Month: February 2026

DAKSHINA KANNADA HOME LATEST NEWS

ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ರಸ್ತೆ ಅಭಿವೃದ್ಧಿ: ಪರ್ಯಾಯ ಸಂಚಾರ ಸಲಹೆ

ಮಂಗಳೂರು: ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ದಿನಾಂಕ 15-02-2026 ರಿಂದ 15-06-2026 ರವರೆಗೆ 4 ತಿಂಗಳುಗಳ ಕಾಲ ನಡೆಯಲಿದೆ. ಮೇಲ್ಕಂಡ ಅಭಿವೃದ್ದಿ ಕಾಮಗಾರಿಗಳು ನಡೆಯುವ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೇ ರಸ್ತೆ – ಕಂಕನಾಡಿ ಜಂಕ್ಷನ್‌ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು ಕರಾವಳಿ ಜಂಕ್ಷನ್‌ನಿಂದ – ಪಂಪುವೆಲ್ ವೃತ್ತ ದವರೆಗಿನ (ಮಂಗಳೂರು ನಗರದಿಂದ ಹೊರ ಹೋಗುವ ರಸ್ತೆ) ಬೈಪಾಸ್ […]

LATEST NEWS

ವೈವಾಹಿಕ ಜೀವನದ 50 ವರ್ಷಗಳ ಸಂಭ್ರಮ: ‘ಗೋಲ್ಡನ್ ಕಪಲ್ಸ್’ ಪುನರ್ಮಿಲನ

ಮಂಗಳೂರು: ನಗರದ ಬಿಜೈ ಚರ್ಚ್ ರಸ್ತೆಯ ‘ಕ್ಯಾಮಲಾಟ್’ನಲ್ಲಿ ಫೆಬ್ರವರಿ 14 ರಂದು ಸಂಜೆ 5 ಗಂಟೆಗೆ, ವಿವಾಹ ಜೀವನದ ಐವತ್ತು ವರ್ಷಗಳನ್ನು ಪೂರೈಸಿದ ದಂಪತಿಗಳಿಗಾಗಿ ಡಾ. ಮೈಕೆಲ್ ಲೋಬೊ ಅವರು ವಿಶೇಷ ‘ಗೋಲ್ಡನ್ ಕಪಲ್ಸ್’ (ಸುವರ್ಣ ದಂಪತಿಗಳು) ಪುನರ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಕಾಲದ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಿ, ಪ್ರೀತಿ, ಬದ್ಧತೆ ಮತ್ತು ಪರಸ್ಪರ ತಿಳುವಳಿಕೆಯೊಂದಿಗೆ ದೀರ್ಘಕಾಲದ ದಾಂಪತ್ಯ ಜೀವನ ನಡೆಸುತ್ತಿರುವ ದಂಪತಿಗಳನ್ನು ಗೌರವಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಸಂಭ್ರಮದ ಸಂಜೆ ಸುಮಾರು 30 ಸುವರ್ಣ […]

DAKSHINA KANNADA HOME LATEST NEWS

ಗಲ್ಫ್‌ ನಿವೃತ್ತರ ಕಲ್ಯಾಣಕ್ಕಾಗಿ ಸಮಗ್ರ ಯೋಜನೆ ರೂಪಿಸಿ: ಗಲ್ಫ್ ರಿಟಾಯರೀಸ್ ಅಸೋಸಿಯೇಶನ್‌ ಮನವಿ

ಮಂಗಳೂರು: ಗಲ್ಫ್ ದೇಶಗಳಲ್ಲಿ ದೀರ್ಘಕಾಲ ಉದ್ಯೋಗ ನಿರ್ವಹಿಸಿ ನಂತರ ಉದ್ಯೋಗ ನಷ್ಟ, ವಯೋಮಿತಿ ಹಾಗೂ ಆರೋಗ್ಯ ಸಮಸ್ಯೆಗಳ ಕಾರಣದಿಂದ ಸ್ವದೇಶಕ್ಕೆ ಮರಳಿರುವ ನಿವೃತ್ತ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಸಮಗ್ರ ಯೋಜನೆ ರೂಪಿಸಬೇಕೆಂದು ಗಲ್ಫ್ ರಿಟಾಯರೀಸ್ ಅಸೋಸಿಯೇಶನ್‌ (GRA) ಮನವಿ ಮಾಡಿದೆ. ಈ ಸಂಬಂಧ ಫೆ.12ರಂದು ಸಂಘದ ಪದಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಗಲ್ಫ್ ದೇಶಗಳಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಈ ಕಾರ್ಮಿಕರು ಗಳಿಸಿದ ವಿದೇಶಿ ವಿನಿಮಯವು ದೇಶದ ಆರ್ಥಿಕ […]

DAKSHINA KANNADA

*ಫೆಬ್ರವರಿ 21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ*

ಮಂಗಳೂರು,ಫೆ.13: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಡಿ.ಡಿ.ಯು-ಜಿಕೆವೈ ಎನ್.ಆ‌ರ್.ಎಲ್.ಎಂ (DDU-GKY NRLM) ಯೋಜನೆಯಡಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 21 ರಂದು ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯಲ್ಲಿ ಆಯೋಜಿಸಲಾಗಿದೆ. ಈ ಮೇಳಕ್ಕೆ ಬೆಂಗಳೂರು, ಮಂಗಳೂರು ಮತ್ತು ರಾಜ್ಯಾದ್ಯಂತ ಇರುವ ಐಟಿ, ಸಾಫ್ಟ್‌ವೇರ್, ಮ್ಯಾನುಫ್ಯಾಕ್ಟರಿಂಗ್, ಆಟೋ ಮೊಬೈಲ್, ಬ್ಯಾಂಕಿಂಗ್, ಫೈನಾನ್ಸ್, ರಿಟೇಲ್ “ಆ್ಯಂಡ್ ಸರ್ವಿಸ್ ಸೆಕ್ಟರ್, ಎಜ್ಯುಕೇಶನ್, ಹಾಸ್ಪಿಟಲ್ ಸುಮಾರು 80 ಕ್ಕಿಂತ ಹೆಚ್ಚಿನ […]

DAKSHINA KANNADA HOME

*ಫೆಬ್ರವರಿ 16 ರಿಂದ ಜಿಲ್ಲೆಗೆ ಮಾನವ ಹಕ್ಕುಗಳ ಆಯೋಗ ಭೇಟಿ*

ಮಂಗಳೂರು,ಫೆ.13 :ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿನ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಫೆಬ್ರವರಿ 16 ರಿಂದ 20 ರವರೆಗೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇರ್ತಥ್ಯಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ […]

DAKSHINA KANNADA HOME NATIONAL

*ಗಲ್ಫ್‌ ರಾಷ್ಟ್ರಗಳಲ್ಲಿ ಕರಾವಳಿ ಯುವಕರ ಸಂಕಷ್ಟ. ವಂಚಕ ಉದ್ಯೋಗ ಏಜೆನ್ಸಿಗಳ ಕಡಿವಾಣಕ್ಕೆ ವಿದೇಶಾಂಗ ಸಚಿವ ಜೈಶಂಕರ್‌ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ*

ನವದೆಹಲಿ: ಮಂಗಳೂರು ಹಾಗೂ ಕರಾವಳಿ ಕರ್ನಾಟಕದ ಯುವಕರು ನಕಲಿ ಉದ್ಯೋಗ ನೇಮಕ ಏಜೆನ್ಸಿಗಳ ಮೂಲಕ ಗಲ್ಫ್‌ ಹಾಗೂ ದಕ್ಷಿಣ ಏಷ್ಯಾ ದೇಶಗಳಿಗೆ ತೆರಳಿ ಅಲ್ಲಿ ಮೋಸ ಹೋಗಿ ಸಂಕಷ್ಟಕ್ಕೆ ಸಿಲುಕಿರುವ ಅತ್ಯಂತ ಗಂಭೀರ ವಿಚಾರವಾಗಿದ್ದು, ಇಂಥಹ ಪ್ರಕರಣ ದೇಶದೆಲ್ಲೆಡೆ ಜಾಸ್ತಿಯಾಗುತ್ತಿದೆ. ಈ ಹಿನ್ನಲೆಯಲ್ಲಿ ಉದ್ಯೋಗಕ್ಕಾಗಿ ವಿದೇಶಗಳಿಗೆ ತೆರಳುವ ಭಾರತೀಯ ನಾಗರಿಕರ ಸುರಕ್ಷತೆ ಹೆಚ್ಚಿಸಲು ಜಾಗೃತಿ ಮೂಡಿಸುವ ಜತೆಗೆ ವಂಚನೆ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿ ದಕ್ಷಿಣ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ವಿದೇಶಾಂಗ ಸಚಿವ […]

DAKSHINA KANNADA HOME

*ಕರಾವಳಿಯ ಸಮಗ್ರ ಅಭಿವೃದ್ಧಿಗೆ ಒತ್ತು. ಮಂಡಳಿಯಲ್ಲಿ ಜನಪ್ರತಿನಿಧಿಗಳ ಬೇಡಿಕೆ*

ಮಂಗಳೂರು, ಫೆ. 12 : ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‍ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ ಸೌಧ’ದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಭಾಗವಹಿಸಿ, ಕರಾವಳಿಯ ಅಭಿವೃದ್ಧಿಯನ್ನು ಸಮಗ್ರವಾಗಿ ಪರಿಗಣಿಸಿ, ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತಿಳಿಸಿದರು. ಸ್ಪೀಕರ್ ಯು.ಟಿ. […]

DAKSHINA KANNADA HOME

*ಮಂಗಳೂರಿನಲ್ಲಿ ಅಂತರ ರಾಜ್ಯ ಯುವ ವಿನಿಮಯ 2025-26 ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ*

ಮಂಗಳೂರು: ಯುವಜನರಲ್ಲಿ ಸಾಂಸ್ಕೃತಿಕ ವಿನಿಮಯ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾದ ‘ಅಂತರ ರಾಜ್ಯ ಯುವ ವಿನಿಮಯ 2025-26’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಮಂಗಳೂರಿನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ವರ್ಷದ ಕಾರ್ಯಕ್ರಮದಲ್ಲಿ ತೆಲಂಗಾಣ ರಾಜ್ಯವು ಅತಿಥಿ ರಾಜ್ಯವಾಗಿ ಭಾಗವಹಿಸುತ್ತಿದೆ. ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ್ (MY Bharat) ದಕ್ಷಿಣ ಕನ್ನಡ, ಮಾಂಡ್ ಶೋಭಾಣ್ ಶಕ್ತಿನಗರ, ಮತ್ತು ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (NSS) ಇವುಗಳ ಜಂಟಿ […]

DAKSHINA KANNADA HOME LATEST NEWS

ಅಪ್ರಾಪ್ತೆಯ ಅತ್ಯಾಚಾರ ಕೇಸ್‌: ಪ್ರಾಸಿಕ್ಯೂಷನ್‌ ವಿಫಲ- ಆರೋಪಿ ಖುಲಾಸೆ

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ವಿರುದ್ಧ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ  ಕೆ.ಎಸ್. ಮಾನು ಅವರು ಈ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದ ವಿವರ: 2025ರ ಜುಲೈ ಎರಡನೇ ವಾರದಲ್ಲಿ ಮೂಲ್ಕಿ ಬಪ್ಪನಾಡು ದೇವಸ್ಥಾನದ ಬಳಿಯಿಂದ ಅಪ್ರಾಪ್ತ ಬಾಲಕಿಯನ್ನು […]

LATEST NEWS

ಬ್ಯಾಂಕ್ ಆಫ್ ಬರೋಡಾ ಕಾರ್ ಲೋನ್ ಬಡ್ಡಿದರವನ್ನು 30 ಬೇಸಿಸ್ ಪಾಯಿಂಟ್‌ಗಳಿಂದ ಕಡಿಮೆ ಮಾಡಿ 7.60% ವಾರ್ಷಿಕಕ್ಕೆ ಇಳಿಕೆ

ಮಂಗಳೂರು: ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ, ಕಾರ್ ಲೋನ್ ಬಡ್ಡಿದರವನ್ನು ತಕ್ಷಣದಿಂದಲೇ 30 ಬೇಸಿಸ್ ಪಾಯಿಂಟ್‌ಗಳಿಂದ ಕಡಿಮೆ ಮಾಡಿರುವುದಾಗಿ ಪ್ರಕಟಿಸಿದೆ. ಬ್ಯಾಂಕ್‌ನ ಫ್ಲೋಟಿಂಗ್ ಬಡ್ಡಿದರ ಈಗ 7.60%* ವಾರ್ಷಿಕದಿಂದ ಆರಂಭವಾಗುತ್ತದೆ (ಹಿಂದೆ 7.90% ವಾರ್ಷಿಕ). ಬ್ಯಾಂಕ್ ಆಫ್ ಬರೋಡಾ ಕಾರ್ ಲೋನ್‌ಗಳಿಗೆ 8.50%* ವಾರ್ಷಿಕದಿಂದ ಆರಂಭವಾಗುವ ಆಕರ್ಷಕ ಸ್ಥಿರ ಬಡ್ಡಿದರವನ್ನೂ ಬ್ಯಾಂಕ್ ನೀಡುತ್ತದೆ. 7.60% ವಾರ್ಷಿಕದಿಂದ ಆರಂಭವಾಗುವ ಹೊಸ ದರವು ಹೊಸ ಕಾರ್ ಖರೀದಿಗೆ ಅನ್ವಯವಾಗಿದ್ದು, ಸಾಲಗಾರರ ಕ್ರೆಡಿಟ್ ಪ್ರೊಫೈಲ್‌ಗೆ ಅನುಗುಣವಾಗಿರುತ್ತದೆ. ಕಡಿತಗೊಂಡ […]