Month: September 2025

DAKSHINA KANNADA HOME

‘ಕಾಸ್ಕ್’ಸಂಸ್ಥೆಯ ಸದಸ್ಯರು ಹಾಗೂ ಕುಟುಂಬ ಸದಸ್ಯರ ಪುನರ್ಮಿಲನ ಸಮಾರಂಭ

ಮಂಗಳೂರು ಸಪ್ಟೆಂಬರ್ 26: ಕಾಸ್ಕ್ ಸಂಸ್ಥೆಯ ವಾರ್ಷಿಕ . ಮಹಾಸಭೆಯ ಹಾಗೂ ಅವರ ಕುಟುಂಬ ಸದಸ್ಯರ ಪುನರ್ಮಿಲನ ಸಮಾರಂಭವು ಬೆಂದೂರ್ ಚರ್ಚ್ ಸಭಾಂಗಣದಲ್ಲಿ ನೆರವೇರಿತು. ಫ್ಲೋರಾ ಕ್ಯಾಸ್ಟೆಲಿನೊ ಸಂಚಾಲನೆಯಲ್ಲಿ ಕೊಂಕಣಿ ಸಂಸ್ಕೃತಿ ಮತ್ತು ಪರಂಪರೆಯ ಅನೇಕ ಕಾರ್ಯಕ್ರಮಗಳು ನೆರವೇರಿದವು. ರೆಮೋನಾ ಇವೆಟ್ ಪಿರೇರಾ ಭರತನಾಟ್ಯವನ್ನು ಪ್ರದರ್ಶಿಸಿದರು. ಇತ್ತೀಚೆಗೆ ನಡೆದ 120 ಗಂಟೆಗಳ ಪ್ರದರ್ಶನ ಮತ್ತು ವಿಶ್ವ ದಾಖಲೆಗಾಗಿ ಅವರನ್ನು ಅಭಿನಂದಿಸಲಾಯಿತು. ಅವರ ಅಸಾಧಾರಣ ಸಾಧನೆಗಾಗಿ ಪ್ರತಿಷ್ಠಿತ ‘ಕಾಸ್ಕ್ ಮೊತಿಯಾಂ’ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಸಾನ್ಸಿಯಾ ಅವರ ಕೊಂಕಣಿ […]

DAKSHINA KANNADA HOME

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸೆ 30 ಮಂಗಳೂರಿನ ಕೇಂದ್ರ ಮೈದಾನದಲ್ಲಿ ಕುಡ್ಲದ ಪಿಲಿಪರ್ಬ

ಮಂಗಳೂರು ಸೆ 26 : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ […]

DAKSHINA KANNADA HOME

ರಾಮಕ್ಷತ್ರಿಯ ಸೇವಾ ಸಂಘ(ರಿ.) ಮಂಗಳೂರು ವತಿಯಿಂದ “ಅಭಿನಂದನಾ ಸಮಾರಂಭ”

ಮಂಗಳೂರು ಸೆ 26: ರಾಮಕ್ಷತ್ರಿಯ ಸೇವಾ ಸಂಘ (ರಿ.), ಮಂಗಳೂರು ವತಿಯಿಂದ “ಅಭಿನಂದನಾ ಸಮಾರಂಭ” ಕಾರ್ಯಕ್ರಮವನ್ನು ಸೆಪ್ಟೆಂಬರ್ 28ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮೋರ್ಗನ್ಸ್ ಗೇಟ್‌ನ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ತಿಳಿಸಿದರು. ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 75 ವರ್ಷಗಳ ಪರಂಪರೆಯ ಈ ಸಂಘವು ಸಮಾಜಮುಖಿ ಚಟುವಟಿಕೆಗಳ ಮೂಲಕ ವೈದ್ಯಕೀಯ ಸಹಾಯ, ವಿದ್ಯಾಧನ, ರಕ್ತದಾನ, ಪ್ರತಿಭಾ ಪುರಸ್ಕಾರ ಮತ್ತು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ […]

DAKSHINA KANNADA HOME

ಬಜಾಲ್ ನಂತೂರಿನ ಅಮೇವು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನ‌ರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ನಡೆದ ಹೊರೆ ಕಾಣಿಕೆ ಮೆರವಣಿಗೆಯನ್ನು ಮುಸ್ಲಿಮ್ ಬಾಂಧವರು ಸ್ವಾಗತಿಸಿ ಭಾವೈಕ್ಯತೆ

ಮಂಗಳೂರು: ಬಜಾಲ್ ನಂತೂರಿನ ಅಮೇವು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನ‌ರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ನಡೆದ ಹೊರೆ ಕಾಣಿಕೆ ಮೆರವಣಿಗೆಯನ್ನು ಮುಸ್ಲಿಮ್ ಬಾಂಧವರು ಸ್ವಾಗತಿಸಿ ಭಾವೈಕ್ಯತೆ ಮೆರದಿದ್ದಾರೆ. ಶ್ರೀ ಕ್ಷೇತ್ರಕ್ಕೆ ದೇವಸ್ಥಾನದ ಮುಖ್ಯಸ್ಥ ವಿಠಲ್ ಪೂಜಾರಿ ನೇತೃತ್ವದ ಹೊರೆ ಕಾಣಿಕೆ ಮೆರವಣಿಗೆ ಬಜಾಲ್ ನಂತೂರಿನ ಬದ್ರಿಯಾ ಜುಮಾ ಮಸೀದಿ ಎದುರಾಗಿ ಸಾಗುತ್ತಿದ್ದ ವೇಳೆ ಜಮಾಅತ್ ಆಡಳಿತ ಕಮಿಟಿ ಮುಖಂಡರು ಭಕ್ತಾದಿಗಳನ್ನು ಸ್ವಾಗತಿಸಿ ಸಿಹಿ ತಿಂಡಿ,ತಂಪು ಪಾನೀಯ, ಐಸ್ ಕ್ರೀಮ್ ವಿತರಿಸಿ ಸೌಹಾರ್ದತೆ ಸಾರಿದ್ದಾರೆ. ಈ ಸಂದರ್ಭದಲ್ಲಿ […]

DAKSHINA KANNADA HOME

*ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ, ರೂ.9.51 ಕೋಟಿ ನಿವ್ವಳ ಲಾಭ, ಶೇಕಡಾ 10 ಡಿವಿಡೆಂಡ್ ಘೋಷಣೆ*

ಮಂಗಳೂರು: ಎಂಸಿಸಿ ಬ್ಯಾಂಕಿನ 2024–25ನೇ ಹಣಕಾಸು ವರ್ಷದಲ್ಲಿ ಎಂ.ಸಿ.ಸಿ. ಬ್ಯಾಂಕ್ ಎಲ್ಲಾ ಹಣಕಾಸು ನಿಯತಾಂಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಮತ್ತು ತನ್ನ ಷೇರುದಾರರಿಗೆ 10% ಲಾಭಾಂಶವನ್ನು ಘೋಷಿಸಿದೆ. 2024–25ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ₹9.51 ಕೋಟಿಗಳ ಅಭೂತಪೂರ್ವ ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಹೇಳೀದರು. ಅವರು ಎಂ.ಸಿ.ಸಿ. ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯು ಮಂಗಳೂರಿನ ಕೊಡಿಯಾಲ್‌ಬೈಲ್‌ನ ಸೇಂಟ್ ಅಲೋಶಿಯಸ್ ಪಿ.ಯು. ಕಾಲೇಜಿನ ಲೊಯೊಲಾ ಹಾಲ್‌ನಲ್ಲಿ ಸಭೆಯ ಅಧ್ಯಕ್ಷತೆಯನ್ನು […]

DAKSHINA KANNADA HOME

ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

ಮಂಗಳೂರು ಸೆ 24 : ಗುರುವಾಯನಕೆರೆ ಪ್ರತಿಷ್ಠಿತ *ವಿದ್ವತ್ ಪಿಯು ಕಾಲೇಜ್* ನಲ್ಲಿ *ಗುರುವಂದನಾ* ” ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕ ವೃಂದಕ್ಕೆ ಗೌರವ ಸಮರ್ಪಣೆ ಮಾಡಿದರು. ವಿದ್ಯಾರ್ಥಿಗಳೇ ಏರ್ಪಡಿಸಿದ್ದ ಈ ಗುರುವಂದನಾ ಕಾರ್ಯಕ್ರಮ ಶಿಕ್ಷಕರ ದಿನಾಚರಣೆಯ ಭಾಗವಾಗಿ ಮೂಡಿ ಬಂದದ್ದು ವಿಶೇಷ. ಎಲ್ಲಾ ಶಿಕ್ಷಕರಿಗೂ ಪುಷ್ಪಗುಚ್ಛ ನೀಡಿ ಬರಮಾಡಿಕೊಂಡ ವಿದ್ಯಾರ್ಥಿಗಳು ನಂತರ ಪ್ರತಿ ಶಿಕ್ಷಕರಿಗೂ ಆರತಿ ಬೆಳಗುವುದರ ಮೂಲಕ ಅವರಿಗೆ ಸಮಾಜದಲ್ಲಿ ಇರುವ ಗೌರವದ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಬಹಳ ವಿಶೇಷವಾಗಿ ಮೂಡಿ […]

DAKSHINA KANNADA HOME

ಮಂಗಳೂರು ದಸರಾ ದೀಪಾಲಂಕಾರ ಉದ್ಘಾಟನೆ:- ಶಾಸಕ ಕಾಮತ್

ಮಂಗಳೂರು ಸೆ 22:ಪ್ರಸಿದ್ದ ಮಂಗಳೂರು ದಸರಾ ಹಬ್ಬಕ್ಕೆ ಇಡೀ ನಗರವು ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಂಡಿದ್ದು ನಗರದ ಪಿವಿಎಸ್ ವೃತ್ತದ ಬಳಿ ನವರಾತ್ರಿಯ ಮೊದಲನೇ ದಿನದಂದು ಶಾಸಕ ವೇದವ್ಯಾಸ ಕಾಮತ್ ರವರು ದೀಪಾಲಂಕಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ದಸರಾ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರನ್ನು, ಪ್ರವಾಸಿಗರನ್ನು ಸೆಳೆಯುವ ಇಂತಹ ಹಬ್ಬದ ಸಂದರ್ಭದಲ್ಲಿ ಇಡೀ ನಗರಕ್ಕೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಶೇಷವಾಗಿ ಚಿಂತನೆ ನಡೆಸಿ ಮಹತ್ವದ […]

DAKSHINA KANNADA HOME

ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ

ಮಂಗಳೂರು ಸೆ 22: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ “ಕುಡ್ಲದ ಪಿಲಿ ಪರ್ಬ-2025” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು “ದಸರಾ ಸಂದರ್ಭದಲ್ಲಿ ಇಡೀ ತುಳುನಾಡಿನಲ್ಲೇ ಹುಲಿವೇಷದ ಸಂಭ್ರಮ ಮನೆ ಮಾಡಿರುತ್ತದೆ. ಇಂದು ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ […]

DAKSHINA KANNADA HOME

ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ

ಪುತ್ತೂರು: ಚುನಾವಣೆಯಲ್ಲಿ ಅನೇಕ ಮಂದಿ ಸ್ಪರ್ದೆ ಮಾಡುತ್ತಾರೆ ಕೆಲವರು ಸೋಲುತ್ತಾರೆ, ಕೆಲವರು ಗೆಲ್ಲುತ್ತಾರೆ ಆದರೆ ಅಶೋಕ್ ರೈ ಅವರನ್ನು ಬಡವರಿಗೆ ದಾರಿದೀಪವಾಗಲು, ಬಡವರಿಗೆ ಆಸರೆ ನೀಡಲು ದೇವರೇ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳಿದರೆ ಅತಿಶಯೋಕ್ತಿಯಾಗದು ಎಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಕೃಷ್ಣಗುರೂಜಿ ಅವರು ಹೇಳಿದರು.ಅವರು ಶ್ರೀ ಕ್ಷೇತ್ರದಲ್ಲಿ ನಡೆದ ಅಶೋಕ ಜನಮನ ೨೦೨೫ ದೀಪಾವಳಿ ಕಾರ್ಯಕ್ರಮದ ಗ್ರಾಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು.ಅಶೋಕ್ ರೈ ಶಾಸಕರಾಗಿದ್ದು ಹಣ ಮಾಡುವ ಉದ್ದೇಶದಿಂದಲ್ಲ, […]

DAKSHINA KANNADA HOME

ವೆನ್ಲಾಕ್‌ನಲ್ಲಿ ಕರುಣೆಯ ತೊಟ್ಟಿಲು ಉದ್ಘಾಟನೆ*

ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಶುಭ ಹಾರೈಸಿದರು. ಎಂಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಚೈರ್‌ಮ್ಯಾನ್ ಝಕರಿಯಾ ಜೋಕಟ್ಟೆ ಮಾತನಾಡಿ, ಟ್ರಸ್ಟ್ ಸ್ಥಾಪನೆಯಾಗಿ ಸುಮಾರು 12 ವರ್ಷಗಳಾಗಿದ್ದು, ಎಂಟು ವರ್ಷಗಳಿಂದ ನಿರಂತರ ವೆನ್ಲಾಕ್ ಆಸ್ಪತ್ರೆ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ವಿತರಿಸುತ್ತಿದೆ. ದಾನಿಗಳ ನೆರವು ಮತ್ತು […]