• Home  
  • ಬಿ.ಸಿರೋಡ್‌ನಲ್ಲಿ ಯುವತಿಯ ಬೆನ್ನಟ್ಟಿ ಬರ್ಬರ ಹತ್ಯೆ
- HOME - LATEST NEWS

ಬಿ.ಸಿರೋಡ್‌ನಲ್ಲಿ ಯುವತಿಯ ಬೆನ್ನಟ್ಟಿ ಬರ್ಬರ ಹತ್ಯೆ

ಮಂಗಳೂರು: ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್‌ KSRTC ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮೃತ ಯುವತಿ ಲಾವಣ್ಯ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಚೇತನ್ ಎಂಬುದಾಗಿ ತಿಳಿದುಬಂದಿದೆ. ಈತ ಯುವತಿಯ ದೂರದ ಸಂಬಂಧಿ ಹಾಗೂ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಮಾಹಿತಿ […]

Share News

ಮಂಗಳೂರು: ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್‌ KSRTC ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ ಎಂದು ತಿಳಿದು ಬಂದಿದೆ.

ಮೃತ ಯುವತಿ ಲಾವಣ್ಯ

ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಚೇತನ್ ಎಂಬುದಾಗಿ ತಿಳಿದುಬಂದಿದೆ. ಈತ ಯುವತಿಯ ದೂರದ ಸಂಬಂಧಿ ಹಾಗೂ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಮಾಹಿತಿ ನೀಡಿದ್ದಾರೆ.

ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ. ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ. ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದನು ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಆರೋಪಿ ಚೇತನ್ 

ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ನಿರೀಕ್ಷಕ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ಬಗ್ಗೆ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Share News