Month: August 2025

DAKSHINA KANNADA HOME

ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಡುಪಿ “ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಮಠಾಧೀಶರಾದ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾನು ಏನು ಮಾತನಾಡಿದರೂ ಅದರಲ್ಲಿ ತಪ್ಪು […]

DAKSHINA KANNADA HOME

ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮತಗಳ್ಳತನ ವಿರುದ್ಧ ಪಂಜಿನ ಮೆರವಣಿಗೆ

ಮಂಗಳೂರು: ಮತಗಳ್ಳತನ‌ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಪ್ರತಿಭಟನಾ ಸಭೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ವೇತೃತ್ವದಲ್ಲಿ ನಡೆಯಿತು. ಮಂಗಳೂರಿನ ನವಭಾರತ್ ಸರ್ಕಲ್ ನಿಂದ ಲಾಲ್‌ಭಾಗ್ ವರೆಗೆ ನಡೆದ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಮತಗಳ್ಳತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಚಿವ […]

DAKSHINA KANNADA HOME

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ

ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎಜೆ ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ ಕುಮಾರ್ ಅವರ ಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾ ಅವರನ್ನು ತಕ್ಷಣದಿಂದ […]

Breaking News COMMUNITY NEWS DAKSHINA KANNADA HOME

ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ಶನಿವಾರ ರಜೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಆ.30ರ ಶನಿವಾರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪ್ರೌಢ ಶಾಲೆಯ ವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್. ಆದೇಶ ಹೊರಡಿಸಿದ್ದಾರೆ.

COMMUNITY NEWS DAKSHINA KANNADA HOME LATEST NEWS STATE

ಎರಿಕ್ ಒಸಾರಿಯೋ ಬಗ್ಗೆ ನಿಮಗೆ ಗೊತ್ತಿಲ್ಲದ ಅನೇಕ ವಿಚಾರಗಳು; ಹೋರಾಟಗಾರನಾಗಿದ್ದವರು ಸಂಗೀತದತ್ತ!

ಮಂಗಳೂರು: ಕೊಂಕಣಿ ಸಂಗೀತ ಮತ್ತು ಚಳುವಳಿಯ ಮೇರು ನಕ್ಷತ್ರ ಅಸ್ತಂಗತ. ಎರಿಕ್‌ ಒಝೇರಿಯೊ ದಿವಂಗತ ಮಾಂಡ್‌ ಸೊಭಾಣ್‌ ಗುರಿಕಾರ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಕೊಂಕಣಿ ಚಳುವಳಿಯ ಮೇರು ನಾಯಕ ವಿಶ್ವ ಕೊಂಕಣಿ ಕಲಾರತ್ನ ಎರಿಕ್‌ ಅಲೆಕ್ಸಾಂಡರ್‌ ಒಝೇರಿಯೊ 29.08.25 ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಜೊಯ್ಸ್ ಒಝೆರಿಯೊ, ಮಕ್ಕಳಾದ ಡಾ ರಶ್ಮಿ ಕಿರಣ್‌ ಮತ್ತು ರಿತೇಶ್‌ ಕಿರಣ್‌ ಮತ್ತು ಬಂಧುವರ್ಗ, ಮಾಂಡ್‌ […]

DAKSHINA KANNADA HOME LATEST NEWS NATIONAL STATE

ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ ಎರಿಕ್ ಬಾಬ್ ಒಜಾರಿಯೋ ನಿಧನ

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ದಿಗ್ಗಜ ಎರಿಕ್ ಅಲೆಕ್ಸಾಂಡರ್ ಒಜಾರಿಯೊ ಅವರು ಶುಕ್ರವಾರ, ಆಗಸ್ಟ್ 29 ರಂದು ತಮ್ಮ 76 ನೇ ವಯಸ್ಸಿನಲ್ಲಿ ಇಲ್ಲಿ ನಿಧನರಾದರು. ಮೂತ್ರಪಿಂಡ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 19 ದಿನಗಳ ಚಿಕಿತ್ಸೆಯ ಬಳಿಕ ಕಾಯಿಲೆ ನಿಯಂತ್ರಣಕ್ಕೆ ಬರದೆ ಅವರು ವಿಧಿವಶರಾಗಿದ್ದಾರೆ. ಎರಿಕ್ ಒಜಾರಿಯೊ ಎಂದೇ ಜನಪ್ರಿಯರಾಗಿದ್ದ ಅವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು ಮತ್ತು ಪ್ರಸಿದ್ಧ ಕೊಂಕಣಿ […]

COMMUNITY NEWS DAKSHINA KANNADA HOME LATEST NEWS

ಹಿರಿಯ ಧರ್ಮಗುರು ಫಾ. ವಿನ್ಸೆಂಟ್ ಎಫ್. ಮೊಂತೇರೊ ನಿಧನ

ಮಂಗಳೂರು: ಬೆಂದೂರ್ ಚರ್ಚ್ ನ ಮಾಜಿ ಧರ್ಮಗುರು ಫಾದರ್ ವಿನ್ಸೆಂಟ್ ಎಫ್. ಮಾಂತೆರೊ (71) ಅವರು ಆಗಸ್ಟ್ 29 ಶುಕ್ರವಾರ ಜಪ್ಪುವಿನ ಸಂತ ಜುಜ್ ವಾಜ್ ಹೋಂನಲ್ಲಿ ನಿಧನರಾದರು. ಅವರು ತಮ್ಮ ಧಾರ್ಮಿಕ ಉತ್ಸಾಹ, ಸಮುದಾಯ ನಾಯಕತ್ವ ಮತ್ತು ಭಾರತೀಯ ಕ್ಯಾಥೋಲಿಕ್ ಯುವ ಚಳವಳಿಯಲ್ಲಿ(ICYM) ಹಲವಾರು ಹೊಸ ಉಪಕ್ರಮಗಳಿಗೆ ನೀಡಿದ ಪ್ರವರ್ತಕ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದರು. ಏಂಜೆಲೋರ್ ಚರ್ಚ್ ನಲ್ಲಿ ರೇಮಂಡ್ ಮತ್ತು ಕ್ರಿಸ್ಟೀನ್ ಮಾಂತೆರೊ ದಂಪತಿಗಳ ಪುತ್ರರಾಗಿ ಜನಿಸಿದರು. 1981ರಲ್ಲಿ ಧರ್ಮಗುರುವಾಗಿ ನೇಮಕಗೊಂಡರು. ಅವರ ನಾಲ್ಕು ದಶಕಗಳ […]

Breaking News DAKSHINA KANNADA LATEST NEWS STATE

ಬಸ್- ರಿಕ್ಷಾ ನಡುವೆ ಭೀಕರ ಅಪಘಾತ 6 ಮಂದಿ ದಾರುಣ ಸಾವು

ಮಂಗಳೂರು, ಆಗಸ್ಟ್ 28:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ಬಸ್ ತಂಗುದಾಣ ಹಾಗೂ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದ ದುರಂತ ಘಟನೆ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ.ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದೆ. ಕೆಸಿ ರೋಡ್‌ನಿಂದ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಬಸ್ಸು ಇದ್ದಕಿದ್ದಂತೆ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಈ […]

Breaking News DAKSHINA KANNADA LATEST NEWS

ಬಂಟ್ವಾಳ, ಪುತ್ತೂರು, ಮಂಗಳೂರು, ಮೂಲ್ಕಿ, ಮೂಡುಬಿದಿರೆ ತಾಲೂಕುಗಳಲ್ಲಿ ಶಾಲೆ ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ನಿರಂತರ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಪುತ್ತೂರು, ಮೂಲ್ಕಿ, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ ತಾಲೂಕುಗಳಲ್ಲಿ ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.