Month: August 2025

HOME NATIONAL

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹೊಸ ದಾಖಲೆ

ಹೊಸದಿಲ್ಲಿ, ಆ.5: ಭಾರತದ ಇತಿಹಾಸದಲ್ಲೇ ಅತೀ ದೀರ್ಘಾವಧಿ ಸೇವೆ ಸಲ್ಲಿಸಿದ ಗೃಹ ಸಚಿವ ಎಂಬ ಹೆಗ್ಗಳಿಕೆಗೆ ಅಮಿತ್ ಶಾ ಪಾತ್ರರಾಗಿದ್ದಾರೆ. ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡು ಮಂಗಳವಾರಕ್ಕೆ 2,258 ದಿನಗಳು ಸಂದಿವೆ. ವಿಶೇಷ ಎಂದರೆ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿ ರದ್ದು ಮಾಡಿದ್ದ ಆ. 5ರಂದೇ ಅವರು ಈ ಸಾಧನೆ ಮಾಡಿದ್ದಾರೆ. ಅಮಿತ್ ಶಾ 2019ರ ಮೇ 30ರಂದು ಕೇಂದ್ರ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿ, 2024 ಜೂನ್ 9ರ […]

DAKSHINA KANNADA HOME

ಡಾ.ಜಿ.ಪರಮೇಶ್ವರ್ 74ನೇ ಹುಟ್ಟುಹಬ್ಬ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ದೇವಸ್ಥಾನದಲ್ಲಿ ಪೂಜೆ, ವೆನ್ ಲಾಕ್ ಆಸ್ಪತ್ರೆ ಬಳಿ ಸಾರ್ವಜಿನಿಕ ಅನ್ನಸಂತರ್ಪಣೆ

ಮಂಗಳೂರು: ಆ 6 :ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಇಂದು ಬುಧವಾರ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರೇಮ್ ನಾಥ್ ಪಿ.ಬಿ ಬಳ್ಳಾಲ್ ಭಾಗ್ ರವರ ನೇತೃತ್ವದಲ್ಲಿ ಬುಧವಾರ ನಗರದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರ ನೆರವೇರಿಸಲಾಯಿತು. ಈ ಸಂದರ್ಭ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ದಿನೇಶ್ ಮೂಳೂರು, ಜಿಲ್ಲಾ ಹಿಂದೂ ಧಾರ್ಮಿಕ ದತ್ತಿ ಪರಿಷತ್ ಸದಸ್ಯೆ ಚಂದ್ರಕಲಾ ಡಿ ರಾವ್, ಕದ್ರಿ ಶ್ರೀ […]

DAKSHINA KANNADA HOME

ರೋಹನ್ ಕಾರ್ಪೋರೇಶನ್ ವತಿಯಿಂದ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ

ಮಂಗಳೂರು, ಆ.6 ಸಂಸ್ಥೆಯ ಸಿಬ್ಬಂದಿ ಹಾಗೂ ಕಾರ್ಮಿಕರ ಉತ್ತಮ ಆರೋಗ್ಯದ ಕಡೆಗೆ ಕಾಳಜಿ ತೋರುವ ಉದ್ದೇಶದಿಂದ ರೋಹನ್ ಕಾರ್ಪೋರೇಶನ್ ಸಂಸ್ಥೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರ ಮಂಗಳೂರು ಬಿಜೈ ಮುಖ್ಯ ರಸ್ತೆಯಲ್ಲಿರುವ ರೋಹನ್ ಸಿಟಿ ಆವರಣದಲ್ಲಿ ನಡೆಯಿತು. ಶಿಬಿರವನ್ನು ಹಿಂದ್ ಕುಷ್ಟ್ ನಿವಾರಣ್ ಸಂಘ (ರಿ) ಮತ್ತು ಲಯನ್ಸ್ ಕ್ಲಬ್ ಮಂಗಳಾದೇವಿ ಈ ಎರಡು ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದಲೇ ಶಿಬಿರದಲ್ಲಿ ನೂರಾರು ಉದ್ಯೋಗಿಗಳು ಮತ್ತು ಕಾರ್ಮಿಕರು ಭಾಗವಹಿಸಿದ್ದು, ತಜ್ಞ ವೈದ್ಯರ ತಂಡದಿಂದ […]

DAKSHINA KANNADA HOME

ಮಂಗಳೂರು ಮಹಾನಗರ ಪಾಲಿಕೆ ದೇರೆಬೈಲ್ ಕೊಟ್ಟಾರ ಕ್ರಾಸ್1ನೇಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 24ನೇ ದೇರೆಬೈಲ್ ದಕ್ಷಿಣ ವಾರ್ಡಿನ ಕೊಟ್ಟಾರ ಕ್ರಾಸ್ 1ನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದರು. […]

DAKSHINA KANNADA HOME

ಪುತ್ತೂರು ತಾಲೂಕಿನ ಕೆದಂಬಾಡಿ MRF ಘಟಕಕ್ಕೆ ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಭೇಟಿ

ಪುತ್ತೂರು ಆ.6: ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತಿಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF – Material Recovery Facility) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ, ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು MRF […]

