canaratvnews

ವಿಟ್ಲದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ-ವಿದ್ಯುತ್ ಕಂಬ

ವಿಟ್ಲ: ಇಲ್ಲಿನ ಪಡೀಬಾಗಿಲು ಸಮೀಪ ಚಲಿಸುತ್ತಿದ್ದ ಸ್ವಿಫ್ಟ್ ಕಾರೊಂದರ ಮೇಲೆ ಮರ ಹಾಗೂ ವಿದ್ಯುತ್ ಕಂಬ ಉರುಳಿ ಬಿದ್ದ ಭೀಕರ ಘಟನೆ ಇಂದು ಬೆಳಿಗ್ಗೆ ನಡೆದಿದೆ.


ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಪಡೀಬಾಗಿಲು ತಲುಪುತ್ತಿದ್ದಂತೆ ಪಕ್ಕದಲ್ಲಿದ್ದ ದೊಡ್ಡ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಪರಿಣಾಮ ಮರ ಮತ್ತು ವಿದ್ಯುತ್ ಕಂಬ ಎರಡೂ ನೇರವಾಗಿ ಚಲಿಸುತ್ತಿದ್ದ ಕಾರಿನ ಮೇಲೆ ಅಪ್ಪಳಿಸಿವೆ. ಘಟನೆಯ ಸಮಯದಲ್ಲಿ ಕಾರಿನಲ್ಲಿ ಗಂಡ-ಹೆಂಡತಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂಚಾರ ವ್ಯತ್ಯಯ-ತೆರವು ಕಾರ್ಯಾಚರಣೆ: ಅಪಘಾತದ ತೀವ್ರತೆಗೆ ಹೆದ್ದಾರಿಯ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡು, ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ವಿಟ್ಲ ಪೊಲೀಸರು, ಮೆಸ್ಕಾಂ (MESCOM) ಸಿಬ್ಬಂದಿ ಹಾಗೂ ಸ್ಥಳೀಯ ಸಾರ್ವಜನಿಕರು ತಕ್ಷಣವೇ ಕಾರ್ಯಾಚರಣೆ ಕೈಗೊಂಡರು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಮತ್ತು ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಹೆದ್ದಾರಿಯಲ್ಲಿ ಸಾರ್ವಜನಿಕ ವಾಹನ ಸಂಚಾರವನ್ನು ಸುಗಮಗೊಳಿಸಿದರು.

Share News
Exit mobile version