canaratvnews

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿ ನೇಣಿಗೆ ಶರಣು..!

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ.

ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು.

ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಜೂ. 15ರ ರಾತ್ರಿ ಮನೆಯಲ್ಲಿ ರೇಷ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಮೃತರು ಪತಿ ಚಿಂತನ್ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ದಂಪತಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ನಿನ್ನೆ ರಾತ್ರಿ ಪತಿ ಇಲ್ಲದೇ ಇರುವಾಗ ರೇಷ್ಮಾ ಸಾವಿಗೆ ಶರಣಾಗಿದ್ದಾರೆ. ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Share News
Exit mobile version