Month: April 2026

HOME LATEST NEWS

ವಿಶ್ವ ದಾಖಲೆ ಸೃಷ್ಟಿಸಲಿದೆ ಕೊಂಕಣಿ ಸಂಗೀತ ಮಹಾ ಸಮಾವೇಶ: ಲಾಂಛನ ಬಿಡುಗಡೆ ಮಾಡಿ ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಮಂಗಳೂರು: ಏಪ್ರಿಲ್ 10: ಮಂಗಳೂರಿನಲ್ಲಿ ನಡೆಯಲಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವು ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಇದು ಗಿನ್ನಿಸ್ ವಿಶ್ವ ದಾಖಲೆ ಸೃಷ್ಟಿಸುವ ಮೂಲಕ ಇತಿಹಾಸ ಬರೆಯಲಿದೆ,” ಎಂದು ರಾಜ್ಯದ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.ಶಕ್ತಿನಗರದ ಕಲಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ‘ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ-2026’ರ ಲಾಂಛನ (Logo) ಬಿಡುಗಡೆ ಮಾಡಿ ಅವರು ಮಾತನಾಡಿದರು .ʼʼಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ […]

COMMUNITY NEWS

ರೊಸಾರಿಯೋ ಪ್ರೀಮಿಯರ್ ಲೀಗ್ (RPL): ಅದ್ಧೂರಿ ಆಟಗಾರರ ಹರಾಜು ಮತ್ತು ಜೆರ್ಸಿ ಬಿಡುಗಡೆ

ಮಂಗಳೂರು: ರೊಸಾರಿಯೋ ಕೆಥೆಡ್ರಲ್‌ನ ICYM ಘಟಕದ ವತಿಯಿಂದ ಆಯೋಜಿಸಲಾಗಿರುವ ಬಹುನಿರೀಕ್ಷಿತ ‘ರೊಸಾರಿಯೋ ಪ್ರೀಮಿಯರ್ ಲೀಗ್’ (RPL) ಕ್ರಿಕೆಟ್ ಪಂದ್ಯಾವಳಿಯ ಆಟಗಾರರ ಹರಾಜು ಪ್ರಕ್ರಿಯೆ ಮತ್ತು ಜೆರ್ಸಿ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ರೊಸಾರಿಯೋ ಕೆಥೆಡ್ರಲ್‌ನಲ್ಲಿ ಅತ್ಯಂತ ಉತ್ಸಾಹದಿಂದ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾಲ್ ಸಲ್ದಾನಾ ಅವರು ವಿವಿಧ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಿ, ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಖ್ಯಾತ ಹರಾಜುದಾರರಾದ ಆಲ್ವಿನ್ ಡಿ’ಸೋಜಾ ಅವರು ಅತ್ಯಂತ ರೋಚಕವಾಗಿ ಆಟಗಾರರ ಹರಾಜು ಪ್ರಕ್ರಿಯೆಯನ್ನು ನಡೆಸಿಕೊಟ್ಟರು. […]

HOME LATEST NEWS

ಸುಳ್ಯದಲ್ಲಿ ಮನೆಗಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ, 5 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಸುಳ್ಯ: ಸಾಲದ ಹಣ ಹಿಂತಿರುಗಿಸುವ ನೆಪದಲ್ಲಿ ಮನೆಗೆ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಕಳವು ಮಾಡಲಾದ ಸಂಪೂರ್ಣ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನೆಲೆ:ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ (20) ಎಂಬುವವರು ನೀಡಿದ ದೂರಿನಂತೆ ಈ ಕ್ರಮ ಕೈಗೊಳ್ಳಲಾಗಿದೆ. ದೂರುದಾರರ ತಂದೆಯ ಪರಿಚಯಸ್ಥರಾಗಿದ್ದ ಆರೋಪಿತೆ ಶೃತಿ @ ವಿಶ್ಮೀತ (37) ಎಂಬಾಕೆ ಅವರ ಬಳಿ ಸುಮಾರು 6 ಲಕ್ಷ […]

LATEST NEWS

ಸೇವೆ, ಕರ್ತವ್ಯ ಮತ್ತು ಸಮರ್ಪಣೆಯೇ ಜೀವನದ ನಿಜವಾದ ಮಾರ್ಗ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮಂಗಳೂರು ಏಪ್ರಿಲ್ 10 : ದಕ್ಷಿಣ ಕನ್ನಡ ಜಿಲ್ಲೆ “ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಕಲ್ಯಾಣ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ.ಪ್ರಪಂಚದಾದ್ಯಂತ ದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದತ್ತ ನೋಡುತ್ತಿದೆ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರ, ಹನುಮಾನಗಿರಿ ದೇವಸ್ಥಾನದ ಗೋಪುರ ಮತ್ತು ಮಂಟಪದ ಉದ್ಘಾಟನೆ ಮತ್ತು ಬ್ರಹ್ಮಕಲಶೋತ್ಸವ […]

LATEST NEWS

ಕದ್ರಿ ದಕ್ಷಿಣ ವಾರ್ಡ್‌ನಲ್ಲಿ 1 ಕೋಟಿ ರೂ. ವೆಚ್ಚದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನ ಮೈದಾನದಿಂದ ಕದ್ರಿ ಕಂಬಳ ಜಂಕ್ಷನ್ ವರೆಗಿನ ರಸ್ತೆಯನ್ನು ಸುಮಾರು 1 ಕೋಟಿ ರೂ. ಅನುದಾನದಲ್ಲಿ ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, “ಈ ಭಾಗದ ರಸ್ತೆ ಅಭಿವೃದ್ಧಿಯು ಬಹಳ ಕಾಲದ ಬೇಡಿಕೆಯಾಗಿತ್ತು. ಪ್ರತಿ ಮಳೆಗಾಲದಲ್ಲಿ ರಸ್ತೆ ಹಾಳಾಗಿ ಸ್ಥಳೀಯರು ಮತ್ತು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಪಾಲಿಕೆಯ ಬಿಜೆಪಿ ಆಡಳಿತದ ಅವಧಿಯಲ್ಲಿ […]

COMMUNITY NEWS LATEST NEWS

ಫಾ. ಮೆಲ್ವಿನ್ ಪಿಂಟೋ ಅವರ ನಿಧನಕ್ಕೆ ಮಾಜಿ ಸಚಿವ ಬಿ. ರಾಮನಾಥ ರೈ ತೀವ್ರ ಸಂತಾಪ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಫಾ. ಮೆಲ್ವಿನ್ ಪಿಂಟೋ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ ಎಂದು ಮಾಜಿ ಸಚಿವ ಬಿ.ರಾಮನಾಥ ರೈ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾ ರೆ .ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಶಿಕ್ಷಣ ಕ್ಷೇತ್ರಕ್ಕೆ ಫಾ. ಮೆಲ್ವಿನ್ ಪಿಂಟೋ ಅವರು ನೀಡಿದ ಸೇವೆ ಅಪಾರ ಹಾಗೂ ಅಮೂಲ್ಯವಾದುದು. ಅವರ ಸರಳತೆ, ಸಜ್ಜನಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ ಅಪಾರ ಕಾಳಜಿ ಎಂದಿಗೂ ಮರೆಯಲಾಗದು. ಸಾವಿರಾರು […]

HOME LATEST NEWS

ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್ ಮೆಲ್ವಿನ್ ಜೆ. ಪಿಂಟೋ ನಿಧನ

ಮಂಗಳೂರು: ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್, ಸೈಂಟ್ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸ್ಯೂಟ್ ಎಜುಕೇಷನಲ್ ಸೊಸೈಟಿಯ ಉಪಾಧ್ಯಕ್ಷರಾಗಿದ್ದ ಮೆಲ್ವಿನ್ ಜೆ. ಪಿಂಟೋ ಅವರು ನಿಧನರಾಗಿದ್ದಾರೆ. ೧೯೬೩ರಲ್ಲಿ ಜನಿಸಿದ ಫಾದರ್ ಮೆಲ್ವಿನ್ ಪಿಂಟೋ ಅವರು ಸೇಂಟ್ ಅಲೋಶಿಯಸ್‌ನಲ್ಲಿ ತಮ್ಮ ಶಾಲಾ ಮತ್ತು ಕಾಲೇಜು ಶಿಕ್ಷಣವನ್ನು ಪೂರ್ಣಗೊಳಿಸಿದರು. 1981 ರಲ್ಲಿ ಜೆಸ್ಯೂಟ್ ಸಭೆಯನ್ನು ಸೇರಿದ ಇವರು, 1997 ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದಿದ್ದರು. ಇಂಗ್ಲಿಷ್‌ನಲ್ಲಿ ಎಂ.ಎ, ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಸೈಕಾಲಜಿ ಮತ್ತು ಕೌನ್ಸೆಲಿಂಗ್‌ನಲ್ಲಿ […]

HOME LATEST NEWS

90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮಂಗಳೂರು: ಏ. 10: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು “ತುಳುವಿನಲ್ಲಿ ಸದಭಿರುಚಿಯ ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಖುಷಿಯ ವಿಚಾರ. ಇಂದು ಬಿಡುಗಡೆಯಾಗುತ್ತಿರುವ 90 ಎಂಎಲ್ ಸಿನಿಮಾ ತುಳು ಪ್ರೇಕ್ಷಕರ ಮನೆ ಮನ […]

DAKSHINA KANNADA HOME LATEST NEWS

ಕೇರಳ ಸೇರಿ ಮೂರು ರಾಜ್ಯಗಳಲ್ಲಿ ಇಂದು ಮತದಾನ

ಮಂಗಳೂರು: ದೇಶದ ಗಮನ ಸೆಳೆದಿರುವ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕೇರಳ: ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಡಳಿತಾರೂಢ ಎಲ್‌ಡಿಎಫ್ (LDF) ಮತ್ತು ಪ್ರತಿಪಕ್ಷ ಯುಡಿಎಫ್ (UDF) ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಬಿಜೆಪಿ ಕೂಡ ಪ್ರಬಲ ಪೈಪೋಟಿ ನೀಡುತ್ತಿದೆ. ಅಸ್ಸಾಂ: ಅಸ್ಸಾಂನಲ್ಲಿ […]

DAKSHINA KANNADA HOME LATEST NEWS

ಸುಳ್ಯದಲ್ಲಿ ರಸ್ತೆಯ ಬದಿ ಕಸ: ಅಂಗಡಿ ಮಾಲೀಕನ ವಿರುದ್ಧ FIR ದಾಖಲು

ಮಂಗಳೂರು:- ಸುಳ್ಯ ತಾಲೂಕು ಐವರ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಬೆಳ್ಳಾರೆ-ಸುಳ್ಯ ರಸ್ತೆಯ ಬೆಂಗಮಲೆ ಎಂಬಲ್ಲಿ ರಸ್ತೆಯ ಬದಿ ತ್ಯಾಜ್ಯ ಎಸೆದಿರುವ ಅಂಗಡಿ ಮಾಲಿಕರ ಮೇಲೆ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸಾಂದರ್ಭಿಕ ಚಿತ್ರ ಬೇಂಗಮಲೆಯ 3 ಕಡೆಗಳಲ್ಲಿ ತ್ಯಾಜ್ಯದ ಚೀಲಗಳನ್ನು ಎಸೆದಿರುವುದು ಕಂಡು ಬಂದಿದ್ದು, ತೆರೆದು ಪರಿಶೀಲಿಸಿದಾಗ ಎಲ್ಲಾ ಮೂರೂ ತ್ಯಾಜ್ಯದ ಚೀಲಗಳಲ್ಲಿ ಸುಳ್ಯ ಗಾಂಧಿನಗರದ ಅಯೋಧ್ಯಾ ಮೆನ್ಸ್ ಡ್ರೆಸ್ & ಸ್ಪೋಟ್ರ್ಸ್ ಜೆರ್ಸಿ ಶಾಪ್ ಎಂಬ ವಸ್ತ್ರ ಮಳಿಗೆಗೆ ಸೇರಿದ ತ್ಯಾಜ್ಯಗಳಿರುವುದು ಕಂಡುಬಂದಿರುತ್ತದೆ. ಚೀಲಗಳಲ್ಲಿ ವಸ್ತ್ರ […]