ಮಳೆ ಹಿನ್ನೆಲೆ: ಜು.25 ರಂದು ಅಂಗನವಾಡಿ, PUC, ITI ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ರಜೆ
ಮಂಗಳೂರು, ಜುಲೈ 24: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜಿಲ್ಲೆಯಾದ್ಯಂತ ತುರ್ತು ಸುರಕ್ಷತಾ ಆದೇಶಗಳನ್ನು ಹೊರಡಿಸಿದ್ದಾರೆ. ಶಾಲಾ-ಕಾಲೇಜುಗಳಿಗೆ ಕಡ್ಡಾಯ ರಜೆ: ಜಿಲ್ಲೆಯ […]










