Month: September 2025

DAKSHINA KANNADA HOME

ರೋಹನ್ ಕಾರ್ಪೋರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿಯಲ್ಲಿ ಒಣಂ ಸಂಭ್ರಮ

ರೋಹನ್ ಸಿಟಿಯಲ್ಲಿ ಒಣಂ ಸಂಭ್ರಮ ಮಂಗಳೂರು, ಬಿಜೈ: ಮಂಗಳೂರಿನ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಛೇರಿಯಲ್ಲಿ ಒಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು. ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿತು. ಸಂಸ್ಥೆಯ ನಿರ್ದೇಶಕ ಶ್ರೀ ಡಿಯೋನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಅವರು ದೀಪ ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. ಓಣಂ ಹಬ್ಬದ ಹೂವಿನ ಅಲಂಕಾರ ( ಪೂಕಳಂ ), ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು […]

DAKSHINA KANNADA HOME

ಕೊಂಕಣಿ ಕ್ಯಾಥೋಲಿಕ್ ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ

ಮಂಗಳೂರು: ಕೊಂಕಣಿ ಕ್ಯಾಥೋಲಿಕ್ ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾನೂನು ಸಂಬಂಧಿತ ವೃತ್ತಿಯಲ್ಲಿ ನಿರತರಾಗಿರುವ ಕ್ಯಾಥೊಲಿಕ್ ಸಮುದಾಯದ ಜನರಿಗಾಗಿ ನಡೆಸುವ ವಿಶೇಷ ಬಲಿ ಪೂಜೆ ಮತ್ತು ಪ್ರಾರ್ಥನಾ ವಿಧಿ ‘ರೆಡ್ ಮಾಸ್’ ಸೆ. 5 ರಂದು ಮಂಗಳೂರಿನ ಜಪ್ಪು ಸಂತ ಅಂತೋನಿ ಆಶ್ರಮ ಚಾಪೆಲ್‌ನಲ್ಲಿ ನಡೆಯಿತು. ಮಂಗಳೂರಿನ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ನೇತೃತ್ವದಲ್ಲಿ ನಡೆದ ಬಲಿ ಪೂಜೆಯಲ್ಲಿ ಒಂಭತ್ತು ಮಂದಿ ಗುರುಗಳು ಉಪಸ್ಥಿತರಿದ್ದರು. ಬಿಷಪ್‌ ಅವರು ತಮ್ಮ ಪ್ರವಚನದಲ್ಲಿ ವಕೀಲರು […]

DAKSHINA KANNADA HOME

*ಕಿರು ಉದ್ದಿಮೆಗಳಿಗೆ ತ್ವರಿತ ಸಾಲ ಮಂಜೂರು- ಬ್ಯಾಂಕ್‍ಗಳಿಗೆ ಸಂಸದರ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚನೆ*

ಮಂಗಳೂರು. ಸೆ.3 : ಹೊಸ ಆಹಾರ ಸಂಸ್ಕರಣೆ ಉದ್ಯಮ ಅಥವಾ ಕಿರು ಉದ್ಯಮಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಸಾಲ ಮಂಜೂರಾತಿಯನ್ನು ಬ್ಯಾಂಕುಗಳು ತ್ವರಿತವಾಗಿ ಮಾಡಲು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ. ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಬುಧವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (Pಒಈಒಇ) ಯೋಜನೆಯಡಿ ಒಂದು ದಿನದ […]

DAKSHINA KANNADA HOME LATEST NEWS

ಸಂತ ರೀಟಾ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಸೈಂಟ್ ರೀಟಾ ವಿದ್ಯಾ ಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ 2025-26 ಆಯೋಜಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ. ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ವಂ. ಫಾ. ಐವನ್ ಮೈಕಲ್ ರೋಡ್ರಿಗಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕ್ರೀಡಾ ಪರಿವೀಕ್ಷಕರಾದ ಆಶಾ ನಾಯಕ್, […]