Month: July 2026

DAKSHINA KANNADA HOME LATEST NEWS

ಬಿ.ಸಿ. ರೋಡ್ ಯುವತಿ ಬರ್ಬರ ಹತ್ಯೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ದಿಗ್ಭ್ರಮೆ, ಕಠಿಣ ಕ್ರಮಕ್ಕೆ ಆಗ್ರಹ

ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆತಂಕ ಮೂಡಿಸುವಂಥದ್ದು. ಯುವಜನತೆ […]

LATEST NEWS

ಮಾನವೀಯತೆಗೆ ಧರ್ಮದ ಎಲ್ಲೆ ಇಲ್ಲ: ಬಿರುವೆರ್ ಕುಡ್ಲ ಸಂಘಟನೆಯ ಸೇವೆಗೆ ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಶ್ಲಾಘನೆ

ಮಂಗಳೂರು:ಮಾನವೀಯ ಸೇವೆಯ ಮೂಲಕ ಸಮಾಜದಲ್ಲಿ ಸಹಸ್ರಾರು ಅಸಹಾಯಕ ಕುಟುಂಬಗಳಿಗೆ ಆಸರೆಯಾಗಿರುವ ಪ್ರಮುಖ ಸಾಮಾಜಿಕ ಸಂಘಟನೆ ‘ಬಿರುವೆರ್ ಕುಡ್ಲ’ ನೇತೃತ್ವದಲ್ಲಿ, ಅದರ ದುಬಾಯಿ ಘಟಕದ ವಿಶೇಷ ಸಹಯೋಗದೊಂದಿಗೆ ಮಂಗಳೂರಿನ ಇಬ್ಬರು ನೊಂದ ಸಂತ್ರಸ್ತರಿಗೆ ಒಟ್ಟು ₹1,65,000 ಆರ್ಥಿಕ ನೆರವನ್ನು ವಿತರಿಸಲಾಯಿತು. ನಗರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ₹55,000 ಹಾಗೂ ಗಂಭೀರ ಕಾಯಿಲೆಯಿಂದ ಹೋರಾಡುತ್ತಿರುವ ದುರ್ಗಾಪ್ರಸಾದ್ ಅವರ ವೈದ್ಯಕೀಯ ಚಿಕಿತ್ಸೆಗಾಗಿ ₹1,10,000 ಸಹಾಯ ಧನದ ಚೆಕ್‌ಗಳನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ […]

DAKSHINA KANNADA HOME LATEST NEWS

ನಾಗೋರಿ ಭೂಕುಸಿತ, ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಎಂಎಲ್‌ಸಿ ಎಸ್.ಎಲ್. ಭೋಜೆಗೌಡ ಭೇಟಿ: ಶಾಶ್ವತ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು, ಜುಲೈ 16: ರಾಜ್ಯದಲ್ಲಿ ಮುಂಗಾರು ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳ ಅಧ್ಯಯನಕ್ಕಾಗಿ ರಚಿಸಲಾದ ಜನತಾದಳ (ಜಾತ್ಯತೀತ) ಅಧ್ಯಯನ ತಂಡದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರು ಎಸ್.ಎಲ್. ಭೋಜೆಗೌಡ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವಿಕೋಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬೆಳಿಗ್ಗೆ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ,ಯುವ ಘಟಕ ಜಿಲ್ಲಾದ್ಯಕ್ಷ ಅದ್ಯಕ್ಷರಾದ ಅಕ್ಷಿತ್ ಸುವರ್ಣ, ಜಿಲ್ಲಾ ಮಹಾ ಪ್ರಧಾನ […]

HOME LATEST NEWS

ಬಿ.ಸಿರೋಡ್‌ನಲ್ಲಿ ಯುವತಿಯ ಬೆನ್ನಟ್ಟಿ ಬರ್ಬರ ಹತ್ಯೆ

ಮಂಗಳೂರು: ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್‌ KSRTC ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮೃತ ಯುವತಿ ಲಾವಣ್ಯ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಚೇತನ್ ಎಂಬುದಾಗಿ ತಿಳಿದುಬಂದಿದೆ. ಈತ ಯುವತಿಯ ದೂರದ ಸಂಬಂಧಿ ಹಾಗೂ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಮಾಹಿತಿ […]

DAKSHINA KANNADA HOME LATEST NEWS

ಬೆಳ್ತಂಗಡಿ: ರಿಸೀವಿಂಗ್ ಸ್ಟೇಷನ್‌ನಲ್ಲಿ ಕಳ್ಳತನದ ವೇಳೆ ವ್ಯಕ್ತಿ ಮೃತ್ಯು ಪ್ರಕರಣ- ಮತ್ತೊಬ್ಬನ ಬಂಧನ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್‌ನಲ್ಲಿ ಜು. 1 ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಮತ್ತೊಬ್ಬ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದ ನಿವಾಸಿ ಇಬ್ರಾಹಿಂ ಲತೀಫ್ (36) ಎಂಬಾತನನ್ನು ತನಿಖೆ ನಡೆಸಿ ಜು. 14 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ, ಜು. 15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. […]

DAKSHINA KANNADA HOME LATEST NEWS

ವಿಳಂಬಿಸದೆ SIR ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 18,03,766 ಮತದಾರರ ಪೈಕಿ 17,86,112 ಅಂದರೆ ಶೇ. 99.02% ಮತದಾರರಿಗೆ ಎನ್ಯುಮರೇಶನ್ ಫಾರ್ಮ್‍ಗಳನ್ನು ತಲುಪಿಸಲಾಗಿರುತ್ತದೆ. ಜುಲೈ 29 ಎನ್ಯುಮರೇಶನ್ ಫಾರ್ಮ್‍ಗಳ ಡಿಜಿಟೈಸೇಶನ್‍ಗೆ ಕೊನೆಯ ದಿನವಾಗಿರುವುದರಿಂದ ಮತದಾರರು ಆದಷ್ಟು ಬೇಗ ಎನ್ಯುಮರೇಶನ್ ಫಾರ್ಮ್‍ಗಳನ್ನು ಭರ್ತಿ ಮಾಡಿ ಬಿ.ಎಲ್.ಒ ರವರು ಮನೆಗೆ ಬಂದಾಗ ವಿಳಂಬ ಮಾಡದೇ ನೀಡಬೇಕು. ಬಿ.ಎಲ್.ಒ ರವರು ಮತದಾರರಿಂದ ಸ್ವೀಕೃತವಾಗುವ ಎನ್ಯುಮರೇಶನ್ ಫಾರ್ಮ್‍ಗಳನ್ನು ಬಿ.ಎಲ್.ಒ ಆ್ಯಪ್‍ನಲ್ಲಿ ಡಿಜಿಟೈಸೇಶನ್ ಮಾಡಲು ಕನಿಷ್ಠ 2 ರಿಂದ 4 ನಿಮಿಷಗಳ ಸಮಯ ತಗಲುತ್ತದೆ. ಕೊನೆಯ ಹಂತದಲ್ಲಿ […]

DAKSHINA KANNADA HOME LATEST NEWS

ರಾಮಮಂದಿರದ ಹುಂಡಿ ಕಳವು ಪ್ರಕರಣ: ಆರೆಸ್ಸೆಸ್, ವಿಎಚ್‌ಪಿ, ಬಿಜೆಪಿ ವಿರುದ್ಧ ವಿನಯ್ ಕುಮಾರ್ ಸೊರಕೆ ಕಿಡಿ

ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್, ವಿಎಚ್ ಪಿ ಮತ್ತು ಬಿಜೆಪಿಯವರು ಕೋಟ್ಯಂತರ ರಾಮ ಭಕ್ತರ ನಂಬಿಕೆಗೆ ಆಘಾತವನ್ನುಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಿದ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪ್ರಕರಣದ ಬಗ್ಗೆ ಐಟಿ, ಇಡಿ, ಸಿಬಿಐ ಮೌನವಾಗಿವೆ. ತಾನೋರ್ವ ಚೌಕಿದಾರ್ ಎನ್ನುವ ಪ್ರಧಾನಿ ಮೋದಿಯವರು ನೇಮಿಸಿದ ಉಪಚೌಕಿದಾರ ಟ್ರಸ್ಟಿಗಳಿಂದಲೇ ಕಳವು […]

DAKSHINA KANNADA LATEST NEWS

*ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ*

ಮಂಗಳೂರು, ಜು.15:-ನಾಗರೀಕರು ಚುನಾವಣೆ ಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಹೇಳಿದ್ದಾರೆ. ಅವರು ಬುಧವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್.ಐ.ಆರ್) ಕುರಿತು ವಿಶೇಷ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದತ್ತ ಅಧಿಕಾರವಾಗಿರುವ ಮತದಾನವು ಪ್ರಜೆಗೆ ದೊರೆತಿರುವ ಅತ್ಯುನ್ನತ ಅಧಿಕಾರವಾಗಿದೆ. ತನ್ನ ಆಯ್ಕೆಯ ಸರಕಾರವನ್ನು ಚುನಾಯಿಸಲು ಮತದಾರರು […]

HOME LATEST NEWS STATE

*ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್*

ಬೆಂಗಳೂರು, ಜು.15:”ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ‌” ಎಂದು ಸಿಎಂ‌ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನೆಹರು ತಾರಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. […]

HOME LATEST NEWS

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಹಾಗೂ 39 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆಫ್‍ಲೈನ್ […]