Month: July 2025

HOME

ವಿಟ್ಲ ಸಮೀಪ ರಸ್ತೆಗೆ ಉರುಳಿದ ಬೃಹತ್ ಮರ; ಹಲವು ವಿದ್ಯುತ್ ಕಂಬಗಳಿಗೆ ಹಾನಿ ಸಂಚಾರ ವ್ಯತ್ಯಯ

ಭಾರೀ ಮಳೆಯಿಂದಾಗಿ ವಿಟ್ಲ ಸಮೀಪದ ಕೇಪು ಮೈರದ ಬಳಿಯಲ್ಲಿ ರಸ್ತೆಗೆ ಬೃಹತ್ ಮರ ಉರುಳಿ ನಾಲ್ಕೈದು ವಿದ್ಯುತ್ ಕಂಬ ವಿದ್ಯುತ್ ತಂತಿಗೆ ಹಾನಿಯಾದ ಘಟನೆ ನಡೆದಿದೆ. ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಕೇರಳ ನೊಂದಣಿಯ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆಯಿಂದ ಹಲವು ಸಮಯ ರಸ್ತೆ ಸಂಚಾರ ಉಂಟಾಗಿತ್ತು. ಬಳಿಕ ಮೆಸ್ಕಾಂ, ಅರಣ್ಯ ಇಲಾಖೆ ಸಿಬಂದಿಗಳು ಸೇರಿದಂತೆ ಸ್ಥಳೀಯರ ಸಹಕಾರದಿಂದ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಸಂಚಾರಕ್ಕೆ ಅನುವು […]

DAKSHINA KANNADA HOME

ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಕದ್ರಿ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ

ಮಂಗಳೂರು ಜುಲೈ 26: ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ […]

DAKSHINA KANNADA HOME

ಕಾರ್ಗಿಲ್ ವಿಜಯ್ ದಿವಸ್: ಭಾರತೀಯ ಸೈನಿಕರ ವಿಜಯಗಾಥೆ ನೆನೆಸುವ ದಿನ – ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು ಜುಲೈ 26: ಕಾರ್ಗಿಲ್ ವಿಜಯ್ ದಿವಸ್ ವನ್ನು ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು. ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಯೋಧರ ಬಲಿದಾನಕ್ಕೆ ಕೃತಜ್ಞತೆಯ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಸಮಾರಂಭದಲ್ಲಿ ಮಾತನಾಡುತ್ತಾ “ಭಾರತದ ಸೈನಿಕ ಶಕ್ತಿಯು ಇತಿಹಾಸದಲ್ಲಿ ಯಾವತ್ತೂ ಹೆಮ್ಮೆಪಡುವಂತಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತೀಯ ಸೈನ್ಯಕ್ಕೆ ಸಾಂಸ್ಥಿಕ ಬಲವರ್ಧನೆ, ಗೌರವ […]

DAKSHINA KANNADA HOME

ಟ್ರೈಲರ್ ನಲ್ಲಿ ಕುತೂಹಲ ಕೆರಳಿಸಿರುವ “ಎಲ್ಟು ಮುತ್ತಾ” ಆ.1ಕ್ಕೆ ರಿಲೀಸ್!

ಮಂಗಳೂರು: “ಎಲ್ಟು ಮುತ್ತಾ ಎಂಬ ಕೊಡಗಿನ ಹಿನ್ನಲೆಯುಳ್ಳ ಕನ್ನಡ ಚಲನಚಿತ್ರವು ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿಡುಗಡೆಗೆ ಸಿದ್ಧಗೊಂಡಿದ್ದು ಇದರ ಟೀಸರ್ ನವಿಲು ಮತ್ತು ಕಾಳಿಂಗ ಹಾವಿನ ಕಥೆ ಹೇಳಿ ಬಹಳ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಾ ಇದೆ. ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಸಿನಿಮಾದ ಕಥಾವಸ್ತುವನ್ನು ತೆರೆಯ ಮೇಲೆ ತರಲು ನಿರ್ದೇಶಕ ರಾ ಸೂರ್ಯ ಬಹಳಷ್ಟು ಶ್ರಮವಹಿಸಿದ್ದಾರೆ“ […]

