOME LATEST NEWS NATIONAL

Big Breaking: ಅಹಮದಾಬಾದ್​​ನಲ್ಲಿ 242 ಪ್ರಯಾಣಿಕರಿದ್ದ Air India ವಿಮಾನ ಪತನ

ಅಹಮದಾಬಾದ್: ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿರುವ  ದುರಂತ ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ ನಡೆದಿದೆ. ಈ ವಿಮಾನ ನಿಲ್ದಾಣದ ಆವರಣದಿಂದ ದಟ್ಟ ಹೊಗೆ ಹೊರಬರುತ್ತಿರುವುದನ್ನು ನೋಡಬಹುದು. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242 ಪ್ರಯಾಣಿಕರಿದ್ದ ಏರ್ವಿ‌ ಇಂಡಿಯಾ ಮಾನ ಪತನವಾಗಿದ್ದು, ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. ಆದರೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ […]

DAKSHINA KANNADA HOME LATEST NEWS

ಸುಹಾಸ್‌ ಶೆಟ್ಟಿ ಮನೆಯವರು ಕರೆದರೆ ಅವರ ಮನೆಗೂ ಹೋಗುತ್ತೇನೆ: ಸ್ಫೀಕರ್‌ ಖಾದರ್‌

ಮಂಗಳೂರು: ಸುಹಾಸ್‌ ಶೆಟ್ಟಿ ಮನೆಯವರು ಕರೆದರೆ ಅವರ ಮನೆಗೂ ಹೋಗುತ್ತೇನೆ ಹಾಗೂ ಅಬ್ದುಲ್‌ ರೆಹಮಾನ್‌ ಕೊಲೆ ತನಿಖೆಯನ್ನು ಎನ್‌ಐಗೆ ವಹಿಸುವಂತೆ ಆತನ ಮನೆಯವರು ಕೇಳಿದರೆ ರಾಜ್ಯ ಸರ್ಕಾರ ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ ಎಂದು ವಿಧಾನಸಭಾ ಸ್ಪೀಕರ್‌ ಯು.ಟಿ ಖಾದರ್‌ ಹೇಳಿದ್ದಾರೆ. ಪವಿತ್ರ ಹಜ್‌ ಯಾತ್ರೆಯಿಂದ ಮರಳಿದ ನಂತರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ನಗರದ ಸೌರ್ಕ್ಯೂಟ್‌ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬ್ದುಲ್‌ ರೆಹಮಾನ್‌ ಮನೆಯವರು ಕೊಲೆಯಾದ ದಿನವೇ ನನಗೆ ದೂರವಾಣಿ ಮೂಲಕ ಮಾಹಿತಿ […]

HOME LATEST NEWS

ಮಂಗಳೂರು: ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ  ವರ್ಗಾವಣೆ

ಮಂಗಳೂರು:  ನಗರದ ಕಮೀಷನರೇಟ್‌ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ  ಇನ್ಸ್‌ಪೆಕ್ಟರ್‌ಗಳ  ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್‌ಪೆಕ್ಟರ್‌ ಪ್ರಮೋದ್ ಕುಮಾರ್ ಸುರತ್ಕಲ್ ಠಾಣೆಗೆ , ಚಿಕ್ಕಮಗಳೂರು ಸೆನ್ ಠಾಣೆಯಿಂದ ಗವಿರಾಜು ಆರ್.ಪಿ.ಗ್ರಾಮಾಂತರ ಪೊಲೀಸ್ ಠಾಣೆಗೆ, ಮಂಗಳೂರು ಕರಾವಳಿ ಕಾವಲು ಪಡೆಯಿಂದ ಅನಂತಪದ್ಮನಾಭ ಪೂರ್ವ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗಣೇಶ್ ಕೆ.ಎಲ್.ಅವರನ್ನು ಆದೇಶ ಮಾರ್ಪಡಿಸಿ ಉಡುಪಿ ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ.

HOME NATIONAL

ಇನ್ಮುಂದೆ 24 ಗಂಟೆ ಮೊದಲೇ ರೈಲ್ವೇ ಸೀಟ್‌ ಕನ್ಫರ್ಮ್‌: ಪ್ರಾಯೋಗಿಕವಾಗಿ ಜಾರಿ

ನವದೆಹಲಿ: ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ. ಕಾಯ್ದಿರಿಸಿದ  ಪ್ರಯಾಣಿಕರಿಗೆ ಇನ್ನು ಮುಂದೆ ತಮ್ಮ ಟಿಕೆಟ್ ಕನ್ಫರ್ಮ್‌ ಆಗಿದೆಯೇ ಅಥವಾ ಇಲ್ಲವೇ ಎಂದು ತಿಳಿಯಲು ಕೊನೆಯ ಕೆಲವು ಗಂಟೆಗಳವರೆಗೆ ಕಾಯುವ ಅಗತ್ಯವಿಲ್ಲ. ಭಾರತೀಯ ರೈಲ್ವೆಯು ವೇಟಿಂಗ್‌ ಲಿಸ್ಟ್‌ನಲ್ಲಿರುವ ಪ್ರಯಾಣಿಕರಿಗಾಗಿ ಹೊಸ ನಿಯಮಗಳನ್ನು ತಂದಿದೆ. ಈಗ ಪ್ರಯಾಣಿಕರು ತಮ್ಮ ಸೀಟು ಕನ್ಫರ್ಮ್‌ ಆಗಿದೆಯೋ ಇಲ್ಲವೋ ಎಂಬುದನ್ನು ರೈಲು ಹೊರಡುವ ಒಂದು ದಿನ ಮೊದಲು ತಿಳಿದುಕೊಳ್ಳಬಹುದು. ರೈಲ್ವೆ ಈಗ ರೈಲು ಹೊರಡುವ 24 ಗಂಟೆಗಳ ಮೊದಲು ಚಾರ್ಟ್ ತಯಾರಿಸಲು ಸಮಯವನ್ನು ನಿಗದಿಪಡಿಸಿದೆ. […]

Breaking News DAKSHINA KANNADA LATEST NEWS

ಜೂ. 12ರ ಗುರುವಾರ ದ.ಕ. ಜಿಲ್ಲೆಯಲ್ಲಿ ಶಾಲೆ ಅಂಗನವಾಡಿಗಳಿಗೆ ರಜೆ

ಮಂಗಳೂರು, ಜೂ.12: ದ.ಕ. ಜಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಜೂ.12ರ ಗುರುವಾರ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಶಾಲೆ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿಂದ ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ […]

DAKSHINA KANNADA HOME LATEST NEWS STATE

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಮಂಗಳೂರು:- 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ ಉದ್ಯೋಗ ವ್ಯಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ. ಅರ್ಜಿ […]

DAKSHINA KANNADA HOME LATEST NEWS

ಎಲ್ಲರೂ ಒಟ್ಟಾಗಿ ಧೈರ್ಯದಿಂದ ಮುಂದುವರಿಯೋಣ: ಸ್ಪೀಕರ್ UT ಖಾದರ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಕೆಲವು ಘಟನೆಗಳು ಎಲ್ಲರನ್ನೂ ನೋಯಿಸಿವೆ. ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಆತಂಕವು ನಮ್ಮನ್ನು ಆಂತರಿಕವಾಗಿ ತೀವ್ರವಾಗಿ ತೊಂದರೆಗೊಳಿಸಿದ್ದು, ಆತಂಕಕ್ಕೆ ಕಾರಣವಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿನ ಜನರ ಪರಸ್ಪರ ನಂಬಿಕೆ ಮತ್ತು ಒಗ್ಗಟ್ಟಿನ ಮೇಲೆ ನಿರ್ಮಿಸಲ್ಪಟ್ಟಿದೆ. ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು – ಎಲ್ಲರೂ ತಲೆಮಾರುಗಳಿಂದ ಪ್ರೀತಿ ಮತ್ತು ನಂಬಿಕೆಯೊಂದಿಗೆ ಹೇಗೆ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂಬುದು ಇಲ್ಲಿದೆ. […]