Month: November 2025

DAKSHINA KANNADA HOME

“ಮಂಗಳೂರಿನ ಕೊಣಾಜೆ ಮಂಗಳ ಗಂಗೋತ್ರಿ ಕ್ಯಾಂಪಸ್‌ ಡಿ 3ರಂದು “ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ”

ಮಂಗಳೂರು ವಿಶ್ವವಿದ್ಯಾಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಮತ್ತು ವರ್ಕಳದ ಶಿವಗಿರಿ ಮಠ ಸಹಭಾಗಿತ್ವದಲ್ಲಿ ಡಿ 3ರಂದು ಮಂಗಳೂರಿನ ಕೊಣಾಜೆ ಯಲ್ಲಿರುವ ವಿಶ್ವವಿದ್ಯಾಲಯದ ಮಂಗಳ ಗಂಗೋತ್ರಿ ಕ್ಯಾಂಪಸ್‌ ಆವರಣದಲ್ಲಿ “ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ”, ಗುರುವಿನ ಮಹಾಸಮಾಧಿ ಶತಾಬ್ಧಿ ಮತ್ತು ಸರ್ವಮತ ಸಮ್ಮೇಳನ ಶತಮಾನೋತ್ಸವ ಆಯೋಜಿಸಲಾಗಿದೆ. ನಾರಾಯಣ ಗುರುಗಳು ಸಾರಿದ ಜೀವನ ಮೌಲ್ಯಗಳನ್ನು ಮತ್ತೊಮ್ಮೆ ನೆನಪಿಸಿ, ಜನಮಾನಸಕ್ಕೆ ತಲುಪಿಸುವ ಪ್ರಯತ್ನದ ಭಾಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ವ […]

DAKSHINA KANNADA HOME LATEST NEWS

ನಶಾಮುಕ್ತ – ದ್ವೇಷಮುಕ್ತ ಸಮಾಜ ನಿರ್ಮಿಸೋಣ: ಯು.ಟಿ. ಖಾದರ್

ಮಂಗಳೂರು, ನವೆಂಬರ್ 29 : ನಮ್ಮ ದೇಶವನ್ನು, ರಾಜ್ಯವನ್ನು ನಶಾಮುಕ್ತ ಹಾಗೂ ದ್ವೇಷಮುಕ್ತಗೊಳಿಸುವ ಮೂಲಕ ಆಹ್ಲಾದಕರ ಮತ್ತು ಆರೋಗ್ಯಕರ ವಾತಾವರಣವನ್ನು ನಿರ್ಮಿಸಬೇಕಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ RGUHS ಕಾಲೇಜುಗಳ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಸಂಯುಕ್ತವಾಗಿ ಆಯೋಜಿಸಿದ್ದ ನಶಾಮುಕ್ತ ಕ್ಯಾಂಪಸ್ ಮತ್ತು ಅಂಗಾಂಗ ದಾನ ಪ್ರತಿಜ್ಞಾ ಅಭಿಯಾನದ ವಾಕ್‌ಥಾನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶ ಮತ್ತು ರಾಜ್ಯ […]

DAKSHINA KANNADA HOME LATEST NEWS

*ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಮೋ ಬ್ಯಾಡ್ಮಿಂಟನ್‌ ಟೂರ್ನಿಗೆ ಚಾಲನೆ*

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಗ್ಯಪೂರ್ಣ ವಿಕಸಿತ ಭಾರತದ ಪರಿಕಲ್ಪನೆಯ ಸಂಸತ್‌ ಕ್ರೀಡೋತ್ಸವದ ಭಾಗವಾಗಿ ಇಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ನಮೋ ಬ್ಯಾಡ್ಮಿಟನ್‌ ಟೂರ್ನಮೆಂಟ್‌ನ್ನು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚಿಂತನೆಯ ವಿಕಸಿತ ಭಾರತ ನಿರ್ಮಾಣವಾಗಬೇಕಾದರೆ ಮೊದಲು ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಿದೆ. ಅಂಥಹ ಆರೋಗ್ಯವಂಥ ಭಾರತ ನಿರ್ಮಾಣದ ಪ್ರಯತ್ನವೇ ಈ ಸಂಸತ್‌ ಕ್ರೀಡೋತ್ಸವದ ಪ್ರಯುಕ್ತ ಆಯೋಜಿಸಿರುವ ಈ ನಮೋ ಕ್ರೀಡಾ […]

DAKSHINA KANNADA HOME

ರೋಹನ್ ಕಾರ್ಪೊರೇಶನ್ ವತಿಯಿಂದ ಆರೋಗ್ಯ ಇಲಾಖೆಗೆ 100 ಟಾರ್ಚ್‌ಗಳ ವಿತರಣೆ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್, ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್‌ಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಸಿಂತ ಡಿಸೋಜಾ ಉಪಸ್ಥಿತರಿದ್ದು, ರೋಹನ್ ಕಾರ್ಪೊರೇಶನ್‌ನ ಸೇಲ್ಸ್ ಮ್ಯಾನೇಜರ್ ಶ್ರೀ ಸವಿಲ್ ಅವರು ಆರೋಗ್ಯ ಇಲಾಖೆಗೆ […]

