Month: October 2025

DAKSHINA KANNADA HOME

ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ: ಸಚಿವ ಜಾರ್ಜ್

ಮಂಗಳೂರು, ಅ.5: ಬದುಕಿನಲ್ಲಿ ಏನಾದರೊಂದು ಸಾಧನೆ ಮಾಡಲು ಅನೇಕರು ಪ್ರಯತ್ನಿಸುತ್ತಾರೆ. ಆದರೆ ಅದು ಎಲ್ಲರಿಗೂ ಕೈಗೂಡುವುದಿಲ್ಲ. ಯಾರ ಪ್ರೋತ್ಸಾಹವೂ ಇಲ್ಲದೆ ಸ್ವತಃ ಶಕ್ತಿಮೀರಿ ಪ್ರಯತ್ನಿಸಿ ಸಾಧಿಸುವವರೂ ಇದ್ದಾರೆ. ಅಂತಹವರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ರಚನಾ) ವತಿಯಿಂದ ನಗರದ ಮಿಲಾಗ್ರಿಸ್ ಸಭಾ ಭವನದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಕೆಥೊಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿಯನ್ನು […]

DAKSHINA KANNADA HOME

*ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ*

ಮಂಗಳೂರು: ಅಕ್ಟೋಬರ್ 05 : ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆಯನ್ನು ವಂದನೀಯ ಫಾ। ಫಾವುಸ್ಟಿನ್ ಲೋಬೋ ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ ನಿರ್ದೇಶಕರು ಮಂಗಳೂರಿನ ಬಿಷಪ್ಸ್ ಹೌಸ್‌ನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ವಂ| ಫಾ| ಫಾವುಸ್ಟಿನ್ ಲೋಬೋ SSVP ಸಂಸ್ಥೆಯ *ಶಿಕಪ್* ಯೋಜನೆಯ ಆಶಯಗಳನ್ನು ತೋರಿಸುವ ಡಾಕ್ಯುಮೆಂಟರಿ ಪ್ರೋಮೋವನ್ನು ಬಿಡುಗಡೆ ಮಾಡಿದರು. ತಮ್ಮ ಭಾಷಣದಲ್ಲಿ ಫಾ ಲೋಬೋ, ಹಿಂದುಳಿದ ಹಿನ್ನೆಲೆಯ ಮಕ್ಕಳ […]

DAKSHINA KANNADA HOME

ಅಂಚೆ ಚೀಟಿ ಚಾರಿತ್ರಿಕ ಮಹತ್ವದ ದಾಖಲೆ-ಸುಧಾಕರ ಮಲ್ಯ

ಮಂಗಳೂರು. ಅ.06 : ಭಾರತೀಯ ಅಂಚೆ ಇಲಾಖೆ ಅಂಚೆ ಚೀಟಿ ಮೂಲಕ ಚಾರಿತ್ರಿಕ ಮಹತ್ವವನ್ನು ದಾಖಲಿಸಿ ದೇಶ ವಿದೇಶಗಳಲ್ಲಿ ಪಸರಿಸಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಸುಧಾಕರ್ ಮಲ್ಯ ತಿಳಿಸಿದ್ದಾರೆ. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಸವಿ ನೆನಪಿಗಾಗಿ ಪತ್ರಿಕಾ ಭವನ ದಲ್ಲಿ ಹಮ್ಮಿಕೊಂಡ ಅಂಚೆ ಚೀಟಿ ಬಿಡುಗಡೆ ಮಾಡಿ ಮಾತನಾ ಡುತ್ತಿದ್ದರು. ಅಂಚೆ ಇಲಾಖೆ ವಿವಿಧ ಸೌಲಭ್ಯಗಳನ್ನು ಸಾರ್ವಜನಿಕರಿಗೆ ನೀಡುವ […]

HOME NATIONAL

*ಯಕ್ಷಧ್ರುವ ಪಟ್ಲ ಫೌಂಡೇಶನ್ ದೆಹಲಿ ಘಟಕದ ದಶಮ ಸಂಭ್ರಮ*

ದೆಹಲಿ: ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನೆರವೇರಿತು. ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕಾರ್ಯ ಯೋಜನೆಗಳನ್ನು ಮತ್ತು ಪಟ್ಲ ಸತೀಶ್ ಶೆಟ್ಟಿಯವರಿಗೆ ಕಲಾವಿದರ ಮೇಲಿರುವ ಕಾಳಜಿಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಪಟ್ಲ ಟ್ರಸ್ಟ್ ಫೌಂಡೇಶನ್ ಗೆ ಪೂರ್ಣ ಪ್ರಮಾಣದ ಸಹಕಾರದ ಭರವಸೆಯನ್ನು ನೀಡಿದರು. ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ಅಧ್ಯಕ್ಷರಾದ ವಸಂತ […]

DAKSHINA KANNADA HOME

ಮೈಕಲ್ ಡಿ’ಸೋಜಾ-ಕುಟುಂಬದಿಂದ ವಿದ್ಯಾರ್ಥಿಗಳಿಗೆ ಬರೋಬ್ಬರಿ 4.42 ಕೋ.ರೂ. ವಿತರಣೆ

ಮಂಗಳೂರು: ಅ 06: ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನಾ ಅವರು , ಎಜುಕೇರ್ ಎಂಡೋಮೆಂಟ್ ಫಂಡ್‌ನ ದೃಷ್ಟಿಕೋನ, ಉದ್ದೇಶ ಮತ್ತು ಮಹತ್ವದ ಸಾಧನೆಗಳನ್ನು ವಿವರಿಸಿದರು. ಮೈಕೆಲ್ ಡಿ’ಸೋಜಾ ಮತ್ತು ಕುಟುಂಬದವರಿಗೆ ಶಿಕ್ಷಣದ […]

HOME UDUPI

*ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎಮ್ ಉದ್ಘಾಟನೆ*

ಉಡುಪಿ ಅ 05: ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು ರೆ.ಫಾ.ಡೆನಿಸ್ ಡೆಸಾ ಅವರು ಎಟಿಎಂ ಅನ್ನು ಉದ್ಘಾಟಿಸಿದರು. ಕಲ್ಯಾಣಪುರ-ಸಂತೆಕಟ್ಟೆ […]

DAKSHINA KANNADA HOME

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ.ʼಕಾವ್ಯಾಂ ವ್ಹಾಳೊ-7ʼ ಕೊಂಕಣಿ ಕವಿಗೋಷ್ಟಿ

ಮಂಗಳೂರು: ಅಕ್ಟೋಬರ್ 04 :ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ʼಕಾವ್ಯಾಂ ವ್ಹಾಳೊ-7ʼ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಆಯೋಜಿಸಲಾಗಿತ್ತು, ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, ಕವಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅಕಾಡೆಮಿಯು ಪ್ರತಿ ತಿಂಗಳು ಕವಿಗೋಷ್ಟಿಯನ್ನು ಹಮ್ಮಿಕೊಳ್ಳುತ್ತದೆ. ಇದು ಎಲ್ಲಾ ಯುವ ಕವಿಗಳಿಗೆ ತಮ್ಮ ಕವಿತೆಗಳನ್ನು ಪ್ರಸ್ತುತಪಡಿಸಲು ಅವಕಾಶವಾಗಲಿʼ ಎಂದೇಳಿದರು. ಖ್ಯಾತ ಹಿರಿಯ ಸಂಗೀತಗಾರರಾದ ಶ್ರೀ ಮುರಳೀಧರ್ ಕಾಮತ್ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇವರು ಮಾತಾನಾಡಿ, ತುಂಬಾ ಜನರಿಗೆ […]

DAKSHINA KANNADA HOME

*ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ*

ಮಂಗಳೂರು ಅ 04: ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 04 ರಂದು ನೀಡಿದರು. ಗುರುದೀಕ್ಷೆ ಪಡೆದ ಉಪಯಾಜಕರು: ವಂ. ನಿಶಾಂತ್ ನೊರೊನ್ಹಾ, ವಂ. ಶರೂನ್ ಡಿ’ಸೋಜ, ವಂ. ಪ್ರಥ್ವಿ ರೋಡ್ರೀಗಸ್, ಹಾಗೂ ವಂ. ಪ್ರೀತೇಶ್ ಮಿಸ್ಕಿತ್. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ಪ್ರವಾದಿಯಾಗಿ ಕ್ರಿಸ್ತನನ್ನು ಎಲ್ಲೆಡೆಯಲ್ಲೂ ಪಸರಿಸುವ ಕಾರ್ಯದಲ್ಲಿ ತೊಡಗಬೇಕೆಂದು ಕರೆ […]

HOME STATE

*ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಳಗಾವಿ, ಅಕ್ಟೋಬರ್ 4: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು […]

DAKSHINA KANNADA HOME

ಜೆಪ್ಪು ಮಹಾಕಾಳಿಪಡ್ಡು ರೈಲ್ವೆ ಅಂಡ‌ರ್ ಬ್ರಿಡ್ಜ್ ವಿಳಂಬ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು, : ಜೆಪ್ಪು ಮಹಾಕಾಳಿಪಡ್ಡು ರೈಲ್ವೆ ಅಂಡರ್ ಬಿಡ್‌ ನ್ನು 30 ದಿನದೊಳಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸದಿದ್ದರೆ ಸಾರ್ವಜನಿಕರಿಂದಲೇ ಉದ್ಘಾಟನೆ ಮಾಡಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಎಚ್ಚರಿಕೆ ನೀಡಿದ್ದಾರೆ. ಜೆಪ್ಪು ಮಹಾಕಾಳಿಪಡ್ಡು ಅಂಡರ್ ಬ್ರಿಡ್ಜ್ ಕಾಮಗಾರಿ ವಿಳಂಬವಾಗಿರುವುದನ್ನು ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಜೆಪ್ಪ ಮಹಾಕಾಳಿಪಡ್ಡು ರೈಲ್ವೆ ಅಂಡರ್‌ಬ್ರಿಡ್ಜ್ ಕಾಮಗಾರಿ ಯನ್ನು ಅವೈಜ್ಞಾನಿಕವಾಗಿ ನಡೆಸಿ ನಾಲ್ಕು ವರ್ಷಗಳಿಂದ ಸಾರ್ವ ಜನಿಕರನ್ನು ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದರು. ನಾಲ್ಕು ವರ್ಷಗಳ […]