Month: March 2026

DAKSHINA KANNADA HOME

*ಕಾರ್ಯಕರ್ತನ ಮನೆಗೆ ತಡರಾತ್ರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ: ಮಾನವೀಯತೆಗೆ ಸಾಕ್ಷಿಯಾದ ಶಾಸಕರ ನಡೆಗೆ*

ಪುತ್ತೂರು: ಜನಪ್ರತಿನಿಧಿಯೊಬ್ಬರು ತನ್ನ ಕಾರ್ಯಕರ್ತರ ಸುಖ-ದುಃಖಗಳಿಗೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರು ಮತ್ತೊಮ್ಮೆ ಮಾದರಿಯಾಗಿದ್ದಾರೆ. ಪಾಣಾಜೆ ಗ್ರಾಮದ ಯುವ ಕಾಂಗ್ರೆಸ್ ಮುಖಂಡ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಶ್ರೀಪ್ರಸಾದ್ ಅವರ ಮನೆಗೆ ತಡರಾತ್ರಿ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮೂಲಕ ಶಾಸಕರು ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಮಾ.19 ರಂದು ಪಾಣಾಜೆ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ದಲ್ಲಿ ಶಾಸಕ ಅಶೋಕ್ ರೈ ಅವರು ಪಾಲ್ಗೊಂಡಿದ್ದರು. ಸಂಜೆ 4 […]

DAKSHINA KANNADA

*ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇ. 53ಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಆಡಳಿತ ಯಂತ್ರ ಸಂಪೂರ್ಣ ಕುಸಿತ – ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು *

ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ತಿನ ಬಜೆಟ್ ಅಧಿವೇಶನದಲ್ಲಿ, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ) ಖಾಲಿ ಇರುವ ಹುದ್ದೆಗಳ ಕುರಿತು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸರ್ಕಾರ ನೀಡಿರುವ ಉತ್ತರವು ಆಘಾತಕಾರಿಯಾಗಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬರೋಬ್ಬರಿ ಶೇ. 53ಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿದ್ದು, ಸಾರ್ವಜನಿಕ ಸೇವೆಯು ತೀವ್ರ ವ್ಯತ್ಯಯವಾಗುತ್ತಿರುವ ಬಗ್ಗೆ […]

DAKSHINA KANNADA

* ಮಂಗಳೂರಿನಲ್ಲಿ ಮಾ. 24ರಿಂದ ರಾಷ್ಟ್ರ ಮಟ್ಟದ ಪವರ್‌ಲಿಫ್ಟಿಂಗ್ ಮಹಾಸಮರ*

ಮಂಗಳೂರು: ಕರಾವಳಿಯ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಮಂಗಳೂರು ಸಜ್ಜಾಗಿದೆ. ಕರ್ನಾಟಕ ಪವರ್‌ಲಿಫ್ಟಿಂಗ್ ಅಸೋಸಿಯೇಶನ್ ಆಶ್ರಯದಲ್ಲಿ ಮತ್ತು ಕಶಾರ್ಪ್ ಫಿಟ್ನೆಸ್ ವತಿಯಿಂದ ʻರಾಷ್ಟ್ರ ಮಟ್ಟದ ಸೀನಿಯರ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ 2026′ ಮಾರ್ಚ್ 24 ರಿಂದ 28 ರವರೆಗೆ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಕುಮಾರ್ ಕುದ್ರೋಳಿ ತಿಳಿಸಿದರು. ನಗರದ ಕಶಾರ್ಪ್ ಫಿಟ್ನೆಸ್ ಸೆಂಟರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ರೀಡಾಕೂಟದ ಮಹತ್ವ […]

DAKSHINA KANNADA HOME

*ಡಿವಿಜಿ ಅವರ ಉನ್ನತ ಆದರ್ಶಗಳಲ್ಲಿ ಪತ್ರಕರ್ತರ ಸಂಘ ಬೆಳೆದು ಬಂದಿದೆ: ಶಿವಾನಂದ ತಗಡೂರು*

ಮಂಗಳೂರು : ಪ್ರಸಿದ್ಧ ಕವಿ ಡಿ.ವಿ.ಗುಂಡಪ್ಪ (ಡಿವಿಜಿ) ಅವರ ಮಂಕುತಿಮ್ಮನ ಕಗ್ಗದಲ್ಲಿ ಎಲ್ಲ ಧರ್ಮಗಳ ಸಾರ ಅಡಗಿದೆ. ಪತ್ರಕರ್ತರಾಗಿದ್ದ ಡಿವಿಜಿ ಅವರು ೧೯೩೨ ರಲ್ಲಿ ಸ್ಥಾಪಿಸಿದ ಮೈಸೂರು ರಾಜ್ಯ ಪತ್ರಕರ್ತರ ಸಂಘ ಬಳಿಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವಾಗಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಸಂಸ್ಥಾಪಕ ಡಿವಿಜಿ ಅವರ ಆದರ್ಶ ಹಾಗೂ ಚಿಂತನೆಗಳಲ್ಲಿ ಬೆಳೆದು ಬಂದಿರುವ ಪತ್ರಕರ್ತರ ಸಂಘ ಹಂತಹಂತವಾಗಿ ಬೆಳದು ಈಗ ೧೦ ಸಾವಿರ ಸದಸ್ಯರನ್ನು ಒಳಗೊಂಡಿರುವ ದೇಶದ ಬೃಹತ್ ಸಂಘಟನೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ […]

DAKSHINA KANNADA HOME

*ಕ್ಯಾನ್ಸರ್ ಮುಕ್ತ ಸಮಾಜದತ್ತ ಸಂಜೀವಿನಿ ಟ್ರಸ್ಟ್ ಮತ್ತು M.I.O ಹೆಜ್ಜೆ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಮಗ್ರ ಕ್ಯಾನ್ಸರ್ ಜಾಗೃತಿ ಸಮೀಕ್ಷೆ*

ಮಂಗಳೂರು: ಕ್ಯಾನ್ಸರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಮತ್ತು ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ (M.I.O) ಇವರ ಜಂಟಿ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಸಲಾದ ಸಮಗ್ರ ‘ಮನೆ-ಮನೆ ಸಮೀಕ್ಷೆ’ಯ ವರದಿ ಬಿಡುಗಡೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಜಿಲ್ಲೆಯಾದ್ಯಂತ ಕ್ಯಾನ್ಸರ್ ಬಗ್ಗೆ ಇರುವ ಅರಿವು, ಲಕ್ಷಣಗಳು ಮತ್ತು ತಡೆಗಟ್ಟುವ ಕ್ರಮಗಳ ಕುರಿತು 20 ಪ್ರಮುಖ ಪ್ರಶ್ನೆಗಳನ್ನೊಳಗೊಂಡ ಈ ಸಮೀಕ್ಷೆಯನ್ನು ನಡೆಸಲಾಗಿದೆ. ಈ ವರದಿಯು ಕರಾವಳಿ ಕರ್ನಾಟಕದ ಆರೋಗ್ಯ ಸ್ಥಿತಿಗತಿಯ ಬಗ್ಗೆ […]

HOME NATIONAL

ಗಲ್ಫ್ ಸಂಘರ್ಷ: ಭಾರತದಲ್ಲಿ ಪೆಟ್ರೋಲ್‌ ದರ ಪ್ರತಿ ಲೀಟರ್ ಗೆ 2 ರೂ. ಹೆಚ್ಚಳ…!

ಹೊಸದಿಲ್ಲಿ: ಗಲ್ಫ್ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದ ಕಚ್ಚಾ ತೈಲ ಬೆಲೆ ಏರಿಕೆಯ ಬಿಸಿ ಗ್ರಾಹಕರನ್ನೂ ನಿಧಾನವಾಗಿ ತಟ್ಟುತ್ತಿದೆ. ದೇಶದ ತೈಲ ಮಾರಾಟ ಕಂಪನಿಗಳು ಇಂದು ಪ್ರಿಮಿಯಮ್ ಪೆಟ್ರೋಲ್ ದರವನ್ನು ಪ್ರತಿ ಲೀಟರ್ ಗೆ 2 ರೂ. ನಷ್ಟು ಹೆಚ್ಚಿಸಿವೆ. ಆದರೆ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವಾಗಿಲ್ಲ. ಅಂತೆಯೇ ಕೈಗಾರಿಕಾ ಡೀಸೆಲ್ ದರ ಲೀಟರ್ ಗೆ 22 ರೂಪಾಯಿ ಹೆಚ್ಚಳವಾಗಿದೆ. ಇದೇ ವೇಳೆ ದೇಶದ ಅತಿದೊಡ್ಡ ಇಂಧನ ಮಾರಾಟ ಸಂಸ್ಥೆಯಾದ ಇಂಡಿಯನ್ ಆಯಿಲ್, ತಾರ್ಕಿಕ […]

DAKSHINA KANNADA HOME LATEST NEWS STATE

ದಕ್ಷಿಣ ಕನ್ನಡ ಸೇರಿದಂತೆ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಶನಿವಾರ ಒಂಬತ್ತು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಇದೇ ಮಾ. 24ರಿಂದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಅಲ್ಲಿಯವರೆಗೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, […]

DAKSHINA KANNADA HOME

*ಯಕ್ಷಗಾನದ ಭೀಷ್ಮ, ಕಲಾತಪಸ್ವಿ ಸುರಿಕುಮೇರು ಕೆ. ಗೋವಿಂದ ಭಟ್ ಅವರ ನಿಧನ*

ಬಂಟ್ವಾಳ: ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ, ತೆಂಕುತಿಟ್ಟು ಶೈಲಿಯ ಹಿರಿಯ ವಿದ್ವಾಂಸ ಮತ್ತು ಕಳೆದ ಐದು ದಶಕಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಆಧಾರಸ್ತಂಭವಾಗಿದ್ದ ಶ್ರೀ ಸುರಿಕುಮೇರು ಕೆ. ಗೋವಿಂದ ಭಟ್ (85) ಅವರು ಇಂದು ವಿಧಿವಶರಾಗಿದ್ದಾರೆ. ಹೌದು..ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ, ತೆಂಕುತಿಟ್ಟಿನ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ಗೆಜ್ಜೆ ಕಳಚಿ ಕಣ್ಮರೆಯಾಗಿದ್ದಾರೆ. ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. […]

DAKSHINA KANNADA HOME

*ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಂಭ್ರಮ*

ಮಂಗಳೂರು: ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ‌ಫಿತ್ರ್ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಸಾಮೂಹಿಕ ನಮಾಝ್ ಮತ್ತು ಕುತುಬಾ ಪಾರಾಯಣದ ಬಳಿಕ ಸೌಹಾರ್ದತೆಯ ಸಂದೇಶ ಸಾರಲಾಯಿತು. ಈ ಸಂದರ್ಭದಲ್ಲಿ ಈದ್ ಸಂದೇಶ ನೀಡಿದ ಖತೀಬ್ ಅಲ್ ಹಾಜ್ ಅಬ್ದುಲ್ ನಾಸೀರ್ ಸಾದಿ ಅವರು, “ಬಡವರು, ಅನಾಥರು ಮತ್ತು ಅಸಹಾಯಕರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯ. ಈದ್ ಕೇವಲ ಸಂಭ್ರಮಕ್ಕೆ ಸೀಮಿತವಾಗದೆ ತ್ಯಾಗ ಮತ್ತು ಸಹಾನುಭೂತಿಯ ಸಂಕೇತವಾಗಬೇಕು. ಪರಸ್ಪರ ವೈಷಮ್ಯ ಮರೆತು ಸೌಹಾರ್ದತೆಯಿಂದ ಬಾಳಬೇಕು. ದೇವರು ನೀಡಿದ ಆರೋಗ್ಯ, […]

DAKSHINA KANNADA HOME LATEST NEWS

ಈದುಲ್ ಫಿತ್ರ್‌: ದ.ಕ ಜಿಲ್ಲೆಗೆ ಇಂದು ಸಾರ್ವತ್ರಿಕ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತ್ರ್‌ ಶುಕ್ರವಾರ ನಡೆಯಲಿರುವುದರಿಂದ ದ.ಕ. ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇಶಿಸಿದ್ದಾರೆ.