ಉಳ್ಳಾಲ ತಾಲೂಕಿನಲ್ಲೂ ಜು.19ರಂದು ಶಾಲೆಗಳಿಗೆ ರಜೆ
ಉಳ್ಳಾಲ; ಜು. 19ರ ಶನಿವಾರ ಉಳ್ಳಾಲ ತಾಲೂಕಿನಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಳ್ಳಾಲ; ಜು. 19ರ ಶನಿವಾರ ಉಳ್ಳಾಲ ತಾಲೂಕಿನಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಳೆಯ ಹಿನ್ನೆಲೆ ಮಂಗಳೂರು ತಾಲೂಕಿನ ಶಾಲೆ ಪಿಯು ಕಾಲೇಜುಗಳಿಗೆ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಎಲ್ಲಾ ಶಾಲೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಲಾಗಿದೆ.
ಮಂಗಳೂರು ಜುಲೈ 18 ನಗರದೆಲ್ಲೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸತತ ಮಳೆಯಿಂದಾಗಿ ಅಡುಮರೋಳಿ ಶೋಭಾ ಶೆಟ್ಟಿ ಎಂಬುವವರ ಮನೆಯ ಎತ್ತರದ ಕಾಂಪೌಂಡ್ ಕುಸಿದು ಅಪಾರ ನಷ್ಟವುಂಟಾಗಿದೆ. ಅಲ್ಲದೇ ಪಾಂಪು ಮನೆ, ಸುಶಾಂತ್ ಪೂಜಾರಿ, ಮಹಾಬಲ ಎಂಬುವವರ ಮನೆಯ ಹಿಂಬದಿಯ ಗುಡ್ಡ ಕುಸಿದಿದ್ದು ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. […]
ಪುತ್ತೂರು ಜುಲೈ 18 ಅರಂತೋಡು ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ ₹5 ಲಕ್ಷ ಹಣವನ್ನು ಮಂಜೂರು ಮಾಡಿದ್ದಾರೆ. ಈ ಕುರಿತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿದ ಶಾಸಕರು, ಈ ಘಟಕದ ಪುನರ್ ನಿರ್ಮಾಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ […]
ತೀವ್ರ ಮಳೆ : ಜಿಲ್ಲಾಧಿಕಾರಿ ಭೇಟಿ* ಮಂಗಳೂರು, ಜು.17 ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಕಡೆ ಗುಡ್ಡ ಜರಿತ, ನೆರೆ, ಮನೆ ಕುಸಿತ ಮತ್ತಿತರ ಘಟನೆಗಳು ನಡೆದಿರುವ ಸ್ಥಳಗಳಿಗೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಗುರುವಾರ ಭೇಟಿ ನೀಡಿದರು. ನಗರದ ಸಕ್ರ್ಯೂಟ್ ಹೌಸ್ ಪಕ್ಕದ ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿದ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬುಧವಾರ ಮಧ್ಯರಾತ್ರಿ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ನಗರದ ವಿವಿಧ ಕಡೆ ಮಳೆಹಾನಿ ಮತ್ತು ನೀರು ನಿಂತ ಸ್ಥಳಗಳಿಗೆ ಭೇಟಿ ನೀಡಿದರು. ಪಂಪ್‍ವೆಲ್ […]
ಪೆರುವಾಯಿ, ಬಂಟ್ವಾಳ ತಾಲೂಕಿನ ವಿಟ್ಲ ಪೆರುವಾಯಿ ಸಮೀಪದ ಓಣಿಬಾಗಿಲು ಬಳಿ ರಸ್ತೆಗೆ ಗುಡ್ಡ ಕುಸಿತವಾಗಿದೆ. ಘಟನೆಯಲ್ಲಿ ರಸ್ತೆ ಬಂದ್ ಆಗಿ ಕೆಲವು ಸಮಯ ಸಂಚಾರ ಬಂದ್ ಆಗಿತ್ತು. ಪಕಳಕುಂಜದಿಂದ ಮಂಗಳೂರು, ಪುತ್ತೂರು ಹಾಗೂ ವಿಟ್ಲಕ್ಕೆ ತೆರಳುವ ಬಸ್ ಸಂಚಾರ ವ್ಯತ್ಯಯವಾಯಿತು. ಬೆಳ್ಳಂಬೆಳಗ್ಗೆ ಕೆಲಸಕ್ಕೆ ತೆರಳುವವರು ಪರದಾಡುವಂತಾಯಿತು. ಬಳಿಕ ಸ್ಥಳೀಯರ ಸಹಕಾರದಿಂದ ಅಲ್ಪ ಪ್ರಮಾಣದಲ್ಲಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.ಓಣಿಬಾಗಿಲು ಬಳಿ ಈ ಹಿಂದೆ ಅನೇಕ ಬಾರಿ ಗುಡ್ಡ ಕುಸಿದಿದ್ದು, ಶಾಶ್ವತ ಪರಿಹಾರ ಕೈಗೊಂಡಿಲ್ಲ.
ಮಂಗಳೂರು: ಭಾರೀ ಮಳೆ ಹಿನ್ನೆಲೆ ದ. ಕ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ (ಜುಲೈ 17) ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಮಂಗಳೂರು, ಜು. 16: ದ.ಕ. ಜಿಲ್ಲೆಯಲ್ಲಿ ಗುರುವಾರ ಶಾಲೆ, ಪಿಯು ಕಾಳೆಜುಗಳಿಗೆ ರಜೆ ಘೋಷಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು: ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ, ಮೂಲ್ಕಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಬಂಟ್ವಾಳ, ಉಳ್ಳಾಲ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಜು. 15ರಂದು ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.