DAKSHINA KANNADA HOME

ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ

ಮಂಗಳೂರು: ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಹಿರಿಯ ರಾಜಕಾರಣಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಅವರು ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಭಂಡಾರಿ ಓರ್ವರಾಗಿರುತ್ತಾರೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ […]

DAKSHINA KANNADA HOME

ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾ ಆಯ್ಕೆ

ಮಂಗಳೂರು: ಜುಲೈ 26. ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ;ಸೋಜಾರವರು ಆಯ್ಕೆಯಾಗಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಶ್ರೀ ಐವನ್ ಡಿ;ಸೋಜಾರವರು ಆಯ್ಕೆಯಾಗಿದ್ದಾರೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು ಈ ಶೃಂಗ ಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆ […]

HOME

ಜು.26ರಂದು ರಜೆ ಎಂದು ಸುಳ್ಳು ಸುದ್ದಿ; ಜಿಲ್ಲಧಿಕಾರಿ ಸ್ಪಷ್ಟನೆ

ಸಾಮಾಜಿಕ ಜಾಲತಾಣದಲ್ಲಿ ಜುಲೈ 26 ರಂದು ಶಾಲೆಗಳಿಗೆ ರಜೆ ಬಗ್ಗೆ ಸಂದೇಶ ವೈರಲ್ ಆಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಶನಿವಾರ ಯಾವುದೇ ರಜೆ ಇದುವರೆಗೂ ಘೋಷಣೆ ಆಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

NATIONAL

ಮಂಗಳೂರಿನ ಲಕ್ಷದ್ವೀಪ ಜೆಟ್ಟಿ ಯೋಜನೆ ಕಾರ್ಯಗತಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಸಭೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಮಂಗಳೂರಿನ ಹಳೇ ಬಂದರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ ಮಂಜೂರಾತಿ ಪಡೆದು ಮೂರು ವರ್ಷ ಕಳೆದರೂ ಇನ್ನು ಕೂಡ ಪರಿಸರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಹಲವು ಅಗತ್ಯ ಅನುಮತಿ ಬಾಕಿಯಿದ್ದು, ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನ ಪ್ರಕ್ರಿಯೆ ಸಾಕಷ್ಟು ವಿಳಂಬವಾಗಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಬಂದರು ಸಚಿವ ಸರ್ಬಾನಂದ ಸೋನೋವಾಲ್ ಅವರ ಗಮನಸೆಳೆದಿದ್ದಾರೆ. ಸಂಸತ್ತಿನಲ್ಲಿ ನಿಯಮ 377ರಡಿ ವಿಷಯ […]

DAKSHINA KANNADA HOME

ಮರಳು ಮತ್ತು ಕೆಂಪುಕಲ್ಲು ಅಭಾವ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್

ಮಂಗಳೂರು ಜುಲೈ 25 : ಕಟ್ಟಡ ನಿರ್ಮಾಣ ಉದ್ಯಮ‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಬದುಕು ನೀಡಿದ್ದು, ಇದೀಗ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಈ ಉದ್ಯಮ‌ ತತ್ತರಿಸಿದೆ. ಕಾರ್ಮಿಕರು ಸೇರಿದಂತೆ ಈ ಉದ್ಯಮ‌ ಅವಲಂಬಿಸಿದವರು ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ಜಿಲ್ಲೆಯ ಈ ಸ್ಥಿತಿಗೆ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಯೇ ನೇರ ಕಾರಣ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಸ್ಪೀಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸಭೆ, ಹೇಳಿಕೆಗಳಿಗೆ […]

HOME NATIONAL

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ, ಜುಲೈ 25 : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಪ್ರತಿಯೊಬ್ಬ ಪ್ರಜೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವುದು ಅತ್ಯಗತ್ಯ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯವನ್ನು ಬೆಂಬಲಿಸುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದ […]