Month: February 2026

DAKSHINA KANNADA HOME LATEST NEWS

ಮಂಗಳೂರು: ಯುವತಿ ಮೃತದೇಹವಿಟ್ಟು ಪ್ರತಿಭಟಿಸಿದ 50 ಮಂದಿ ವಿರುದ್ಧ FIR

ಮಂಗಳೂರು: ನಂತೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಯುವತಿಯ ಮೃತದೇಹವನ್ನಿಟ್ಟು ಪ್ರತಿಭಟಿಸಿದ ಸುಮಾರು 50 ಮಂದಿ ವಿರುದ್ಧ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿಗಳನ್ನು 1) ಅಮೀತ್, ವಿವೇಕನಗರ ಬಲ್ಲಾಳ್ ಭಾಗ್ 2) ಕೀರ್ತನ್ ,ವಿವೇಕನಗರ ಬಲ್ಲಾಳ್ ಭಾಗ್ 3) ನವೀತ್ ವಿವೇಕನಗರ , ಬಲ್ಲಾಳ್ ಭಾಗ್  4) ಭರತ್ ರಾಜ್  ವಿವೇಕನಗರ ಬಲ್ಲಾಳ್ ಭಾಗ್ ,5) ಪವನ್, ವಿವೇಕನಗರ ಬಲ್ಲಾಳ್ ಭಾಗ್ 6) ಲೋಕೆಶ್,ಮಂಗಳಾದೇವಿ,7) ಮನ್ವೀತ್ ಬಲ್ಲಾಳ್ ಭಾಗ್ 8) ಅನೀಲ ಕುಮಾರ್ ಕಂಕನಾಡಿ […]

LATEST NEWS

ವೆಂಕಟೇಶ ನಾಯಕ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಅರ್ಥಶಾಸ್ತ್ರ ವಿಭಾಗದಲ್ಲಿ ನಡೆಸಿದ ಸಂಶೋಧನೆಗಾಗಿ ವೆಂಕಟೇಶ ನಾಯಕ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿಯನ್ನು ಪ್ರದಾನ ಮಾಡಿದೆ. ವೆಂಕಟೇಶ ನಾಯಕ್ ಅವರು “ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ – ಒಂದು ಪ್ರಕರಣ ಅಧ್ಯಯನ” ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರೌಢ ಪ್ರಬಂಧವನ್ನು ಸಲ್ಲಿಸಿದ್ದರು. ಈ ಅಧ್ಯಯನವು ವಿಶೇಷವಾಗಿ ಅತೀ ಅಸುರಕ್ಷಿತ ಜನಾಂಗ (PVTG) ಆಗಿರುವ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ ಕಾರ್ಯಕ್ರಮಗಳ ವ್ಯಾಪ್ತಿ, ಸವಾಲುಗಳು ಹಾಗೂ […]

HOME LATEST NEWS STATE

ಸೂಲಿಬೆಲೆ & ಹಾರಿಕಾಗೆ ನಿರ್ಬಂಧಿಸಿದ್ದ ಪೊಲೀಸ್‌ ನೋಟಿಸ್‌ ರದ್ದುಗೊಳಿಸಿದ ಹೈಕೋರ್ಟ್‌

ಬೆಳಗಾವಿ:  ಫೆಬ್ರವರಿ 6 ಮತ್ತು 8ರಂದು ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಲು ಚಕ್ರವರ್ತಿ ಸೂಲಿಬೆಲೆ ಮತ್ತು ಹಾರಿಕಾ ಮಂಜುನಾಥ್‌ಗೆ ನಿರ್ಬಂಧಿಸಿದ್ದ ಪೊಲೀಸ್‌ ನೋಟಿಸ್‌ಗಳನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ರದ್ದುಗೊಳಿಸಿದೆ. ಜ.22 ರಂದು ಅನುಮತಿ ನಿರಾಕರಿಸಿ ಪೊಲೀಸರು ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಹಿಂದೂ ಸಮ್ಮೇಳನ ಸಮಿತಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಸೂಲಿಬೆಲೆ ಮತ್ತು ಹಾರಿಕಾ ಅವರು ಉಂಟು ಮಾಡಬಹುದಾದ ಸಮಸ್ಯೆಗೆ ಸಂಬಂಧಿಸಿದಂತೆ ಪುರಾವೆಗಳಿಲ್ಲದೆ, ಅವರ ವಿರುದ್ಧ ಕೆಲವು […]

DAKSHINA KANNADA HOME

*ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಶಿಲಾನ್ಯಾಸ: ಡಿಸಿಎಂ ಡಿ.ಕೆ. ಶಿವಕುಮಾರ್*

ಪುತ್ತೂರು, ಫೆ.06: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್‌ ಗಾಂಧಿ ಅವರು ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಚಾಲನೆ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಇದರ ದಿನಾಂಕ ತಿಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪುತ್ತೂರಿನಲ್ಲಿ ಕಾಂಗ್ರೆಸ್ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ನಂತರ ಮಾಧ್ಯಮಗಳಿಗೆ ಶುಕ್ರವಾರ ರಾತ್ರಿ ಪ್ರತಿಕ್ರಿಯೆ ನೀಡಿದರು. “ರಾಜ್ಯದಾದ್ಯಂತ ಎಲ್ಲೆಲ್ಲಿ ಕಾಂಗ್ರೆಸ್ ಭವನಗಳಿಗೆ ನಿವೇಶನಗಳು ಸಿದ್ಧವಿದೆಯೋ ಅವರೆಲ್ಲರಿಗೂ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತಯಾರಿ ಮಾಡಿಕೊಳ್ಳಿ ಎಂದು ಸಂಬಂಧಪಟ್ಟವರಿಗೆ ತಿಳಿಸಿದ್ದೇನೆ. ಪವಿತ್ರವಾದ ದಿನದಂದು ಪುತ್ತೂರಿನ […]

DAKSHINA KANNADA HOME LATEST NEWS

ವಿಟ್ಲ: ಹಿಟ್‌ ಆ್ಯಂಡ್‌ ರನ್‌ ಕೇಸ್‌ನ ಓಮ್ನಿ ಪತ್ತೆ

ವಿಟ್ಲ: ಕಳೆದ ಆದಿತ್ಯವಾರ ನಡೆದ ಹಿಟ್‌ ಆ್ಯಂಡ್‌ ರನ್‌ ಕೇಸ್‌ನಲ್ಲಿ ನಾಪತ್ತೆಯಾಗಿದ್ದ ಓಮ್ನಿ ವಾಹನ ಪತ್ತೆಯಾಗಿದೆ. ಕಳೆದ ಆದಿತ್ಯವಾರ ಸಾಲೆತ್ತೂರು-ವಿಟ್ಲ ರಸ್ತೆಯ ಕಡಂಬು ಎಂಬಲ್ಲಿ ವಿಟ್ಲದ ಕಡೆಗೆ ಹೋಗುತ್ತಿದ್ದ ಹೋಂಡಾ ಡಿಯೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಇದೇ ಓಮ್ನಿ ವಾಹನ ಕುಡ್ತಮುಗೇರು ಸಾಲೆತ್ತೂರು ಮಾರ್ಗವಾಗಿ ಮತ್ತೆ ಇಂದು ಪ್ರತ್ಯಕ್ಷವಾದ ವ್ಯಾನ್‌ ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ. ಕೆ.ಎ.19ಎಮ್‌.ಹೆಚ್‌ 1518 ಮಾರುತಿ ವ್ಯಾನ್‌ ಪರಾರಿಯಾಗಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇಂದು ಈ ವ್ಯಾನ್‌ ಕಣ್ಣಿಗೆ ಕಾಣುತ್ತಿರುವಂತೇಯೇ ಗ್ರಾಮಸ್ಥರು ವ್ಯಾನನ್ನು […]

DAKSHINA KANNADA HOME LATEST NEWS

ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ ಟ್ರೈಲರ್‌ ಢಿಕ್ಕಿ: ಓರ್ವ ಗಂಭೀರ

ಮುಲ್ಕಿ: ರಸ್ತೆ ಬದಿ ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ ಟ್ರೈಲರ್‌ ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡಿರುವ ಘಟನೆ ಪಾವಂಜೆ ದೇವಸ್ಥಾನದ ಮುಂಭಾಗ ಇಂದು ಸಂಜೆ ನಡೆಸಿದೆ. ಗಾಯಗೊಂಡವರನ್ನು‌ ಶಿಕ್ಷಕಿ ಕುಸುಮಾ ಮತ್ತು ಅವರ ಮಗಳು ಸುಮಲತಾ (14) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಾವಂಜೆಯಲ್ಲಿ ನಿಂತು ಬಸ್ ಕಾಯುತ್ತಿದ್ದ ವೇಳೆ ಮಂಗಳೂರು- ಉಡುಪಿ ಕಡೆ ಸಂಚರಿಸುತ್ತಿದ ಟ್ರೈಲರ್‌ ಢಿಕ್ಕಿ ಹೊಡೆದಿದೆ. ಘಟನೆಯಿಂದ ಕುಸುಮಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸುಮಲತಾ ಅವರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ […]

DAKSHINA KANNADA HOME

*ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ನೂರು ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿಕೆ ಶಿವಕುಮಾರ್*

ಮಂಗಳೂರು, ಫೆ. 06: ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲಾ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. “ಇಂದು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಮಾರ್ಚ್ 10ಕ್ಕೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ […]

DAKSHINA KANNADA HOME

*ನಂತೂರ್ ಜಂಕ್ಷನ್‌ನಲ್ಲಿನ ಸಂಚಾರ ಸಮಸ್ಯೆ ಮತ್ತು ಅಪಘಾತ ತಡೆಗೆ ಶಾಸಕ ಶ್ರೀ ಐವನ್ ಡಿಸೋಜಾ ಅವರಿಂದ ಸ್ಥಳ ಪರಿಶೀಲನೆ*

ಮಂಗಳೂರು: ನಗರದ ಅತ್ಯಂತ ಜನನಿಬಿಡ ಹಾಗೂ ಅಪಘಾತ ವಲಯವಾಗಿ ಮಾರ್ಪಟ್ಟಿರುವ ನಂತೂರ್ ಜಂಕ್ಷನ್‌ಗೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿಸೋಜಾ ಅವರು ಭೇಟಿ ನೀಡಿ, ಸಂಚಾರಿ ಪೊಲೀಸ್ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗ ಳೊಂದಿಗೆ ಜಂಟಿ ಸ್ಥಳ ಪರಿಶೀಲನೆ ನಡೆಸಿದರು ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಅಧಿಕಾರಿಗಳು ಶಾಸಕರಿಗೆ ಇಲ್ಲಿನ ನ್ಯೂನತೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು: ಸುರಕ್ಷತಾ ಕ್ರಮಗಳ ಕೊರತೆ: ಜಂಕ್ಷನ್‌ನಲ್ಲಿ ಸಮರ್ಪಕ ಬೀದಿ ದೀಪಗಳು, ಜೀಬ್ರಾ ಕ್ರಾಸಿಂಗ್‌ಗಳು ಮತ್ತು […]

HOME

*ಹೆದ್ದಾರಿ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ*

ಮಂಗಳೂರು,ಫೆ.6 : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ವಿವಿದೆಡೆ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಅಗಲೀಕರಣ, ಬೈಪಾಸ್, ಫ್ಲೈ ಓವರ್ ಸೇರಿದಂತೆ ಒಟ್ಟು 24 ವಿವಿಧ ಕಾಮಗಾರಿಗಳನ್ನು ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗುರುತಿಸಲಾಗಿತ್ತು. ಆದರೆ ಕೆಲವು ಪ್ರಮುಖ ಸ್ಥಳಗಳಲ್ಲಿ ಸಂಚಾರ ಕಾರಣ […]

DAKSHINA KANNADA HISTORY

*ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್‌ ಚೌಟ*

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಹೆದ್ದಾರಿ ಯೋಜನೆಗಳ ಕಾಮಗಾರಿ ಪ್ರಗತಿ ಬಗ್ಗೆ ಸಂಸದರು ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದಾರೆ. ಅಲ್ಲದೆ, ಈ ಯೋಜನೆಗಳ ಕಾಮಗಾರಿಗಳನ್ನು ಯಾವುದೇ ವಿಳಂಬವಾಗದಂತೆ ಗಮನಹರಿಸುವ ಮೂಲಕ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು […]