Month: August 2025

DAKSHINA KANNADA LATEST NEWS

ಯುವ ವೈದ್ಯೆ ಕೀರ್ತನಾ ಜೋಶಿ ಸಾವಿಗೆ ಶರಣು

ಪುತ್ತೂರು: ಇಲ್ಲಿನ ಬಪ್ಪಳಿಗೆ ನಿವಾಸಿ ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27 ವ.) ಅವರು ಸೋಮವಾರ ರಾತ್ರಿ ಮಂಗಳೂರಿನ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ. ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಸೋಮವಾರ ತಡರಾತ್ರಿ ಸ್ವಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು […]

DAKSHINA KANNADA HOME

ಪಿಲಿಕುಳದಲ್ಲಿ ಭತ್ತದ ಕೃಷಿ ಪ್ರಾತ್ಯಕ್ಷಿಕೆ

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು; ಕೃಷಿ ಇಲಾಖೆ, ಮಂಗಳೂರು ಮತ್ತು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ.), ಬಜಪೆ ಇದರ ಸಂಯುಕ್ತ ಆಶ್ರಯದಲ್ಲಿ ಭತ್ತದ ಕೃಷಿಯ ಪ್ರಾತ್ಯಕ್ಷಿಕೆಯ ಕಾರ್ಯಕ್ರಮ ಮಂಗಳವಾರರಂದು ಪಿಲಿಕುಳದ ಗುತ್ತುಮನೆಯ ಎದುರಿನ ಬಾಕಿಮಾರು ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಹೊನ್ನಪ್ಪ ಗೌಡ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡುತ್ತ ನಮ್ಮ ಇಲಾಖೆಯು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಇಂತಹ ಅನೇಕ […]

Breaking News DAKSHINA KANNADA HOME LATEST NEWS NATIONAL STATE UDUPI

ಕ್ಯಾಥೊಲಿಕ್ ಸಭಾ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು: ಕ್ರೈಸ್ತ ಭಗಿನಿಯರನ್ನು ಸುಳ್ಳು ಆರೋಪ ವಿಧಿಸಿ ಬಂಧಿಸಿದ ಘಟನೆ ಖಂಡಿಸಿ ಮಂಗಳೂರಿನಲ್ಲಿ ಕ್ಯಾಥೊಲಿಕ್ ಸಭಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕೇಂದ್ರ ಹಾಗೂ ಬಿಜೆಪಿ ಸರಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಅಲ್ಪ ಸಂಖ್ಯಾತರ ಮೇಲೆ ಬಿಜೆಪಿ ಹಾಗೂ ಸಂಘ ಪರಿವಾರಗಳು ನಿರಂತರ ದೌರ್ಜನ್ಯ ನಡೆಸುತ್ತಿದ್ದು, ಇದರಿಂದಾಗಿ ನಾವು ಬೀದಿಗೆ ಇಳಿಯುವ ಪ್ರಸಂಗ ಬಂದಿದೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂಬ ಕೂಗು ಕೇಳಿ ಬಂತು. ಇಂದು ಛತ್ತೀಸ್‌ಗಡದಲ್ಲಿ ನಡೆದ ಘಟನೆ ನಾಳೆ ನಮ್ಮಲ್ಲೂ ನಡೆಯಬಹುದು. ಸುಳ್ಳು […]

DAKSHINA KANNADA HOME

ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಗಳೂರು ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿ ಬೃಹತ್ ಪ್ರತಿಭಟನೆ

ಮಂಗಳೂರು ಆ 4: ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಮರೋಳಿ-ಜೋಡುಕಟ್ಟೆ ಬಳಿ ಇರುವ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನೌಕರರ ಪಿಂಚಣಿ ಹಾಗೂ ಗ್ರಾಚುಟಿಗೆ ನಮ್ಮ ವಿರೋಧವಿಲ್ಲ, ಖಂಡಿತವಾಗಿಯೂ ಅವರಿಗೆ ನೀಡಲೇಬೇಕು. ಅದು ರಾಜ್ಯ […]

HOME UDUPI

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ಉಡುಪಿ: ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು. ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್’ನ ಧರ್ಮಗುರುಗಳಾದ ರೆವರೆಂಡ್ ಫಾದರ್ […]

COMMUNITY NEWS DAKSHINA KANNADA HOME

ಸತ್ಯ, ನೀತಿಯ ಜೀವನವೇ ಇತರರಿಗೆ ದಾರಿ ದೀಪವಾಗಲಿ: ವಂ| ರಾಜೇಶ್ ಮೆಲ್ವಿನ್ ರೊಸಾರಿಯೋ; ಅಶೋಕನಗರ ಚರ್ಚ್ ನಲ್ಲಿ ವಾರ್ಷಿಕ ಹಬ್ಬ ಆಚರಣೆ

ಅಶೋಕನಗರ, ಆಗಸ್ಟ್ 3: ಕ್ರಿಸ್ತರ ಶುಭವಾರ್ತೆಯನ್ನು ಪ್ರಸಾರ ಮಾಡಲು ಅವರ ಮೇಲೆ ವಿಶ್ವಾಸವಿರಬೇಕು. ಕ್ರಿಸ್ತರ ಮೂಲಕ ಸಕಲ ವಿಘ್ನಗಳಿಂದ ಪಾರಾಗಲು ಸಾಧ್ಯ ಎಂಬುವುದನ್ನು ಅರಿತುಕೊಳ್ಳಬೇಕು. ಪ್ರತೀಯೊಬ್ಬರೂ ಈ ಜತ್ತಿನಲ್ಲಿ ಪಯಣಿಗರಾಗಿದ್ದಾರೆ. ಸತ್ಯ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆಯುವುದು ಅಗತ್ಯವಾಗಿದ್ದು, ನಮ್ಮ ಪ್ರಾಮಾಣಿಕ ಜೀವನದ ಮೂಲಕ ಇತರರಿಗೂ ಮಾರ್ಗದರ್ಶಿಯಾಗಬೇಕು ಎಂದು ಸಂತ ಜೋಸೆಫ್ ಸೆಮಿನರಿಯ ರೆಕ್ಟರ್ ವಂ| ರಾಜೇಶ್ ಮೆಲ್ವಿನ್ ರೊಸಾರಿಯೋ ಹೇಳಿದರು.ಮಂಗಳೂರಿನ ಅಶೋಕನಗರದ ಸಂತ ಡೊಮಿನಿಕ್ ಚರ್ಚ್‌ನಲ್ಲಿ ರವಿವಾರ ವಾರ್ಷಿಕ ಮಹೋತ್ಸವದ ಬಲಿಪೂಜೆಯಲ್ಲಿ ಅವರು ಪ್ರವಚನ ನೀಡಿದರು.ಇಂದಿನ […]

DAKSHINA KANNADA HOME

ಆಟಿ ಆಚರಣೆಗಳಿಂದ ತುಳುನಾಡಿನ ಸಂಸ್ಕೃತಿ ಸಮೃದ್ಧಗೊಂಡಿದೆ“ -ಡಾ.ಮಂಜುಳಾ ಶೆಟ್ಟಿ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ “ಆಟಿದ ಪೊರ್ಲು” ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ವೇದಿಕೆಯನ್ನು ದನಗಳನ್ನು ಕಟ್ಟಲಾಗಿರುವ ಸಾಂಪ್ರದಾಯಿಕ ಹಟ್ಟಿಯ ಸ್ವರೂಪದಲ್ಲಿ ನಿರ್ಮಿಸಲಾಗಿತ್ತು. ಭತ್ತದ ಪೈರು ಹೊಡೆಯುವ ಪಡಿ ಮಂಚಕ್ಕೆ ಪೊಲಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತಾಡಿದ ಬಂಟರ ಯಾನೆ ನಾಡವರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ ಅವರು, “ಬಂಟ ಸಮುದಾಯದ ಯುವಕರು […]

DAKSHINA KANNADA HOME LATEST NEWS

ಫೇಸ್ಬುಕ್ ನಲ್ಲಿ ಕೋಮುಸೌಹಾರ್ದತೆಗೆ ಧಕ್ಕೆ: FIR ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ  ಬೆಳ್ತಂಗಡಿ ಠಾಣೆಯಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಉಜಿರೆಯ ನಿವಾಸಿಯೋರ್ವರು ನೀಡಿದ ದೂರಿನಂತೆ, ಸದ್ರಿಯವರು ತನ್ನ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ನ ಕುಲುಮೆ ಎಂಬ ಗ್ರೂಪ್ ನಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ […]

DAKSHINA KANNADA HOME LATEST NEWS

ಬಪ್ಪಳಿಗೆ-ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿ ಇದರ 4ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ವೇಳೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿಯ ಗೌರವಾಧ್ಯಕ್ಷ ರಾಮಚಂದ್ರ ಕೆ. ರಾವ್, ಅಧ್ಯಕ್ಷ ಮೋಹನ್ ಗೌಡ ಸಿಂಗಾಣಿ, ಪ್ರಧಾನ ಕಾರ್ಯದರ್ಶಿ ಲಿಖಿತ್ ರಾಜ್ ಅರಸ್, ಮಾಜಿ ಅಧ್ಯಕ್ಷ ರವಿ […]

DAKSHINA KANNADA HOME

ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ಆಟಿದ ಐಸಿರ

ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ನಗರದ ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಹಲವು ಗಣ್ಯರು ತುಳುನಾಡಿನ ಹಿಂದಿನ ಶೈಲಿಯಂತೆ ಕಡೆಯುವ ಕಲ್ಲಿನಲ್ಲಿ ಮಸಾಲೆ ಅರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ಕಳಂಜದ್ದೇ ಸುದ್ದಿ. ಮನೆ ಮನೆಯ ರೋಗ-ರುಜಿನಗಳನ್ನು ದೂರ ಮಾಡಲೆಂದೇ ಆಟಿ ಕಳಂಜ ಬರುವನೆಂಬ ನಮ್ಮ ಹಿರಿಯರ ನಂಬಿಕೆ […]