DAKSHINA KANNADA HOME NATIONAL UDUPI

*ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ  ಆಗಮನ*

ಮಂಗಳೂರು, ನ.28: ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು […]

DAKSHINA KANNADA HOME

*ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ ಭಾರತ ವಿಶ್ವಗುರು ಆಗಲಿದೆ. ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ *

ಮಂಗಳೂರು: ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ ಭಾರತ ವಿಶ್ವಗುರು ಆಗಲಿದೆ. ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಸಂವಿಧಾನ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಮತ್ತು ಮಾಹಿತಿ ಹಕ್ಕು ಘಟಕದ ವತಿಯಿಂದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಸಂವಿಧಾನ ಪೀಠಿಕೆ ಬೋಧಿಸಿ ಬಳಿಕ ಅವರು ಮಾತನಾಡುತ್ತಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನ […]

HOME LATEST NEWS STATE

*ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ*

ಬೆಂಗಳೂರು. ನ.27: ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ 60ನೇ ಘಟಿಕೋತ್ಸವದ ಅಂಗವಾಗಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ನೀಡಲಾಗಿರುವ ಡಾಕ್ಟರ್ ಆಫ್ ಲೆಟರ್ಸ್ (ಡಿ.ಲಿಟ್.) ಗೌರವ ಪದವಿಯನ್ನು ರಾಜಭವನದ ಬಾಂಕ್ವೆಟ್ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು. ನಂತರ ಮಾತನಾಡಿದ ಗೌರವಾನ್ವಿತ ರಾಜ್ಯಪಾಲರು “ಡಾಕ್ಟರ್ ಆಫ್ ಲೆಟರ್ಸ್ (ಡಿ.ಲಿಟ್.) ಎಂಬ ಪ್ರತಿಷ್ಠಿತ ಮತ್ತು ಗೌರವಾನ್ವಿತ ಬಿರುದನ್ನು ಪಡೆದಿರುವುದು ನಿಮ್ಮ ವಿದ್ವತ್ತು ಮತ್ತು ಸಮಾಜ, ರಾಜ್ಯ ಮತ್ತು ರಾಷ್ಟ್ರಕ್ಕೆ […]

COMMUNITY NEWS DAKSHINA KANNADA HOME

ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನವೆಂಬರ್ 28 ಶುಕ್ರವಾರ ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಬಿಡುಗಡೆ

ಮಂಗಳೂರು: ನವೆಂಬರ್.27 : ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ತಯಾರಾದ ಬಹುನಿರೀಕ್ಷಿತ ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನವೆಂಬರ್ 28 ಶುಕ್ರವಾರದಂದು ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ತೆರೆಕಾಣಲಿದೆ. ಚಿತ್ರವು ಈಗಾಗಲೇ ಹಲವು ಪ್ರೀಮಿಯರ್ ಪ್ರದರ್ಶನಗಳನ್ನು ಯಶಸ್ವಿಯಾಗಿ ಮುಗಿಸಿದ್ದು ಪ್ರೇಕ್ಷಕರಿಂದ ಹಾಗೂ ಸಿನೆಮಾ ವಿಶ್ಲೇಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದೆ. ಯುವ ಸಾಹಿತಿ, ಪತ್ರಕರ್ತ ಸ್ಟ್ಯಾನಿ ಬೇಳ ಬಾಪಾಚೆ ಪುತಾಚೆ ನಾಂವಿಂ ಚಿತ್ರಕ್ಕೆ ಕಥೆ , ಸಂಭಾಶಣೆ ಬರೆದು, ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಂಜಯ್ ರಾಡ್ರಿಗಸ್ ಹಿನ್ನಲೆ […]

DAKSHINA KANNADA HOME STATE UDUPI

*ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿಗೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಸಿದ್ಧತೆಗಳ ಪರಿಶೀಲನೆ ಹಿರಿಯ ಅಧಿಕಾರಿಗಳ ಸಭೆ*

ಮಂಗಳೂರು,ನ.25:-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಯಿತು. ಹಿರಿಯ ಎಸ್.ಪಿ.ಜಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಪೋಲಿಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ವಿಮಾನ ನಿಲ್ದಾಣದ ಅಧಿಕಾರಿಗಳು, ಸಿ.ಐ.ಎಸ್.ಎಫ್, ಪೋಲಿಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ನವೆಂಬರ್ 28 ರಂದು […]

DAKSHINA KANNADA HOME INETRNATIONAL

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, “ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ನಮ್ಮ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. […]