ಮಂಗಳೂರು: ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ.


ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾವಣೆಗೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್‍ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‍ಗಳಲ್ಲಿ ಯೋಜನೆಯಡಿ ನೋಂದಾವಣೆಗೊಳ್ಳಬಹುದು. ಹಾಗೂ ಸಾಮಾನ್ಯ ಸೇವಾ ಕೇಂದ್ರ (ಅSಅ) ಮತ್ತು ಗ್ರಾಮ ಒನ್‍ಗಳ ಮೂಲಕವೂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಪ್ರತಿ ಹೆಕ್ಟೇರಿಗೆ ಕ್ರಮವಾಗಿ ರೂ.6400 ಹಾಗೂ ರೂ.2350 ಗಳಾಗಿರುತ್ತದೆ. ಈ ಯೋಜನೆಯಡಿ ನೋಂದಾವಣೆಗೊಳ್ಳಲು ಜುಲೈ 31 ಕೊನೆಯ ದಿನ. ರೈತರು ಯೋಜನೆಯಡಿ ನೋಂದಣಿಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆಯ ಅನುμÁ್ಟನಕ್ಕೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯಾಗಿ ಪ್ರಸಕ್ತ ಸಾಲಿಗೆ ಟಾಟಾ ಎಐಜಿ (ಖಿಂಖಿಂ ಂIಉ) ಸಂಸ್ಥೆಯು ಆಯ್ಕೆಯಾಗಿದ್ದು, ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಜಂಟಿನಿರ್ದೇಶಕ ಐ.ಕೆ. ದೊಡ್ಡಮನಿ (ದೂ.9448999226), ಮಂಗಳೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರವೀಣ ಕೆ (ದೂ.9449258204), ಬಂಟ್ವಾಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರದೀಪ್ ಡಿಸೋಜ (ದೂ. 9448206393), ಪುತ್ತೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ರೇಖಾ.ಎ (ದೂ.9731854527), ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಮೋದ್ ಸಿ.ಎಂ (ದೂ.ಸಂ: 9945303149), ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್(ದೂ.ಸಂ: 9448336863), ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಅಶುತೋಶ್ (ದೂ.ಸಂ: 8809140983) ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


