Month: January 2026

DAKSHINA KANNADA HOME

*ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ*

ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಇಂದಿನ ಘಟನೆಯು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ದಿವಾಳಿತನ ಮತ್ತು ಹತಾಶೆಯನ್ನು ಬಿಂಬಿಸುತ್ತಿದೆ. ಸಂವಿಧಾನದಡಿಯಲ್ಲೇ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇಂದು ಅದೇ ಸಂವಿಧಾನದ ಕಗ್ಗೊಲೆಗೆ ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಜಂಟಿ ಅಧಿವೇಶನ ವೇಳೆ ರಾಜ್ಯಪಾಲರನ್ನು ತಡೆದು ಅಗೌರವದಿಂದ ನಡೆದುಕೊಂಡು ಕಾಂಗ್ರೆಸ್‌ನವರ ಮಾನಸಿಕತೆಯನ್ನು ಟೀಕಿಸಿರುವ ಕ್ಯಾ. ಚೌಟ ಅವರು, ನಿರಂತರವಾಗಿ ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ […]

DAKSHINA KANNADA HOME

*ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ತೀವ್ರವಾಗಿ ಖಂಡಿಸಿದ ಜಿಲ್ಲಾ ಬಿಜೆಪಿ ಯುವ ಮೋರ್ಚಾ*

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸತತವಾಗಿ ಹಿಂದೂ ವಿರೋಧಿ ಹಾಗೂ ಅರಾಜಕತೆಯ ನೀತಿಯನ್ನು ಅನುಸರಿಸುತ್ತಿರುವುದನ್ನು ಜಿಲ್ಲಾ ಬಿಜೆಪಿ ಯುವ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ. ಸಮಾಜಘಾತುಕ ಶಕ್ತಿಯಾದ PFI ಸಂಘಟನೆಯ 1,600 ಕ್ಕೂ ಹೆಚ್ಚು ಕಾರ್ಯಕರ್ತರ ಮೇಲಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯುವ ಮೂಲಕ ಉಗ್ರಗಾಮಿ ಮನಸ್ಥಿತಿಗೆ ಕುಮ್ಮಕ್ಕು ನೀಡುತ್ತಿರುವ ಈ ಸರ್ಕಾರ, ದೇಶಭಕ್ತ ಹಿಂದೂ ಕಾರ್ಯಕರ್ತರ ದಮನಕ್ಕೆ ಮುಂದಾಗಿರುವುದು ಅತ್ಯಂತ ಶೋಚನೀಯ. ಇತ್ತೀಚೆಗೆ ಉಡುಪಿ ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಶತಮಾನಗಳ ಸಂಪ್ರದಾಯದಂತೆ […]

DAKSHINA KANNADA

*ಜ. 25ರಂದು ದಕ್ಷಿಣ ಕನ್ನಡಜಿಲ್ಲಾ  ಕಾರ್ಯನಿರತ  ಪತ್ರಕರ್ತರ ವಾರ್ಷಿಕ  ಕ್ರೀಡಾಕೂಟ*

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಜ.25ರಂದು ಬೆಳಗ್ಗೆ 9ಕ್ಕೆ ನಗರದ ಕದ್ರಿಯ ಕೆ.ಪಿ.ಟಿ.ಮೈದಾನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಕೆಪಿಟಿಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮುಖ್ಯ ಅತಿಥಿಯಾಗಿ […]

HOME LATEST NEWS STATE

“ಕಾಮಿಡಿ ಕಿಲಾಡಿಗಳು” ಶೋನಲ್ಲಿ ಹಿಂದೂ ದೇವರುಗಳ ಅಪಹಾಸ್ಯ: ಹೈಕೋರ್ಟ್‌ ತರಾಟೆ

ಬೆಂಗಳೂರು: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಹಾಸ್ಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು’ ಸಂಚಿಕೆಯೊಂದರಲ್ಲಿ ಹಿಂದು ದೇವತೆಗಳನ್ನು ಅಪಹಾಸ್ಯ ಮಾಡಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ವಾಕ್‌ ಸ್ವಾತಂತ್ರ್ಯದ ನೆಪದಲ್ಲಿ ನೀವು ಏನಾದರೂ ಮಾಡಬಹುದೇ? ಎಂದು ಝೀ ವಾಹಿನಿ ಹಾಗೂ ಕಾರ್ಯಕ್ರಮದ ನಿರ್ದೇಶಕರನ್ನು ಕಟುವಾಗಿ ಪ್ರಶ್ನಿಸಿದೆ. ಇದೇ ವೇಳೆ ವಾಹಿನಿ, ಕಾರ್ಯಕ್ರಮದ ನಿರ್ದೇಶಕರು ಹಾಗೂ ಕಲಾವಿದರ ವಿರುದ್ಧ ಮುಂದಿನ ವಿಚಾರಣೆವರೆಗೆ ಬಲವಂತದ ಕ್ರಮ ಜರುಗಿಸದಂತೆ ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಕೋರಿ […]

DAKSHINA KANNADA HOME LATEST NEWS

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಕೋಮುದ್ವೇಷದ ಭಾಷಣ ಆರೋಪ: ಎಫ್‌ಐಆರ್‌

ಪುತ್ತೂರು: ಖಾಸಗಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ದ ಪ್ರಕರಣ ದಾಖಲಾಗಿದೆ. ಜೊತೆಗೆ ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿದ ಕಾಲೇಜಿನ ಯೂಟ್ಯೂಬ್‌ ವಿರುದ್ಧವೂ ಪ್ರಕರಣ ದಾಖಲಾಗಿದೆ. ಪ್ರಕರಣದ ಪುತ್ತೂರಿನ ರಾಮಚಂದ್ರ ಕೆ ಎಂಬವರ ದೂರಿನಂತೆ ಜ.12 ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಆರೋಪಿತರಾದ ಡಾ.ಕಲ್ಲಡ ಪ್ರಭಾಕರ ಭಟ್ ರವರು, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ […]

DAKSHINA KANNADA HOME LATEST NEWS

ಪೆರುವಾಯಿ: ರಸ್ತೆ ಸಂಪರ್ಕವಿಲ್ಲದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್‌ ರೈ

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬದಿಯಾರು ಎಂಬಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಾಗಿದ್ದು, ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಸ್ಥಳಿಯರು ಶಾಸಕರ ಬಳಿ ತೆರಳಿ ತಮಗೆ ರಸ್ತೆ ಇಲ್ಲದಿರುವ ಬಗ್ಗೆ ಅಳಲು ತೋಡಿಕೊಂಡಿದ್ದರು. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ […]

DAKSHINA KANNADA HOME LATEST NEWS

ಸುಳ್ಯ: ಕೆಲಸದಾಳುಗಳಿಂದಲೇ 1 ಲಕ್ಷ ರೂ.ಮೌಲ್ಯದ ಅಡಿಕೆ ಕಳವು

ಸುಳ್ಯ: ಕೆಲಸದಾಳುಗಳು ಸುಲಿದ ಅಡಿಕೆಯನ್ನು ಕಳವು ಮಾಡಿದ ಬಗ್ಗೆ ಸುಬ್ರಹ್ಮಣ್ಯ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಘಟನೆ ವಿವರ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕಾಳಿಕಾ ಪ್ರಸಾದ್ ಎಂಬುವವರ ಮನೆಗೆ ಪ್ರತಿನಿತ್ಯ ಪುತ್ತೂರಿನ ಕಾವೂರು ನಿವಾಸಿಗಳಾದ  ಸಂಪತ್ ಮತ್ತು ಹರ್ಷಿತ್ ಎಂಬುವವರು ಅಡಿಕೆ ತೋಟದ ಕೆಲಸಕ್ಕೆ ಬರುತ್ತಿದ್ದರು. ಕೆಲವೊಮ್ಮೆ ಯಜಮಾನ ಕಾಳಿಕಾ ಪ್ರಸಾದ್ ಮನೆಯಲ್ಲಿ ಉಳಿದುಕೊಂಡು ಸಹ ಹೋಗುತ್ತಿದ್ದರು. ಆದರೆ ಜ.17 ರಂದು ಇಬ್ಬರೂ ಕೆಲಸಗಾರರು ತಮ್ಮ ಮನೆಗೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೋಗಿದ್ದಾರೆ. ಈ […]

STATE

*ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಐಇಇಇ ಕಂಪ್ಯೂಟರ್ ಸೊಸೈಟಿಯ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ*

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಇಇಇ (IEEE) ವಿದ್ಯಾರ್ಥಿ ಘಟಕದ ಅತ್ಯಂತ ಪ್ರಮುಖ ವಿಭಾಗವಾದ ಕಂಪ್ಯೂಟರ್ ಸೈನ್ಸ್ ಸೊಸೈಟಿ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಆಚರಿಸುವ ಮೂಲಕ ಒಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿತು. ಸ್ಫೂರ್ತಿ, ಜ್ಞಾನ ಮತ್ತು ದೂರದೃಷ್ಟಿಯ ಸಂಗಮವಾಗಿದ್ದ ಈ ಕಾರ್ಯಕ್ರಮವು, ಕಂಪ್ಯೂಟರ್ ವಿಜ್ಞಾನ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮತ್ತು ಬೆಳವಣಿಗೆಯನ್ನು ಸಾಧಿಸುವ ಸೊಸೈಟಿಯ ಬದ್ಧತೆಯನ್ನು ಪ್ರತಿಬಿಂಬಿಸಿತು. ಗೌರವಾನ್ವಿತ ಗಣ್ಯರ ಆಗಮನದೊಂದಿಗೆ ವಿಧ್ಯುಕ್ತವಾಗಿ ಆರಂಭವಾದ ಈ ಸಮಾರಂಭಕ್ಕೆ, ವಂ| ಡೆನ್ಜಿಲ್ ಲೋಬೋ ಎಸ್.ಜೆ […]

DAKSHINA KANNADA

ಮಂಗಳೂರು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ […]

DAKSHINA KANNADA HOME

ಡ್ರಗ್ಸ್ ನಿಂದ ಜೀವನ, ಕುಟುಂಬ ನಾಶವಾಗುತ್ತದೆ ದೇಶ ಕಟ್ಟುವ ಶಕ್ತಿಗಳಾಗಿ ಯುವ ಸಮಾಜ ಬೆಳೆಯಬೇಕು: ಡಾ. ಭರತ್ ಶೆಟ್ಟಿ

ಮಂಗಳೂರು: ಜ. 20 : ಡ್ರಗ್ಸ್ ಸೇವನೆಯಿಂದ ಒಂದು ಜೀವನ ಸರ್ವನಾಶವಾಗುವುದರ ಜೊತೆಗೆ ಕುಟುಂಬವನ್ನೇ ಬಲಿ ತೆಗೆದುಕೊಳ್ಳುತ್ತದೆ. ಭಾರತದ ಯುವ ಸಮಾಜವು ಸ್ವಾಮಿ ವಿವೇಕಾನಂದರ ರಾಷ್ಟ್ರೀಯತೆಯ ವಿಚಾರಧಾರೆಯನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಡ್ರಗ್ಸ್ ಮುಕ್ತರಾಗಿ ದೇಶ ಕಟ್ಟುವ ಕಾಯಕದಲ್ಲಿ ಕೈಜೋಡಿಸಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಕರೆ ನೀಡಿದರು. ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಪ್ರಯುಕ್ತ ಯೂಥ್ ಫಾರ್ ನೇಶನ್ ಯುವ ಸಂಘಟನೆ ಸುರತ್ಕಲ್ ಗೋವಿಂದ ದಾಸ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ […]