Month: July 2026

LATEST NEWS

ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯದ್ ನಾಸಿರ್ ಅಬ್ದುಲ್ ಹಯ್ಯಾ ಶಿಹಾಬುದ್ದೀನ್ ಬಾಅಲವಿ ಅಧಿಕಾರ ಸ್ವೀಕಾರ

ಮಂಗಳೂರು: ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯದ್ ನಾಸಿರ್ ಅಬ್ದುಲ್ ಹಯ್ಯಾ ಶಿಹಾಬುದ್ದೀನ್ ಬಾಅಲವಿ ನಗರದ ಬಂದರ್ ಅನ್ಸಾರಿ ರಸ್ತೆಯಲ್ಲಿರುವ ಝೀನತ್ ಬಕ್ಷ್ ಯತೀಂ ಖಾನಾ ಹಾಲ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು. ಮಸ್ಜಿದ್ ಝೀನತ್ ಬಕ್ಷ್ ಮತ್ತು ಈದ್ಗಾ ಜುಮಾ ಮಸ್ಜಿದ್ ಅಧ್ಯಕ್ಷ ಡಾ.ಹಾಜಿ ಯೆನೆಪೊಯ ಅಬ್ದುಲ್ಲಾ ಕುಂಞಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಮಸ್ತ ವಿದ್ಯಾಭ್ಯಾಸ ಬೋರ್ಡ್ ಕೋಶಾಧಿಕಾರಿ, ಕೇರಳ ಮುಸ್ಲಿಂ ಲೀಗ್ ಅಧ್ಯಕ್ಷ, ಸೈಯದ್ ಸ್ವಾದಿಕ್ ಅಲಿ […]

LATEST NEWS

*ಬರುತ್ತಿದ್ದಾಳೆ “ಶ್ರೀಮತಿ ಸತ್ಯಭಾಮ”* *ಕೊಡಿಯಾಲ್ ಬೈಲ್ ಅವರ ಕಲಾಸಂಗಮದ ಹೊಸ ನಾಟಕ*

ಮಂಗಳೂರು : ಆ ಪೋಸ್ಟರೇ ಹೊಸತನವನ್ನು ತುಂಬಿಕೊಂಡಿದೆ, ತಬ್ಬಿಕೊಂಡಿದೆ. “ಶ್ರೀಮತಿ ಸತ್ಯಭಾಮ” ಟೈಟಲ್ ಅನ್ನೇ ಆಭರಣ, ಸೀರೆಯಿಂದ ಅಲಂಕರಿಸಲಾಗಿದೆ. Born to Rule ಎಂಬ ಅಡಿಬರಹ ಹಾಗೂ ಸತ್ಯಭಾಮ ನಿಂತ ಭಂಗಿಯು ಆಕೆಯ ಪಾತ್ರ ಎಂಥದ್ದು ಎಂಬುದನ್ನೂ ಸೂಚಿಸುತ್ತದೆ. ಅವೆಲ್ಲವುಗಳಿಂದ ಮುಖ್ಯವಾಗಿ – ಕೈಲಾಸ – ವೈಕುಂಠ ತಿರ್ಗ್ದ್ ಕಲಾಸಂಗಮ ಕುಡ ಭೂಲೋಕೊಗು ಎಂಬ ಒಂದು ವಾಕ್ಯದ ಮೂಲಕ ಈ ತಂಡವು ಪೌರಾಣಿಕ ಕಥೆಗಳ ಬಳಿಕ ಮತ್ತೆ ಸಾಮಾಜಿಕ ಕಥೆಗೆ ಹೊರಳಿದೆ ಎಂಬುದನ್ನು ವಿಭಿನ್ನವಾಗಿ ತಿಳಿಸುವ ಪ್ರಯತ್ನ […]

DAKSHINA KANNADA LATEST NEWS

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ- ವಿಶ್ವ ಉರಗಳ ದಿನಾಚರಣೆ

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಗದತಂತ್ರ ವಿಭಾಗದಿಂದ ವಿಶ್ವ ಉರಗಳ ದಿನಾಚರಣೆಯ ಪ್ರಯುಕ್ತ ವಿವಿಧ ರೀತಿಯ ಉರಗಗಳ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಗಾರ ವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ ವಿ ಅವರು ದೀಪ ಬೆಳಗಿಸುವುದ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸುರತ್ಕಲ್ನ ಉರಗ ಸಂರಕ್ಷಕಾರರಾದ ಶ್ರೀ ಪ್ರಶಾಂತ್ ಕೃಷ್ಣ ಎಂ ಸಿ ಇವರು ಪ್ರಕೃತಿಯ ಸಮತೋಲನದಲ್ಲಿ ಉರಗಗಳ […]

HOME LATEST NEWS

ಬಂಟ್ವಾಳ: ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದ ಮರ: 6 ವರ್ಷದ ಮಗು ಸಾವು, ನಾಲ್ವರಿಗೆ ಗಾಯ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಶಾಲಾ ಬಸ್‌ ಮೇಲೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ, ಕಲ್ಲಡ್ಕ ಶ್ರೀರಾಮ ಶಾಲೆಯ ಆರು ವರ್ಷದ ವಿದ್ಯಾರ್ಥಿನಿ ಚಿರ ಎಂಬಾಕೆ ಮೃತಪಟ್ಟಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬುಧವಾರ ಸಂಜೆ ಶಾಲಾ ಅವಧಿ ಮುಗಿದ ನಂತರ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ವಾಹನವು ಬರಿಮಾರು ಸಮೀಪದ ಶ್ರೀ ಕಾನಲ್ತಾಯ ದೈವಸ್ಥಾನದ ರಸ್ತೆಯಲ್ಲಿ ಚಲಿಸುತ್ತಿತ್ತು. ಈ […]

HOME LATEST NEWS

ಕಾಸರಗೋಡಿನ ಬದಿಯಡ್ಕದಲ್ಲಿ ನೂತನ ‘ಕನ್ನಡ ಭವನ’ ಉದ್ಘಾಟನೆ: ಕೇರಳ ಸಿಎಂಗೆ ಆಹ್ವಾನ ನೀಡಿದ ಗಡಿ ಅಭಿವೃದ್ಧಿ ಪ್ರಾಧಿಕಾರ.

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 2 ಕೋಟಿ ರೂ. ವಿಶೇಷ ಅನುದಾನದಡಿ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮದಲ್ಲಿ ನಿರ್ಮಿಸಲಾಗಿರುವ ಭವ್ಯ ‘ಕನ್ನಡ ಭವನ’ ಉದ್ಘಾಟನೆಗೆ ಸಿದ್ಧವಾಗಿದೆ. ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ರವರ ಹೆಸರಿನಲ್ಲಿ ತಲೆಯೆತ್ತಿರುವ ಈ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿಕೊಡುವಂತೆ ಕೇರಳ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ವಿ.ಡಿ. ಸತೀಶನ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ದಿನಾಂಕ 22.07.2026 ರಂದು ಪ್ರಾಧಿಕಾರದ ಉನ್ನತ ಮಟ್ಟದ ನಿಯೋಗವು ಕೇರಳ ಮುಖ್ಯಮಂತ್ರಿಗಳನ್ನು […]

DAKSHINA KANNADA HOME LATEST NEWS

ಭಾರೀ ಮಳೆ ಹಿನ್ನೆಲೆ: ಜುಲೈ 23 ರಂದು ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ತುರ್ತು ಆದೇಶಗಳನ್ನು ಹೊರಡಿಸಿದೆ. ಮುಖ್ಯ ಆದೇಶಗಳು ಮತ್ತು ಮಾರ್ಗಸೂಚಿಗಳು ಈ ಕೆಳಗಿನಂತಿವೆ: 12ನೇ ತರಗತಿಯವರೆಗೆ ಕಡ್ಡಾಯ ರಜೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು […]

LATEST NEWS

ಶ್ರೀಧಾಮ ಮಾಣಿಲದಲ್ಲಿ 26ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಮಹೋತ್ಸವಕ್ಕೆ ವಿಜೃಂಭಣೆಯ ಚಾಲನೆ

ವಿಟ್ಲ,ಮಾಣಿಲ: ಪ್ರಖ್ಯಾತ ಪುಣ್ಯಕ್ಷೇತ್ರವಾದ ಶ್ರೀಧಾಮ ಮಾಣಿಲದಲ್ಲಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ, ಕಳೆದ 25 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ‘ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ’ಯ 26ನೇ ವರ್ಷದ ಧಾರ್ಮಿಕ ಮಹೋತ್ಸವಕ್ಕೆ ಈ ವರ್ಷವೂ ಅತ್ಯಂತ ವಿಜೃಂಭಣೆಯಿಂದ ಚಾಲನೆ ದೊರೆತಿದೆ. 48 ದಿನಗಳ ನಿರಂತರ ಧಾರ್ಮಿಕ ಸೇವೆಗಳು ಮಂಡಲಾವಧಿಯ ಪ್ರತಿದಿನವೂ ಶ್ರೀಧಾಮದಲ್ಲಿ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದು, ಭಕ್ತಿಪೂರ್ವಕವಾಗಿ ನಡೆಯುತ್ತಿವೆ: ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಮತ್ತು ಮಹಾಪೂಜೆ ನಾಗದೇವರ ಪೂಜೆ […]

