Month: August 2025

DAKSHINA KANNADA HOME

ಕ್ರೈಸ್ತ ಸಮುದಾಯದ ದಫನ ಪದ್ಧತಿ ಬಗ್ಗೆ ಜನಾರ್ಧನ ಪೂಜಾರಿಯವರ ಹೇಳಿಕೆಗೆ ಕಥೋಲಿಕ್ ಸಭಾ ಖಂಡಿಸುತ್ತದೆ

ಮಂಗಳೂರು ಆಗಸ್ಟ್ 16: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕ್ರೈಸ್ತ ಸಮುದಾಯದವರು ಶಾಂತಿ ಪ್ರೀಯರಾಗಿದ್ದು, ತಮ್ಮ ಧರ್ಮದ ಆಚರಣೆಗಳನ್ನು ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಮಾತ್ರ ನಡೆಸುತ್ತಾ ಬಂದಿದ್ದಾರೆ. ಇತರ ಧರ್ಮಗಳನ್ನು ಗೌರವಿಸುತ್ತಾ, ಸಾಮಾಜಿಕ, ಆರೋಗ್ಯ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆಯನ್ನು ನೀಡುತ್ತಿರುವ ಕ್ರೈಸ್ತ ಸಮುದಾಯವು ಇತ್ತೀಚೆಗೆ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಲೋಕಸಭಾ ಸದಸ್ಯರಾದ ಜನಾರ್ಧನ ಪೂಜಾರಿಯವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ […]

DAKSHINA KANNADA HOME

ಕ್ರೈಸ್ತರ ಸ್ಮಶಾನದಲ್ಲಿ ದಫನ ಮಾಡುವ ಪ್ರತಿಯೊಂದು ಮೃತ ದೇಹಕ್ಕೂ ಸರಿಯಾದ ದಾಖಲೆಗಳು ಇರುತ್ತವೆ: ರೋಯ್ ಕ್ಯಾಸ್ಟಲಿನೊ

ಮಂಗಳೂರು: ಆಗಸ್ಟ್ 16: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ, ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮುಸುಕುಧಾರಿ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂಬುದಾಗಿ ಪ್ರತಿ ಪಕ್ಷ ನಾಯಕ ಆರ್. ಅಶೋಕ್ ಅವರು ಗಾಳಿ ಸುದ್ದಿಯನ್ನು ಆಧರಿಸಿ ನೀಡಿರುವ ಹೇಳಿಕೆಗೆ ಯಾವುದಾದರೂ ಪುರಾವೆ ಇದೆಯೇ? ಅವರ ಹೇಳಿಕೆಗೆ ಆಧಾರವಾದರೂ ಏನು ಎಂದುದನ್ನು ನಾವು ತಿಳಿಯ ಬಯಸುತ್ತೇವೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ […]

DAKSHINA KANNADA HOME

ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಿಂದ ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯ ಒಪ್ಪಂದಕ್ಕೆ ಸಹಿ

ಮಂಗಳೂರು, ಆಗಸ್ಟ್ 16: ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯನ್ನು ಮುನ್ನಡೆಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟುಕೊಂಡು, ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ, ಮಂಗಳೂರು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಮಂಗಳೂರು ಆಗಸ್ಟ್ 8 ಒಪ್ಪಂದಕ್ಕೆ (MoU) ಅಧಿಕೃತವಾಗಿ ಸಹಿ ಹಾಕಿವೆ. ಈ ಒಪ್ಪಂದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ರೆ। ಫಾ। ಫಾವೊಸ್ತಿನ್ ಲುಕಾಸ್ ಲೋಬೊ ಮತ್ತು ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯದ ಎಐಎಮ್ಐಟಿ ಕೇಂದ್ರದ ನಿರ್ದೇಶಕ ಡಾ. (ಫಾ।) ಕಿರಣ್ ಕೋತಾ ಎಸ್.ಜೆ. ಅವರು […]

DAKSHINA KANNADA HOME

ಸರಕಾರದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗೆ ಶಕ್ತಿ ನೀಡಲಿದೆ ಶಾಸಕ ಅಶೋಕ್ ರೈ

