Month: September 2025

DAKSHINA KANNADA HOME

ಎಂಸಿಸಿ ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

ಮಂಗಳೂರು ಸೆ.10: ಬೆಳ್ಮಣ್ ಎಂಸಿಸಿ ಬ್ಯಾಂಕ್ ಶಾಖೆ ವತಿಯಿಂದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸಲು ಮತ್ತು ಬೆಳ್ಮಣ್ ಪ್ರದೇಶದ ಸುತ್ತಮುತ್ತಲಿನ ಶಿಕ್ಷಕರ ಸಮರ್ಪಣೆ ಮತ್ತು ಸೇವೆಯನ್ನು ಗೌರವಿಸಲು ಎಂಸಿಸಿ ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಶಿಕ್ಷಕರ ಶಿಕ್ಷಕರ ದಿನಾಚರಣೆಯನ್ನು ಡಾ| ಸರ್ವಪಲ್ಲಿ ರಾಧಾಕೃಷ್ಜನ್ ಅವರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ […]

DAKSHINA KANNADA HOME

ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

ಪುತ್ತೂರು: ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟುಗಟ್ಟಿಗೊಳಿಸಿ ಕಾರ್ಯಕರ್ತರಿಗೆ ಹುರಿದುಂಬಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖ ಸಭೆಗಳು, ಮಾಸಿಕ ಸಭೆಗಳು ಇನ್ನು ಗ್ರಾಮೀಣ ಭಾಗದ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಅವರ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದಾರೆ, ಕಾರ್ಯಕರ್ತರಿಲ್ಲದಿದ್ದರೆ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ, ತಳಮಟ್ಟದ ಕಾರ್ಯಕರ್ತ ಪಕ್ಷದ ಬೆನ್ನೆಲುಬಾಗಿದ್ದಾರೆ ಅವರಿಗೆ ಬೆಂಬಲ ನೀಡುವ ಕೆಲಸ ನಾಯಕರಿಂದ […]

DAKSHINA KANNADA HOME

ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್

ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್‌ ಎಸ್ಟೇಟ್‌ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು ಪ್ರತಿಯೊಂದು ಅಪಾರ್ಟ್‌ಮೆಂಟ್ಗೂ ಕಾಣಿಸುವಂತೆ ಇರುವ ಉತ್ಕೃಷ್ಟ ವಸತಿ ಯೋಜನೆಯಾಗಿದೆ. ಮಂಗಳೂರಿನ ಸುರತ್ಕಲ್‌ NITK ಬೀಚ್ ರಸ್ತೆಯಲ್ಲಿರುವ ರೋಹನ್ ಮರೀನಾ ಒನ್, […]

DAKSHINA KANNADA HOME

ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾಮಟ್ಟದ ವಿಚಾರ ಸಂಕಿರಣ

ಮಂಗಳೂರು ಸೆಪ್ಟೆಂಬರ್ 09: ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ಆಶ್ರಯದಲ್ಲಿ ‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 28ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ 11 ರಂದು ಗುರುವಾರ ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು; ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು’ ಎಂಬ ವಿಷಯದಲ್ಲಿ ದ.ಕ. ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ. ವಿಚಾರ ಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇದರ […]

DAKSHINA KANNADA HOME

ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ತೆನೆ ಹಬ್ಬದ ಸಂಭ್ರಮ

ವಿಟ್ಲ: ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯದಲ್ಲಿ ಮೋಂತಿ ಹ\nಬ್ಬದ ಪ್ರಯುಕ್ತ ವಿಶೇಷ ಬಲಿಪೂಜೆ ನಡೆಯಿತು.ಕೆನರಾ ಕಮ್ಯೂನಿಕೇಷನ್ ನ ನಿರ್ದೇಶಕ ಅನಿಲ್ ಐವನ್ ಫೆರ್ನಾಂಡೀಸ್ ಅವರು ವಿಶೇಷ ಬಲಿಪೂಜೆ ನಡೆಸಿಹಬ್ಬದ ವಿಶೇಷತೆಗಳು ಹಾಗೂ ಕೌಟುಂಬಿಕ ಸಂಬಂಧಗಳ ಮೌಲ್ಯಗಳ ಬಗ್ಗೆ ವಿಶೇಷ ಪ್ರವಚನವಿತ್ತರು. ಬಲಿಪೂಜೆಯ ಮೊದಲು ಮೇರಿ ಮಾತೆಗೆ ಮಕ್ಕಳು ಹೂವನ್ನು ಅರ್ಪಿಸಿದರು. ಇದೇ ವೇಳೆ ಹೊಸ ತೆನೆಯನ್ನು ಆರ್ಶಿವದಿಸಿದರು.ಬಲಿಪೂಜೆಯ ನಂತರ ಎಲ್ಲಾ ಭಕ್ತಾಧಿಗಳಿಗೆ ಸಿಹಿತಿನಿಸು ಹಾಗೂ ಕಬ್ಬುವನ್ನು ವಿತರಿಸಿದರು. ಈ ಹಬ್ಬಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ನಡೆಯಿತು. […]

COMMUNITY NEWS DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರ ಮೋಂತಿ ಹಬ್ಬದ ಸಂಭ್ರಮ

ಮಂಗಳೂರು: ಕರಾವಳಿಯಾದ್ಯಂತ ಕಥೋಲಿಕ ಕ್ರೈಸ್ತರು ಮೋಂತಿ (ಮೇರಿ ಮಾತೆ) ಹಬ್ಬವನ್ನು ಸಡಗರದಿಂದ ಆಚರಿಸಿದರು. ತೆನೆ ಹಬ್ಬವೆಂದು ಕರೆಯುವ ಈ ಹಬ್ಬದ ದಿನವಾದ ಇಂದು ಹೊಸ ತೆನೆಯ ಆರ್ಶಿವಾದ, ವಿಶೇಷ ಬಲಿಪೂಜೆ ನಡೆಯಿತು. ಈ ಹಬ್ಬಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ನಡೆಯಿತು. ಮಕ್ಕಳು 9 ದಿನಗಳ ಕಾಲ ತಮ್ಮ ಹಿತ್ತಲಲ್ಲಿ ಸಿಕ್ಕ ಹೂಗಳನ್ನು ಚರ್ಚಿಗೆ ತಂದು ಮೇರಿ ಮಾತೆಗೆ ಅರ್ಪಿಸುತ್ತಾರೆ. ಈ ವೇಳೆ ಮಕ್ಕಳಿಗೆ ಸಿಹಿತಿನಿಸುಗಳನ್ನು ಹಂಚುತ್ತಾರೆ.ಕೊನೆಯ ದಿನವಾದ ಇಂದು ಎಲ್ಲರ ಮನೆಗಳಲ್ಲಿ ಕುಟುಂಬ ಸಮೇತ ಸಸ್ಯಹಾರಿ […]

DAKSHINA KANNADA HOME

ಮೊಂತಿ ಹಬ್ಬಕ್ಕೆ ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರ ಸಂದೇಶ

ಸಪ್ಟೆಂಬರ್ 8 ಮೇರಿ ಮಾತೆಯ ಜನನದ ಹಬ್ಬದ ದಿನವಾಗಿದೆ. ಇದು ನಮ್ಮ ಮಾತೆಯ ದಿನ. ನಮಗೆ ಸಂತಸ,ಸಡಗರ, ಸಂಭ್ರಮದ ದಿನ. ಈ ದಿನದಂದು ಪುಟಾಣಿ ಮಕ್ಕಳು ಹೂವುಗಳನ್ನು ತಂದು, ನಾವು ನಮ್ಮ ಹೊಲ ಗದ್ದೆಗಳಲ್ಲಿ ಬೆಳೆದ ಬೆಳೆಯನ್ನು ತಂದು ದೇವರಿಗೆ ಅರ್ಪಿಸುವಾಗ ದೇವರು ನಮಗೆ ನೀಡಿದ ಹೊಸ ಬೆಳೆ ಮತ್ತು ನಮ್ಮ ಮನೆಗಳಲ್ಲಿ ಇರುವ ಹೆಣ್ಮಕ್ಕಳು ಹಾಗೂ ಮಹಿಳೆಯರು ನಿಜವಾಗಿಯೂ ನಮ್ಮ ಕುಟುಂಬದ ಭಂಡಾರ. ಹೊಸ ಬೆಳೆ, ಮೇರಿ ಮಾತೆಯ ಜನ್ಮ ದಿನ ಹಾಗೂ ನಮ್ಮ ಕುಟುಂಬದ […]

DAKSHINA KANNADA HOME

ಎಂಸಿಸಿ ಬ್ಯಾಂಕಿನ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

ಮಂಗಳೂರು ಸೆಪ್ಟೆಂಬರ್ 6 : ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಹೊಸಾಡು ರಾಮ ಶೇರಿಗಾರ್ ಮತ್ತು 2025ರ ಐಐಬಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಆಶಾ ವೀಣಾ ಡಯಾಸ್ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು. ಎಂಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ಎಲ್ರಾಯ್ ಕೆ. […]

DAKSHINA KANNADA HOME

ಬಜಾಲ್ ನಂತೂರು ಬದ್ರಿಯಾ ಜುಮಾ ಮಸ್ಜಿದ್ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ) ತಂಗಳ್ ರವರ 1500ನೇ ಈದ್ ಮೀಲಾದುನ್ನೆಬಿ ಸಡಗರ ಸಂಭ್ರಮ

ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಮಂಗಳೂರು ಇದರ ಅದೀನದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ) ತಂಗಳ್ ರವರ 1500ನೇ ಈದ್ ಮೀಲಾದುನ್ನೆಬಿ ಸಡಗರ ಸಂಭ್ರಮದಿಂದ ದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಮಾಅತ್ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಧ್ವಜಾರೋಹಣ ಗೈದು ಪ್ರಸ್ತುತ ರ್ಯಾಲಿಗೆ ಚಾಲನೆ ನೀಡಿದರು. ಕಾರ್ಯಕ್ರಮನ್ನು ಜಮಾಅತ್ ಖತೀಬರಾದ ಅಬ್ದುಲ್ ನಾಸಿರ್ ಸಅದಿಯವರು ದುಆ ಮಾಡಿ ಉದ್ಘಾಟನೆ ಮಾಡಿದರು. ತನ್ನ ಭಾಷಣದಲ್ಲಿ ಈ ಮೀಲಾದ್ ರ್ಯಾಲಿ ಶಾಂತಿ ಸಮಾಧಾನ ಸೌಹಾರ್ದತೆಯನ್ನು ಸಾರುವುದಾಗಿದೆ. […]

DAKSHINA KANNADA HOME

ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಅಧಿಕಾರಿಗಳಿಗೆ ಶಾಸಕ ಕಾಮತ್ ಸೂಚನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ, ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಗಾಂಧಿನಗರದ ಶಾಲೆಯ ಹತ್ತಿರ, ಮರೋಳಿಯ ಬಸ್ […]