Month: December 2025

DAKSHINA KANNADA HOME

ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಬೆಳಗಾವಿ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಬೆಳಗಾವಿ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಅಕ್ರಮದ ಬಗ್ಗೆ ತಿಳಿದ ಕೂಡಲೇ ಆಡಿಯೋ-ವೀಡಿಯೋ ಮಾತ್ರವಲ್ಲದೇ ಅವಧಿ ಮೀರಿದ ಔಷಧಿಗಳ ರಾಶಿಯ ದಾಖಲೆಗಳ ಸಮೇತ ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಹಾಸನ, ಚಿಕ್ಕಮಗಳೂರು, ಸೇರಿದಂತೆ ವಿವಿಧ ಭಾಗದ […]

DAKSHINA KANNADA HOME

*ದೈವಾರಾಧಾನೆಯಲ್ಲಿ ನಿರತರಾಗಿರುವ ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು,ರಾಜ್ಯಸರ್ಕಾರ ಅವರ ನೆರವಿಗೆ ಧಾವಿಸಬೇಕು. ಶಾಸಕ ವೇದವ್ಯಾಸ ಕಾಮತ್*

ಬೆಳಗಾವಿ. ಡಿಸೆಂಬರ್ 11: ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಕೂಡಲೇ ಧಾವಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪರಿಶಿಷ್ಟ ಜಾತಿಗೆ ಸೇರಿದ ಬಂಧುಗಳಾದ ದೈವ ನರ್ತಕರಲ್ಲಿ ನಲಿಕೆ, ಪರವ, ಪಂಬದ, ಪಾಣರ ಹೀಗೆ ವಿವಿಧ ವರ್ಗಳಿದ್ದು, ದೈವ ಪಾತ್ರಿಗಳಲ್ಲಿ ಮುಂಡಾಲ, ಆದಿ ದ್ರಾವಿಡ, ಮುಗೇರ, ಬಾಕುಡ, ಸಮಗಾರ ಅಲ್ಲದೇ ರಾಜನ್ ದೈವ ಪಾತ್ರಿಗಳಾಗಿ ಜೈನ, ಬಂಟ, ಬಿಲ್ಲವದವರಿದ್ದು, […]

DAKSHINA KANNADA HOME

ಕರಾವಳಿ ಉತ್ಸವದ ಲೋಗೋ ತಯಾರಿಕೆ ಸ್ಪರ್ಧೆ*

ಮಂಗಳೂರು,ಡಿ.11:-2025-26 ನೇ ಸಾಲಿನ ಕರಾವಳಿ ಉತ್ಸವ ಕಾರ್ಯಕ್ರಮವು ಡಿಸೆಂಬರ್ 20 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ಕರಾವಳಿ ಉತ್ಸವದ ಲೋಗೋ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಅದರಂತೆ ಕರಾವಳಿಯ ಕಲೆ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇವುಗಳ ಸಮ್ಮಿಲನದ ಲೋಗೋವನ್ನು ತಯಾರಿಸಿ ಡಿಸೆಂಬರ್ 17 ರೊಳಗೆ ಪಡೀಲ್ ಪ್ರಜಾಸೌಧ ಕಟ್ಟಡದಲ್ಲಿರುವ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಕಚೇರಿ (ದೂರವಾಣಿ ಸಂಖ್ಯೆ: 08242453926/906313259) ಅಥವಾ ಇ-ಮೇಲ್: ಚಿಜಣouಡಿismmಚಿಟಿgಚಿಟoಡಿe@gmಚಿiಟ.ಛಿom ಗೆ ಸಲ್ಲಿಸಬಹುದು. ಅತ್ಯುತ್ತಮವಾಗಿ ಲೋಗೋ ತಯಾರಿಸಿದ ಅಭ್ಯರ್ಥಿಗಳಿಗೆ ರೂ.50,000 ಮೊತ್ತವನ್ನು ಬಹುಮಾನವಾಗಿ ನೀಡಲಾಗುತ್ತದೆ […]

DAKSHINA KANNADA HOME

ಮಂಗಳೂರಿನ ಪ್ರಸಿದ್ದ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ಹ್ಯೂಮನ್ ಮಿಲ್ಕ್ ಬ್ಯಾಂಕ್‌ನ ಕ್ರಾಂತಿ.!

ಮಂಗಳೂರಿನ ಪ್ರಸಿದ್ದ ಸರ್ಕಾರಿ ಹೆರಿಗೆ ಆಸ್ಪತ್ಪೆಯಲ್ಲಿ ಆರಂಭಗೊಂಡ ಹ್ಯೂಮನ್ ಮಿಲ್ಕ್ ಬ್ಯಾಂಕ್ ಅದೆಷ್ಟೋ ನವಜಾತ ಶಿಶುಗಳ ತಾಯಿ ಎದೆ ಹಾಲಿನಿಂದ ವಂಚಿತರಾಗಿದ್ದ 471 ನವಜಾತ ಶಿಶುಗಳಿಗೆ ಜೀವ ಉಳಿಸಿದ . ಸಂಜೀವಿನಿಯಾದ ಲೇಡಿಗೋಷನ್ ಆಸ್ಪತ್ರೆಯ ಹ್ಯೂಮನ್ ಮಿಲ್ಕ್ ಬ್ಯಾಂಕ್‌ನ ಕ್ರಾಂತಿ.! ಹೌದು..ಸರ್ಕಾರಿ ಹೆರಿಗೆ ಆಸ್ಪತ್ರೆಗಳು ಅಂದರೆ ಸಾಕು ಮೂಗು ಮುರಿಯೋ ಈ ಕಾಲದಲ್ಲಿ ಈ ಮಾತಿಗೆ ವಿರುದ್ಧವಾಗಿ ನಿಂತಿದ್ದೇ ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ. ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳೇ ಕೈ ಚೆಲ್ಲಿದ ಹೆರಿಗೆ ಪ್ರಕರಣಗಳನ್ನು ಯಶಸ್ವಿಯಾಗಿಸಿದ ಕೀರ್ತಿ […]

DAKSHINA KANNADA HOME

*ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ – ಭರತ್ ಮುಂಡೋಡಿ*

ಮಂಗಳೂರು,ಡಿ.10:- ಬಿ.ಪಿ.ಎಲ್ ಪಡಿತರ ಚೀಟಿಯನ್ನು ಎ.ಪಿ.ಎಲ್ ಆಗಿ ಬದಲಾಯಿಸುವ ಪ್ರಕ್ರಿಯೆಯನ್ನು ಸಮಗ್ರವಾಗಿ ಪರಿಶೀಲನೆ ಮಾಡಬೇಕೆಂದು ಸರ್ಕಾರದ ಆದೇಶವಿದ್ದು, ಇದನ್ನು ಆಹಾರ ಇಲಾಖೆಯ ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಹಾರ ಕಿಟ್ ವಿತರಣೆಗಾಗಿ ಸರ್ಕಾರವು ಅನುಮೋದನೆ ನೀಡಿದ್ದು, […]

DAKSHINA KANNADA HOME

ಬೆಳೆ ವಿಮೆಯಲ್ಲಿನ ಲೋಪ: ಸದನದಲ್ಲಿ ಶಾಸಕ ಅಶೋಕ್ ರೈ & ಸ್ಪೀಕರ್‌ ಮಧ್ಯೆ ಜಟಾಪಟಿ

ಪುತ್ತೂರು: ೨೦೨೪ರ ೨೦೨೪ ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಪಾವತಿಸಿದ ಪರಿಹಾರ ಮೊತ್ತಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ತಡವಾಗಿರುವ ಮತ್ತು ಪರಿಹಾರ ಮೊತ್ತ ಕಡಿಮೆಯಾಗಿರುವ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ನಡೆದ ವಿಧಾಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಪ್ರಸ್ತಾಪ ಮಾಡಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ನೇತೃತ್ವದಲ್ಲಿ ತೋಟಗಾರಿಕಾ ಸಚಿವರು, ವಿಮಾಕಂಎಪನಿ ಮತ್ತು ದಕ ಹಾಗೂ ಉಡುಪಿ ಜಿಲ್ಲೆಯ ಶಾಸಕರ ಸಭೆಯನ್ನು ನಡೆಸುವುದಾಗಿ ತೀರ್ಮಾನವನ್ನು ಕೈಗೊಳ್ಳಲಾಯಿತು. […]

DAKSHINA KANNADA HOME

*ಮಂಗಳೂರು ಏರ್‌ಪೋರ್ಟ್‌ಗೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್ʼ ಸ್ಥಾನಮಾನ ನೀಡಲು ನಿಯಮ 377ರಡಿಯಲ್ಲಿ ಸಂಸದ ಕ್ಯಾ. ಚೌಟ ಲೋಕಸಭೆಯಲ್ಲಿ ಒತ್ತಾಯ*

ನವದೆಹಲಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್ (PoC)” ಸ್ಥಾನ-ಮಾನ ನೀಡುವ ಅಗತ್ಯತೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿಯಲ್ಲಿ ಈ ವಿಷಯದ ಬಗ್ಗೆ ಧ್ವನಿಯೆತ್ತಿರುವ ಸಂಸದ ಕ್ಯಾ. ಚೌಟ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರಾವಳಿ ಕರ್ನಾಟಕ ಮತ್ತು ನೆರೆಯ ಕೇರಳಕ್ಕೆ ಪ್ರಮುಖ ವಾಯುಯಾನ ಹೆಬ್ಬಾಗಿಲಾಗಿದೆ. ಈ ಏರ್‌ಪೋರ್ಟ್‌ 2024-25ರ ಅವಧಿಯಲ್ಲಿ 7.15 ಲಕ್ಷ ಅಂತಾರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ […]

DAKSHINA KANNADA HOME LATEST NEWS

*ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ ನೆಫೀಸಾ ರಾಜೀನಾಮೆಗೆ ಒತ್ತಾಯ; ಗ್ರಾಮಸಭೆ ಅರ್ಧದಲ್ಲೇ ಮೊಟಕು*

ವಿಟ್ಲ: ಪೆರುವಾಯಿ: ಡಿ.10 ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಅವರ ರಾಜೀನಾಮೆಗೆ ಪಟ್ಟು ಹಿಡಿದ ಗ್ರಾಮಸ್ಥರು, ಗ್ರಾಮಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ ಪರಿಣಾಮ ಸಭೆಯನ್ನು ಮೊಟಕುಗೊಳಿಸಿದ ಘಟನೆ ದಿನಾಂಕ 10 ಬುಧವಾರ ನಡೆಯಿತು. ಅಧ್ಯಕ್ಷರ ವಿರುದ್ಧದ ಆರೋಪಗಳು ತನಿಖೆಯಲ್ಲಿ ಸಾಬೀತಾದರೂ ರಾಜೀನಾಮೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡರು. ಗ್ರಾಮಸಭೆಯು ನಾಡಗೀತೆಯೊಂದಿಗೆ ಪ್ರಾರಂಭವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರು ಸ್ವಾಗತ ಭಾಷಣದ ನಂತರ ಹಿಂದಿನ ಲೆಕ್ಕಪತ್ರ (ಜಮಾ ಖರ್ಚು) ವನ್ನು […]

DAKSHINA KANNADA HOME

*ಮಂಗಳೂರು ಕದ್ರಿ ಪಾರ್ಕ್‌ನಲ್ಲಿ :ಡಿ.13 ಮತ್ತು14 ಸೌಹಾರ್ದಕ್ರಿಸ್ಮಸ್ಉತ್ಸವ– ಹಬ್ಬದ ಸಂಭ್ರಮದ*

ಮಂಗಳೂರು, ಡಿ.09 : ಸಂತ ಮದರ್ ತೆರೆಸಾ ವಿಚಾರ ವೇದಿಕೆ, ಮಂಗಳೂರು ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಯುಕ್ತ ಆಶ್ರಯದಲ್ಲಿ, ಅತ್ಯಂತ ನಿರೀಕ್ಷಿತ “ಸೌಹಾರ್ದ ಕ್ರಿಸ್ಮಸ್ ಉತ್ಸವ 2025” ವನ್ನು ಘೋಷಿಸಲು ಸಂತೋಷಪಡುತ್ತೇವೆ. ಕ್ರಿಸ್ಮಸ್ ಹಬ್ಬದ ನಿಜವಾದ ಸಂದೇಶವಾದ ಶಾಂತಿ, ಸೌಹಾರ್ದ ಮತ್ತು ಸಹಭಾಗಿತ್ವವನ್ನು ಉತ್ತೇಜಿಸುವ ಈ ಸಂಭ್ರಮಭರಿತ ಉತ್ಸವ ಡಿಸೆಂಬರ್ 13 ಮತ್ತು 14 ರಂದು, ಮಂಗಳೂರು ಕದ್ರಿ ಪಾರ್ಕ್‌ನಲ್ಲಿ, ಮಧ್ಯಾಹ್ನ 2:30ರಿಂದ ರಾತ್ರಿ 9:30ರವರೆಗೆ ನಡೆಯಲಿದೆ. ಈ ಉತ್ಸವವು ಎಲ್ಲಾ ಧರ್ಮಗಳ, […]

HOME LATEST NEWS STATE

*ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಳಗಾವಿ, ಡಿಸೆಂಬರ್ 9: ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು *ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ* ಮಾಡಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರುಇಂದು ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ […]