Month: July 2026

LATEST NEWS

ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್‌ಗೆ ಭಾವಪೂರ್ಣ ನುಡಿನಮನ

ಮಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಪರಮಾನಂದ ಸಾಲ್ಯಾನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜಂಟಿಯಾಗಿ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, “ಸಾಲ್ಯಾನ್ ಅವರು ಪತ್ರಿಕೋದ್ಯಮದ ಜೊತೆಗೆ ತುಳು ರಂಗಭೂಮಿ ಮತ್ತು ಜಾನಪದ ಕ್ಷೇತ್ರದಲ್ಲಿ ಅಗಾಧ ಜ್ಞಾನ ಹೊಂದಿದ್ದರು. ಭೂತಾರಾಧನೆ, ನಾಟಕ ಹಾಗೂ […]

LATEST NEWS

ಧಾರ್ಮಿಕ ಸಂಸ್ಥೆಗಳು ಸೌಹಾರ್ದತೆ ಮತ್ತು ಮಾನವೀಯ ಮೌಲ್ಯ ಬೆಳೆಸುವ ಕೇಂದ್ರಗಳು: ಬಿ. ರಮಾನಾಥ ರೈ

ಬಂಟ್ವಾಳ, ಜುಲೈ 18: ಧಾರ್ಮಿಕ ಸಂಸ್ಥೆಗಳು ಕೇವಲ ಆರಾಧನೆಯ ಕೇಂದ್ರಗಳಾಗಿರದೆ, ಸಮಾಜದಲ್ಲಿ ಶಿಕ್ಷಣ, ಸೇವೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕೇಂದ್ರಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಬಿ. ರಮಾನಾಥ ರೈ ಹೇಳಿದ್ದಾರೆ.ಅಕ್ಕರಂಗಡಿ–ಪಾಣೆಮಂಗಳೂರಿನ ಕೇಂದ್ರ ಜುಮಾ ಮಸೀದಿಯಲ್ಲಿ ಆಯೋಜಿಸಲಾಗಿದ್ದ ಸ್ಮರಣಿಕೆ ಬಿಡುಗಡೆ, ಮದ್ರಸ ಉಸ್ತಾದರ ವಾಸ್ತವ್ಯದ ನೂತನ ಕಟ್ಟಡ ಮತ್ತು ಮರ್‌ಹೂಂ ನಸೀಮಾ ಬಾನು ಸ್ಮರಣಾರ್ಥ ಮಹಿಳಾ ಯಾತ್ರಿಕರ ನಮಾಝಿನ ಕೊಠಡಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಶುಭ ಹಾರೈಸಿದರು.ಬಳಿಕ ಮಾತನಾಡಿದ ಅವರು, ಮದ್ರಸ […]

DAKSHINA KANNADA HOME LATEST NEWS

ಮಂಗನ ಕಾಯಿಲೆ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ: ಆರೋಗ್ಯ ಸಚಿವರ ನೇತೃತ್ವದ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ

ಪುತ್ತೂರು: ರಾಜ್ಯಾದ್ಯಂತ ಕೆಲವೊಂದು ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಹಾಗೂ ಮುನ್ನೆಚ್ಚರಿಕೆಯನ್ನು ನೀಡುವ ಕುರಿತು ಆರೋಗ್ಯ ಸಚಿವ ಯು ಟಿ ಖಾದರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದ್ದು ಈ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯು ಆರೋಗ್ಯ ಸಚಿವ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಜ್ಯದ ಕೆಲವೊಂದು ಕಡೆಗಳಲ್ಲಿ ಅಪಾಯಕಾರಿ ಮಂಗನ ಕಾಯಿಲೆ ಕಂಡು ಬಂದಿದ್ದು ಇದರ […]

LATEST NEWS

ಕಕ್ಯೆಪದವು ಲಾವಣ್ಯ ಹತ್ಯೆ: ಮೃತರ ನಿವಾಸಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ, ಸಾಂತ್ವನ

ಮಂಗಳೂರು: ಜುಲೈ 17: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ರಮಾನಾಥ ರೈ, ಮೃತರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಇಟ್ಟು ಗೌರವ ನಮನ ಸಲ್ಲಿಸಿದರು. ಬಳಿಕ ದುಃಖತಪ್ತರಾದ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, “ಈ ಅಮಾನವೀಯ ಕೃತ್ಯ ಅತ್ಯಂತ ಖಂಡನೀಯ ವಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು […]

DAKSHINA KANNADA HOME LATEST NEWS

ಭಾರೀ ಮಳೆ ಹಿನ್ನೆಲೆ: ದ.ಕ ಜಿಲ್ಲೆಯ ಶಾಲಾ-ಕಾಲೇಜಿಗೆ ಜು.18ರಂದು ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಸುರಕ್ಷತೆಗಾಗಿ ತುರ್ತು ಆದೇಶಗಳನ್ನು ಹೊರಡಿಸಿದೆ. ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ (PUC) ಕಾಲೇಜುಗಳಿಗೆ […]

LATEST NEWS

ಶಾಸಕ ಅಶೋಕ್ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ಠಾಣೆಗೆ ದೂರು

ಪುತ್ತೂರು: ಜುಲೈ 17: ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ಶಾಸಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿ, ರಾಜ್ಯ ಸರಕಾರ ಮತ್ತು ಗೃಹ ಸಚಿವರ ಬಗ್ಗೆ ತಪ್ಪು ಗ್ರಹಿಕೆ ಮೂಡಿಸುವ ರೀತಿಯಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಸಾಮಾಜಿಕ ಜಾಲತಾಣದ ವತಿಯಿಂದ ಪುತ್ತೂರು ಆರಕ್ಷಕ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರು ಸುಪ್ರೀತ್ ಕಣ್ಣಾರಾಯ ಅವರು ಈ […]

DAKSHINA KANNADA HOME LATEST NEWS

ಬಂಟ್ವಾಳ: ಕನ್ಯಾನದಲ್ಲಿ ಕಸ ಎಸೆದವರ ವಿರುದ್ಧ ವಿಟ್ಲ ಠಾಣೆಗೆ ದೂರು

ಮಂಗಳೂರು: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಳಂಜಿಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ ಮೂವರು ವ್ಯಕ್ತಿಗಳಿಗೆ ದಂಡ ವಿಧಿಸಿದರೂ ದಂಡ ಪಾವತಿಸದೇ ಇರುವುದರಿಂದ ಅವರ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಪಿ.ಡಿ.ಒ ದೂರು ನೀಡಿದ್ದಾರೆ. ಸಾಂದರ್ಭಿಕ ಚಿತ್ರ

DAKSHINA KANNADA HOME LATEST NEWS

ಯುವತಿ ಮರ್ಡರ್‌ ಕೇಸ್‌: ಇಲಿ ಪಾಷಾಣ ಸೇವಿಸಿದ ಸ್ಥಿತಿಯಲ್ಲಿ ಆರೋಪಿ ಬಂಧನ

ಬಂಟ್ವಾಳ: ಬಿ.ಸಿ.ರೋಡಿನ KSRTC ಬಸ್ ನಿಲ್ದಾಣದ ಬಳಿ ಲಾವಣ್ಯ ಎಂಬ ಯುವತಿಯನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆತ ಇಲಿಪಾಷಾಣ ಸೇವಿಸಿದ್ದ ಎಂದು ತಿಳಿದು ಬಂದಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ದ.ಕ ಎಸ್ಪಿ ಘಟನೆ ನಡೆದ ತಕ್ಷಣ ಬಂಟ್ವಾಳ ಪೊಲೀಸರು ಸಿಸಿಬಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರು ಹೊರವಲಯದ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ (21) […]

LATEST NEWS

ಅಕ್ರಮ ಬಾಂಗ್ಲಾ ವಲಸಿಗರಿಗೆ ಪಿಆರ್‌ಸಿ ಪ್ರಮಾಣಪತ್ರ ವರದಾನ: ಶಾಸಕ ವೇದವ್ಯಾಸ ಕಾಮತ್ ಗಂಭೀರ ಆರೋಪ

ಮಂಗಳೂರು, ಜುಲೈ 16: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 19 ಬಾಂಗ್ಲಾ ಪ್ರಜೆಗಳ ಬಂಧನವಾಗಿದ್ದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ಇಲಾಖೆಗೆ ಸಮಸ್ತ ಸಾರ್ವಜನಿಕರ ಪರವಾಗಿ ಅಭಿನಂದನೆಗಳು. ಇದು ಸಂಪೂರ್ಣವಾಗಿ ಪೊಲೀಸ್ ಇಲಾಖೆಯ ಕಾರ್ಯಾಚರಣೆಯಾಗಿದ್ದು, ಎಳ್ಳಷ್ಟೂ ರಾಜ್ಯ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅಕ್ರಮ ವಲಸಿಗರಿಗೆ ವರದಾನವಾಗಿ ಅಧಿಕೃತವಾಗಿ ಮತದಾರರ ಪಟ್ಟಿಗೆ […]

DAKSHINA KANNADA LATEST NEWS

ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗೆ ಸರಕಾರದಿಂದ ತಲಾ 5 ಲಕ್ಷ ರೂ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ದ ಕ ಜಿಲ್ಲೆಯ 23 ಕಂಬಳ ಗಳಿಗೆ ಒಟ್ಟು 1.15 ಕೋಟಿ ಬಿಡುಗಡೆಯಾಗಿದೆ. ಕಂಬಳಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಳೆದ ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ವಿಧಾನಸಭಾ ಅಧಿವೇಶನದಲ್ಲೂ ಕಂಬಳಕ್ಕೆ ಸರಕಾರ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದರು. ಕರ್ನಾಟಕ ಸರಕಾರದ ಪ್ರವಾಸೋಧ್ಯಮ ಇಲಾಖೆಯ‌ಮೂಲಕ ಈ […]