• Home  
  • ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಇಬ್ಬರ ಬಂಧನ ಉಳಿದವರಿಗೆ ಶೋಧ
- HOME - STATE

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಇಬ್ಬರ ಬಂಧನ ಉಳಿದವರಿಗೆ ಶೋಧ

ಬೆಂಗಳೂರು: ಸ್ಯಾಂಡವುಡ್‌ ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ರಮ್ಯಾ ಅವರು ಇತ್ತೀಚೆಗೆ ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು  ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್​ಗಳ ಕಮೆಂಟ್ ಬಾಕ್ಸ್​​ನಲ್ಲಿ ಅಶ್ಲೀಲ ಕಮೆಂಟ್​ಗಳನ್ನು ಮಾಡಿದ್ದರು.

ಇದನ್ನು ಸಹಿಸಿಕೊಳ್ಳದ ರಮ್ಯಾ ಅವರು ಹೋಗಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಸಿಸಿಬಿ ಸೈಬರ್ ಪೊಲೀಸರು ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗ ಮೂಲದ ಓರ್ವನನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗೆ ಶೋಧ ನಡೆಸುತ್ತಿದ್ದಾರೆ.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678