Month: February 2026

DAKSHINA KANNADA HOME LATEST NEWS

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಕೋಮು ದ್ವೇಷದ ಮಾತುಗಳನ್ನಾಡಿದ ಆರೋಪ ಹಾಗೂ ಯೂಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರಭಾಕರ್‌ ಭಟ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ”ಪ್ರಭಾಕರ್‌ಭಟ್‌ ಭಾಷಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದಕ್ಕೆ ಸಂಬಂಧಿಸಿದ […]

DAKSHINA KANNADA HOME LATEST NEWS STATE

ವಿಜಯಪುರದ ಮಂಗಳೂರಿನಲ್ಲಿ ಜೆಟ್‌ ವಿಮಾನ ಪತನ

ವಿಜಯಪುರ: ಖಾಸಗಿ ಜೆಟ್ ವಿಮಾನವೊಂದು ಪತನಗೊಂಡಿದ್ದು ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾದ ಘಟನೆ ವಿಜಯಪುರ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಫೆ.8 ರಂದು ನಡೆದಿದೆ. ಈ ವಿಮಾನದಲ್ಲಿ ಪೈಲಟ್ ಗಳಾದ ಗೌತಮ್ ಮತ್ತು ಕಂಪನಿ ಸಿಬ್ಬಂದಿ ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಪತಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೂ ಗಂಭೀರ ಪ್ರಮಾಣದ ಗಾಯಗಳಾಗಿದ್ದು ನಗರದ ಬಿಎಲ್‌ಡಿಇ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ದಾಖಲಿಸಲಾಗಿದೆ.

DAKSHINA KANNADA HOME LATEST NEWS

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ

ಮಂಗಳೂರು: ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.6ರಂದು ಕೆನರಾ ಬ್ಯಾಂಕ್ ಇ-ಹುಂಡಿಯನ್ನು (E Hundi) ಅಳವಡಿಸಿದೆ. ಕೆನರಾ ಬ್ಯಾಂಕ್‌ನ ಮಂಗಳೂರು ವಲಯ ಮುಖ್ಯಸ್ಥರಾದ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ  ಸನತ್ ಕುಮಾರ್ ಶೆಟ್ಟಿ ಮತ್ತು  ಹರಿನಾರಾಯಣದಾಸ ಅಸ್ರಣ್ಣ ಅವರು ಉದ್ಘಾಟಿಸಿದರು. ಈ ಇ-ಹುಂಡಿ ಸೌಲಭ್ಯವು ಭಕ್ತರಿಗೆ ಡಿಜಿಟಲ್ ರೂಪದಲ್ಲಿ ಕಾಣಿಕೆ ಸಲ್ಲಿಸಲು ಸಹಾಯ ಮಾಡುತ್ತದೆ. ಈ ಭಾಗದ ದೇವಾಲಯ/ಸಂಸ್ಥೆಗಳಲ್ಲಿ ಕೆನರಾ ಬ್ಯಾಂಕ್ ಅಳವಡಿಸಿರುವ ಆರನೇ ಇ-ಹುಂಡಿ ಇದಾಗಿದೆ. ಈ ಸಂದರ್ಭದಲ್ಲಿ ಬ್ಯಾಂಕಿನ […]

DAKSHINA KANNADA HOME LATEST NEWS

ವಿಟ್ಲ: ರಸ್ತೆ ದಾಟುತ್ತಿದ್ದಾಗ ಮಹಿಳೆಗೆ ಬೈಕ್‌ ಢಿಕ್ಕಿಯಾಗಿ ಸಾವು- ಸವಾರ ಗಂಭೀರ

ವಿಟ್ಲ: ಪಾದಾಚಾರಿ ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. .ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.  

DAKSHINA KANNADA HOME

*ಅಕ್ರಮ‌ಸಕ್ರಮ ಭೈಠಕ್, ಹಕ್ಕು ಪತ್ರ ವಿತರಣೆ ಬಡವರ ದೂರು ನನ್ನ ಬಳಿ ಬಾರದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಸೂಚನೆ*

ಪುತ್ತೂರು: ಕಳೆದ ಹಲವು ವರ್ಷಗಳ ಹಿಂದೆ ತಾವು ಮನೆ ಕಟ್ಟಿಕೊಂಡಿರುವ ಜಾಹದ ಅಡಿಸ್ಥಳಕ್ಕೆ ಸಲ್ಲಿಸಿದ ಅರ್ಜಿಯನ್ನು ಮಾನ್ಯ ಮಾಡಲೇಬೇಕು, ಅವರನ್ನು ಸತಾಯಿಸಬಾರದು, ತಿಳುವಳಿಕೆ ಕೊರತೆ ಇರುವ ಕೆಲವು ಗ್ರಾಮೀಣ ಭಾಗದ ಜನರು ಹಲವು ದೂರುಗಳನ್ನು ನೀಡಿದ್ದಾರೆ,‌ಮುಂದಕ್ಕೆ ಯಾವುದೇ ದೂರುಗಳು ನನ್ನ ಬಳಿ ಬಾರದ ಹಾಗೆ ನೋಡಿಕೊಳ್ಳಿ ಎಂದು ಕಂದಾಯ ವಿಭಾಗದ ಎಲ್ಲಾ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಮನೆ ಕಟ್ಟಲು ಜಾಗವಿಲ್ಲದೆ ಸರಕಾರಿ ಜಾಗದಲ್ಲಿ ಮನೆ ಮಾಡಿಕೊಂಡಿರುವ ಬಡವರು ತಮ್ಮ ಅಡಿಸ್ಥಳದ ದಾಖಲೆ ಪತ್ರ […]

DAKSHINA KANNADA

*ಸಂಗೀತ ಹಾಗೂ ಸಾಹಿತ್ಯ ಧರ್ಮದ ಭಾಗ: ಡಿಸಿಎಂ ಡಿ.ಕೆ. ಶಿವಕುಮಾರ್*

ಪುತ್ತೂರು, ಫೆ.06: ಹಾಡು ಕೇವಲ ಶಬ್ಧವಲ್ಲ. ಅದೊಂದು ಭಾವನೆ. ಸಂಗೀತ ಹಾಗೂ ಸಾಹಿತ್ಯ ಧರ್ಮದ ಭಾಗವಾಗಿದೆ. ಈ ಕಲೆಯನ್ನು ಕಾಂಚನ ಸಂಸ್ಥೆ ಹಾಗೂ ಈ ಊರಿನ ಜನತೆ ಬೆಳೆಸಿಕೊಂಡು ಬರುತ್ತಿರುವುದು ಬಹಳ ಸಂತೋಷ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪುತ್ತೂರಿನಲ್ಲಿ ಶುಕ್ರವಾರ ನಡೆದ 72ನೇ ವರ್ಷದ ಕಾಂಚನೋತ್ಸವ 2026 ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಇಂದು ನಾನು ಕೃಷಿಗೆ ಸಂಬಂಧಿಸಿದ ಅಂತರರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ಬಿಟ್ಟು ಈ […]

DAKSHINA KANNADA HOME LATEST NEWS

ಬೆಳ್ತಂಗಡಿಯಲ್ಲಿ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ: ಸಿಸಿಟಿವಿಯಲ್ಲಿ ಸೆರೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚಾಗುತ್ತಿದ್ದು, ಛಾವಣಿಯಲ್ಲಿ ಮಲಗಿದ್ದ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಇದರಿಂದ ತಾಲೂಕಿನಾದ್ಯಂತ ಜನರನ್ನು ಬೆಚ್ಚಿಬೀಳಿಸುವಂತಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಫೆ.5 ರ ಮಧ್ಯರಾತ್ರಿ  ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದಿಡುಪೆ ಕುಂಡಾಲ್ ಮನೆ ಜಯಂತ್ ಎಂಬವರ ಮನೆಯ ಹೊರಛಾವಣಿಯಲ್ಲಿದ್ದ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ನಾಯಿಯನ್ನು ಹೊತ್ತೊಯ್ದ ದೃಶ್ಯವು ಅವರ ಮನೆಯ ಸಿಸಿ ಟಿವಿಯಲ್ಲಿಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ […]

DAKSHINA KANNADA HOME

*ಬಹು ನಿರೀಕ್ಷಿತ “ನಾನ್ ವೆಜ್“ ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ*

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ, ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ.ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗಿರುವ ” ನಾನ್ ವೆಜ್” ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ದೀಪ ಬೆಳಗಿಸಿ ಸಿನಿಮಾಕ್ಕೆ ಶುಭ ಹಾರೈಸಿದ ಹಿರಿಯ ವಕೀಲ ಮಯೂರಕೀರ್ತಿ ಅವರು, “ನನಗೆ ಸಿನಿಮಾ ಬಿಡುಗಡೆಗೆ ಅವಕಾಶ ನೀಡಿರುವುದು ಒಬ್ಬ ನೈಜ ತುಳು ಸಿನಿಮಾ ಪ್ರೇಕ್ಷಕನಿಗೆ ಸಂದ ದೊಡ್ಡ ಗೌರವ. ನಾನು ಬಹುತೇಕ ಎಲ್ಲ ತುಳು ಸಿನಿಮಾಗಳನ್ನು ನೋಡುತ್ತೇನೆ. ಈ ಹಿಂದೆ “ಚಾಲಿಪೋಲಿಲು” ಅನ್ನುವ ತುಳು ಚಿತ್ರ ನಿರ್ಮಿಸಿ […]

DAKSHINA KANNADA HOME LATEST NEWS

ಕೇಪುವಿನಲ್ಲಿ ಕೋಳಿ ಅಂಕ ಪ್ರಕರಣ: MLA ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್‌

ಪುತ್ತೂರು:  ವಿಟ್ಲದ ಕೇಪು ಎಂಬಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಕೋಳಿ ಅಂಕ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್‌ ರೈ ಅವರ ವಿರುದ್ಧದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಡಿ. 20ರಂದು ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಸಲು ಮುಂದಾಗುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಠಾಣಾ ಅಧಿಕಾರಿ/ಸಿಬ್ಬಂದಿ ಸ್ಥಳಕ್ಕೆ […]

DAKSHINA KANNADA HOME LATEST NEWS

ಪಿಲಿಕುಳ ಎಂದಿನಂತೆ ವೀಕ್ಷಣೆಗೆ ಮುಕ್ತ: ಸುಳ್ಳು ಸುದ್ದಿಗೆ ಆಯುಕ್ತರಿಂದ ಸ್ಪಷ್ಟನೆ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ನಿರ್ವಹಣೆಯ ಬಗ್ಗೆ ಸ್ವೀಕೃತವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇದುವರೆಗೆ ಯಾವುದೇ ತೀರ್ಪು/ನಿರ್ದೇಶನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಂದಿರುವುದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪಿಲಿಕುಳ ಜೈವಿಕ ಉದ್ಯಾನವನವು ಎಂದಿನಂತೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಪತ್ರಿಕಾ ಸ್ಪಷ್ಟನೆ ನೀಡಿದೆ.