DAKSHINA KANNADA HOME LATEST NEWS

‘ಎಲ್ ನಿನೋ’: ಬರದ ಭೀತಿ ಎದುರಿಸಲು ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ

ಬೆಂಗಳೂರು : ಜಾಗತಿಕ ಮಟ್ಟದಲ್ಲಿ ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ (El Niño) ಹವಾಮಾನ ವೈಪರೀತ್ಯದ ಪರಿಣಾಮವಾಗಿ ಉಂಟಾಗಬಹುದಾದ ತಾಪಮಾನ ಏರಿಕೆ ಹಾಗೂ ಬರದ ಪರಿಸ್ಥಿತಿಯನ್ನು ಎದುರಿಸಲು ಕರ್ನಾಟಕ ಸರ್ಕಾರವು ಸಮಗ್ರ ಮತ್ತು ದೂರದೃಷ್ಟಿಯ ಕಾರ್ಯತಂತ್ರವನ್ನು ಕೈಗೆತ್ತಿಕೊಂಡಿದೆ. ​ಏನಿದು ಎಲ್ ನಿನೋ? : ದಕ್ಷಿಣ ಪೆಸಿಫಿಕ್ ಮಹಾಸಾಗರದ ಕೇಂದ್ರ ಮತ್ತು ಪೂರ್ವ ಭಾಗಗಳಲ್ಲಿ ಸಮುದ್ರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ಹೆಚ್ಚು ಕಾಯುವ ವಿದ್ಯಮಾನವನ್ನು ‘ಎಲ್ ನಿನೋ’ (ಸ್ಪ್ಯಾನಿಷ್ ಭಾಷೆಯಲ್ಲಿ ‘ಪುಟ್ಟ ಬಾಲಕ’ ಅಥವಾ ‘ಯೇಸು ಕ್ರಿಸ್ತ’) ಎನ್ನಲಾಗುತ್ತದೆ. ​ಈ […]

DAKSHINA KANNADA HOME LATEST NEWS

ಮಂಗಳೂರಿಗೆ NSG ತಂಡ: ಇಂದಿನಿಂದ ಜು.25ರವರೆಗೆ ಭಯೋತ್ಪಾದನ ನಿಗ್ರಹ ಅಣಕು ಕಾರ್ಯಾಚರಣೆ

ಮಂಗಳೂರು: ರಾಷ್ಟ್ರೀಯ ಭದ್ರತಾ ದಳ (National Security Guard – NSG) ತಂಡವು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು, ಜುಲೈ 22 ರಿಂದ 25ರವರೆಗೆ ಮಂಗಳೂರಿನ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು (Counter Terrorist Exercise) ನಡೆಸಲಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು (Counter Terrorist Exercise) ಕೇವಲ ಭದ್ರತಾ ಸನ್ನದ್ಧತೆಯನ್ನು ಪರೀಕ್ಷಿಸುವ ಉದ್ದೇಶದಿಂದ ನಡೆಸಲಾಗುತ್ತಿದ್ದು, ಕಾರ್ಯಾಚರಣೆಯ ಅವಧಿಯಲ್ಲಿ ಸಾರ್ವಜನಿಕರು ಸಂಚಾರ ನಿಯಂತ್ರಣ ಸೇರಿದಂತೆ ಭದ್ರತಾ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ ಅಗತ್ಯ ಸಹಕಾರ ನೀಡುವಂತೆ ಹಾಗೂ ಯಾವುದೇ […]

DAKSHINA KANNADA HOME LATEST NEWS

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅಕ್ರಮ ಬಂಧನ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮಂಗಳೂರು: ಎಐಸಿಸಿ ನಾಯಕರುಗಳಾದ ಶ್ರೀ ರಾಹುಲ್ ಗಾಂಧಿ ಹಾಗೂ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ಅಕ್ರಮವಾಗಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿ, ಮಂಗಳೂರು ನಗರ ಪಾಲಿಕೆಯ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು. ಮಂಗಳೂರು ನಗರ ಪಾಲಿಕೆಯ ಮುಂಭಾಗದಲ್ಲಿ ಜಮಾಯಿಸಿದ ನಾಯಕರು ಮತ್ತು ನೂರಾರು ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರ ದಮನಕಾರಿ ನಡೆಗೆ ವಿರುದ್ಧವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಜೋರು ಘೋಷಣೆಗಳನ್ನು ಕೂಗಿದರು. ಅಕ್ರಮ ಬಂಧನಕ್ಕೆ ತೀವ್ರ ಆಕ್ರೋಶ: ಶಾಂತಿಯುತವಾಗಿ ಧರಣಿ […]