Month: July 2025

DAKSHINA KANNADA HOME LATEST NEWS

ನೈತಿಕ ಪೊಲೀಸ್‌ಗಿರಿ ಮಾಡುವವರ ಬಾಲಕ್ಕೆ ಕತ್ತರಿ ಹಾಕಿ: ಪೊಲೀಸರಿಗೆ ಶಾಸಕ ಅಶೋಕ್‌ ರೈ ಸೂಚನೆ

ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಬಂದಿದ್ದ ಯುವಕ-ಯುವತಿ ಮೇಲೆ ಕಿಡಿಗೇಡಿಗಳಿಂದ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ವಿಚಾರ ನನ್ನ‌ಗಮನಕ್ಕೆ ಬಂದಿದ್ದು, ಆರೋಪಿತರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪುತ್ತೂರು ಶಾಸಕ ಅಶೋಕ್‌ ರೈ ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಘಟನೆಗೆ ಸಂಬಂಧಿಸಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ‌ಸಮಯಗಳಿಂದ ನಿಂತು ಹೋಗಿದ್ದ ಈ ರೀತಿಯ ಕೆಟ್ಟ ಘಟನೆಗಳು ಪುತ್ತೂರಿನಲ್ಲಿ ನಡೆದಿದೆ. ಬಾಲ ಮುದುಡಿಕೊಂಡಿದ್ದ ಸಮಾಜಘಾತುಕ ಕಿಡಿಗೇಡಿಗಳ ಬಾಲ ಕತ್ತರಿಸುವ ಕೆಲಸ ಮಾಡಲಾಗುತ್ತದೆ. […]

DAKSHINA KANNADA HOME LATEST NEWS

ಪುತ್ತೂರು: ಅಪ್ರಾಪ್ತ ಬಾಲಕ-ಬಾಲಕಿಯನ್ನು ತಡೆದು ವೀಡಿಯೋಗೈದ ಪ್ರಕರಣ; ಇಬ್ಬರ ಬಂಧನ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಬಾಲಕಿಯನ್ನು ತಡೆದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತೇವೆಂದು ಬೆದರಿಕೆ ಹಾಕಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪ್ರಕರಣದ ವಿವರ ಪ್ರಕರಣದ ಸಂತ್ರಸ್ಥ ಬಾಲಕನ ತಂದೆ ನೀಡಿದ ದೂರಿನಂತೆ, ಅಪ್ರಾಪ್ತ ಪ್ರಾಯದ ಮಗನು, ಮೋಟಾರು ಸೈಕಲ್ ನಲ್ಲಿ ಜು.5 ರ ಮಧ್ಯಾಹ್ನದ ವೇಳೆ, ಆತನ ಪರಿಚಯದ ಬಾಲಕಿಯೊಂದಿಗೆ ಪುತ್ತೂರು ಕಸ್ಬಾ ಗ್ರಾಮದ ಬೀರಮಲೆ ಬೆಟ್ಟ ಎಂಬಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸ್ಥಳಕ್ಕೆ ಬಂದು […]

HOME STATE

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆದ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟ

ಬೆಂಗಳೂರು  ಜುಲೈ 06  ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರ ಜೊತೆಯಾಗಿ ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದರು.  2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ […]

DAKSHINA KANNADA HOME

ನಾಯಕತ್ವವು ಉತ್ತಮ ಗುಣ & ಪ್ರತಿಭೆಗಳನ್ನು ಹೊರತರುವ ಅವಕಾಶ: ರೆ. ಫಾ.ವಾಲ್ಟರ್ ಡಿಸೋಜಾ

ಮಂಗಳೂರು: ನಗರದ ಪಾದುವ ಪದವಿ ಪೂರ್ವ  ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರತಿಭಾ ದಿನ ಸಂತ ಸೆಬಾಸ್ಟಿಯನ್ ಹಾಲ್ ಬೆಂದೂರ್ ನಲ್ಲಿ ಜರಗಿತು.ಅಧ್ಯಕ್ಷತೆ ವಹಿಸಿದ್ದ ಪಾದುವ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ .ಫಾ.ವಾಲ್ಟರ್ ಡಿಸೋಜಾ ಮಾತನಾಡಿ,  ನಾಯಕತ್ವವು  ಕೇವಲ ಸ್ಥಾನ ಅಥವಾ ಬಿರುದುಗಲಾಗಿರದೆ, ಅದು ಇತರರಲ್ಲಿ ಉತ್ತಮವಾದ ಗುಣ ಮತ್ತು ಪ್ರತಿಭೆಗಳನ್ನು ಹೊರತರುವ ಅವಕಾಶ ಎಂದು ಹೇಳಿದರು. ಮುಖ್ಯ ಅತಿಥಿಯಾದ ಲೆಸ್ಲಿ ನೋಯೆಲ್ ರೇಗೊ ಮಾತನಾಡಿ, ಕಾಲೇಜು ಜೀವನವೆಂದರೆ ವ್ಯಕ್ತಿತ್ವ ನಿರ್ಮಾಣಕ್ಕೆ ಅವಕಾಶ. ವಿದ್ಯಾರ್ಥಿಗಳು ಯಶಸ್ಸಿನ […]

DAKSHINA KANNADA HOME

ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ನೂತನವಾಗಿ ನಿರ್ಮಾಣಗೊಂಡ ಸಿಂಧೂರ ವಿಜಯ್ ಪಾರ್ಕ್  ಲೋಕಾರ್ಪಣೆ

ಮಂಗಳೂರು ಜುಲೈ 05 ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ  ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು.ಶಾಸಕರಾದ ಡಾಕ್ಟರ್ ಭರತ್ ಶೆಟ್ಟಿ  ವೈ ಅಧ್ಯಕ್ಷತೆಯಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು 42. 35 ಲಕ್ಷ ರೂಪಾಯಿ ವೆಚ್ಚದಲ್ಲಿ ಸೈನಿಕರನ್ನು ಸ್ಮರಿಸುವ ಪಾರ್ಕ್ ನಿರ್ಮಾಣಗೊಂಡಿದೆ. ಶಾಸಕರಾದ […]

DAKSHINA KANNADA HOME

ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ:- ಶಾಸಕ ಕಾಮತ್

ಮಂಗಳೂರು ಜುಲೈ 05 ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಬಾರಿಯ ಪ್ರಕೃತಿ ವಿಕೋಪದಿಂದಾಗಿ ನಗರದ ಹಲವೆಡೆ ರಸ್ತೆ, ಚರಂಡಿ, ರಾಜ ಕಾಲುವೆ, ತಡೆಗೋಡೆಗಳಿಗೆ ವಿಪರೀತ ಹಾನಿಯಾಗಿದೆ. ಕಾನೂನಾತ್ಮಕವಾಗಿ ತಡೆಗೋಡೆಗೆ ಪರಿಹಾರ ಒದಗಿಸಲು ಸಾಧ್ಯವಿಲ್ಲದಿದ್ದರೂ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 25 ರಿಂದ 50 ಕೋಟಿವರೆಗೂ […]

HOME STATE

ಬೆಂಗಳೂರಿನ ವಿಧಾನಸೌಧದಲ್ಲಿ ದ ಕ ಜಿಲ್ಲೆಯಲ್ಲಿ ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಕುರಿತಂತೆ ವಿಸ್ತ್ರತವಾದ ಚರ್ಚೆ

ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಸ್ಪೀಕರ್ ಯುಟಿ ಖಾದರ್ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಕುರಿತಂತೆ ವಿಸ್ತ್ರತವಾದ ಚರ್ಚೆ ನಡೆಸಲಾಯಿತು.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ, ಕಟ್ಟಡ ಕಾಮಗಾರಿಗಳಿಗೆ ಅಡೆತಡೆಯಾಗಿರುವ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕಾನೂನು ಬದ್ಧವಾಗಿ ಕೆಂಪುಕಲ್ಲು ಹಾಗೂ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಿಕೊಡಲು ಸೂಕ್ತ ಗಣಿ ನೀತಿಯನ್ನ ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ […]

DAKSHINA KANNADA HOME

ಪುತ್ತೂರು: ಪ್ರೀತಿಸಿ ವಂಚನೆಗೈದು ನಾಪತ್ತೆಯಾಗಿದ್ದ ಕೃಷ್ಣ ರಾವ್‌ ಅರೆಸ್ಟ್‌

ಪುತ್ತೂರು: ಯುವತಿಯೊಬ್ಬಳನ್ನು ಪ್ರೀತಿಸಿ ವಂಚನೆ ಮಾಡಿ, ಮಗುವಿನ ಜನನಕ್ಕೆ ಕಾರಣವಾಗಿದ್ದಲ್ಲದೇ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿ ಕೃಷ್ಣ ರಾವ್‌ನನ್ನು ಮೈಸೂರಿನ ಟೀನರಸೀಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಗರ್ಭಿಣಿಯಾದ ಬಳಿಕ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಆತ ಕೈಕೊಟ್ಟಿದ್ದರಿಂದ ಕಂಗಾಲಾದ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆತ ಬಂಧನದ ಭಯದಿಂದ ಎಸ್ಕೇಪ್ ಆಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರಿನಲ್ಲಿ ವಶಕ್ಕೆ […]

DAKSHINA KANNADA HOME

“ತ್ವರಿತ  ನ್ಯಾಯಕ್ಕಾಗಿ”  ಎಂಬ ಘೋಷ ವಾಕ್ಯ ದೊಂದಿಗೆ ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್

ಮಂಗಳೂರು:    “ತ್ವರಿತ  ನ್ಯಾಯಕ್ಕಾಗಿ”  ಎಂಬ ಘೋಷ ವಾಕ್ಯ ದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ವ್ಯಾಜ್ಯ  ಇತ್ಯರ್ಥ ಪಡಿಸಿ ಕೊಳ್ಳಿರಿ ಎನ್ನುವ ಮೂಲಕ, ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯ ಕ್ರಮ ಜು.12 ರಂದು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಈ  ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ ಅದಾಲತ್ ಯಶಸ್ವಿ ಯಾಗಲು ಎಲ್ಲರೂ ಸಹಕರಿಸಬೇಕೆಂದು ಅಧ್ಯಕ್ಷರು, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ […]

LATEST NEWS

ಬಂಟ್ವಾಳ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.4) ರಜೆ

ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ಬಂಟ್ವಾಳ ತಹಶೀಲ್ದಾರರು ರಜೆ ಘೋಷಿಸಿದ್ದಾರೆ.