ಪುತ್ತೂರು: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಶಾಸಕ ಅಶೋಕ್ ರೈ ಅವರು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಪ್ರಥಮ ಬಾರಿಗೆ ಕಡಬ‌ಪಟ್ಟಣ ಪಂಚಾಯತ್ ಚುನಾವಣೆ ನಡೆಯುತ್ತಿದೆ. ಈ ಹಿಂದೆ ಕಡಬ ಗ್ರಾಪಂ ಆಗಿದ್ದ ವೇಳೆ ಇಲ್ಲಿನ‌ಪ್ರಭುದ್ದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಇದೀಗ ಕಡಬ ಪಟ್ಟಣ ಪಂಚಾಯತ್ ರಚನೆಯಾದ ಬಳಿಕ ಮೊದಲ ಚುನಾವಣೆ ನಡೆಯುತ್ತಿದೆ.‌ ಕರ್ನಾಟಕದ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ […]

DAKSHINA KANNADA HOME

ಪಂಪ್ ವೆಲ್‌ನ ರೋಹನ್ ಸ್ಕ್ವೇರ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು, ಆ.15: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ರವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಸ್ಥಾಪಕರಾದ ರೋಹನ್ ಮೊಂತೆರೋರವರು, “ಸ್ವಾತಂತ್ರ್ಯವು ಕೇವಲ ಒಂದು ದಿನದ ಆಚರಣೆಯಲ್ಲ; ಪ್ರತಿದಿನವೂ […]

DAKSHINA KANNADA HOME

ಎಂಸಿ.ಸಿ. ಬ್ಯಾಂಕಿನಲ್ಲಿ 79ನೇ ಸ್ವಾತಂತ್ರ‍್ಯೋತ್ಸ ದಿನಾಚರಣೆ

ಮಂಗಳೂರು ಆಗಸ್ಟ್ 15: ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79 ನೇ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲಾಯಿತು. ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕುದ್ರೋಳಿ ದೇವಸ್ಥಾನ ಟ್ರಸ್ಟ್ನಖಜಾಂಚಿ ಮತ್ತು ಸಮಾಜ ಸೇವಕ ಶ್ರೀ ಪದ್ಮರಾಜ್ ಆರ್. ಪೂಜಾರಿ, ಅವರು ರಾಷ್ಟçದ್ವಜವನ್ನು ಹಾರಿಸಿದರು. ತ್ರಿವರ್ಣ ಧ್ವಜ ಹಾರುತ್ತಿದ್ದಂತೆ, ಸಭೆಯು ಗೌರವದಿಂದ ನಿಂತು, ರಾಷ್ಟçಗೀತೆಯನ್ನು ಒಗ್ಗಟ್ಟಿನಿಂದ ಹಾಡಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಶ್ರೀ ಪದ್ಮರಾಜ್ ಇವರು […]

HOME

ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಪತ್ತೆ; ಆರೋಪಿಗಳ ಬಂಧನ

ಬೆಳ್ತಂಗಡಿ, ಆ. 14 ಗುರುವಾಯನಕೆರೆಯಲ್ಲಿ ಕಾರಿನಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಚಾರ್ಮಾಡಿ ಮೂಲಕ ಮಂಗಳೂರು ಕಡೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಇನ್ನೋವಾ ಕಾರಿನಲ್ಲಿ ಅತಿ ವೇಗವಾಗಿ ದನಗಳನ್ನು ಸಾಗಿಸುತ್ತಿದ್ದರು ಎಂದು ವರದಿಯಾಗಿದೆ. ಗುರುವಾಯನಕೆರೆಯಲ್ಲಿ, ವಾಹನವು ಆಟೋರಿಕ್ಷಾ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ವಾಹನ ನಿಲ್ಲಿಸುವಂತೆ ಸೂಚಿಸಿದರು, ಆದರೆ ಶಂಕಿತರು ಆದೇಶವನ್ನು ನಿರ್ಲಕ್ಷಿಸಿ ಪರಾರಿಯಾಗಲು ಪ್ರಯತ್ನಿಸಿದರು. ಮೂವರಲ್ಲಿ ಇಬ್ಬರು ಪರಾರಿಯಾಗಿದ್ದಾರೆ. […]

DAKSHINA KANNADA HOME

ಸಾಹಿತ್ಯದ ಶಕ್ತಿಗೆ ಪರ್ಯಾಯವಿಲ್ಲ – ಡಾ| ಮಹಾಲಿಂಗ ಭಟ್

ಮಂಗಳೂರು ಆ 12: ವಿಶ್ವದಾದ್ಯಂತ ದೇಶವೊಂದಕ್ಕೆ ಒಂದೇ ಭಾಷೆಯಿರುವಾಗ ಭಾರತ ಭೂಖಂಡದಲ್ಲಿ ಸಾವಿರಾರು ಭಾಷೆ – ಸಾಹಿತ್ಯ – ಸಂಸ್ಕೃತಿಗಳಿಗೆ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಪುಸ್ತಕ ಮಾತ್ರವಲ್ಲ ಮೌಖಿಕ ಸಾಹಿತ್ಯವೂ ಇದೆ. ಇಪ್ಪತನಾಲ್ಕು ಭಾಷೆಗಳಲ್ಲಿನ ಉತ್ತಮ ಸಾಹಿತ್ಯ ಗುರುತಿಸಿ ಪ್ರಕಟಿಸುವುದು, ಒಂದು ಭಾಷೆಯಿಂದ ಇನ್ನೊಂದಕ್ಕೆ ಅನುವಾದ ಮಾಡಿ ಪ್ರಕಟಿಸುವುದು ಸುಲಭದ ಕೆಲಸವಲ್ಲ. ಕೇಂದ್ರ ಸಾಹಿತ್ಯ ಅಕಾಡೆಮಿಯಿ ಇದನ್ನು ಹಲವಾರು ದಶಕಗಳಿಂದ ಮಾಡುತ್ತಾ ಬಂದಿದೆ. ಭಾರತೀಯ ಸಾಹಿತ್ಯದ ನಿರ್ಮಾತೃರು ಎಂಬ ಸರಣಿ ಪುಸ್ತಕಗಳನ್ನು ಓದಿದರೆ ಕಾಲಮಾನದ […]

LATEST NEWS

ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿ.ಜೆ.ಪಿ ಬದುಕು – ಬರಹ: ರಾಷ್ಟ್ರ‍ೀಯ ವಿಚಾರ ಸಂಕಿರಣ

ಮಂಗಳೂರು: ಖ್ಯಾತ ಕೊಂಕಣಿ ಸಾಹಿತಿ ವಿ.ಜೆ.ಪಿ. ಸಲ್ಡಾನ್ಹಾ ಜನ್ಮಶತಾಬ್ದಿಯ ಪ್ರಯುಕ್ತ ಸಾಹಿತ್ಯ ಅಕಾಡೆಮಿ, ಹೊಸದೆಹಲಿ, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲ್ಯದ ಕೊಂಕಣಿ ಸಂಸ್ಥೆ – ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಸಹಯೋಗದೊಂದಿಗೆ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಹಾಲ್‌ನಲ್ಲಿ ವಿ.ಜೆ.ಪಿ ಬದುಕು – ಬರಹದ ಬಗ್ಗೆ ಆಗಸ್ಟ್ 13, 14 ರಂದು ಎರಡು ದಿನಗಳ ರಾಷ್ಟ್ರ‍ೀಯ ವಿಚಾರ ಸಂಕಿರಣ ಆಯೋಜಿಸಿಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆ ಆ.12 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಇದೇ […]

DAKSHINA KANNADA HOME

ಗಣೇಶ ಚತುರ್ಥಿ: ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ನಿಷೇಧ

ಮಂಗಳೂರು, ಆ.11: ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (PಔP) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ /ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರಾದಯವಾಗಿದ್ದು, ಇದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ […]