Month: March 2026

DAKSHINA KANNADA

*ಕುಪ್ಪೆಪದವು ಮತ್ತು ಮುತ್ತೂರು ವಲಯ ಕಾಂಗ್ರೆಸ್ ಸಭೆ*

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕುಪ್ಪೆಪದವು ಹಾಗೂ ಮುತ್ತೂರು ವಲಯ ಕಾಂಗ್ರೆಸ್ ಸಮಿತಿಯ ಜಂಟಿ ಸಭೆಯು ಶನಿವಾರದಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ವಕ್ತಾರರಾದ ಮುಹಮ್ಮದ್ ಬಡಗನ್ನೂರು ಅವರು ಭಾಗವಹಿಸಿ, ಎಸ್‌ಐಆರ್ (SIR) ಪ್ರಕ್ರಿಯೆಯ ಕುರಿತು ಕಾರ್ಯಕರ್ತರಿಗೆ ಸುದೀರ್ಘ ಮಾಹಿತಿ ನೀಡಿದರು. ಪಕ್ಷದ ಸಂಘಟನೆ ಮತ್ತು ಮುಂದಿನ ಕಾರ್ಯಯೋಜನೆಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಇದೇ ವೇಳೆ ಇನಾಯತ್ ಅಲಿ ಫೌಂಡೇಷನ್ ವತಿಯಿಂದ ಸಾಮಾಜಿಕ ಕಳಕಳಿಯ […]

DAKSHINA KANNADA HOME LATEST NEWS STATE

ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮಂಗಳೂರು: ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 […]

DAKSHINA KANNADA HOME

*ಮಧ್ಯಪ್ರಾಚ್ಯ ಯುದ್ಧದ ಬಿಸಿ: ಮಂಗಳೂರಿನ ‘ಕಾರುಣ್ಯ’ ಉಚಿತ ಊಟದ ಯೋಜನೆಗೆ ಅನಿಲದ ಸಂಕಷ್ಟ*

ಮಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ವಾಣಿಜ್ಯ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಈಗ ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ರೋಗಿಗಳ ಹಿತೈಷಿಗಳಿಗೆ ಉಚಿತವಾಗಿ ರಾತ್ರಿ ಊಟ ನೀಡುವ ‘ಕಾರುಣ್ಯ’ ಯೋಜನೆಗೆ ತಟ್ಟಿದೆ. ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಳೆದ ಎಂಟು ವರ್ಷಗಳಿಂದ ವೆನ್ಲಾಕ್ ಆಸ್ಪತ್ರೆ ಹಾಗೂ ಕಳೆದ ಆರು ತಿಂಗಳಿಂದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸುಮಾರು 400 ಮಂದಿಗೆ ನಿರಂತರವಾಗಿ ರಾತ್ರಿ ಊಟ ನೀಡಲಾಗುತ್ತಿದೆ. ಆದರೆ, ಪ್ರಸ್ತುತ ಅಡುಗೆ ಅನಿಲದ ಪೂರೈಕೆ ಸ್ಥಗಿತಗೊಂಡಿರುವುದರಿಂದ ಅಡುಗೆ ತಯಾರಿಸಲು […]

DAKSHINA KANNADA HOME

*ಬಂಟ್ವಾಳದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದ ‘ಸೌಹಾರ್ದ ಇಫ್ತಾರ್ ಕೂಟ’: ಭಾವೈಕ್ಯತೆಯ ಸಂದೇಶ

ಬಂಟ್ವಾಳ: ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಭಾತೃತ್ವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂನಲ್ಲಿ ‘ಸೌಹಾರ್ದ ಇಫ್ತಾರ್ ಕೂಟ’ವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿ. ರಮಾನಾಥ ರೈ ಅವರು, “ಸೌಹಾರ್ದತೆ ಎಂಬ ಪದಕ್ಕೆ ನೈಜ ಶಕ್ತಿ ತುಂಬುವುದೇ ಈ ಕಾರ್ಯಕ್ರಮದ ಉದ್ದೇಶ. ಧಾರ್ಮಿಕ ಮುಖಂಡರು ನೀಡುವ ಶಾಂತಿ ಸಂದೇಶದಂತೆ ನಾವೆಲ್ಲರೂ ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಂದಾಗಿ ಜೀವಿಸಬೇಕು,” ಎಂದರು. ಮಾಣಿಲ ಶ್ರೀ ಧಾಮದ […]

DAKSHINA KANNADA HOME

*ಯಕ್ಷಧ್ರುವ ಪಟ್ಲ ಫೌಂಡೇಶನ್: ‘ಯಕ್ಷಶಿಕ್ಷಣ’ ಯೋಜನೆಯಡಿ ಶಿಕ್ಷಕರ ಸಮಾಲೋಚನಾ ಸಭೆ*

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್( ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರ‌ ಸಮಾಲೋಚನಾ‌ ಸಭೆಯು ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸಭಾಂಗಣದಲ್ಲಿ ನಡೆಯಿತು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾದ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿ ಯಕ್ಷಧ್ರುವ ಯಕ್ಷಶಿಕ್ಷಣವು ಪಟ್ಲ ಫೌಂಡೇಶನ್ ನ ಅಭಿವೃದ್ಧಾತ್ಮಕವಾದ ಯೋಜನೆಯಾಗಿದ್ದು ಭವಿತವ್ಯದ ಸುಸಂಸ್ಕೃತ ಪ್ರೇಕ್ಷಕರು ಮತ್ತು ಉತ್ತಮ ಕಲಾವಿದರನ್ನು ತಯಾರುಗೊಳಿಸುವ ನಿಭಾವಣೆಯನ್ನು ಹೊತ್ತ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಯಕ್ಷಗಾನ […]

DAKSHINA KANNADA

*ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಾರೈಕೆ ಹಾಗೂ ಪ್ರೇರಣಾ ಕಾರ್ಯಕ್ರಮ*

ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ಉಜ್ವಲ ಭವಿಷ್ಯಕ್ಕಾಗಿ ಆಶೀರ್ವಚನ ಮತ್ತು ಪ್ರೇರಣಾ ಕಾರ್ಯಕ್ರಮವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಬೈಬಲ್, ಭಗವದ್ಗೀತೆ ಹಾಗೂ ಕುರಾನ್ ಧರ್ಮಗ್ರಂಥಗಳ ಪಠಣ ಮತ್ತು ದೇವ ಸ್ತುತಿಯೊಂದಿಗೆ ಅತ್ಯಂತ ಭಕ್ತಿಪೂರ್ವಕವಾಗಿ ಆರಂಭಿಸಲಾಯಿತು. ಪರೀಕ್ಷೆಗೆ ಸಿದ್ಧರಾಗಿರುವ ವಿದ್ಯಾರ್ಥಿಗಳಿಗೆ ಧರ್ಮಗುರುಗಳಾದ ವಂದನೀಯ ಫಾ. ಐವನ್ ಮೈಕಲ್ ರೋಡ್ರಿಗಸ್, ಶ್ರೀ ಕ್ಷೇತ್ರ ಕಣಿಯೂರಿನ ಪರಮಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಹಾಗೂ ಉಳ್ಳಾಲದ […]

DAKSHINA KANNADA HOME

*ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ: ರಾಜಹಂಸ ಬಸ್ – ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು*

ನೆಲ್ಯಾಡಿ: ಮಾ .13: ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಬಳಿ ಶುಕ್ರವಾರ ಮಧ್ಯಾಹ್ನ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಸಕಲೇಶಪುರದ ಬಳಿ ನಡೆದ ಮದುವೆಯ ರಿಸೆಪ್ಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಸನದಿಂದ ಉಜಿರೆ ಕಡೆಗೆ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಬೆಂಗಳೂರಿನ ಮೂಲಕ ತಿರುಪತಿಗೆ ತೆರಳುತ್ತಿದ್ದ ರಾಜಹಂಸ ಬಸ್ ನಡುವೆ ಬರ್ಚಿನಹಳ್ಳಿ ಸಮೀಪ ಈ ದುರ್ಘಟನೆ ಸಂಭವಿಸಿದೆ. […]

DAKSHINA KANNADA HOME

*ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡುಗೆ ಅನಿಲ ಕೊರತೆ ಇಲ್ಲ: ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಜಿಲ್ಲಾಧಿಕಾರಿಗಳ ಮನವಿ:

ಮಂಗಳೂರು, ಮಾರ್ಚ್ 13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ (LPG) ಸಿಲಿಂಡರ್‌ಗಳ ದಾಸ್ತಾನು ಸಮರ್ಪಕವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ಅಡುಗೆ ಅನಿಲದ ಕೊರತೆಯಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ವದಂತಿಗಳನ್ನು ಸಾರ್ವಜನಿಕರು ನಂಬಬಾರದು ಜಿಲ್ಲೆಯಲ್ಲಿ ಸಿಲಿಂಡರ್‌ಗಳ ಕೊರತೆ ಇಲ್ಲದಿರುವುದರಿಂದ ಗ್ರಾಹಕರು ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳುವ ಅಗತ್ಯವಿಲ್ಲ ಮತ್ತು ಭಯ ಭೀತರಾಗ ಬಾರದು ಎಂದು ಸ್ಪಷ್ಟಪಡಿಸಲಾಗಿದೆ. ಗ್ಯಾಸ್ ಸಿಲಿಂಡರ್ […]

DAKSHINA KANNADA

*ವಿಟ್ಲ ಮುಡ್ನೂರು ಗ್ರಾಮದ ಗುಂಪಲಡ್ಕದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಿದ ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಗುಂಪಲಡ್ಕ 4ನೇ ವಾರ್ಡಿನಲ್ಲಿ ಕಳೆದ 15 ದಿನಗಳಿಂದ ಎದುರಾಗಿದ್ದ ತೀವ್ರ ಕುಡಿಯುವ ನೀರಿನ ಸಮಸ್ಯೆಗೆ ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರು ತಕ್ಷಣ ಸ್ಪಂದಿಸುವ ಮೂಲಕ ಪರಿಹಾರ ಒದಗಿಸಿದ್ದಾರೆ. ಸ್ಥಳೀಯ ನಿವಾಸಿಗಳು ಎದುರಿಸುತ್ತಿದ್ದ ನೀರಿನ ಅಭಾವದ ಬಗ್ಗೆ ಶಾಸಕರ ಗಮನಕ್ಕೆ ತಂದ ತಕ್ಷಣ, ಶಾಸಕರು ಸಾರ್ವಜನಿಕರ ಹಿತದೃಷ್ಟಿಯಿಂದ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಅವರ ಮಾರ್ಗದರ್ಶನದಂತೆ, ಎನ್.ಎಸ್. ಕ್ರಷರ್‌ನ ಟ್ಯಾಂಕರ್ ಮೂಲಕ ದಡ್ಡಲಡ್ಕದ ಪ್ರೇಮಾ ಅವರ […]

DAKSHINA KANNADA HOME STATE

*ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಶಾಸಕರ ಕಿಶೋರ್ ಕುಮಾರ್ ಪುತ್ತೂರು*

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮನಬಂದಂತೆ ತ್ಯಾಜ್ಯ ಎಸೆಯುವವರ ವಿರುದ್ಧ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸುವ ಕಾನೂನು ಜಾರಿಯಲ್ಲಿದ್ದರೂ, ಅದರ ಸಮರ್ಪಕ ಅನುಷ್ಠಾನದ ಕೊರತೆಯಿಂದಾಗಿ ರಾಜ್ಯದಲ್ಲಿ ಸಂಪೂರ್ಣ ಸ್ವಚ್ಛತೆ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ವಿಧಾನಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಶಾಸಕರು ಸರ್ಕಾರದ ಗಮನ ಸೆಳೆದರು. ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜನ ಶಿಕ್ಷಣ ಟ್ರಸ್ಟ್ ವತಿಯಿಂದ ನಡೆದ “ಕಸ ಮುಕ್ತ ಗ್ರಾಮ – ಕ್ಯಾನ್ಸರ್ ಮುಕ್ತ ಗ್ರಾಮ” ಅಭಿಯಾನದಲ್ಲಿ ದಕ್ಷಿಣ […]