Month: August 2025

DAKSHINA KANNADA HOME LATEST NEWS NATIONAL

ಛತ್ತೀಸ್‌ಗಡ: ಮತಾಂತರ ಆರೋಪದಲ್ಲಿ ಬಂಧಿತರಾಗಿದ್ದ ಕ್ರೈಸ್ತ ಸನ್ಯಾಸಿನಿಯರಿಗೆ ಜಾಮೀನು

ರಾಯ್ಪುರ್: ಆದಿವಾಸಿಗಳನ್ನು ಮತಾಂತರಗೊಳಿಸಿ, ಅವರನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ ಬಂಧಿತರಾಗಿದ್ದ ಇಬ್ಬರು ಕ್ರೈಸ್ತ ಸನ್ಯಾಸಿನಿಯರಿಗೆ ಎನ್‌ಐಎ ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಶುಕ್ರವಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಎನ್ಐಎ ನ್ಯಾಯಾಲಯ) ಸಿರಾಜುದ್ದೀನ್ ಖುರೇಷಿ, ತಮ್ಮ ತೀರ್ಪನ್ನು ಕಾಯ್ದಿರಿಸಿದ್ದರು.ಶನಿವಾರ ತೀರ್ಪು ಪ್ರಕಟಿಸಿದ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯ, ಕೇರಳದ ಇಬ್ಬರು ಕ್ರೈಸ್ತ ಸನ್ಯಾಸಿನಿಯರಿಗೆ ಹಾಗೂ ಛತ್ತೀಸ್ ಗಢದ ಓರ್ವ ಆದಿವಾಸಿ ಯುವಕನಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ […]

DAKSHINA KANNADA HOME

ತುಳು ಅಕಾಡೆಮಿಯಿಂದ ದಾಖಲೀಕರಣ ಘಟಕ ರೂಪಿಸುವ ಯೋಜನೆ ಅಗತ್ಯವಿದೆ: ಡಾ.ವೈ.ಎನ್ ಶೆಟ್ಟಿ

ಮಂಗಳೂರು ಆ 02: ಭೂತಾರಾಧನೆ, ನಾಗಾರಾಧನೆ, ಯಕ್ಷಗಾನ ಸೇರಿದಂತೆ ತುಳುನಾಡಿನ ವೈಶಿಷ್ಟ್ಯತೆಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಕಾರ್ಯ ಆಗಬೇಕಾಗಿದ್ದು ಇದಕ್ಕಾಗಿ ತುಳು ಅಕಾಡೆಮಿಯಿಂದ ‘ದಾಖಲೀಕರಣ ಘಟಕ’ ಸ್ಥಾಪನೆ ಮಾಡುವ ಅವಶ್ಯಕತೆ ಇದೆ ಎಂದು ಹಿರಿಯ ಜಾನಪದ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಡಾ ವೈ.ಎನ್.ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ. ಶನಿವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಉರ್ವಸ್ಟೋರ್ನ ತುಳುಭವನದಲ್ಲಿ ಜರಗಿದ ರಮೇಶ್ ಮಂಜೇಶ್ವರ ನಿರ್ದೇಶನದ ‘ಆಟಿದ ಬೂತಾರಾದನೆ’ ಸಾಕ್ಷ್ಯಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು […]

DAKSHINA KANNADA HOME

ವ್ಯಸನ ಮುಕ್ತ ಸಮಾಜ ನಿರ್ಮಿಸಲು ಯುವಕರ ಸಹಕಾರ ಅಗತ್ಯ ಜೋಕಿಂ ಸ್ಟಾನ್ಲಿ ಅಲ್ವಾರಿಸ್

ಮಂಗಳೂರು, ಆ.2 : ಪ್ರಸ್ತುತ ಕಾಲಘಟ್ಟದಲ್ಲಿ ಯುವಕರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ವ್ಯಸನಗಳಿಗೆ ಆಕರ್ಷಣೆಗೊಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಸನ ಮುಕ್ತ ದಿನದ ಆಚರಣೆಯು ಯುವಜನರಲ್ಲಿ ಅರಿವು ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಸ್ಕೂಲ್ […]

DAKSHINA KANNADA HOME LATEST NEWS NATIONAL STATE

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 14 ಕಡೆ ಏಕಕಾಲಕ್ಕೆ NIA ದಾಳಿ

ಮಂಗಳೂರು:  ಹಿಂದೂ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಇಂದು ಬೆಳಗ್ಗೆ ಜಿಲ್ಲೆಯ ವಿವಿಧೆಡೆ ಏಕಕಾಲಕ್ಕೆ 14 ಕಡೆ ದಾಳಿ ನಡೆಸಿದ್ದಾರೆ. ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 14 ಕಡೆಗಳಲ್ಲಿ ಎನ್ ಐ ಎ ಅಧಿಕಾರಿಗಳು ಇಂದು ಬೆಳಗ್ಗೆ ಆರು ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಮೇ 1ರಂದು […]

DAKSHINA KANNADA HOME LATEST NEWS

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆಗೈದ ರೆಮೋನಾಗೆ ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ

ಮಂಗಳೂರು: ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ. ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು ರೆಮೋನಾ ಪಿರೇರಾ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ […]

HOME STATE

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಇಬ್ಬರ ಬಂಧನ ಉಳಿದವರಿಗೆ ಶೋಧ

ಬೆಂಗಳೂರು: ಸ್ಯಾಂಡವುಡ್‌ ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ರಮ್ಯಾ ಅವರು ಇತ್ತೀಚೆಗೆ ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು  ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್​ಗಳ ಕಮೆಂಟ್ ಬಾಕ್ಸ್​​ನಲ್ಲಿ ಅಶ್ಲೀಲ ಕಮೆಂಟ್​ಗಳನ್ನು ಮಾಡಿದ್ದರು. ಇದನ್ನು ಸಹಿಸಿಕೊಳ್ಳದ ರಮ್ಯಾ ಅವರು ಹೋಗಿ ಸೈಬರ್ ಠಾಣೆಗೆ […]

HOME STATE

ರೇಪ್‌ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ- ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆ ಸಾಧ್ಯತೆ

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಅಪಹರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗುವ ಸಾಧ್ಯತೆ ಇದೆ. ಪ್ರಕರಣದ ಹಿನ್ನೆಲೆ ಏನು? 2024ರ ಲೋಕಸಭೆಗೆ  ನಡೆದ ಚುನಾವಣೆ ವೇಳೆ ಪ್ರಜ್ವಲ್‌ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ. ಈ ವೇಳೆ ಸಂಸದನಾಗಿದ್ದ ಪ್ರಜ್ವಲ್‌ನದ್ದು ಎನ್ನಲಾದ ಲೈಂಗಿಕ ದೌರ್ಜನ್ಯ ಕೃತ್ಯಗಳ ಹಲವು ವಿಡಿಯೊಗಳು ಹಾಗೂ ಅಶ್ಲೀಲ […]

COMMUNITY NEWS DAKSHINA KANNADA HOME LATEST NEWS NATIONAL

ಭಜರಂಗದಳ, ಬಿಜೆಪಿಯ ಕುತಂತ್ರದಿಂದ ಕ್ರೈಸ್ತ ಸನ್ಯಾಸಿನಿಯರ ಬಂಧನ: ಜೆ.ಆರ್. ಲೋಬೊ

ಮಹಾನಗರ, ಆಗಸ್ಟ್ 1: ಛತ್ತೀಸ್‌ಗಢದಲ್ಲಿ ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಅವರನ್ನು ತತ್‌ಕ್ಷಣ ಬಿಡುಗಡೆ ಮಾಡಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಆಗ್ರಹಿಸಿದ್ದಾರೆ. ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇರಳದ ತ್ರಿಶೂರು ಮೂಲದ ಕ್ರೈಸ್ತ ಸನ್ಯಾಸಿನಿಯರಾದ ವಂದನ ಫ್ರಾನ್ಸಿಸ್ ಮತ್ತು ಪ್ರೀತಿ ಮೇರಿ ಅವರನ್ನು ಮೂವರು ಯುವತಿಯರು ಹಾಗೂ ಓರ್ವ ಯುವಕನೊಂದಿಗೆ ಪ್ರಯಾಣಿಸುತ್ತಿದ್ದಾಗ ಮತಾಂತರ ಹಾಗೂ ಮಾನವ ಕಳ್ಳ ಸಾಗಾಣಿಕೆಯ ಸುಳ್ಳು ಆರೋಪ […]

DAKSHINA KANNADA HOME LATEST NEWS NATIONAL STATE

ಬರೋಬ್ಬರಿ 8 ಜನರನ್ನು ವರಿಸಿ 9ನೇ ಮದುವೆಗೆ ರೆಡಿಯಾಗುತ್ತಿದ್ದ ಆಂಟಿ ಅರೆಸ್ಟ್‌

ಮುಂಬೈ: 35 ವರ್ಷದ ಮಹಿಳೆಯೊಬ್ಬಳು ಬರೋಬ್ಬರಿ 8 ಸಲ ಮದುವೆಯಾಗಿ, ಅದೇ ಗಂಡಂದಿರಿಗೆ ಮೂರು ನಾಮ ಇಕ್ಕು 9ನೇ ಮದುವೆಯಾಗಲು ಸಿದ್ಧತೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 35ರ ಹರೆಯದ ಸಮೀರಾ ಫಾತಿಮಾ ಈ ಪ್ರಕರಣದ ಆರೋಪಿತೆ.  ವಿಶೇಷ ಅಂದರೆ ಫಾತಿಮಾ ವೃತ್ತಿಯಲ್ಲಿ ಶಾಲಾ ಶಿಕ್ಷಕಿಯಾಗಿದ್ದು, 12 ವರ್ಷದ ಮಗುವನ್ನು ಹೊಂದಿದ್ದಾಳೆ. ಆ ಮಗು ಯಾವ ಗಂಡನದ್ದು ಎಂದು ತಿಳಿದುಬಂದಿಲ್ಲ. ಸಮೀರಾ ಫಾತಿಮಾ ಮ್ಯಾಟ್ರಿಮೊನಿ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ […]

DAKSHINA KANNADA HOME LATEST NEWS STATE

ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ

ಬೆಂಗಳೂರು : ಧರ್ಮಸ್ಥಳದ ತಲೆಬುರುಡೆ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ತನಿಖೆ ಹಂತದಲ್ಲಿದೆ. ಹೀಗಾಗಿ, ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು. ಈ ಸಂಬಂಧ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ಇರಿಸಿದ್ದಾರೆ ಎಂದು ತಿಳಿಸಿದರು. ಎಸ್‍ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ತನಿಖೆ ಮಾಡುತ್ತಿದ್ದಾರೆ. […]