Month: July 2026

COMMUNITY NEWS

ವಿಟ್ಲ,ಕಥೊಲಿಕ್ ಸಭಾ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ವಿಟ್ಲ: ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ), ವಿಟ್ಲ ವಲಯ ಇದರ ಪ್ರಸ್ತುತ ಅವಧಿಯ ವಲಯ ಹಾಗೂ ವಿವಿಧ ಘಟಕಗಳ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಿಗಾಗಿ ಕೇಂದ್ರೀಯ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಾಗಾರವು ಜು. 26 ರಂದು ವಿಟ್ಲ ಚರ್ಚ್‌ನ ಸಮುದಾಯ ಭವನದ ಮಿನಿ ಸಭಾಂಗಣದಲ್ಲಿ ನಡೆಯಿತು..ತರಬೇತುದಾರರಾಗಿ ಆಗಮಿಸಿದ್ದ ಕೇಂದ್ರೀಯ ಸಮಿತಿ ಮಾಜಿ ಅಧ್ಯಕ್ಷ ಹಾಗೂ ರಾಜಕೀಯ ಸಂಚಾಲಕ ಸ್ಟ್ಯಾನಿ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ನಂತರ ಮಾತನಾಡಿದ ಅವರು, ನಮ್ಮ ಸಂಘಟನೆಯು ‘ಸೇವೆ, ತ್ಯಾಗ ಮತ್ತು […]

DAKSHINA KANNADA HOME LATEST NEWS

ಬಿ.ಸಿ.ರೋಡು: ಲಾವಣ್ಯ ಕೊಲೆ ಪ್ರಕರಣ- ಆರೋಪಿ ಚೇತನ್‌ ಆಸ್ಪತ್ರೆಯಿಂದ ಪೊಲೀಸ್‌ ವಶಕ್ಕೆ

ಬಂಟ್ವಾಳ : ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್‌ನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿಯನ್ನು ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಬಳಿಕ ಆತ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದನು. ಘಟನೆಯ ಮರುದಿನ ಮಂಗಳೂರಿನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. […]

DAKSHINA KANNADA HOME LATEST NEWS

ಅಪಘಾತವೆಂದು ಬಿಂಬಿಸಿದ್ದ ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರಿಗೆ ಜೀವಾವಧಿ

ಮಂಗಳೂರು: ನಗರ ಹೊರವಲಯದ ಬೈಕಂಪಾಡಿಯ ಮೀನಕಳಿಯ ಬಳಿ 12 ವರ್ಷಗಳ ಹಿಂದೆ ಮೀನುಗಾರ ಮುಖಂಡ ಗಂಗಾಧರ ಪಾಂಗಳ (55) ಎಂಬವರನ್ನು ವಾಹನ ಢಿಕ್ಕಿ ಪಡಿಸಿ ಕೊಲೆ ಮಾಡಿದ ಪ್ರಕರಣದ ನಾಲ್ಕು ಮಂದಿ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸತೀಶ್ ಬೈಕಂಪಾಡಿ (58), ಹರೀಶ್ ಬೈಕಂಪಾಡಿ (60), ಭಾಸ್ಕರ್ ಬೈಕಂಪಾಡಿ (61) ಪುಷ್ಪರಾಜ್ (47) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು ಎಂದು ತಿಳಿದುಬಂದಿದೆ. ಬೈಕಂಪಾಡಿಯ ಮೊಗವೀರ […]

LATEST NEWS

“ಹಿರಿಯರಲ್ಲಿ ನಗು, ಪ್ರಾರ್ಥನೆ ಹಾಗೂ ಕ್ಷಮಾ ಗುಣವಿರಲಿ” ಪೆರುವಾಯಿ ಚರ್ಚ್‌ನಲ್ಲಿ ‘ಹಿರಿಯರ ದಿನ’ ಆಚರಣೆ

ವಿಟ್ಲ: ಸೇಂಟ್ ವಿನ್ಸೆಂಟ್ ಡಿ ಪೌಲ್ ಸಂಘಟನೆ (SVP) ಪೆರುವಾಯಿ ಘಟಕ ಇದರ ನೇತೃತ್ವದಲ್ಲಿ ಕುಟುಂಬ ಆಯೋಗ, ಆರೋಗ್ಯ ಆಯೋಗ ಇವರ ಜಂಟಿ ಆಶ್ರಯದಲ್ಲಿ ವಿಟ್ಲ ಸಮೀಪದ ಮುಚ್ಚಿರಪದವಿನ ಫಾತಿಮಾ ಮಾತೆಯ ದೇವಾಲಯದಲ್ಲಿ ಇಂದು ಹಿರಿಯರ ದಿನ ಆಚರಿಸಲಾಯಿತು. ವಿಟ್ಲ ಶೋಕ ಮಾತೆಯ ದೇವಾಲಯದ ಧರ್ಮಗುರು ವಂದನೀಯ ಫಾ. ಮೈಕಲ್ ಲೋಬೊ ಹಾಗೂ ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ಧರ್ಮಗುರು ವಂದನೀಯ ಫಾ. ಸೈಮನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಪವಿತ್ರ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆ ನೆರವೇರಿತು. […]

LATEST NEWS

ನೀಟ್ ಪರೀಕ್ಷಾ ಅಕ್ರಮ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಐವನ್ ಡಿ’ಸೋಜಾ

