Month: December 2025

DAKSHINA KANNADA HOME LATEST NEWS

*ಮನುಷ್ಯನನ್ನು ದೇವರೆಡೆ ಕೊಂಡೊಯ್ಯುವ ಹಬ್ಬ ಕ್ರಿಸ್ಮಸ್: ಅ.ವಂ. ಡಾ. ಜೆರಾಲ್ಡ್ ಐಸಕ್ ಲೋಬೊ*

ಮಂಗಳೂರು , ಡಿ. 22: ಕ್ರಿಸ್ಮಸ್ ಪ್ರೀತಿ, ಶಾಂತಿ, ಭರವಸೆಯ ಹಬ್ಬವಾಗಿದೆ. ನಮ್ಮ ರಕ್ಷಣೆಯ ಮೂಲ ತತ್ವವಾಗಿದೆ. ದೇವರು ಮನುಷ್ಯರಾಗಿ ಮನುಷ್ಯರನ್ನು ದೇವರೆಡೆಗೆ ಕೊಂಡೊಯ್ಯುವ ಹಬ್ಬವಾಗಿದ್ದು, ಸಮಾಜದಲ್ಲಿ ಶಾಂತಿ ಸೌಹಾರ್ದತೆಯಿಂದ ಬಾಳಬೇಕಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅ|ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಸಂತ ಅಂತೋನಿ ಆಶ್ರಮದಲ್ಲಿ ಸೋಮವಾರ ನಡೆದ ಸೌಹಾರ್ದ ಕ್ರಿಸ್ಮಸ್ ಸಂಭ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶ್ರೀ ರಾಮಕೃಷ್ಣ ಮಠದ ಶ್ರೀ ಯೋಗೇಶಾನಂದ ಸ್ವಾಮೀಜಿ ಮಾತನಾಡಿ, ಧರ್ಮವನ್ನು ಎಲ್ಲರೂ ಸೇರಿ ಆಚರಿಸಿದರೆ ಪ್ರೀತಿಯ […]

DAKSHINA KANNADA HOME STATE

*ಬೆಳೆವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ: ಸದನದಲ್ಲಿ ಶಾಸಕ ಅಶೋಕ್ ರೈ*

ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಇಲ್ಲವಾದರೆ ಕರಾವಳಿ ಜಿಲ್ಲೆಯ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಮತ್ತು ಈ ವಿಚಾರದಲ್ಲಿ ಕೃಷಿಕರು ಆತಂಕದಲ್ಲಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಅಡಿಕೆ ಕೃಷಿಕರ ಪರವಾಗಿ ಧ್ವನಿ ಎತ್ತಿದ್ದಾರೆ. ಶುಕ್ರವಾರ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕರು ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತದಲ್ಲಿ […]

COMMUNITY NEWS DAKSHINA KANNADA HOME

*ರೊಜಾರಿಯೊ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಕ್ರಿಸ್ಮಸ್ ಸೌಹಾರ್ದ ಸಹಮಿಲನ*

ಮಂಗಳೂರು : ರೊಜಾರಿಯೊ ಕ್ಯಾಥೆಡ್ರಲ್ ಚರ್ಚ್ ಬೋಳಾರ ವತಿಯಿಂದ ಕ್ರಿಸ್ಮಸ್ ಹಬ್ಬದ ಅಂಗವಾಗಿ ಕ್ರಿಸ್ಮಸ್ ಸೌಹಾರ್ದ ಸಹಮಿಲನವನ್ನು ಆತ್ಮೀಯತೆ ಮತ್ತು ಸೌಹಾರ್ದತೆಯೊಂದಿಗೆ ಆಯೋಜಿಸಲಾಯಿತು .ಕಾರ್ಯಕ್ರಮವನ್ನು ರೊಜಾರಿಯೊ ಕ್ಯಾಥೆಡ್ರಲ್ ನ ಧರ್ಮಗುರುಗಳಾದ ಫಾ. ವಲೇರಿಯನ್ ಡಿಸೋಜಾ . ಅತಿಥಿಗಳಾದ ಕಾಂತಿ ಚರ್ಚ್ ನ ಪಾಸ್ಟಾರ್ ಗೇಬ್ರಿಯಲ್ ರೋನಿತ್, ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿ ಮಹೇಶ್ ರಾವ್ ಅವರೊಂದಿಗೆ ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಮುಖ್ಯ ಉದ್ದೇಶವು ಎಲ್ಲಾ ಧರ್ಮಗಳ ನಡುವೆ ಸಹಬಾಳ್ವೆ, ಪ್ರೀತಿ ಮತ್ತು ಶಾಂತಿಯ ಸಂದೇಶವನ್ನು […]

DAKSHINA KANNADA HOME STATE

*ರಾಜ್ಯದ ಜೈಲುಗಳು ಉಗ್ರರ ಸ್ವರ್ಗವಾಗಿವೆ – ಗೃಹ ಸಚಿವರ ಮೌನ ಅತ್ಯಂತ ಅಪಾಯಕಾರಿ: ಶಾಸಕ ಕಿಶೋರ್ ಕುಮಾರ್ ಆಕ್ರೋಶ*

ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಸುವರ್ಣ ಸೌಧದಲ್ಲಿ ನಡೆದ ಅಧಿವೇಶನದಲ್ಲಿ ಗೃಹ ಸಚಿವರಿಗೆ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. “ಜೈಲಿನೊಳಗೆ ಇರುವ ಕುಖ್ಯಾತ ಉಗ್ರರು ಮತ್ತು ರೌಡಿಗಳು ರಾಜಾರೋಷವಾಗಿ ಮೊಬೈಲ್‌ಗಳನ್ನು ಬಳಕೆ ಮಾಡುತ್ತಿದ್ದಾರೆ. […]

HOME LATEST NEWS STATE

*BPL ಕಾರ್ಡ್‌ ಪಡೆಯಲು ಇದ್ದ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ.ಸಚಿವ ಕೆ.ಹೆಚ್. ಮುನಿಯಪ್ಪ *

ಬೆಳಗಾವಿ, ಡಿಸೆಂಬರ್ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ […]

HOME STATE

*ಹಳೆ ವಾಹನ ಹೊಂದಿರುವವರಿಗೆ ಶಾಕ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ *

ಬೆಂಗಳೂರು, ಡಿಸೆಂಬರ್ 18: ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದರೂ, ಹಳೆಯ ವಾಹನಗಳು ಮಾತ್ರ ಇನ್ನೂ ಸಂಚಾರ ನಿಲ್ಲಿಸಿಲ್ಲ. ಇವುಗಳಿಂದಲೇ ವಾಯುಮಾಲಿನ್ಯ ಹೆಚ್ಚಳವಾಗ್ತಿದೆ ಎಂಬ ಆರೋಪದ ನಡುವೆಯೂ ಕೋಟ್ಯಾಂತರ ವಾಹನಗಳು ರಸ್ತೆಯಲ್ಲಿ ಓಡಾಡುತ್ತಲೇ ಇವೆ. ಇಂತಹ ವಾಹನಗಳ ಮಾಲಿಕರಿಗೆ ರಾಜ್ಯ ಸಾರಿಗೆ ಸಚಿವರು ಶಾಕ್ ಕೊಟ್ಟಿದ್ದಾರೆ. 15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ನಲ್ಲಿ ತಿಳಿಸಿದ್ದಾರೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. ಕೇಂದ್ರ […]

DAKSHINA KANNADA HOME

*ಪುರುಷರಕಟ್ಟೆ : ಶಾಸಕ ಅಶೋಕ್ ರೈ ಬ್ಯಾನರ್ ಗೆ ಹಾನಿ ದೈವಕ್ಕೂ ಹರಕೆ. ಪೊಲೀಸರಿಗೆ ದೂರು*

ಪುತ್ತೂರು:ಪುರುಷರ ಕಟ್ಟೆ- ಶಿಬರ – ನಡುವಾಲ್ ರಸ್ತೆ ಅಭಿವೃದ್ಧಿಯ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ಹರಿದು ಹಾಕಿದ ಘಟನೆ ನಡೆದಿದೆ.‌ಘಟನೆಯ ಬಗ್ಗೆ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಕೈಂದಾಡಿಯವರು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗ್ರಾಮದ ನಡುವಾಲ್ ಎಂಬಲ್ಲಿಗೆ ರಸ್ತೆ ಸಂಪರ್ಕ ಇರಲಿಲ್ಲ. ಇಲ್ಲಿಗೆ ಭೇಟಿ ನೀಡಿದ್ದ ಶಾಸಕ ಅಶೋಕ್ ರೈ ಅವರು ಸ್ಥಳೀಯರ ಜೊತೆ ಮಾತುಕತೆ ನಡೆಸಿ ರಸ್ತೆ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿದ್ದರು. […]

DAKSHINA KANNADA

*ಮಕ್ಕಳು ದಿನನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ನಿವೃತ್ತ ಶಿಕ್ಷಕಿ ನಲಿನಾಕ್ಷಿ ಉದಯರಾಜ್*

ಮಂಗಳೂರು. ಡಿಸೆಂಬರ್ 17 : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಶ್ರೀರಾಮಾ ಶ್ರಮ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕೊಂಚಾಡಿ ಜಂಟಿ ಆಶ್ರಯದಲ್ಲಿ 115ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಬಾಲಚಂದ್ರ ಕೆ ವಹಿಸಿದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ನಿವೃತ್ತ ಶಿಕ್ಷಕಿ ನಲಿನಾಕ್ಷಿ ಉದಯರಾಜ್ ಮಾತನಾಡುತ್ತಾ ಮಕ್ಕಳು ದಿನನಿತ್ಯ ದಿನಚರಿ ಡೈರಿ ಬರೆಯುವ ಹವ್ಯಾಸವನ್ನು ಹೊಂದಿರಬೇಕು .ಮೊದಲು ತಮ್ಮನ್ನು ತಾನು ಪ್ರೀತಿಸಬೇಕು .ಮುಂದೆ ಉತ್ತಮ ಪ್ರಜೆಯಾಗಿ ಬಾಳಬೇಕು […]

DAKSHINA KANNADA HOME

*ವಸತಿ ಪ್ರದೇಶಗಳ ಆನೆ ದಾಳಿ ಕಾಡಿಗೆ ಮರಳಿಸಲು ಮತ್ತು ಜೀವಹಾನಿ ಆಗದಂತೆ ಎಚ್ಚರ ವಹಿಸಲು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ*

ಮಂಗಳೂರು,ಡಿ.17 :- ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ ಪ್ರದೇಶದಲ್ಲಿ ಸುಮಾರು 80 ಆನೆಗಳು ಸಂಚರಿಸುತ್ತಿದ್ದು, ಬೆಳೆ ಹಾನಿ ಸಂಭವಿಸುತ್ತಿದೆ ಎಂಬ ಮಾಹಿತಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಸತಿ ಪ್ರದೇಶಗಳ ಬಳಿ ಆನೆ ಬಂದಾಗ ನಿಗಾ ವಹಿಸಿ, ಕೂಡಲೇ ಅವುಗಳನ್ನು ಕಾಡಿಗೆ ಮರಳಿಸಲು ಮತ್ತು ಜೀವಹಾನಿ ಆಗದಂತೆ ಎಚ್ಚರ ವಹಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ […]

COMMUNITY NEWS DAKSHINA KANNADA HOME

*ಮೈಕಲ್ ಡಿ’ಸೋಜಾ ವಿಶನ್ 2030 ಕಾರ್ಯಯೋಜನೆಗೆ ಚಾಲನೆ*

ಮಂಗಳೂರು: ಅನಿವಾಸಿ ಉದ್ಯಮಿ ಮತ್ತು ಮಹಾದಾನಿ ಶ್ರೀ ಮೈಕಲ್ ಡಿ’ಸೋಜಾ ಅವರ ಕಾರವಾರ ಮತ್ತು ಗುಲ್ಬರ್ಗಾ ಜೋಡಿ ಧರ್ಮಪ್ರಾಂತ್ಯಗಳ ಸಮುದಾಯಗಳನ್ನು ಸಮರ್ಥಗೊಳಿಸುವ ಗುರಿಯುಳ್ಳ ಮಹತ್ವಾಕಾಂಕ್ಷಿ ವಿಶನ್ 2030 ಕಾರ್ಯಯೋಜನೆಗೆ ಮಂಗಳೂರು ಧರ್ಮಕ್ಷೇತ್ರದ, ಧರ್ಮಾಧ್ಯಕ್ಷರ ನಿವಾಸದಲ್ಲಿ ತಿಳುವಳಿಕೆ ಒಡಂಬಡಿಕೆಗೆ (MoU) ಸಹಿ ಮಾಡುವುದರ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರವಾರ ಮತ್ತು ಗುಲ್ಬರ್ಗಾ ಧರ್ಮಕ್ಷೇತ್ರಗಳಿಗಾಗಿ ಮೈಕಲ್ ಡಿ’ ಸೊಜಾ ವಿಶನ್ 2030 ಕಾರ್ಯಯೋಜನೆ ವಸತಿ ಮತ್ತು ಶಿಕ್ಷಣ ಕಾರ್ಯಕ್ರಮಗಳ ಮೂಲಕ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಬಿಷಪ್ ವಂದನೀಯ […]