HOME STATE

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಓಪನ್ ಡೇ 2025 ಸಮಾರಂಭ

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವು ಜುಲೈ 28, 2025ರಂದು ವಾರ್ಷಿಕ ಓಪನ್ ಡೇ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. 1,300ಕ್ಕೂ ಹೆಚ್ಚು ಭೇಟಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ರೆ. ಫಾದರ್ ಡಾ. ವಿಕ್ಟರ್ ಲೋಬೊ ಎಸ್.ಜೆ. (ಕುಲಪತಿ), ಡಾ. ಚಂದ್ರಭಾಸ್ ನಾರಾಯಣ (ರಾಜೀವ್ ಗಾಂಧಿ ಜೈವಿಕತಂತ್ರಜ್ಞಾನ ಕೇಂದ್ರದ ನಿರ್ದೇಶಕ) ಮತ್ತು ಡಾ. ವಿ. ಕ್ರಿಸ್ಟೋ ಸೆಲ್ವನ್ (ಓಪನ್ ಡೇ 2025 ಸಂಯೋಜಕ) ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 180ಕ್ಕೂ ಹೆಚ್ಚು ಪ್ರದರ್ಶನಗಳು ನಡೆದಿದ್ದು, ವಿಜ್ಞಾನ […]

HOME LATEST NEWS

ವಿ.ಕೆ. ಫರ್ನಿಚರ್ & ಎಲೆಕ್ಟ್ರಾನಿಕ್ಸ್‌ನ ಸ್ವಾತಂತ್ರ್ಯ ದಿನದ ಫ್ಯಾನ್ಸಿ ಡ್ರೆಸ್ ಸ್ಪರ್ಧೆ

ಮಂಗಳೂರು: ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿ.ಕೆ. ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ ಆನ್‌ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ – 2025 ಏರ್ಪಡಿಸಲಾಗಿದೆ. ಈ ವೇದಿಕೆ ಮಕ್ಕಳ ಪ್ರತಿಭೆ, ಸೃಜನಶೀಲತೆ ಮತ್ತು ದೇಶಾಭಿಮಾನವನ್ನು ಪ್ರದರ್ಶಿಸಲು ಒಂದು ಸುವರ್ಣಾವಕಾಶವಾಗಿದೆ. ಥೀಮ್: ನಿಮ್ಮ ಮಗುವನ್ನು ಸ್ವಾತಂತ್ರ್ಯ ಹೋರಾಟಗಾರರ ವೇಷದಲ್ಲಿ ಸಿಂಗರಿಸಿ, ಇತ್ತೀಚಿನ ಫೋಟೋ / ವೀಡಿಯೊ ಕಳುಹಿಸಿ. ವಯೋಮಿತಿ/ವಿಭಾಗಗಳು: • ಕಿಡ್ಸ್ (2 – 5 ವರ್ಷ): ಕೇವಲ ಫೋಟೊ • ಸಬ್ ಜೂನಿಯರ್ (6 – 10 ವರ್ಷ): […]

DAKSHINA KANNADA HOME LATEST NEWS

ಫೇಸ್‌ಬುಕ್‌ನಲ್ಲಿ ಕೋಮುದ್ವೇಷ & ಸುಳ್ಳು ಸುದ್ದಿ ಪ್ರಸಾರ: SDPI ಅಧ್ಯಕ್ಷನ ಮೇಲೆ FIR

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೋಮುದ್ವೇಷ ಹಾಗೂ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪಕ್ಷದ ಅಧ್ಯಕ್ಷನ ಮೇಲೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ವಿವರ ಜು. 14 ರಂದು ಪುತ್ತೂರು ಕಸಬಾ ಗ್ರಾಮದ ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಧ್ಯಕ್ಷ ಆಶ್ರಪ್ ಬಾವು ಎಂಬಾತ ಘಟನೆಯ ಬಗ್ಗೆ, ನೈಜತೆಯನ್ನು ಪರಿಶೀಲಿಸದೇ […]

HOME LATEST NEWS NATIONAL

ಉತ್ತರಕಾಂಡ ಭಾರೀ ಮೇಘಸ್ಪೋಟ: 59ಕ್ಕೂ ಅಧಿಕ ಮಂದಿ ಕಣ್ಮರೆ

ಉತ್ತರಕಾಶಿ: ಉತ್ತರಕಾಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆಗಳ ಅವಧಿಯಲ್ಲಿ ಮೂರು ಬಾರಿ ಮೇಘಸ್ಪೋಟವಾಗಿದ್ದು, ಭಾರಿ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 59 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಪರಿಹಾರ ತಂಡಗಳಿಂದ ಬೃಹತ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಮಾತನಾಡಿದ ರಕ್ಷಣಾ (PRO) ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರೀವಾಸ್ತವ, ಡೆಹ್ರಾಡೂನ್ ದುರಂತದ ಪ್ರಮಾಣ ಮತ್ತು ಸೇನೆಯ ತಕ್ಷಣದ ಕಾರ್ಯಾಚರಣೆಯನ್ನು ದೃಢಪಡಿಸಿದರು. […]

DAKSHINA KANNADA HOME

ಪೆರುವಾಯಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗೂ ಶಿಕ್ಷಕ -ರಕ್ಷಕ ಸಭೆ ನಡೆಯಿತು. ಕಾಳಿಕಾಂಬ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಸಮಾರಂಭದ ಉದ್ಘಾಟಿಸಿದರು. ನಂತರ ಮಾತನಾಡಿ, ಎಲ್ಲಾ ಧರ್ಮದ ಸಾರವು ಒಂದೇ. ವಿದ್ಯೆ ನಮ್ಮ ಜೀವನದ ಏಳಿಗೆಗೆ ಪ್ರಮುಖವಾದ ಆಯುಧ ಅದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಆರ್ಶೀವಚನವಿತ್ತರು. ಇದೇ ವೇಳೆ ತಮ್ಮ ಹುಟ್ಟು ಹಬ್ಬದ ನಿಮಿತ್ತ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ವಿತರಿಸಿದರು. ಮುಖ್ಯ ಅತಿಥಿಗಳಾದ ಎಸ್ […]