ಮಂಗಳೂರು:ನೀಟ್ (NEET) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ದೇಶದ ಪ್ರಜಾಪ್ರಭುತ್ವ ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ಅವರು ತಿಳಿಸಿದ್ದಾರೆ. ಸುಮಾರು ಹನ್ನೆರಡು ವರ್ಷಗಳ ನಂತರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಒಬ್ಬ ಸಚಿವರು ರಾಜೀನಾಮೆ ನೀಡುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. ಇಷ್ಟೊಂದು ವರ್ಷಗಳಲ್ಲಿ ಯಾವುದೇ ಪ್ರಕರಣಕ್ಕೆ ಸಚಿವರ […]

LATEST NEWS

ಪದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ‘ಉತ್ಕರ್ಷ–2026’

ಮಂಗಳೂರು: ಪದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಹೊಸದಾಗಿ ದಾಖಲಾದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಉತ್ಕರ್ಷ–2026’ ಪರಿಚಯಾತ್ಮಕ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಐಸಿಎಫ್ ಸಿಸಿಇ ಪ್ರಮಾಣೀಕೃತ ತರಬೇತುದಾರ, ಅಕ್ಷಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ನಿರ್ದೇಶಕ ಹಾಗೂ ಅಭಿಜ್ಞಾ ಎಜುಕೇಶನ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಅಭಿಲಾಷ್ ಕ್ಷತ್ರಿಯ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, “ಇಂದಿನ ಜನರೇಷನ್ ಜಡ್ (Gen […]

DAKSHINA KANNADA HOME LATEST NEWS

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಇಂದು ಮಧ್ಯಾಹ್ನ 1:45ರ ಸುಮಾರಿಗೆ ನಡೆದಿದೆ. ವಿಕ್ಕಿ ಬಪ್ಪಲ್ ತಲವಾರು ದಾಳಿಗೊಳಗಾದ ವ್ಯಕ್ತಿ. ರೌಡಿ ಶೀಟರ್ ಆಗಿರುವ ಈತ, ಮಾದಕವಸ್ತು ಮಾರಾಟದ ಕಾರಣಕ್ಕೆ ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಲಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ದಾಳಿಯಿಂದ […]

DAKSHINA KANNADA HOME LATEST NEWS

SIRನಿಂದ ಮತದಾನದ ಹಕ್ಕು ಕಳೆದುಕೊಳ್ಳುವುದಿಲ್ಲ: ಮುಖ್ಯ ಚುನಾವಣಾಧಿಕಾರಿ

ಮಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆಯಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದಿಲ್ಲ ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ಎಸ್ ಐ ಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಬೇಡ. ಎಸ್ ಐ ಆರ್ ನಂತರ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕೈ ಬಿಟ್ಟು ಹೋದರೆ, ನಮೂನೆ 6 ಸಲ್ಲಿಸುವ […]

LATEST NEWS STATE

*ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್*

ಚಿತ್ರದುರ್ಗ, ಜು.25:“ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ನಗರ ಪ್ರದೇಶದ ಅತ್ಯುತ್ತಮ ಖಾಸಗಿ ಶಾಲೆಗಳು ದತ್ತು ಪಡೆದು ಶಿಕ್ಷಕರನ್ನು ನಿಯೋಜಿಸಿ, ತಮ್ಮ ಶಾಲೆಗಳ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಭಾಗದ ಮಕ್ಕಳಿಗೆ ನೀಡಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಹಿರಿಯೂರಿನ ವೇದಾವತಿ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು ಎನ್ನುವ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, “ಖಾಸಗಿ […]

COMMUNITY NEWS LATEST NEWS

ಆ.10 ಬೋಂದೆಲ್ ಸಂತ ಲಾರೆನ್ಸ್ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

ಮಂಗಳೂರು, ಜು.24: ಮಂಗಳೂರು ನಗರದ ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಮತ್ತು ಪುಣ್ಯಕ್ಷೇತ್ರದಲ್ಲಿ ಆ. 10ರಂದು ವಾರ್ಷಿಕ ಮಹೋತ್ಸವ ನಡೆಯಲಿದೆ. ಶುಕ್ರವಾರ ಬೋಂದೆಲ್ ಚರ್ಚ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪುಣ್ಯಕ್ಷೇತ್ರದ ನಿರ್ದೇಶಕ ಹಾಗೂ ಧರ್ಮಗುರು ವಂ| ಬೇಸಿಲ್ ವಾಸ್ ಅವರು, ಹಬ್ಬದ ಪೂರ್ವಭಾವಿಯಾಗಿ ಆ. 1ರಿಂದ 9ರವರೆಗೆ ನೊವೆನಾ ಪ್ರಾರ್ಥನೆಗಳು ಬೆಳಗ್ಗೆ 10.30 ಹಾಗೂ ಸಂಜೆ 5.30ಕ್ಕೆ ನಡೆಯಲಿವೆ. ಆ.1ರಂದು ಬೆಳಗ್ಗೆ 10ಕ್ಕೆ ಸಿಟಿ ವಲಯದ ಪ್ರಧಾನ ಗುರು ವಂ| ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ನೊವೆನಾ […]