Month: March 2026

INETRNATIONAL

ಖಾಮಿನೈ ಅವರ ಎರಡನೇ ಪುತ್ರ ಮೊಜ್ತಬಾ ಇರಾನ್‌ನ ನೂತನ ಸರ್ವೋಚ್ಛ ನಾಯಕ

ಟೆಹ್ರಾನ್: ಆಯತುಲ್ಲಾ ಅಲಿ ಖಾಮಿನೈ ಅವರ ಎರಡನೇ ಪುತ್ರ ಮೊಜ್ತಬಾ ಖಾಮಿನೈ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಗಲ್ಫ್‌ ಮಾಧ್ಯಮಗಳು  ವರದಿ ಮಾಡಿದೆ. ಇವರ ಆಯ್ಕೆಗೆ ಐಆರ್‌ಜಿಸಿ ಸಹ ಸಮ್ಮತಿ ನೀಡಿದೆ ಎಂದು ತಿಳಿದು ಬಂದಿದೆ. ಅಮೆರಿಕ ಹಾಗೂ ಇಸ್ರೇಲ್, ಇರಾನ್ ಮೇಲೆ ನಡೆಸಿದ ಯುದ್ಧದ ಮೊದಲ ದಿನವೇ ಸರ್ವೋಚ್ಚ ನಾಯಕರಾಗಿದ್ದ ಆಯತುಲ್ಲಾ ಅಲಿ ಖಾಮಿನೈ ಅವರು ಮೃತಪಟ್ಟಿದ್ದರು. 56 ವರ್ಷದ ಧರ್ಮಗುರು ಆಗಿರುವ ಮೊಜ್ತಬಾ ಖಾಮಿನೈ, ಇರಾನ್‌ ನ ಧಾರ್ಮಿಕ […]

DAKSHINA KANNADA

*ವಂಶಾವಳಿ ತಿಳಿಯುವುದು ಕುತೂಹಲಕ್ಕೆ ಮಾತ್ರ ಅಗತ್ಯ: ವಂಶಾವಳಿ ತಜ್ಞ ಡಾ. ಮೈಕಲ್ ಲೋಬೊ*

ಮಂಗಳೂರು: “ಕ್ರೈಸ್ತ ವಂಶಾವಳಿಯನ್ನು ತಿಳಿಯಲು ಚರ್ಚ್ ದಾಖಲೆಗಳು ಸಹಕಾರಿಯಾಗುತ್ತವೆ. ಆದರೆ ಇದೊಂದು ಕುತೂಹಲ ತಣಿಸುವ ಕೆಲಸವಷ್ಟೇ ಹೊರತು ಬೇರೆ ಹೆಚ್ಚಿನ ಉಪಯೋಗ ಕಾಣಿಸುವುದಿಲ್ಲ” ಎಂದು ವಂಶಾವಳಿ ತಜ್ಞ ಡಾ. ಮೈಕಲ್ ಲೋಬೊ ಅಭಿಪ್ರಾಯಪಟ್ಟರು. ಕೊಂಕಣಿ ಭಾಷಾ ಮಂಡಳ್ ಕರ್ನಾಟಕ (ರಿ.) ಇದರ 52ನೇ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಾರ್‌ಸ್ಟ್ರೀಟ್‌ನ ಬಿಇಎಮ್ ಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ವಂಶಾವಳಿ’ ಕಾರ್ಯಕ್ರಮದಲ್ಲಿ ಅವರು ಪ್ರಮುಖ ಭಾಷಣಕಾರರಾಗಿ ಮಾತನಾಡುತ್ತಿದ್ದರು. ಸಾವಿರಾರು ಪುಟಗಳ ವಂಶಾವಳಿ ಸಂಶೋಧನಾ ಪುಸ್ತಕ ಪ್ರಕಟಿಸಿರುವ ಅವರು, ಈ ಕ್ಷೇತ್ರಕ್ಕೆ ನೀಡಿದ […]

DAKSHINA KANNADA

*ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ನಂದನ್ ಮಲ್ಯ ಮರು ಆಯ್ಕೆ*

ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲಾಧ್ಯಕ್ಷರಾಗಿ ನಂದನ್ ಮಲ್ಯ ಅವರು ಎರಡನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ನೂತನ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ನಂದನ್ ಮಲ್ಯ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಜಿಲ್ಲಾ […]

DAKSHINA KANNADA

*ವಿಶ್ವ ಮಹಿಳಾ ದಿನಾಚರಣೆ: ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸನ್ಮಾನ*

ಮಂಗಳೂರು: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಹಾಗೂ ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಮಾರ್ಚ್ 8ರಂದು ನಗರದ ಕಡೆಮೊಗರು ಸಭಾಂಗಣದಲ್ಲಿ ‘ವಿಶ್ವ ಮಹಿಳಾ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಖ್ಯಾತ ಸಾಹಿತಿ, ‘ಅಮೃತ ಪ್ರಕಾಶ’ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರನ್ನು ಗುರುತಿಸಿ, ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಗ್ಯಾರೇಜ್ ಮಾಲಕರ ಸಂಘದ […]

DAKSHINA KANNADA HOME LATEST NEWS

ಮಂಗಳೂರು: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು : ಕೊಲೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಸಫ್ವಾನ್ ಹುಸೈನ್ ಸಹಚರನೋರ್ವವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಳ್ಳಾರಿ ಜಿಲ್ಲೆಯ ಸದ್ಯ ಬೆಂಗಳೂರಿನ ಶ್ಯಾಮ್ ಪುರ ಬೇಕರಿ ಬಳಿಯ ನಿವಾಸಿ ಸುಫಿಯಾನ್ ಹುಸೈನ್ ಯಾನೆ ಕೊಟ್ರೇಶಿ (31) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ಗುಲ್ಬರ್ಗಾ, ಬಳ್ಳಾರಿ , ಮುಂಬೈ ಆಂಧ್ರ ಪ್ರದೇಶದಲ್ಲಿ ತಲೆ ಮರೆಸಿಕೊಂಡು ಬಳಿಕ ಬೆಂಗಳೂರಿನಲ್ಲಿ ಹುಸೈನ್ ಎಂದು ಬದಲಿಸಿ ಆಧಾರ್ ಕಾರ್ಡ್, […]

HOME

*ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ 117ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ ಸಂಪನ್ನ*

ಮಂಗಳೂರು: ನಗರದ ಮ್ಯಾಪ್ಸ್ ಕಾಲೇಜು ಮತ್ತು ಅಮೃತ ಪ್ರಕಾಶ ಪತ್ರಿಕೆಯ ಜಂಟಿ ಆಶ್ರಯದಲ್ಲಿ 117ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವ ಇಂತಹ ಕಾರ್ಯಕ್ರಮಗಳ ಅಗತ್ಯತೆಯನ್ನು ಒತ್ತಿ ಹೇಳಿದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಿದ್ದ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರದ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. […]

DAKSHINA KANNADA HOME LATEST NEWS

ವಿಟ್ಲ: ಪಟಾಕಿ ತಯಾರಿಕಾ ಘಟಕದಲ್ಲಿ ಸುಡುಮದ್ದು ಭಾರೀ ಸ್ಫೋಟ

ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ  ಸುಡುಮದ್ದು ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟ ಗೊಂಡ ಘಟನೆ ನಡೆದಿತ್ತು. ಈ ಘಟನೆಯಿಂದ ಆಸುಪಾಸಿನ ಮನೆಗಳಿಗೆ, ಮರ ಗಿಡಗಳಿಗೆ ಹಾನಿಯಾಗಿತ್ತು. ಅಲ್ಲದೆ ಕಳೆದ ಸುಮಾರು ವರ್ಷಗಳ ಹಿಂದೆ ನೂಜಿ ಎಂಬಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಬೆಚ್ಚಿ ಬೀಳಿಸಿತ್ತು. […]

DAKSHINA KANNADA HOME LATEST NEWS

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಸಾವು

ವಿಟ್ಲ: ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡ ಪರಿಣಾಮ 12 ವರ್ಷದ ಬಾಲಕ  ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ವಿಟ್ಲ ಸಮೀಪದ ಕೊಳ್ನಾಡುವಿನಲ್ಲಿ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್‌ (12) ಎಂದು ಗುರುತಿಸಲಾಗಿದೆ. ನಿನ್ನೆ ಮನೆಯ ಹತ್ತಿರದ ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ […]

DAKSHINA KANNADA HOME

*ರಾಜ್ಯ ಬಜೆಟ್ ನಲ್ಲಿ ಕರಾವಳಿ ಸಂಪೂರ್ಣ ಕಡೆಗಣನೆಗೆ ಶಾಸಕ ಕಾಮತ್ ಆಕ್ರೋಶ*

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ರಾಜ್ಯ ಬಜೆಟ್ ಕರಾವಳಿ ಭಾಗದ ಪಾಲಿಗೆ ಅತ್ಯಂತ ನೀರಸವಾಗಿದ್ದು, ಈ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘೋಷಣೆಗಳು ಅನುಷ್ಠಾನವಾಗಿಲ್ಲ: “ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ” ಎಂದು ಈ ಹಿಂದೆ ಹೇಳಿದ್ದ ಮುಖ್ಯಮಂತ್ರಿಗಳು, ಕಳೆದ ಬಜೆಟ್‌ನಲ್ಲಿ ಕರಾವಳಿಗೆ ನೀಡಿದ್ದ ಭರವಸೆಗಳನ್ನು ಎಷ್ಟು ಈಡೇರಿಸಿದ್ದಾರೆ ಎಂಬ ವರದಿಯನ್ನು ಮೊದಲು ನೀಡಲಿ. ಇಲ್ಲದಿದ್ದರೆ ಈ ಬಜೆಟ್ ಕೂಡ ಕೇವಲ ಬಿಳಿ ಹಾಳೆಯಷ್ಟೇ […]

DAKSHINA KANNADA HOME

*ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ ಶ್ಲಾಘನೆ*

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವಂತಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಕುರಿತು ಸಮಗ್ರ ವಿಶ್ಲೇಷಣೆ ನಡೆಸಿರುವ ಅವರು, ಇದು ಕೇವಲ ಅಂಕಿ-ಅಂಶಗಳ ಬಜೆಟ್ ಆಗಿರದೆ, ದೂರದೃಷ್ಟಿಯ ‘ಅಭಿವೃದ್ಧಿ ಪತ್ರ’ವಾಗಿದೆ ಎಂದು ಬಣ್ಣಿಸಿದ್ದಾರೆ. ಕರಾವಳಿ ಅಭಿವೃದ್ಧಿಗೆ ಹೊಸ ಆಯಾಮ: ಬಜೆಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಗೆ ಪೂರಕವಾದ ಅಂಶಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, […]