Month: October 2025

DAKSHINA KANNADA HOME

ಸ್ನೇಹಾಲಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ

ಮಂಗಳೂರು ಅಕ್ಟೋಬರ್ 7: ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್(ರಿ ), ಮಂಜೇಶ್ವರ, ಸ್ನೇಹಾಲಯ ಸಭಾಂಗಣದಲ್ಲಿ “ಸೇವೆಗಳಿಗೆ ಪ್ರವೇಶ: ವಿಪತ್ತುಗಳು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಮಾನಸಿಕ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳ ವಿಶೇಷ ಭಾಗವಹಿಸುವಿಕೆಯೊಂದಿಗೆ ವಿಶ್ವ ಮಾನಸಿಕ ಆರೋಗ್ಯ ದಿನ 2025 ಅನ್ನು ಆಚರಿಸಿತು. ಸಾಂಪ್ರದಾಯಿಕ ಅಲಂಕಾರ ಮತ್ತು ಆಕರ್ಷಕ ಪ್ರವೇಶ ದ್ವಾರದೊಂದಿಗೆ ಕಲಾತ್ಮಕವಾಗಿ ಅಲಂಕರಿಸಿದ ವಾತಾವರಣದಲ್ಲಿ ಈ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿತ್ತು. ಆಹ್ವಾನಿತ ಗಣ್ಯರು, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಸ್ವಯಂಸೇವಕರ ಉಪಸ್ಥಿತಿಯಿಂದ ಕಾರ್ಯಕ್ರಮವು ಜಾಗೃತಿ […]

COMMUNITY NEWS STATE

ಮೈಸೂರು ಧರ್ಮಪ್ರಾಂತ್ಯದ ಹೊಸ ಧರ್ಮಾಧ್ಯಕ್ಷರಾಗಿ ಅತಿ. ಶ್ರೇ. ಡಾ. ಫ್ರಾನ್ಸಿಸ್ ಸೆರಾವೊ ಎಸ್‌.ಜೆ. ಪದಗ್ರಹಣ

ಮೈಸೂರು.ಅ 08: ಮೈಸೂರು ಧರ್ಮಪ್ರಾಂತ್ಯದ ಹೊಸ ಧರ್ಮಾಧ್ಯಕ್ಷರಾಗಿ ಅತಿ. ಶ್ರೇ. ಡಾ. ಫ್ರಾನ್ಸಿಸ್ ಸೆರಾವೊ ಎಸ್‌.ಜೆ ಅವರನ್ನು ಮೈಸೂರಿನ ಐತಿಹಾಸಿಕ ಸಂತ ಜೋಸೆಫ್ ಕ್ಯಾಥೆಡ್ರಲ್ (ಸೇಂಟ್ ಫಿಲೋಮಿನಾ ದೇವಾಲಯ)**ದಲ್ಲಿ ಪ್ರತಿಷ್ಠಾಪಿಸಲಾಯಿತು. ಈ ಧಾರ್ಮಿಕ ವಿಧಿಯನ್ನು ಅತಿ. ಶ್ರೇ. ಡಾ. ಪೀಟರ್ ಮಚಾದೊ, ಬೆಂಗಳೂರು ಆರ್ಚ್‌ಬಿಷಪ್ ಅವರವರು ನೆರವೇರಿಸಿದರು. ಪೋಪ್ ಲಿಯೋ XIV ಅವರು ಬಿಷಪ್ ಫ್ರಾನ್ಸಿಸ್ ಸೆರಾವೊ ಅವರನ್ನು ಮೈಸೂರು ಧರ್ಮಪ್ರಾಂತ್ಯದ ಹೊಸ ಧರ್ಮಾಧ್ಯಕ್ಷರಾಗಿ ನೇಮಕ ಮಾಡಿದ್ದರು. ಸೆರಾವ್ ಅವರು ಇದರ ಮೊದಲು ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ […]

DAKSHINA KANNADA HOME

ಅಶೋಕ ಜನಮನ-2025′ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ 1 ಲಕ್ಷ ಮಂದಿಗೆ ವಸ್ತ್ರವಿತರಣೆ; ಅಶೋಕ್ ಕುಮಾ‌ರ್ ರೈ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರು ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ಅ.20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ‘ಅಶೋಕ ಜನಮನ-2025’ ವಸ್ತ್ರವಿತರಣಾ ಕಾರ್ಯಕ್ರಮದ ಚಪ್ಪರ ಮುಹೂರ್ತ ಅ.5ರಂದು ನಡೆಯಿತು. ಚಪ್ಪರ ಮುಹೂರ್ತ ನೆರವೇರಿಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಾಸಕ ಅಶೋಕ್ ಕುಮಾ‌ರ್ ರೈಯವರು, ಅಶೋಕ ಜನಮನ-2025 ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ವಸ್ತ್ರ ವಿತರಣೆ ಹಾಗೂ ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, […]

DAKSHINA KANNADA HOME

*ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯುತ್ತದೆ. ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ*

ಬೆಂಗಳೂರು ಅ 8: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು […]

DAKSHINA KANNADA HOME

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ :- ಶಾಸಕ ಕಾಮತ್

ಮಂಗಳೂರು ಅ 07: ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ ತಾರೀಕಿನಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ […]

HOME STATE

*ಮನೆ ಮನೆ ಸಮೀಕ್ಷೆ: ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ*

ಬೆಂಗಳೂರು ಅ 07 : ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.ವಿಧಾನ‌ ಪರಿಷತ್ ಸದಸ್ಯ […]

DAKSHINA KANNADA HOME

ಮಗ ಆಸ್ಪತ್ರೆಯಲ್ಲಿ … ಶಾಸಕರು ಆಪೀಸ್‌ನಲ್ಲಿ… ನೋವಿನ ನಡುವೆ ಅಹವಾಲು ಸ್ವೀಕರಿಸಿದ ಅಶೋಕ್ ರೈ

ಪುತ್ತೂರು: ಹೌದು… ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ ಇವರು ತಮ್ಮ ಬಳಿ ಬಂದ ಪ್ರತೀಯೊಬ್ಬರಲ್ಲೂ ಮತನಾಡಿಸಿದರು. ಬೆಳಿಗ್ಗೆ ೧೨.೦೦ ಯಿಂದ ರಾತ್ರಿ ೭.೧೫ ರತನಕ ಕಚೇರಿಯಲ್ಲೇ ಇದ್ದರು….. ಆದರೆ ಶಾಸಕ ಅಶೋಕ್ ರೈ ಅವರು ಭಾರವಾದ ನೋವನ್ನು ತನ್ನ ಮನಸ್ಸಿನಲ್ಲಿ ಅದುಮಿಟ್ಟು ಇಷ್ಟೆಲ್ಲಾ ಕೆಲಸವನ್ನು ಮಾಡುತ್ತಿದ್ದರು ಎಂದು ಅಲ್ಲಿ […]

DAKSHINA KANNADA HOME

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯ ಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು  ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ 

ಬೆಂಗಳೂರು: ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯ ಮೂರ್ತಿಗಳಾಗಿರುವ ಬಿ.ಎಸ್.ಗವಾಯಿ.ಎಸ್.ಗವಾಯಿ ಅವರಿಗೆ .ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ . ಆಗ್ರಹಿಸಿದ್ದಾರೆ ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಎಸ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ […]

DAKSHINA KANNADA HOME

ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ ಮಂಜೂರು ಮಾಡಿ: ದಲಿತ ಸಂಘಟನೆಯಿಂದ ಶಾಸಕ ಅಶೋಕ್ ರೈ ಗೆ ಮನವಿ

ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು. ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ ಯಾವ ಜನಪ್ರತಿನಿಧಿಗಳೂ ನಮ್ಮ ಬೆಂಬಲಕ್ಕೆ ಬಂದಿಲ್ಲ. ಈ ಬಾರಿ ನಿಮ್ಮ ಮೂಲಕ ನಾವು ಮನವಿ […]

DAKSHINA KANNADA HOME

*ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ 24.70 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ*

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್‌ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರ PM-ABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ […]