Month: October 2025

DAKSHINA KANNADA HOME

*”ಕಾಂತಾರ ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ*

ಮಂಗಳೂರು: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾದ ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾದ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದ್ದು, ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದೆ. ಇದರ ಬೆನ್ನಲ್ಲೇ ಸಿನಿಮಾದ ಕುರಿತು ಅಪಸ್ವರ ಎದ್ದಿದೆ, ಪರ ವಿರೋಧ […]

STATE

*ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ*

ಬೆಂಗಳೂರು ಅ 11: ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಗಾಂಧಿ ಭವನದಲ್ಲಿ ನಡೆದ “ಹಂಪನಾ 90” ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಂಪನಾ ಅವರು ಸಮಾಜಮುಖಿ ಆಗುವ ಮೂಲಕ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ.‌ ಇವರು ಕನ್ನಡಿಗರ ಹೆಮ್ಮೆಯ ನಾಗರಾಜಯ್ಯ. ಇವರ ಸಾಹಿತ್ಯ ಮತ್ತು ಬದುಕಿಗೆ ನಾನು ಸಾಕ್ಷಿ ಆಗಿರುವುದು ನನ್ನ ಜೀವನದ ಸೌಭಾಗ್ಯ ಎಂದರು. ಇವರ ಬದುಕು ಮತ್ತು ಬರಹ […]

HOME STATE

*ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು-ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು, ಅಕ್ಟೋಬರ್ 12: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ತಿಳಿಯುತ್ತದೆ. […]

HOME STATE

ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು.

ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವಿಶ್ವದ ಹಲವು ದೇಶಗಳು ಜನರು ಇಲ್ಲಿ ಬಂಡವಾಳ ಹೂಡಿಕೆ ಮಾಡಿರುವುದು ಮಾತ್ರವಲ್ಲ, ಇಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇಂದು ಬೆಂಗಳೂರಿನ ಜನಸಂಖ್ಯೆ ಸುಮಾರು 1.40 ಕೋಟಿ ಇದೆ. ಇಂತಹ ಬೃಹತ್‌ ನಗರದ ಸಮರ್ಪಕ ಆಡಳಿತ ಕೇವಲ ಒಂದು ಪಾಲಿಕೆಯಿಂದ ಸಾಧ್ಯವಿಲ್ಲ ಎಂಬ ಚರ್ಚೆ ಇತ್ತು. • ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಹೆಚ್ಚು ಕಾರ್ಪೊರೇಶನ್‌ ರಚನೆ ಸಾಧ್ಯತೆಗಳ ಕುರಿತು ವರದಿ ನೀಡಲು ಸಮಿತಿ ರಚಿಸಿದ್ದೆವು. ಸಮಿತಿ ಮಧ್ಯಂತರ ವರದಿಯನ್ನು ಸಹ […]

INETRNATIONAL

ಕಾಮನ್‍ವೆಲ್ತ್ ಸಂಸದೀಯ ಸಮಾವೇಶದಲ್ಲಿ ಸ್ಪೀಕರ್ ಭಾಗಿ*

ಮಂಗಳೂರು, ಅ.9: ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬ್ರಿಟಿμï ಕಾಮನ್‍ವೆಲ್ತ್ ಗಣರಾಜ್ಯವಾಗಿರುವ ಬಾಬ್ರ್ಡೋಸ್ ದೇಶದ ರಾಜಧಾನಿ ಬ್ರಿಜ್ಡಟೌನ್ ನಗರದಲ್ಲಿ ಅಕ್ಟೋಬರ್ 6 ರಿಂದ ಆರಂಭಗೊಂಡಿರುವ “68 ನೇ ಕಾಮನ್‍ವೆಲ್ತ್ ಸಂಸದೀಯ ಸಮಾವೇಶ”ದಲ್ಲಿ ಲೋಕಸಭಾಧ್ಯಕ್ಷ ಒಂ ಬಿರ್ಲಾ, ರಾಜ್ಯಸಭೆಯ ಉಪಸಭಾಪತಿ ಹರಿವಂಶ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮತ್ತಿತರರು ಪಾಲ್ಗೊಂಡಿದ್ದಾರೆ. ಈ ಸಮಾವೇಶದಲ್ಲಿ ಜಗತ್ತಿನ ವಿವಿಧ ದೇಶಗಳ ಪ್ರತಿನಿಧಿಗಳು, ಲೋಕಸಭಾಧ್ಯಕ್ಷರು, ರಾಜ್ಯಸಭೆಯ ಉಪ ಸಭಾಪತಿಗಳು, ವಿವಿಧ ರಾಜ್ಯಗಳ ವಿಧಾನ ಸಭೆ ಅಧ್ಯಕ್ಷರು ಹಾಗೂ […]

DAKSHINA KANNADA

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್‌ರವರು ಭೇಟಿ

ಮಂಗಳೂರು. ಆ10 : ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್‌ರವರು ಭೇಟಿ ನೀಡಿ ದೇವರ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. . ಈ ಸಂದರ್ಭ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ದ.ಕ. ಜಿಲ್ಲಾ ಕಾಂಗ್ರೆಸ್ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದೇವಳ ಅಭಿವೃದ್ಧಿ ಸಮಿತಿ ಸದಸ್ಯ ಜಯರಾಮ್ ಕಾರಂದೂರು, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪ್ರಮುಖರಾದ ಯೋಗೀಶ್ […]

DAKSHINA KANNADA

ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಸಭೆ ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ಸಭಾ ಭವನದಲ್ಲಿ ಸ್ಥಾಪಕ ಅಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು, ಕಾರ್ಯಾಧ್ಯಕ್ಷ ಚಂದ್ರಶೇಖರ ಯು. ವಿಟ್ಲ ಮತ್ತು ಜಿಲ್ಲಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ ನೇತೃತ್ವದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಗೋಪಾಲ ಕೆ. ನೇರಳಕಟ್ಟೆ ಗೌರವ ಅಧ್ಯಕ್ಷರಾಗಿ ಸೋಮಪ್ಪ ನಾಯ್ಕ ಮಲ್ಯ ಮತ್ತು ದೇರಪ್ಪ ರಾಣ, ಸಂಚಾಲಕರಾಗಿ ಗೋವಿಂದ ನಾಯ್ಕ ಕುಂಡಡ್ಕ ಮತ್ತು ಪದ್ಮನಾಭ ಕುಳಾಲು, ಕಾರ್ಯದರ್ಶಿ ಪ್ರತೀಕ್ಷಾ ಬೆದ್ರಕಾಡು, ಜತೆ ಕಾರ್ಯದರ್ಶಿ ಶೋಭಿತ್ […]

DAKSHINA KANNADA HOME

ದೇಶವನ್ನು ದಿವಾಳಿ ಮಾಡಿದ್ದು ನರೇಂದ್ರ ಮೋದಿ ಅವರ ಸರ್ಕಾರವೇ ಹೊರತು‌ ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ

ಮಂಗಳೂರು .ಅ10: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಬಳಿಕ ಅವರು . ಮಾತನಾಡಿದವರು 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು‌ ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಗರು […]

DAKSHINA KANNADA HOME

ರಾಜ್ಯ ಸರಕಾರದಿಂದ ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್. ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು; ಶಾಸಕ ಅಶೋಕ್ ರೈ

ಪುತ್ತೂರು: ಕರ್ನಾಟಕ ಸರಕಾರ ಅನ್ನಭಾಗ್ಯ ಯೋಜನೆಯಡಿ ಇಂದಿರಾ ಕಿಟ್ ನೀಡಲು ಸಂಪುಟ ಸಮಿತಿ ಸಭೆಯಲ್ಲಿ ನಿರ್ಧಾರವಾಗಿದ್ದು ಈ ನಿರ್ಧಾರ ಅತ್ಯಂತ ಪ್ರಯೋಜನಕಾರಿಯಾಗಿದ್ದು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು ನೀಡಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅಭಿಪ್ರಾಯಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ೧೦ ಕೆ ಜಿ ಅಕ್ಕಿಯನ್ನು ನೀಡುತ್ತಿರುವ ಕಾರಣ ಅಕ್ಕಿ ಕಾಳಸಂತೆಯಲ್ಲೂ ಮಾರಾಟವಾಗುತ್ತಿದೆ, ಮತ್ತು ಹೆಚ್ಚು ನೀಡುತ್ತಿರುವ ಕಾರಣ ಇದನ್ನು ಬೇಕಾ ಬಿಟ್ಟಿ ಬಳಕೆಯಾಗುತ್ತಿದೆ ಎಂಬ ವಿಚಾರ ಸರಕಾರದ ಗಮನಕ್ಕೆ ಬಂದಿರುವ ಕಾರಣ ಹತ್ತು […]

DAKSHINA KANNADA HOME

ಬಂಟ್ವಾಳ – ಮೂಡಬಿದ್ರೆ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭಿಸಲು ಮನವಿ

ಬಂಟ್ವಾಳ – ಮೂಡಬಿದ್ರೆ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆ – ಸೌಲಭ್ಯ ಒದಗಿಸಿಕೊಡುವಂತೆ ವಿದ್ಯಾರ್ಥಿ ನಾಯಕ ಕ್ರಿಸ್ಟನ್ ಮಿನೇಜಸ್ ರವರು – MLC ಶ್ರೀ ಐವನ್ ಡಿಸೋಜಾ ಅವರನ್ನು, ಭೇಟಿಯಾಗಿ ಮನವಿ ಸಲ್ಲಿಸಿದರು ಬಂಟ್ವಾಳ – ಮೂಡಬಿದ್ರೆ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆಯಿಲ್ಲದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಉಂಟಾದ ಸಮಸ್ಯೆಯ ವಿಷಯದ ಕುರಿತು ಪ್ರಸ್ತಾಪಿಸಿದರು. ಸರ್ಕಾರಿ ಬಸ್‌ ಸೇವೆ ಇಲ್ಲದೇ ಇರುವ ಕಾರಣ ವಿದ್ಯಾರ್ಥಿಗಳು ಖಾಸಗಿ ಬಸ್‌ಗಳ ಉಪಯೋಗ ಮಾಡಬೇಕಾದ ಪರಿಸ್ಥಿತಿ ಇದೆ. ಇದರಿಂದ ಪ್ರಯಾಣದ ವೆಚ್ಚ […]