Month: March 2026

DAKSHINA KANNADA

*ಮಂಗಳೂರು ಸೇರಿದಂತೆ ರಾಜ್ಯದ ಐಟಿ-ಬಿಟಿ ಪ್ರಗತಿ ಬಗ್ಗೆ ಸದನದಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರಶ್ನೆ*

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಆರಂಭಗೊಂಡಿರುವ ಐಟಿ/ಬಿಟಿ ಕಂಪನಿಗಳು, ಸ್ಟಾರ್ಟ್‌ಅಪ್‌ಗಳು ಮತ್ತು ಈ ಕ್ಷೇತ್ರದಲ್ಲಿ ಆಗಿರುವ ಬಂಡವಾಳ ಹೂಡಿಕೆಯ ಕುರಿತು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ರಾಜ್ಯಾದ್ಯಂತ ಎಷ್ಟು ಹೊಸ ಒಡಂಬಡಿಕೆಗಳು (MoUs) ನಡೆದಿವೆ ಮತ್ತು ಜಿಲ್ಲಾವಾರು ಎಷ್ಟು ಜನರಿಗೆ ಉದ್ಯೋಗಾವಕಾಶಗಳು ಲಭ್ಯವಾಗಿವೆ […]

DAKSHINA KANNADA HOME STATE

*ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಚಾತುರ್ಯ ಯುವ ನಾಯಕರಿಗೆ ಮಾದರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘನೆ*

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, “ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ಧತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು. ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್‌ಗಳನ್ನು ಹಾಕಿ ಬಗೆಬಗೆಯ ಕಿರುಕುಳ ನೀಡಿದರೂ, ಅವರು ಯಾವುದಕ್ಕೂ ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಮೇಲಿರುವ […]

DAKSHINA KANNADA HOME

*ಅಮೇರಿಕಾದ ಯುದ್ದಕೋರ ನೀತಿಗಳು ದುಡಿಯುವ ವರ್ಗಕ್ಕೆ ಮಾರಕ – ಕೆ ಮಹಾಂತೇಶ್*

ಮಂಗಳೂರು. ಮಾ 11 :ಅಮೇರಿಕಾ ಇಸ್ರೇಲ್ ನ ಯುದ್ದಕೋರ ನೀತಿಗಳಿಂದಾಗಿ ಜಗತ್ತಿನೆಲ್ಲಡೆ ಯುದ್ಧದ ಕಾರ್ಮೋಡ ಕವಿದಿದ್ದು,ಜನಸಾಮಾನ್ಯರು ತೀವ್ರ ಆತಂಕದಲ್ಲಿದ್ದಾರೆ.ಅಮೇರಿಕನ್ ಸಾಮ್ರಾಜ್ಯಶಾಹಿ ರಾಷ್ಟಗಳು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು,ಅದನ್ನು ಸಮದೂಗಿಸಲು ಪ್ರತೀ ಸಂದರ್ಭದಲ್ಲೂ ಯುದ್ದವನ್ನೇ ಅಸ್ತ್ರವನ್ನಾಗಿಸಿದೆ.ಇದರಿಂದಾಗಿ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿದ್ದು ದುಡಿಯುವ ವರ್ಗದ ಬದುಕು ಸಂಕಷ್ಟಕ್ಕೀಡಾಗಿದೆ. ಈ ಮೂಲಕ ಅಮೇರಿಕಾದ ಯುದ್ದಕೋರ ನೀತಿಗಳು ದುಡಿಯುವ ವರ್ಗಕ್ಕೆ ಮಾರಕವಾಗಿ ಪರಿಣಮಿಸಿದೆ* ಎಂದು CITU ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಕೆ ಮಹಾಂತೇಶ್ ರವರು ಅಭಿಪ್ರಾಯಪಟ್ಟರು. CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ […]

DAKSHINA KANNADA HOME

*ವಿಶ್ವಾಸ, ಪ್ರೀತಿ, ಗೌರವ ಇದ್ದಲ್ಲಿ ಸಮಸ್ಯೆ ಇಲ್ಲ: ಮೌಲಾನಾ ಅಬ್ದುಲ್ ಹಮೀದ್ ದಾರಿಮಿ*

ಮಂಗಳೂರು: ಮಾ.10 : “ಮನುಷ್ಯನ ನಡೆ, ನುಡಿ ಮತ್ತು ಗುಣ ಸರಿಯಿದ್ದಲ್ಲಿ ಜೀವನ ಸುಂದರವಾಗಿರುತ್ತದೆ. ಹೃದಯದಲ್ಲಿ ಮೃದುತ್ವ, ಶಾಂತಿ ಹಾಗೂ ಕರುಣೆ ಹೊಂದಿರಬೇಕು. ಸಮಾಜದಲ್ಲಿ ಪರಸ್ಪರ ವಿಶ್ವಾಸ, ಪ್ರೀತಿ ಮತ್ತು ಗೌರವ ನೆಲೆಸಿದಾಗ ಯಾವುದೇ ಸಮಸ್ಯೆಗಳು ಉದ್ಭವಿಸುವುದಿಲ್ಲ” ಎಂದು ಚೊಕ್ಕಬೆಟ್ಟುವಿನ ಮೊಹಿಯುದ್ದೀನ್ ಜುಮಾ ಮಸ್ಜಿದ್‍ನ ಧರ್ಮಗುರುಗಳಾದ ಮೌಲಾನಾ ಯು.ಕೆ. ಅಬ್ದುಲ್ ಅಜೀಜ್ ದಾರಿಮಿ ತಿಳಿಸಿದರು. ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದ ಆವರಣದಲ್ಲಿ ‘ಸಂತ ಮದರ್ ತೆರೆಸಾ ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸೌಹಾರ್ದ ಇಫ್ತಾರ್ […]

HOME STATE

*ಎಲ್.ಪಿ ಜಿ ಸಿಲಿಂಡರ್ ದರ ಹೆಚ್ಚಳ ಸರಿಯಲ್ಲ*: *ಸಿಎಂ ಸಿದ್ದರಾಮಯ್ಯ*

ಬೆಂಗಳೂರು, ಮಾರ್ಚ್ 09: ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್.ಪಿ ಜಿ ಸಿಲಿಂಡರ್ ಗೆ 115ರೂ. ಗಳನ್ನು ಹಾಗೂ ಮನೆ ಬಳಕೆಯ ಸಿಲಿಂಡರ್ ಗೆ 60 ರೂ ಹೆಚ್ಚಳ ಮಾಡಿದೆ. ಇದು ಬಹಳ ಹೆಚ್ಚಾಗಿದೆ ಎನ್ನುವುದು ಎಲ್ಲರ ಅಭಿಪ್ರಾಯ. ಅವರು ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸಿಲಿಂಡರ್ ಸರಬರಾಜಿನ ಕುರಿತು ಆತಂಕವಿರುವುದು ಬೇರೆ ವಿಷಯ ಆದರೆ ಎಲ್ ಪಿ ಜಿ ದರ ಹೆಚ್ಚಳವಾಗಿದೆ ಎನ್ನುವುದು ಬೇರೆ ವಿಷಯ ಎಂದು […]

DAKSHINA KANNADA

*ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಉದ್ಯಮಿಗಳ ಎಕ್ಸ್‌ಪೋ*

ಮಂಗಳೂರು, ಮಾರ್ಚ್ 9: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಂಗಳೂರಿನ ಕೆನರಾ ಕಾಲೇಜು (ಸ್ವಾಯತ್ತ) ಮತ್ತು ರೋಟರಿ ಮಂಗಳೂರು ಮೆಟ್ರೋ ಇವರ ಜಂಟಿ ಆಶ್ರಯದಲ್ಲಿ ಇಂದು ಕಾಲೇಜು ಆವರಣದಲ್ಲಿ ಮಹಿಳಾ ದಿನಾಚರಣೆ ಹಾಗೂ ‘ಮಹಿಳಾ ಉದ್ಯಮಿಗಳ ಎಕ್ಸ್‌ಪೋ’ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕೆನರಾ ಹೈಸ್ಕೂಲ್ ಅಸೋಸಿಯೇಷನ್‌ನ ಕರಸ್ಪಾಂಡೆಂಟ್ ಸಿಎ ಎಂ. ಜಗನ್ನಾಥ್ ಕಾಮತ್ ಹಾಗೂ ಮ್ಯಾನೇಜರ್ ಶ್ರೀ ಎಂ. ಶಿವಾನಂದ ಶೆಣೈ ಅವರು ಉದ್ಘಾಟಿಸಿ, ಮಹಿಳೆಯರ ಸ್ವಾವಲಂಬಿ ಬದುಕಿಗೆ ಇಂತಹ ಪ್ರದರ್ಶನಗಳು ಪೂರಕವಾಗಿವೆ ಎಂದು ಶುಭ […]

DAKSHINA KANNADA

*ಪ್ರತಿಭಾ ಪಲಾಯನ ಕಳವಳಕಾರಿ: ಜಿ.ಪಂ.ಉಪಕಾರ್ಯದರ್ಶಿ ಜಯಲಕ್ಷ್ಮೀ*

ಮಂಗಳೂರು, ಮಾ.09: ದಕ್ಷಿಣ ಕನ್ನಡ ಜಿಲ್ಲೆಯು ಶೈಕ್ಷಣಿಕವಾಗಿ ಉನ್ನತ ಸ್ಥಾನದಲ್ಲಿದ್ದರೂ, ಇಲ್ಲಿನ ಪ್ರತಿಭಾವಂತರು ವೃತ್ತಿ ಬದುಕಿಗೆ ಹೊರರಾಜ್ಯ ಮತ್ತು ವಿದೇಶಗಳನ್ನು ಅವಲಂಭಿಸುತ್ತಿದ್ದು, ಇದರಿಂದ ಸ್ಥಳೀಯ ಕೌಶಲ್ಯ ಉದ್ಯೋಗಗಳಿಗೆ ಅರ್ಹರು ಲಭ್ಯವಾಗದಿರುವುದು ಕಳವಳಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ಹೇಳಿದ್ದಾರೆ. ಅವರು ಸೋಮವಾರ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನೆಯನ್ನು ತಯಾರಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐಎಎಸ್/ಐಪಿಎಸ್‍ಗಳನ್ನು ಆಯ್ಕೆ ಮಾಡುವ ಯುಪಿಎಸ್‍ಸಿ ಫಲಿತಾಂಶ ಇತ್ತೀಚೆಗೆ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ/ಪಿಯುಸಿ […]

DAKSHINA KANNADA

*ವೆನ್‌ಲಾಕ್ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ – ಆಸಿಡ್ ಸಂತ್ರಸ್ತೆಗೆ ಸಾಂತ್ವನ*

ಮಂಗಳೂರು : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಮಹಿಳಾ ವಾರ್ಡ್‌ಗಳಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇತ್ತೀಚೆಗೆ ಆಸಿಡ್ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿ ಮಾಡಿದ ಅಧ್ಯಕ್ಷರು, ಅವರ ಆರೋಗ್ಯದ ಬಗ್ಗೆ ವಿಚಾರಿಸಿ ಸಾಂತ್ವನ ಹೇಳಿದರು. ಸಂತ್ರಸ್ತೆಗೆ ಸರ್ಕಾರದಿಂದ ಸಿಗಬೇಕಾದ ಸೂಕ್ತ ಪರಿಹಾರ ಮತ್ತು ನೆರವು ಕೊಡಿಸುವ ಬಗ್ಗೆ ಈ ಸಂದರ್ಭದಲ್ಲಿ ಭರವಸೆ ನೀಡಿದರು. ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ನೀಡಲಾಗುತ್ತಿರುವ ವೈದ್ಯಕೀಯ ಚಿಕಿತ್ಸೆ ಮತ್ತು […]

HOME

10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ – 2026

ಮಾ. 8 ರಿಂದ 11 ರವರೆಗೆ ವಿದ್ವತ್ ಪಿಯು ಕಾಲೇಜಿನಲ್ಲಿ ಆಯೋಜನೆ ಬೆಳ್ತಂಗಡಿ: ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯು ಶಿಕ್ಷಣವೂ ಒಂದು ಪ್ರಮುಖ ಹಂತವಾಗಿದೆ. “10ನೇ ತರಗತಿಯ ಬಳಿಕ ಮುಂದೇನು?” ಎಂಬ ಪ್ರಶ್ನೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ […]

HOME

ಮಂಜೇಶ್ವರ: ಸ್ನೇಹಾಲಯದಲ್ಲಿ ಮಹಿಳಾ ದಿನಾಚರಣೆ ಸಂಭ್ರಮ

ಮಂಜೇಶ್ವರ: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾ.8ರಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶವನ್ನು ವ್ಯಕ್ತಪಡಿಸಿದರು. ಪರಿಸರ ಜಾಗೃತಿಯನ್ನು ಪ್ರತಿಬಿಂಬಿಸುವಂತೆ ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ವ್ಯಸನಮುಕ್ತಿ ಕೇಂದ್ರದ ವ್ಯವಸ್ಥಾಪಕರಾದ ರಾಕೇಶ್ ಲೋಬೋ ಅವರು ಸ್ವಾಗತ ಭಾಷಣ ಮಾಡಿ ಅಂತರಾಷ್ಟ್ರೀಯ ಮಹಿಳಾ ದಿನದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ […]