Month: May 2026

LATEST NEWS

ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು: ಶಾಸಕ ವೇದವ್ಯಾಸ ಕಾಮತ್

ಮಂಗಳೂರು, ಮೇ 21:ಕರಾವಳಿ ಭಾಗದ ಜನರಿಗೆ ಶೀಘ್ರಗತಿಯಲ್ಲಿ ನ್ಯಾಯದಾನ ಒದಗಿಸಲು ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬ ಮಂಗಳೂರು ವಕೀಲರ ಸಂಘದ ಹಲವು ವರ್ಷಗಳ ಬೇಡಿಕೆ ಸಂಪೂರ್ಣ ನ್ಯಾಯಯುತವಾಗಿದ್ದು, ಮಂಗಳೂರಿನಲ್ಲಿಯೇ ಪೀಠ ಸ್ಥಾಪನೆಯಾಗಬೇಕು ಎಂಬುದು ನಮ್ಮ ದೃಢ ನಿಲುವಾಗಿದೆ. ಎಂದು ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಂಗಳೂರಿನ ಜನತೆಯ ಪರವಾಗಿ ನನ್ನ ಆಗ್ರಹವೂ ಅದೇ ಆಗಿದ್ದು, ಅದರಲ್ಲಿ ಯಾವುದೇ ರಾಜಿಯಿಲ್ಲ. ಆರಂಭದಿಂದಲೂ ರಾಜಕೀಯ ರಹಿತವಾಗಿ ನಡೆದುಕೊಂಡು ಬಂದ ಈ ಹೋರಾಟದ ಪ್ರತೀ ಹೆಜ್ಜೆಯಲ್ಲೂ ವಕೀಲರ […]

COMMUNITY NEWS

ಬಿಜೈ ಸಂತ ಕ್ಷೇವಿಯರ್ ಚರ್ಚ್‌ನ ನೂತನ ಧರ್ಮಗುರುಗಳಾಗಿ ವಂ| ಸ್ಪ್ಯಾನಿ ಪಿರೇರಾ ಪದಗ್ರಹಣ

ಮಂಗಳೂರು. ಮೇ 21: ನಗರದ ಬಿಜೈ ಸಂತ ಕ್ಷೇವಿಯರ್‌ಚರ್ಚ್‌ಗೆ ನೂತನ ಧರ್ಮಗುರುಗಳಾಗಿ ವಂ। ಸ್ಪ್ಯಾನಿ ಪಿರೇರಾ ಅವರು ಪದಗ್ರಹಣ ಗೊಂಡಿದ್ದಾರೆ. ಬಿಜೈ ಚರ್ಚ್‌ನ ಧರ್ಮಗುರುಗಳು ಹಾಗೂ ಸಿಬಿಎಸ್‌ಸಿ ಶಾಲೆಯ ಸಂಚಾಲಕರಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ. ಅವರು ಈ ಹಿಂದೆ ಕಾಸರಗೋಡು ವಲಯ ಗುರುಗಳಾಗಿದ್ದರು. ಬೇಳಾ ಚರ್ಚ್‌ನ ಧರ್ಮಗುರುಗಳಾಗಿ ಕಳೆದ 5 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. 1996ರಲ್ಲಿ ಯಾಜಕ ದೀಕ್ಷೆ ಪಡೆದ ಬಳಿಕ ವಂ। ಸ್ಪ್ಯಾನಿ ಪಿರೇರಾ ಅವರು ಕಳೆದ 30 ವರ್ಷಗಳಿಂದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಬೀದರ್‌ನಲ್ಲಿ […]

LATEST NEWS

ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ವಸಂತ ಪೂಜಾರಿ ನೇಮಕ

ಮಂಗಳೂರು: ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ “ಜಿಲ್ಲಾ ಕಾರ್ಯಾಧ್ಯಕ್ಷ”ರನ್ನಾಗಿ ಮಂಗಳೂರಿನ ಜಲ್ಲಿಗುಡ್ಡ ನಿವಾಸಿ ಶ್ರೀ ವಸಂತ ಪೂಜಾರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಪಕ್ಷದ ಪ್ರಧಾನ ಕಚೇರಿ ‘ಜೆ.ಪಿ ಭವನ’ದಿಂದ ಅಧಿಕೃತವಾಗಿ ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ. ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಜಿಲ್ಲೆಯ ಎಲ್ಲಾ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ […]

LATEST NEWS

ಪ್ರತೀ ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ಪತ್ರ ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ನನ್ನ ವಿಧಾನಸಭಾ ಕ್ಷೇತ್ರದ ಪ್ರತೀಯೊಬ್ಬ ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ಪತ್ರ ನೀಡಿದಾಗ ಮಾತ್ರ ನನಗೆ ಸಮಾಧಾನವಾಗುತ್ತದೆ ಅಲ್ಲಿಯವರೆಗೆ ನನಗೆ ಸಮಾಧಾನವಾಗುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕಬಕ ಗ್ರಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22 ನೇ ಅಕ್ರಮ ಸಕ್ರಮ ಬೈಠಕ್ ಮತ್ತು 24 ನೇ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾನು ಚುನಾವಣೆಗೆ ಪೂರ್ವ ಹಕ್ಕು ಪತ್ರ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದೆ ಅದನ್ನು ಈಡೇರಿಸುವ […]

LATEST NEWS

*ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ*

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮ ಭಾಗದ ಸಮಸ್ಯೆ, ಬೇಡಿಕೆಗಳು ಮತ್ತು ಅಹವಾಲುಗಳನ್ನು ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ ವಿವಿಧ […]

COMMUNITY NEWS

ಮಂಗಳೂರು ಮಿಲಾಗ್ರೇಸ್ ಚರ್ಚ್‌ನ ನೂತನ ಧರ್ಮಗುರುಗಳಾಗಿ ವಂ| ಐವನ್ ಮೈಕಲ್ ರೊಡ್ರಿಗಸ್ ಅಧಿಕಾರ ಸ್ವೀಕಾರ

ಮಂಗಳೂರು: ಪ್ರಸಿದ್ಧ ಮಿಲಾಗ್ರೇಸ್ ಚರ್ಚ್‌ನ ನೂತನ ಧರ್ಮಗುರುಗಳಾಗಿ (Parish Priest) ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಮಂಗಳವಾರ ಮೇ 19,ಸಂಜೆ ಅಧಿಕಾರ ಸ್ವೀಕರಿಸಿದರು. ವಿಟ್ಲ ಚರ್ಚ್‌ನಿಂದ ಆಗಮಿಸಿದ ಅವರಿಗೆ ಮಿಲಾಗ್ರೇಸ್ ಧರ್ಮಕೇಂದ್ರದ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು. ಸಂಜೆ 4:00 ಗಂಟೆಗೆ ನಡೆದ ಈ ಪದಗ್ರಹಣ ಮತ್ತು ಸ್ವಾಗತ ಸಮಾರಂಭದಲ್ಲಿ ಮಂಗಳೂರು ಬಿಷಪರ ಪ್ರತಿನಿಧಿಯಾಗಿ ವಂ| ಫಾದರ್ ವಲೇರಿಯನ್ ಡಿಸೋಜಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ 14 ಕ್ಕೂ ಹೆಚ್ಚು ಧರ್ಮಗುರುಗಳು, ವಿವಿಧ ಕಾನ್ವೆಂಟ್‌ಗಳ ಧರ್ಮಭಗಿನಿಯರು ಹಾಗೂ ಅಪಾರ […]

COMMUNITY NEWS

ಬೊರಿಮಾರು ಚರ್ಚ್ ಹಾಗೂ ICYM ಘಟಕದ ಕುರಿತಾದ ಸುಳ್ಳು ಸುದ್ದಿಗಳಿಗೆ ಫಾದರ್ ಪ್ಯಾಟ್ರಿಕ್ ಸಿಕ್ವೇರಾ ಸ್ಪಷ್ಟನೆ

ಬಂಟ್ವಾಳ: ಸಂತ ಜೋಸೆಫ್ ಚರ್ಚ್ ಬೊರಿಮಾರು ಹಾಗೂ ಐ.ಸಿ.ವೈ.ಎಂ. (ICYM) ಬೊರಿಮಾರು ಘಟಕದ ಕುರಿತು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಸತ್ಯಾಸತ್ಯತೆಯಿಲ್ಲದ ಮತ್ತು ದಾರಿತಪ್ಪಿಸುವ ಸುದ್ದಿಗಳು ಪ್ರಕಟವಾಗುತ್ತಿದ್ದು, ಈ ಕುರಿತು ಸಾರ್ವಜನಿಕರಿಗೆ ನೈಜ ಸಂಗತಿಯನ್ನು ತಿಳಿಸಲು ಈ ಮಾಧ್ಯಮ ಸ್ಪಷ್ಟನೆ ನೀಡಲಾಗುತ್ತಿದೆ. ಇತ್ತೀಚೆಗೆ ನಡೆದ ಬೊರಿಮಾರು ಐ.ಸಿ.ವೈ.ಎಂ. ಘಟಕದ ಚುನಾವಣೆಯು ಕೇಂದ್ರೀಯ ಸಮಿತಿಯ ನಿಯಮಾವಳಿಗಳಿಗೆ ಅನುಸಾರವಾಗಿ ಅತ್ಯಂತ ಪಾರದರ್ಶಕ ಮತ್ತು ವ್ಯವಸ್ಥಿತವಾಗಿ ನಡೆದಿದೆ. ಈ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಅನಿಯಮಿತತೆಗಳು ಸಂಭವಿಸಿಲ್ಲ. ಚರ್ಚಿನ ಅಭಿವೃದ್ಧಿ […]

LATEST NEWS

*ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ*

ಮಂಗಳೂರು: ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ರಾ. ಹೆ. 66ರಲ್ಲಿ ಬರುವ ಈ ಎರಡು ಪ್ರಮುಖ ಜಂಕ್ಷನ್‌ನಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಅಂಡರ್‌ಪಾಸ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು […]

LATEST NEWS

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜನ್ಮದಿನ: ಜೆಡಿಎಸ್‌ನಿಂದ ರಕ್ತದಾನ ಶಿಬಿರ

ಮಂಗಳೂರು: ಮಾಜಿ ಪ್ರಧಾನಮಂತ್ರಿ, ಜನತಾದಳ (ಜಾತ್ಯತೀತ) ಪಕ್ಷದ ಹಿರಿಯ ನಾಯಕ ಹಾಗೂ ದೇಶದ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್.ಡಿ. ದೇವೇಗೌಡರವರ ಜನ್ಮದಿನದ ಅಂಗವಾಗಿ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಂಗಳೂರಿನ ಲೇಡಿಗೋಷನ್ ಸಮೀಪದ ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರದಲ್ಲಿ ಅರ್ಥಪೂರ್ಣ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ದೇವೇಗೌಡರವರ ಜನ್ಮದಿನವನ್ನು ಆಚರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಯುವಕರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ […]

LATEST NEWS

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬ: ನಿರಾಶ್ರಿತರಿಗೆ ಊಟ ಹಂಚಿದ ಯುವ ಜನತಾದಳ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ವತಿಯಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬವನ್ನು ನಗರದ ನಿರಾಶ್ರಿತರಿಗೆ ಊಟ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ, “ದೇಶದ 11ನೇ ಪ್ರಧಾನಿಯಾಗಿ ಹೆಚ್.ಡಿ. ದೇವೇಗೌಡರು ಮಾಡಿದ ಅಭಿವೃದ್ಧಿ ಕಾರ್ಯಗಳು ಸದಾ ಸ್ಮರಣೀಯ. ಮಹಿಳಾ ಮೀಸಲಾತಿ, ಕಾಶ್ಮೀರ ಸಮಸ್ಯೆ ಪರಿಹಾರ, ರೈತರಿಗೆ ರಸಗೊಬ್ಬರ […]