Month: January 2026

DAKSHINA KANNADA

*ಕುದ್ಮುಲ್ ರಂಗರಾವ್ ಸಮಾಧಿ ಸ್ಥಳ ಅಭಿವೃದ್ಧಿ :ಉಸ್ತುವಾರಿ ಸಚಿವ*

ಮಂಗಳೂರು,ಜ.31:- ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಸ್ಥಳದ ಪರಿಸರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಶನಿವಾರ ಕುದ್ಮುಲ್ ರಂಗರಾವ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಗೌರವ ಸಲ್ಲಿಸಿದರು. ಅಂದಿನ ಕಾಲದಲ್ಲಿ ಸಮಾಜದ ಅತ್ಯಂತ ತಳಸ್ತರದಲ್ಲಿದ್ದ ಸಮಾಜದ ಏಳಿಗೆಗಾಗಿ ನಿಷ್ಕಳಂಕವಾಗಿ ಸೇವೆ ಸಲ್ಲಿಸಿದ ಕುದ್ಮುಲ್ ರಂಗರಾವ್ ರಾಜ್ಯದ ಅದಮ್ಯ ಚೇತನ. ಯಾರ ವಿರೋಧವನ್ನು ಲೆಕ್ಕಿಸದೆ ಅವರು ದಲಿತರ ಶಿಕ್ಷಣ […]

DAKSHINA KANNADA

*ಜನಸಾಮಾನ್ಯರಿಗೆ ನ್ಯಾಯ ಒದಗಿಸುವುದೇ ನ್ಯಾಯಾಲಯಗಳ ಕರ್ತವ್ಯ – ನ್ಯಾ. ಅಬ್ದುಲ್ ನಝೀರ್*

ಮಂಗಳೂರು,ಜ.31 :-ಜನಸಾಮಾನ್ಯರಿಗೆ ನ್ಯಾಯವನ್ನು ಒದಗಿಸುವುದಕ್ಕಾಗಿ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇದು ಸಾಂವಿಧಾನಿಕವಾಗಿರುತ್ತದೆ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಹೇಳಿದ್ದಾರೆ. ಅವರು ಶನಿವಾರ ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು.ನ್ಯಾಯಾಲಯವು ಕಾನೂನಿನ ಆಡಳಿತದ ಸಂಕೇತವಾಗಿದ್ದು, ಸಮಾಜದಲ್ಲಿ ಅನ್ಯಾಯದ ವಿರುದ್ಧ ಪ್ರತಿಯೊಬ್ಬರಿಗೆ ನ್ಯಾಯ ಒದಗಿಸಲು ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯಗಳಿಗೆ ಆಧುನಿಕ ಕಟ್ಟಡ ಮತ್ತು ತಂತ್ರಜ್ಞಾನಗಳು ಜನರಿಗೆ ತ್ವರಿತವಾಗಿ ನ್ಯಾಯ ಒದಗಿಸಲು ಪೂರಕ ಅಗತ್ಯಗಳಾಗಿದೆ ಎಂದು ಅವರು ಹೇಳಿದರು.ಸಂವಿಧಾನ ರಚನೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆನಗಲ್ ನರಸಿಂಹರಾವ್ ಅವರು […]

DAKSHINA KANNADA HOME

*ಅಶೋಕ್ ರೈ ಯವರೇ ನಿಮ್ಮ ಅವಧಿಯಲ್ಲಿ ಪುತ್ತೂರಿನ ಚಿತ್ರಣವೇ ಬದಲಾಗಿದೆ: ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಝೀರ್*

ಪುತ್ತೂರು: ಅಶೋಕ್ ರೈ ಡೈನಾಮಿಕ್ ಎಂ ಎಲ್ ಎ , ಅವರ ಸಮಯದಲ್ಲಿ ಪುತ್ತೂರಿನ ಚಿತ್ರಣವೇ ಬದಲಾಗಿದೆ ಎಂದು ಸುಪ್ರಿಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ , ಅಂದ್ರಪ್ರದೇಶದ ರಾಜ್ಯಪಾಲರಾದ ಅಬ್ದುಲ್ ನಝೀರ್ ರವರು ಹೇಳಿದರು. ಇಂದು ಪುತ್ತೂರಿನ ಆನೆಮಜಲಿನಲ್ಲಿ ನೂತನ ಕೋರ್ಟು ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಕೋರ್ಟು ಕಟ್ಟಡ ಏನಾದರು ಬೇಕಾದರೆ ಕೇಳಿ ಉಸ್ತುವಾರಿ ಸಚಿವರಿದ್ದಾರೆ ಕೊಡುತ್ತಾರೆ. ಆ ಪ್ರಕಾರ ಪುತ್ತೂರು ಶಾಸಕ ಅಶೋಕ್ ರೈ ಅವರು ಡೈನಾಮಿಕ್ ಎಂಎಲ್ಎ ಎಂದು ಹೇಳಿದ […]

DAKSHINA KANNADA HOME UDUPI

*ಉಡುಪಿ ಧರ್ಮಕ್ಷೇತ್ರಕ್ಕೆ ನೂತನ ಬಿಷಪ್ ಆಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ನೇಮಕ*

ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಆಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರನ್ನು ಪೋಪ್ ಲಿಯೋ XIV ನೇಮಕ ಮಾಡಿದ್ದಾರೆ. ಪ್ರಸ್ತುತ ಅವರು ಶಿರ್ವಾದ ಆರೋಗ್ಯ ಮಾತೆ ದೇವಾಲಯದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ನೇಮಕಾತಿಯನ್ನು ಇಂದು ಜನವರಿ 31ರಂದು ಶನಿವಾರ ರೋಮ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ (ಭಾರತೀಯ ಕಾಲಮಾನ ಸಂಜೆ 4.30) ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಅದೇ ವೇಳೆ ಉಡುಪಿ ಕಲ್ಯಾಣ್‌ ಪುರದ ಮಿಲಾಗ್ರಿಸ್‌ ಮಾತೆ ದೇವಾಲಯದಲ್ಲಿಯೂ ಘೋಷಿಸಲಾಯಿತು. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರು 1962 […]

DAKSHINA KANNADA HOME LATEST NEWS NATIONAL STATE

ದಾಖಲೆ ಏರಿಕೆ ಕಂಡಿದ್ದ ಚಿನ್ನದ ದರ ಇಂದು ದಿಢೀರ್‌ ಕುಸಿತ…! ಕಾರಣವೇನು?

ನವದೆಹಲಿ: ಕಳೆದ ಕೆಲ ದಿನಗಳಿಂದ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿಯ ದರಗಳು ಶುಕ್ರವಾರ ದಿಢೀರ್ ಕುಸಿತ ಕಂಡಿವೆ. ಮಲ್ಟಿ ಕಮೋಡಿಟಿ ಎಕ್ಸ್ ಚೆಂಜ್ (MCX)ನಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಶೇ.15 ರಷ್ಟು ಕುಸಿತ ಕಂಡಿದೆ. ಚಿನ್ನದ ಬೆಲೆ ಶೇ.6.5 ರಷ್ಟು ಅಂದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ರೂ. 12,000 ಕಡಿಮೆಯಾಗಿದೆ. ಗುರುವಾರ 10 ಗ್ರಾಂ ಚಿನ್ನದ ಬೆಲೆ ರೂ. 1,93,096 ಆಗಿತ್ತು. MCX ನಲ್ಲಿ ಚಿನ್ನದ ದರ ಈಗ […]

HOME STATE

*ಡೇಂಜರಸ್ ಆ್ಯಪ್ಗಳು ನಿಮ್ಮ ವೈಯಕ್ತಿಕ ಮಾಹಿತಿ ಕದಿಯಬಹುದು*

ಬೆಂಗಳೂರು :ಸ್ಮಾರ್ಟ್‌ಫೋನ್‌ಗಳಲ್ಲಿ ನಮ್ಮ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಇಟ್ಟುಕೊಂಡಿರುವುದು ಸಾಮಾನ್ಯ. ಖಾಸಗಿ ಫೋಟೋಗಳು, ವಿಡಿಯೋಗಳಿಂದ ಹಿಡಿದು ಗೌಪ್ಯ ಮಾಹಿತಿಯವರೆಗೂ ಫೋನ್ನಲ್ಲಿ ಇರುತ್ತವೆ. ಫೋನ್ ಕಳುವಾಗದಂತೆ ಜೋಪಾನವಾಗಿಟ್ಟುಕೊಂಡರೆ ಸಾಕು ಎಂದು ನಾವೆಲ್ಲರೂ ಭಾವಿಸಿರುತ್ತೇವೆ. ಆದರೆ, ವಾಸ್ತವವೆಂದರೆ ನಮ್ಮ ಸ್ಮಾರ್ಟ್ಫೋನ್ನಲ್ಲಿರುವ ಮಾಹಿತಿ ನಮಗೆ ಗೊತ್ತಿಲ್ಲದಂತೆ ಸೋರಿಕೆ ಆಗುತ್ತಿರಬಹುದು. ನಾವು ಇನ್ಸ್ಟಾಲ್ ಮಾಡಿಕೊಂಡಿರುವ ಕೆಲ ಆ್ಯಪ್ಗಳು ನಮ್ಮ ಡಾಟಾವನ್ನು ಕದ್ದು ಸಾಗಿಸುತ್ತಿರುವ ಸಾಧ್ಯತೆ ಹೆಚ್ಚಿರುತ್ತದೆ. ಫೋನ್ನಲ್ಲಿರುವ ಫೋಟೋ, ವಿಡಿಯೋ, ನಾವಿರುವ ಸ್ಥಳ, ನಾವು ಅಡ್ಡಾಡಿರುವ ಸ್ಥಳ, ಮೊಬೈಲ್ನ ಮಾಹಿತಿ, ಬ್ರೌಸಿಂಗ್ ಹಿಸ್ಟರಿ, […]

DAKSHINA KANNADA HOME LATEST NEWS STATE

‘ಭಜರಂಗಿ ಗೋ ಕಳ್ಳರು’ ವಾಟ್ಸಾಪ್‌ ಗ್ರೂಪ್‌ನಲ್ಲಿ ಧಾರ್ಮಿಕ ಭಾವನೆ ಕೆರಳಿಸಿದ ಪ್ರಕರಣ: ಹೈಕೋರ್ಟ್‌ ಕಿಡಿ

ಬೆಂಗಳೂರು: ‘ಭಜರಂಗಿ ಗೋ ಕಳ್ಳರು’ ಹೆಸರಿನಲ್ಲಿ ವಾಟ್ಸ್‌ ಆ್ಯಪ್‌ ಗ್ರೂಪ್‌ ರಚಿಸಿ ಅದರಲ್ಲಿ, ಹಿಂದೂ ದೇವತೆಗಳನ್ನು ಮತ್ತು ರಾಜಕೀಯ ನಾಯಕರನ್ನು ಅಶ್ಲೀಲವಾಗಿ ಬಿಂಬಿಸಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪವಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ. ತನ್ನ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ಕುಪ್ಪೆಟ್ಟಿ ಕರಾಯ ಗ್ರಾಮದ ಸಿರಾಜುದ್ದೀನ್‌ ಬಿನ್‌ ಮೊಹಮದ್‌ ಇಸ್ಮಾಯಿಲ್‌ (30) ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ […]

HOME STATE

*ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ-ಮಹಾತ್ಮಾ ಗಾಂಧೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು, ಜನವರಿ 30: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾತ್ಮಾಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. […]

HOME LATEST NEWS STATE

ಬರೋಬ್ಬರಿ 12 ರೋಲ್ಸ್ ರಾಯ್ಸ್ ಕಾರು ಹೊಂದಿದ್ದ ಸಿ.ಜೆ. ರಾಯ್ ಯಾರು…?

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ. ರಾಯ್ ಅವರು ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ತಮ್ಮ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಟಿ ದಾಳಿ ನಡೆದಾಗ ಸ್ವತಃ ತಾವೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಈ ಸುದ್ದಿ ಈಗ ಉದ್ಯಮ ವಲಯಕ್ಕೆ ಬರ ಸಿಡಿಲಿನಂತೆ ಎರಗಿ ಬಂದಿದೆ. Big Breaking: ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕ ಡಾ ಸಿ.ಜೆ ರಾಯ್‌ ಆತ್ಮಹತ್ಯೆ ಯಾರು ಈ ರಾಯ್‌? ಮೂಲತಃ ಕೇರಳದವರಾಗಿದ್ದರೂ ಸಹ ಬೆಂಗಳೂರಿನಲ್ಲೇ ಬೆಳೆದಿದ್ದರು.  ಕೊಚ್ಚಿ ಕ್ರೈಸ್ತ ಧರ್ಮಕ್ಕೆ […]

DAKSHINA KANNADA HOME

*ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚೆಫ್ ಶ್ರಿಯಾ ಶೆಟ್ಟಿ ಚಾಲನೆ *

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು.ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಜನತೆಯ ಆಹಾರ ಅಭಿರುಚಿಯು ಬಹಳ ವಿಶಿಷ್ಟವಾಗಿದೆ. ತಿಂಡಿ ತಿನಿಸುಗಳ ಬಗ್ಗೆ ಇಲ್ಲಿನ ಜನರ ಪ್ರೀತಿಯು ಆಹಾರ ಸಂಸ್ಕೃತಿಯನ್ನು ಎತ್ತರಕ್ಕೆ ಕೊಂಡೊಯ್ದಿದೆ. ವೈವಿಧ್ಯಮಯ ಖಾದ್ಯಗಳಿಗೆ ಕರಾವಳಿಯು ಹೆಸರುವಾಸಿಯಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ದರ್ಶನ್ […]